1 ಸಮುಯೇಲ 17:19 - ಪರಿಶುದ್ದ ಬೈಬಲ್19 ನಿನ್ನ ಸಹೋದರರು ಎಲ್ಲಾ ಇಸ್ರೇಲ್ ಸೈನಿಕರಂತೆ ಸೌಲನ ಜೊತೆಯಲ್ಲಿ ಏಲಾ ಕಣಿವೆಯಲ್ಲಿದ್ದಾರೆ. ಅವರು ಫಿಲಿಷ್ಟಿಯರ ವಿರುದ್ಧ ಹೋರಾಡುತ್ತಿದ್ದಾರೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಸೌಲನೂ, ಇಸ್ರಾಯೇಲರೂ ಏಲಾ ತಗ್ಗಿನಲ್ಲಿ ಫಿಲಿಷ್ಟಿಯರೊಡನೆ ಯುದ್ಧಮಾಡುತ್ತಿದ್ದಾರಲ್ಲಾ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಸೌಲನೂ ಇಸ್ರಯೇಲರೂ ಏಲಾ ಕಣಿವೆಯಲ್ಲಿ ಫಿಲಿಷ್ಟಿಯರೊಡನೆ ಯುದ್ಧ ಮಾಡುತ್ತಿದ್ದಾರಲ್ಲವೆ?” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಸೌಲನೂ ಇಸ್ರಾಯೇಲ್ಯರೂ ಏಲಾ ತಗ್ಗಿನಲ್ಲಿ ಫಿಲಿಷ್ಟಿಯರೊಡನೆ ಯುದ್ಧಮಾಡುತ್ತಿದ್ದಾರಲ್ಲಾ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಆಗ ಸೌಲನೂ, ಇಸ್ರಾಯೇಲರೆಲ್ಲರೂ ಫಿಲಿಷ್ಟಿಯರ ಸಂಗಡ ಏಲಾ ತಗ್ಗಿನಲ್ಲಿ ಯುದ್ಧ ಮಾಡುತ್ತಿದ್ದರು. ಅಧ್ಯಾಯವನ್ನು ನೋಡಿ |
ದಾವೀದನು ಮಾರನೆಯ ದಿನ ಬೆಳಿಗ್ಗೆ ಕುರುಬನೊಬ್ಬನಿಗೆ ತನ್ನ ಕುರಿಗಳನ್ನು ಕಾಯಲು ಒಪ್ಪಿಸಿದನು. ಇಷಯನು ತಿಳಿಸಿದಂತೆ ದಾವೀದನು ಆಹಾರವನ್ನೆಲ್ಲ ತೆಗೆದುಕೊಂಡು ಹೊರಟನು. ದಾವೀದನು ತನ್ನ ಬಂಡಿಯನ್ನು ಪಾಳೆಯಕ್ಕೆ ಹೊಡೆದುಕೊಂಡು ಹೋದನು. ದಾವೀದನು ಅಲ್ಲಿಗೆ ಬರುವಷ್ಟರಲ್ಲಿ ಸೈನಿಕರೆಲ್ಲರು ಯುದ್ಧಭೂಮಿಗೆ ಹೋಗುವುದರಲ್ಲಿದ್ದರು. ಸೈನಿಕರೆಲ್ಲರು ಆರ್ಭಟಿಸುತ್ತಾ ಯುದ್ಧಭೂಮಿಯಲ್ಲಿ ಸೇರುತ್ತಿದ್ದರು.