1 ಸಮುಯೇಲ 17:12 - ಪರಿಶುದ್ದ ಬೈಬಲ್12 ದಾವೀದನು ಇಷಯನ ಮಗ. ಇಷಯನು ಯೆಹೂದ ಪ್ರಾಂತ್ಯದ ಬೆತ್ಲೆಹೇಮಿನ ಎಫ್ರಾತ ವಂಶದವನು. ಇಷಯನಿಗೆ ಎಂಟು ಜನ ಮಕ್ಕಳಿದ್ದರು. ಸೌಲನ ಕಾಲಕ್ಕಾಗಲೇ ಇಷಯನು ಮುದುಕನಾಗಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಸೌಲನ ಕಾಲದಲ್ಲಿ ಯೆಹೂದ ಬೇತ್ಲೆಹೇಮ್ ಎಂಬ ಊರಿನ ಎಫ್ರಾತ್ಯನಾದ ಇಷಯನೆಂಬ ಒಬ್ಬ ವೃದ್ಧನಿದ್ದನು. ಇವನ ಎಂಟು ಮಂದಿ ಮಕ್ಕಳಲ್ಲಿ ದಾವೀದನು ಒಬ್ಬನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ದಾವೀದನು ಜೆಸ್ಸೆಯ ಎಂಬವನ ಮಗ. ಜೆಸ್ಸೆಯ ಯೆಹೂದದ ಬೆತ್ಲೆಹೇಮ್ ಊರಿನ ಎಫ್ರಾತ್ಯನು. ಸೌಲನ ಕಾಲದಲ್ಲಿ ಹಣ್ಣುಹಣ್ಣು ಮುದುಕ. ಇವನ ಎಂಟುಮಂದಿ ಮಕ್ಕಳಲ್ಲಿ ದಾವೀದನು ಒಬ್ಬ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಯೆಹೂದದ ಬೇತ್ಲೆಹೇಮ್ ಊರಿನ ಎಫ್ರಾತ್ಯನಾದ ಇಷಯನೆಂಬವನು ಸೌಲನ ಕಾಲದಲ್ಲಿ ಬಹು ವೃದ್ಧನಾಗಿದ್ದನು. ಇವನ ಎಂಟು ಮಂದಿ ಮಕ್ಕಳಲ್ಲಿ ದಾವೀದನೆಂಬವನು ಒಬ್ಬನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ದಾವೀದನು ಯೆಹೂದದ ಬೇತ್ಲೆಹೇಮ್ ಊರಿನ ಎಫ್ರಾತ್ಯನಾದ ಇಷಯನೆಂಬವನ ಮಗನಾಗಿದ್ದನು. ಈ ಇಷಯನಿಗೆ ಎಂಟು ಮಂದಿ ಪುತ್ರರಿದ್ದರು. ಸೌಲನ ಕಾಲದಲ್ಲಿ ಇಷಯನು ವೃದ್ಧನಾಗಿದ್ದನು. ಅಧ್ಯಾಯವನ್ನು ನೋಡಿ |
ಯೆಹೋವನು ಸಮುವೇಲನಿಗೆ, “ನೀನು ಸೌಲನಿಗಾಗಿ ಎಷ್ಟುಕಾಲ ಶೋಕಿಸುವೆ? ನಾನು ಸೌಲನನ್ನು ಇಸ್ರೇಲರ ರಾಜತ್ವದಿಂದ ತಿರಸ್ಕರಿಸಿರುತ್ತೇನೆ. ನೀನು ಕೊಂಬಿನಲ್ಲಿ ಎಣ್ಣೆಯನ್ನು ತುಂಬಿಕೊಂಡು ಬಾ. ನಾನು ನಿನ್ನನ್ನು ಇಷಯನೆಂಬ ಮನುಷ್ಯನ ಬಳಿಗೆ ಕಳುಹಿಸುತ್ತೇನೆ. ಇಷಯನು ಬೆತ್ಲೆಹೇಮಿನಲ್ಲಿ ವಾಸಿಸುತ್ತಿದ್ದನು. ನಾನು ಅವನ ಮಕ್ಕಳಲ್ಲಿ ಒಬ್ಬನನ್ನು ಹೊಸ ರಾಜನನ್ನಾಗಿ ಆರಿಸಿದ್ದೇನೆ” ಎಂದು ಹೇಳಿದನು.