1 ಸಮುಯೇಲ 17:26 - ಪರಿಶುದ್ದ ಬೈಬಲ್26 ದಾವೀದನು ತನ್ನ ಹತ್ತಿರ ನಿಂತಿದ್ದವನಿಗೆ, “ಈ ಫಿಲಿಷ್ಟಿಯನನ್ನು ಕೊಂದು ಇಸ್ರೇಲರಿಗೆ ಉಂಟಾಗಿರುವ ಅಪನಿಂದೆಯನ್ನು ಹೋಗಲಾಡಿಸುವವನಿಗೆ ಸಿಗುವ ಬಹುಮಾನವೇನು? ಈ ಗೊಲ್ಯಾತನ್ಯಾರು? ಇವನು ಕೇವಲ ಒಬ್ಬ ಪರದೇಶಿ. ಗೊಲ್ಯಾತನು ಫಿಲಿಷ್ಟಿಯನೇ ಹೊರತು ಬೇರೆ ಯಾರೂ ಅಲ್ಲ. ಜೀವಸ್ವರೂಪನಾದ ದೇವರ ಸೈನ್ಯದ ವಿರೋಧವಾಗಿ ಮಾತಾಡಲು ಇವನು ತನ್ನನ್ನು ಯಾರೆಂದು ಯೋಚಿಸಿಕೊಂಡಿದ್ದಾನೆ?” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ದಾವೀದನು, “ಜೀವಸ್ವರೂಪನಾದ ದೇವರ ಸೈನ್ಯವನ್ನು ಹೀಯಾಳಿಸುವುದಕ್ಕೆ ಸುನ್ನತಿಯಿಲ್ಲದ ಈ ಫಿಲಿಷ್ಟಿಯನು ಎಷ್ಟರವನು? ಇವನನ್ನು ಕೊಂದು ಇಸ್ರಾಯೇಲ್ಯರಿಗೆ ಬಂದಿರುವ ನಿಂದೆಯನ್ನು ತೆಗೆದುಹಾಕುವವನಿಗೆ ಏನು ಸಿಕ್ಕುವುದು ಹೇಳಿರಿ” ಎಂದು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರನ್ನು ಕೇಳಿದನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಆಗ ದಾವೀದನು ತನ್ನ ಬಳಿಯಲ್ಲೆ ನಿಂತಿದ್ದವರನ್ನು ನೋಡಿ, “ಜೀವಸ್ವರೂಪರಾದ ದೇವರ ಸೈನ್ಯವನ್ನು ಹೀಗೆ ಹಿಯ್ಯಾಳಿಸುವ, ಸುನ್ನತಿಯಿಲ್ಲದ ಈ ಫಿಲಿಷ್ಟಿಯನು ಎಷ್ಟರವನು? ಇವನನ್ನು ಕೊಂದು ಇಸ್ರಯೇಲರಿಗೆ ಬಂದಿರುವ ನಿಂದೆ ಅವಮಾನವನ್ನು ನೀಗಿಸುವವನಿಗೆ ಏನು ಸಿಕ್ಕುವುದೆಂದು ಹೇಳಿದಿರಿ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ದಾವೀದನು - ಜೀವಸ್ವರೂಪನಾದ ದೇವರ ಸೈನ್ಯವನ್ನು ಹೀಯಾಳಿಸುವದಕ್ಕೆ ಸುನ್ನತಿಯಿಲ್ಲದ ಈ ಫಿಲಿಷ್ಟಿಯನು ಎಷ್ಟರವನು? ಇವನನ್ನು ಕೊಂದು ಇಸ್ರಾಯೇಲ್ಯರಿಗೆ ಬಂದಿರುವ ನಿಂದೆಯನ್ನು ತೆಗೆದುಹಾಕುವವನಿಗೆ ಸಿಕ್ಕುವದೇನೆಂದು ಹೇಳಿದಿರಿ ಎಂದು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರನ್ನು ಕೇಳಲು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಆಗ ದಾವೀದನು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರಿಗೆ, “ಈ ಫಿಲಿಷ್ಟಿಯನನ್ನು ಕೊಂದು, ಇಸ್ರಾಯೇಲಿನ ಮೇಲಿಂದ ನಿಂದೆಯನ್ನು ತೆಗೆದುಬಿಡುವ ಆ ಮನುಷ್ಯನಿಗೆ ಏನು ಸಿಕ್ಕುವುದು? ಏಕೆಂದರೆ ಸುನ್ನತಿ ಇಲ್ಲದ ಆ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ದೂಷಿಸುವುದಕ್ಕೆ ಎಷ್ಟರವನು,” ಎಂದನು. ಅಧ್ಯಾಯವನ್ನು ನೋಡಿ |
ಯೆಹೋವನೇ, ನಾವು ಮತ್ತು ನಮ್ಮ ಪೂರ್ವಿಕರು ನಿನಗೆ ಪಾಪಮಾಡಿದ್ದರಿಂದ ಇದೆಲ್ಲಾ ಆಗುತ್ತಿದೆ. ಜೆರುಸಲೇಮಿನ ಮೇಲೆ ಕೋಪ ಮಾಡುವದನ್ನು ದಯವಿಟ್ಟು ನಿಲ್ಲಿಸು. ಜೆರುಸಲೇಮ್ ನಗರವು ನಿನ್ನ ಪವಿತ್ರವಾದ ಬೆಟ್ಟದ ಮೇಲೆ ಇದೆ. ನೀನು ಸರಿಯಾದದ್ದನ್ನು ಮಾಡುವೆ. ಆದ್ದರಿಂದ ಜೆರುಸಲೇಮಿನ ಮೇಲೆ ಕೋಪಗೊಳ್ಳುವದನ್ನು ದಯವಿಟ್ಟು ನಿಲ್ಲಿಸಿಬಿಡು. ನಮ್ಮ ಸುತ್ತಮುತ್ತಲಿನ ಜನರೆಲ್ಲ ನಮ್ಮನ್ನು ನಿಂದಿಸುವರು ಮತ್ತು ನಮ್ಮ ಜನರನ್ನು ಗೇಲಿ ಮಾಡುವರು.
ಚೈತನ್ಯಸ್ವರೂಪನಾದ ದೇವರು ನಿಜವಾಗಿಯೂ ನಿಮ್ಮ ಸಂಗಡ ಇದ್ದಾನೆ ಎಂಬುದಕ್ಕೆ ಇಲ್ಲಿ ಒಂದು ಸಾಕ್ಷಿ ಇದೆ. ಆತನು ನಿಜವಾಗಿಯೂ ನಿಮ್ಮ ವೈರಿಗಳನ್ನು ಸೋಲಿಸುತ್ತಾನೆ ಎಂಬುದಕ್ಕೆ ಇಲ್ಲಿ ಸಾಕ್ಷಿ ಇದೆ. ಕಾನಾನ್ಯರು, ಹಿತ್ತಿಯರು, ಹಿವ್ವಿಯರು, ಪೆರಿಜೀಯರು, ಗಿರ್ಗಾಷಿಯರು, ಅಮೋರಿಯರು, ಯೆಬೂಸಿಯರು, ಇವರನ್ನೆಲ್ಲಾ ಆತನು ಸೋಲಿಸುತ್ತಾನೆ. ಆ ದೇಶದಿಂದ ಅವರನ್ನು ಬಲವಂತವಾಗಿ ಹೊರಗಟ್ಟುತ್ತಾನೆ.
ಇಲ್ಲ, ನೀನು ನಮ್ರನಾಗಿರಲಿಲ್ಲ. ಅದಕ್ಕೆ ಪ್ರತಿಯಾಗಿ ನೀನು ಪರಲೋಕದೊಡೆಯನಿಗೆ ವಿರುದ್ಧವಾಗಿ ನಡೆದುಕೊಂಡೆ. ಯೆಹೋವನ ಆಲಯದಿಂದ ಕುಡಿಯುವ ಪಾತ್ರೆಗಳನ್ನು ತರಬೇಕೆಂದು ಆಜ್ಞಾಪಿಸಿದೆ. ನೀನು ಮತ್ತು ನಿನ್ನ ಅಧಿಕಾರಿಗಳು, ನಿನ್ನ ಪತ್ನಿಯರು ಮತ್ತು ನಿನ್ನ ಉಪಪತ್ನಿಯರು ಆ ಪಾತ್ರೆಗಳಲ್ಲಿ ದ್ರಾಕ್ಷಾರಸವನ್ನು ಕುಡಿದಿರಿ. ನೀನು ಬೆಳ್ಳಿ, ಬಂಗಾರ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಸ್ತುತಿಸಿದೆ. ಅವುಗಳಿಗೆ ನೋಡುವ, ಕೇಳಿಸಿಕೊಳ್ಳುವ ಅಥವಾ ಸ್ತೋತ್ರವನ್ನು ತಿಳಿದುಕೊಳ್ಳುವ ಸಾಮರ್ಥ್ಯವಿಲ್ಲ. ಆದರೆ ನಿನ್ನ ಜೀವದ ಮೇಲೆಯೂ ನಿನ್ನ ಆಗುಹೋಗುಗಳ ಮೇಲೆಯೂ ಅಧಿಕಾರವುಳ್ಳ ದೇವರನ್ನು ನೀನು ಸ್ತುತಿಸಲಿಲ್ಲ.