1 ಸಮುಯೇಲ 17:1 - ಪರಿಶುದ್ದ ಬೈಬಲ್1 ಫಿಲಿಷ್ಟಿಯರು ತಮ್ಮ ಸೈನ್ಯವನ್ನು ಯುದ್ಧಕ್ಕಾಗಿ ಯೆಹೂದದೇಶದ ಸೋಕೋವಿನಲ್ಲಿ ಒಟ್ಟುಗೂಡಿಸಿದರು. ಅವರು ಸೋಕೋವಿಗೂ ಅಜೇಕಕ್ಕೂ ಮಧ್ಯದಲ್ಲಿರುವ ಎಫೆಸ್ದಮ್ಮೀಮ್ ಎಂಬ ಹೆಸರಿನ ಪಟ್ಟಣದಲ್ಲಿ ಪಾಳೆಯಮಾಡಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಫಿಲಿಷ್ಟಿಯರು ಯುದ್ಧ ಮಾಡುವುದಕ್ಕೋಸ್ಕರ ಯೆಹೂದ ದೇಶದ ಸೋಕೋವಿನಲ್ಲಿ ಸೈನ್ಯವನ್ನು ಕೂಡಿಸಿಕೊಂಡು ಬಂದು ಸೋಕೋವಿಗೂ ಅಜೇಕಕ್ಕೂ ಮಧ್ಯದಲ್ಲಿರುವ ಎಫೆಸ್ದಮ್ಮೀಮಿನಲ್ಲಿ ಪಾಳೆಯಮಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಯೆಹೂದ ಪ್ರಾಂತ್ಯದ ಸೋಕೋವಿನಲ್ಲಿ ಫಿಲಿಷ್ಟಿಯರು ಯುದ್ಧಕ್ಕಾಗಿ ಸೈನ್ಯವನ್ನು ಜಮಾಯಿಸಿದ್ದರು. ಸೋಕೋವಿಗೂ ಅಜೇಕಕ್ಕೂ ಮಧ್ಯೆಯಿರುವ ಎಫೆಸ್ದಮ್ಮೀಮಿನಲ್ಲಿ ಬೀಡುಬಿಟ್ಟಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಫಿಲಿಷ್ಟಿಯರು ಯುದ್ಧಮಾಡುವದಕ್ಕೋಸ್ಕರ ಯೆಹೂದದೇಶದ ಸೋಕೋವಿನಲ್ಲಿ ಸೈನ್ಯವನ್ನು ಕೂಡಿಸಿಕೊಂಡು ಬಂದು ಸೋಕೋವಿಗೂ ಅಜೇಕಕ್ಕೂ ಮಧ್ಯದಲ್ಲಿರುವ ಎಫೆಸ್ದಮ್ಮೀವಿುನಲ್ಲಿ ಪಾಳೆಯ ಮಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಫಿಲಿಷ್ಟಿಯರು ಯುದ್ಧಮಾಡುವುದಕ್ಕೆ ತಮ್ಮ ಸೈನ್ಯವನ್ನು ಯೆಹೂದ ದೇಶದ ಸೋಕೋವಿನಲ್ಲಿ ಕೂಡಿಸಿದರು. ಅಜೇಕಕ್ಕೂ ಸೋಕೋವಿಗೂ ಮಧ್ಯದಲ್ಲಿರುವ ಎಫೆಸ ದಮ್ಮೀಮಿನಲ್ಲಿ ದಂಡಿಳಿದರು. ಅಧ್ಯಾಯವನ್ನು ನೋಡಿ |