1 ಸಮುಯೇಲ 17:20 - ಪರಿಶುದ್ದ ಬೈಬಲ್20 ದಾವೀದನು ಮಾರನೆಯ ದಿನ ಬೆಳಿಗ್ಗೆ ಕುರುಬನೊಬ್ಬನಿಗೆ ತನ್ನ ಕುರಿಗಳನ್ನು ಕಾಯಲು ಒಪ್ಪಿಸಿದನು. ಇಷಯನು ತಿಳಿಸಿದಂತೆ ದಾವೀದನು ಆಹಾರವನ್ನೆಲ್ಲ ತೆಗೆದುಕೊಂಡು ಹೊರಟನು. ದಾವೀದನು ತನ್ನ ಬಂಡಿಯನ್ನು ಪಾಳೆಯಕ್ಕೆ ಹೊಡೆದುಕೊಂಡು ಹೋದನು. ದಾವೀದನು ಅಲ್ಲಿಗೆ ಬರುವಷ್ಟರಲ್ಲಿ ಸೈನಿಕರೆಲ್ಲರು ಯುದ್ಧಭೂಮಿಗೆ ಹೋಗುವುದರಲ್ಲಿದ್ದರು. ಸೈನಿಕರೆಲ್ಲರು ಆರ್ಭಟಿಸುತ್ತಾ ಯುದ್ಧಭೂಮಿಯಲ್ಲಿ ಸೇರುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ದಾವೀದನು ಮರುದಿನ ಬೆಳಿಗ್ಗೆ ಎದ್ದು ಕುರಿ ಕಾಯುವವನಿಗೆ ಕುರಿಗಳನ್ನು ಒಪ್ಪಿಸಿ, ತನ್ನ ತಂದೆಯಾದ ಇಷಯನು ಹೇಳಿದವುಗಳನ್ನು ತೆಗೆದುಕೊಂಡು ಸೈನ್ಯವು ಹೊರಟು ಯುದ್ಧಕ್ಕಾಗಿ ಅರ್ಭಟಿಸುವ ಹೊತ್ತಿನಲ್ಲಿ ಪಾಳೆಯದ ರಥಗಳು ನಿಂತಿದ್ದ ಸ್ಥಳಕ್ಕೆ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ದಾವೀದನು ಮರುದಿನ ಬೆಳಿಗ್ಗೆ ಎದ್ದು ಕುರಿಗಾಹಿಗೆ ಕುರಿಗಳನ್ನು ಒಪ್ಪಿಸಿ, ತನ್ನ ತಂದೆ ಜೆಸ್ಸೆಯನು ಹೇಳಿದವುಗಳನ್ನು ತೆಗೆದುಕೊಂಡು ಪಾಳೆಯದ ಬಂಡಿಗಳು ನಿಂತಿದ್ದ ಸ್ಥಳಕ್ಕೆ ಬಂದನು. ಸೈನ್ಯಗಳು ಯುದ್ಧಘೋಷಣೆಗಳನ್ನು ಹಾಕುವ ಸಮಯ ಅದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ದಾವೀದನು ಮರುದಿನ ಬೆಳಿಗ್ಗೆ ಎದ್ದು ಕಾಯುವವನಿಗೆ ಕುರಿಗಳನ್ನು ಒಪ್ಪಿಸಿ ತನ್ನ ತಂದೆಯಾದ ಇಷಯನು ಹೇಳಿದವುಗಳನ್ನು ತೆಗೆದುಕೊಂಡು ಸೈನ್ಯವು ಹೊರಟು ಯುದ್ಧಕ್ಕಾಗಿ ಆರ್ಭಟಿಸುವ ಹೊತ್ತಿನಲ್ಲಿ ಪಾಳೆಯದ ಬಂಡಿಗಳು ನಿಂತಿದ್ದ ಸ್ಥಳಕ್ಕೆ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ದಾವೀದನು ಉದಯಕಾಲದಲ್ಲಿ ಎದ್ದು, ಕುರಿ ಕಾಯುವವನ ವಶಕ್ಕೆ ಕುರಿಗಳನ್ನು ಬಿಟ್ಟು, ತನ್ನ ತಂದೆ ಇಷಯನು ತನಗೆ ಆಜ್ಞಾಪಿಸಿದ ಹಾಗೆಯೇ ತೆಗೆದುಕೊಂಡುಹೋಗಿ ಸೈನ್ಯವು ಯುದ್ಧಕ್ಕೆ ಆರ್ಭಟಿಸಿ ಹೊರಡುವಾಗ, ಸಲಕರಣೆಗಳು ಇರುವ ಸ್ಥಳಕ್ಕೆ ಬಂದನು. ಅಧ್ಯಾಯವನ್ನು ನೋಡಿ |
ದಾವೀದನು ಸೈನಿಕರೊಡನೆ ಮಾತಾಡುತ್ತಿರುವುದನ್ನು ಅವನ ಹಿರಿಯ ಅಣ್ಣ ಎಲೀಯಾಬನು ಕೇಳಿಸಿಕೊಂಡನು. ಎಲೀಯಾಬನು ದಾವೀದನ ಮೇಲೆ ಕೋಪಗೊಂಡು ಅವನಿಗೆ, “ನೀನು ಇಲ್ಲಿಗೆ ಬಂದದ್ದೇಕೆ? ಅಲ್ಲಿದ್ದ ಕೆಲವು ಕುರಿಗಳನ್ನು ಯಾರ ಬಳಿ ಬಿಟ್ಟಿರುವೆ? ನೀನು ಇಲ್ಲಿಗೆ ಏಕೆ ಬಂದಿರುವೆಯೆಂಬುದು ನನಗೆ ಗೊತ್ತು. ನಿನಗೆ ಹೇಳಿದ್ದನ್ನು ನೀನು ಮಾಡುವುದಿಲ್ಲ. ನೀನು ಕೇವಲ ಯುದ್ಧವನ್ನು ನೋಡುವುದಕ್ಕಾಗಿಯೇ ಇಲ್ಲಿಗೆ ಬಂದಿರುವೆ” ಎಂದು ಗದರಿಸಿದನು.
ಸಮುವೇಲನು ಮಾರನೆಯ ದಿನ ಬೆಳಿಗ್ಗೆ ಮೇಲೆದ್ದು, ಸೌಲನನ್ನು ಭೇಟಿಮಾಡಲು ಹೋದನು. ಆದರೆ ಜನರೆಲ್ಲ ಸಮುವೇಲನಿಗೆ, “ಸೌಲನು ತನ್ನ ಗೌರವಾರ್ಥವಾಗಿ ಜ್ಞಾಪಕಸ್ತಂಭವನ್ನು ನಿರ್ಮಿಸಲು ಕರ್ಮೆಲ್ ಎಂಬ ಪಟ್ಟಣಕ್ಕೆ ಹೋದನು. ನಂತರ ಸೌಲನು ಕೆಲವು ಪ್ರದೇಶಗಳನ್ನು ಸುತ್ತಿಕೊಂಡು ಗಿಲ್ಗಾಲಿಗೆ ಹೋದನು” ಎಂದು ಹೇಳಿದರು. ಸಮುವೇಲನು ಸೌಲನಿದ್ದ ಸ್ಥಳಕ್ಕೆ ಹೋದನು. ಸೌಲನು ಅಮಾಲೇಕ್ಯರಿಂದ ವಶಪಡಿಸಿಕೊಂಡ ಪಶುಗಳನ್ನು ಪ್ರಥಮ ಸರ್ವಾಂಗಹೋಮವಾಗಿ ಯೆಹೋವನಿಗೆ ಅರ್ಪಿಸುತ್ತಿದ್ದನು.