1 ಸಮುಯೇಲ 17:18 - ಪರಿಶುದ್ದ ಬೈಬಲ್18 ನಿನ್ನ ಸಹೋದರರ ಸಹಸ್ರಾಧಿಪತಿಗೆ ಹತ್ತು ಉಂಡೆ ಗಿಣ್ಣನ್ನೂ ತೆಗೆದುಕೊಂಡು ಹೋಗು. ನಿನ್ನ ಸಹೋದರರ ಕ್ಷೇಮ ಸಮಾಚಾರವನ್ನು ಕೇಳಿಕೊಂಡು, ಅವರು ಕ್ಷೇಮವಾಗಿದ್ದಾರೆಂಬುದಕ್ಕೆ ಒಂದು ಗುರುತನ್ನು ತೆಗೆದುಕೊಂಡು ಬಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಇದಲ್ಲದೆ ಇಲ್ಲಿ ಹತ್ತು ಗಿಣ್ಣದ ಉಂಡೆಗಳಿವೆ, ಇವುಗಳನ್ನು ಅವರ ಸಹಸ್ರಾಧಿಪತಿಗೆ ಕೊಡು. ಬರುವಾಗ ನಿನ್ನ ಅಣ್ಣಂದಿರ ಕ್ಷೇಮಸಮಾಚಾರವನ್ನು ವಿಚಾರಿಸಿಕೊಂಡು ಅವರಿಂದ ಒಂದು ಗುರುತನ್ನು ತೆಗೆದುಕೊಂಡು ಬಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಇಲ್ಲಿ ಹತ್ತು ಗಿಣ್ಣಿನ ಉಂಡೆಗಳೂ ಇವೆ. ಇವುಗಳನ್ನು ಅವರ ಸಹಸ್ರಾಧಿಪತಿಗೆ ಕೊಡು. ಬರುವಾಗ ನಿನ್ನ ಅಣ್ಣಂದಿರ ಕ್ಷೇಮಸಮಾಚಾರವನ್ನು ವಿಚಾರಿಸಿಕೊಂಡು, ಅವರಿಂದ ಒಂದು ಗುರುತನ್ನು ತೆಗೆದುಕೊಂಡು ಬಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಇದಲ್ಲದೆ ಇಲ್ಲಿ ಹತ್ತು ಗಿಣ್ಣಿನ ಗಡ್ಡೆಗಳಿರುತ್ತವೆ; ಇವುಗಳನ್ನು ಅವರ ಸಹಸ್ರಾಧಿಪತಿಗೆ ಕೊಡು. ಬರುವಾಗ ನಿನ್ನ ಅಣ್ಣಂದಿರ ಕ್ಷೇಮಸಮಾಚಾರವನ್ನು ವಿಚಾರಿಸಿಕೊಂಡು ಅವರಿಂದ ಒಂದು ಗುರುತನ್ನು ತೆಗೆದುಕೊಂಡು ಬಾ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಇದಲ್ಲದೆ ಈ ಹತ್ತು ಗಿಣ್ಣಿನ ಗಡ್ಡೆಗಳನ್ನು ಅವರ ಪ್ರಧಾನನಿಗೆ ಕೊಟ್ಟು, ನಿನ್ನ ಸಹೋದರರ ಕ್ಷೇಮಸಮಾಚಾರವನ್ನು ವಿಚಾರಿಸಿ, ಅವರ ಗುರುತನ್ನು ತೆಗೆದುಕೊಂಡು ಬಾ,” ಎಂದನು. ಅಧ್ಯಾಯವನ್ನು ನೋಡಿ |
ದಾವೀದನು ತನ್ನ ಇನ್ನೂರು ಮಂದಿ ಉಳಿದುಕೊಂಡಿದ್ದ ಬೆಸೋರ್ ಹಳ್ಳಕ್ಕೆ ಬಂದನು. ತಮ್ಮ ಅತಿಯಾದ ಆಯಾಸದಿಂದಲೂ ಬಲಹೀನತೆಯಿಂದಲೂ ದಾವೀದನನ್ನು ಹಿಂಬಾಲಿಸಲಾಗದ ಜನರೇ ಇವರು. ದಾವೀದನನ್ನು ಮತ್ತು ಅವನೊಡನೆ ಹೋಗಿದ್ದ ಸೈನಿಕರನ್ನು ಸಂಧಿಸಲು ಇವರು ಹೊರಗೆ ಬಂದರು. ದಾವೀದ ಮತ್ತು ಅವನ ಸೈನ್ಯವು ಸಮೀಪಿಸಿದಾಗ, ಬೆಸೋರ್ ಹಳ್ಳದಲ್ಲಿದ್ದ ಜನರು ಅವರನ್ನು ವಂದಿಸಿದರು. ದಾವೀದನು ಸಹ ಅವರನ್ನು ಸಂಧಿಸಿ ಅವರ ಯೋಗಕ್ಷೇಮವನ್ನು ವಿಚಾರಿಸಿದನು.