Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 17:36 - ಪರಿಶುದ್ದ ಬೈಬಲ್‌

36 ನಾನು ಒಂದು ಸಿಂಹವನ್ನೂ ಒಂದು ಕರಡಿಯನ್ನೂ ಕೊಂದಿದ್ದೇನೆ. ಅದೇ ರೀತಿಯಲ್ಲಿ ನಾನು ಅನ್ಯದೇಶಿಯನಾದ ಗೊಲ್ಯಾತನನ್ನೂ ಕೊಂದು ಹಾಕುತ್ತೇನೆ. ಜೀವಸ್ವರೂಪನಾದ ದೇವರ ಸೈನ್ಯವನ್ನು ಹೀಯಾಳಿಸಿದ್ದರಿಂದ ಗೊಲ್ಯಾತನು ಸಾಯಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ನಿನ್ನ ಸೇವಕನಿಂದ ಕೊಲ್ಲಲ್ಪಟ್ಟ ಸಿಂಹಕ್ಕೂ, ಕರಡಿಗೂ ಆದ ಗತಿಯೇ ಜೀವಸ್ವರೂಪನಾದ ದೇವರ ಸೈನ್ಯವನ್ನು ನಿಂದಿಸುವಂಥ ಈ ಸುನ್ನತಿಯಿಲ್ಲದ ಫಿಲಿಷ್ಟಿಯನಿಗೂ ಆಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ನಿಮ್ಮ ಸೇವಕನಾದ ನನ್ನಿಂದ ಆ ಸಿಂಹಕ್ಕೂ ಕರಡಿಗೂ ಆದ ಗತಿಯೇ ಈ ಸುನ್ನತಿಯಿಲ್ಲದ ಫಿಲಿಷ್ಟಿಯನಿಗೂ ಆಗಬೇಕು; ಏಕೆಂದರೆ ಜೀವಸ್ವರೂಪರಾದ ದೇವರ ಸೈನ್ಯವನ್ನು ನಿಂದಿಸುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ನಿನ್ನ ಸೇವಕನಿಂದ ಕೊಲ್ಲಲ್ಪಟ್ಟ ಸಿಂಹಕ್ಕೂ ಕರಡಿಗೂ ಆದ ಗತಿಯೇ ಜೀವಸ್ವರೂಪನಾದ ದೇವರ ಸೈನ್ಯವನ್ನು ನಿಂದಿಸುವಂಥ ಈ ಸುನ್ನತಿಯಿಲ್ಲದ ಫಿಲಿಷ್ಟಿಯನಿಗೂ ಆಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಹೀಗೆಯೇ ನಿನ್ನ ಸೇವಕನು ಆ ಸಿಂಹವನ್ನೂ, ಆ ಕರಡಿಯನ್ನೂ ಕೊಂದುಬಿಟ್ಟೆನು. ಸುನ್ನತಿ ಇಲ್ಲದ ಈ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ದೂಷಿಸಿದ್ದರಿಂದ, ಅವುಗಳಲ್ಲಿ ಒಂದರ ಹಾಗೆ ಇರುವನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 17:36
25 ತಿಳಿವುಗಳ ಹೋಲಿಕೆ  

ಫಿಲಿಷ್ಟಿಯನು, “ಈ ದಿನ ನಾನು ಇಸ್ರೇಲ್ ಸೈನ್ಯವನ್ನು ಹೀಯಾಳಿಸುವೆನು. ನನ್ನೊಂದಿಗೆ ಹೋರಾಡಲು ನಿಮ್ಮ ಮನುಷ್ಯನೊಬ್ಬನನ್ನು ಕಳುಹಿಸಿ” ಎಂದು ಕೊಚ್ಚಿಕೊಂಡನು.


ಆದರೆ ನಾನು ಜೆರುಸಲೇಮನ್ನು ಒಂದು ಭಾರವಾದ ಬಂಡೆ ಕಲ್ಲಿನಂತೆ ಮಾಡುವೆನು. ಅದನ್ನು ತೆಗೆಯಲು ಯತ್ನಿಸುವವನು ಗಾಯಗೊಳ್ಳುವನು. ಆದರೂ ಲೋಕದ ಎಲ್ಲಾ ದೇಶಗಳವರು ಜೆರುಸಲೇಮಿಗೆ ವಿರುದ್ಧವಾಗಿ ಯುದ್ಧಕ್ಕೆ ಬರುವರು.


ಇದು ಸರ್ವಶಕ್ತನಾದ ಯೆಹೋವನ ನುಡಿ. “ನಿಮ್ಮ ವಸ್ತುಗಳನ್ನು ಕದ್ದುಕೊಂಡ ಜನಾಂಗಗಳಿಗೆ ಆತನು ನನ್ನನ್ನು ಕಳುಹಿಸಿದನು. ನಿಮಗೆ ಗೌರವವನ್ನು ತರುವುದಕ್ಕಾಗಿ ಆತನು ನನ್ನನ್ನು ಕಳುಹಿಸಿದನು. ಯಾಕೆಂದರೆ, ನಿಮಗೆ ಹಾನಿ ಮಾಡಿದರೆ ಅದು ದೇವರ ಕಣ್ಣುಗುಡ್ಡೆಗೆ ಹಾನಿ ಮಾಡಿದಂತೆ.


“ಈಜಿಪ್ಟೇ, ನೀನು ಬೇರೆಯವರಿಗಿಂತ ಉತ್ತಮಳೇನೂ ಅಲ್ಲ. ಮರಣದ ಸ್ಥಳಕ್ಕೆ ಹೋಗು. ಅಲ್ಲಿ ಪರದೇಶದವರೊಂದಿಗೆ ಹೋಗಿ ಬಿದ್ದುಕೊ.


“‘ಹಿಜ್ಕೀಯನು ತನ್ನ ಮಾತುಗಳಿಂದ ನಿಮ್ಮನ್ನು ಮೋಸಗೊಳಿಸದಂತೆ ನೋಡಿಕೊಳ್ಳಿರಿ. ಅವನು, “ಯೆಹೋವನು ನಮ್ಮನ್ನು ರಕ್ಷಿಸುತ್ತಾನೆ” ಎಂದು ಹೇಳುತ್ತಾನೆ. ನಾನು ನಿಮಗೆ ಒಂದು ಪ್ರಶ್ನೆ ಕೇಳುತ್ತೇನೆ. ಬೇರೆ ದೇಶದ ದೇವರುಗಳು ಅವರ ದೇಶವನ್ನು ಅಶ್ಶೂರದ ಅರಸನಿಂದ ಕಾಪಾಡಲು ಶಕ್ತರಾದರೋ? ಇಲ್ಲ!


“ಯೆಹೋವನನ್ನು ನಂಬಿರಿ. ಆತನು ನಮ್ಮನ್ನು ರಕ್ಷಿಸುವನು. ಅಶ್ಶೂರದ ಅರಸನು ನಮ್ಮ ಪಟ್ಟಣವನ್ನು ಸೋಲಿಸಲು ಬಿಡುವದಿಲ್ಲ” ಎಂದು ಹಿಜ್ಕೀಯನು ಹೇಳಿದರೆ ಅವನನ್ನು ನಂಬಬೇಡಿ.


ಕೊಡಲಿಯು ಅದನ್ನು ಉಪಯೋಗಿಸುವವನಿಗಿಂತ ಉತ್ತಮವಲ್ಲ. ಗರಗಸವು ಅದನ್ನು ಉಪಯೋಗಿಸುವವನಿಗಿಂತ ಉತ್ತಮವಲ್ಲ. ಆದರೆ ಅಶ್ಶೂರವು ತಾನು ದೇವರಿಗಿಂತಲೂ ಶಕ್ತಿಶಾಲಿ, ಸಾಮರ್ಥ್ಯವುಳ್ಳವನು ಎಂದು ನೆನಸುತ್ತಾನೆ. ಬೆತ್ತವು, ತನ್ನನ್ನು ಎತ್ತಿಹಿಡಿದು ಬೇರೆಯವರನ್ನು ಶಿಕ್ಷಿಸುವವನಿಗಿಂತ ತಾನು ಬಲಿಷ್ಠನೂ ಪ್ರಮುಖನೂ ಎಂದು ಹೇಳುವಂತಿದೆ ಇದು.


ದಾವೀದನು ತನ್ನ ಹತ್ತಿರ ನಿಂತಿದ್ದವನಿಗೆ, “ಈ ಫಿಲಿಷ್ಟಿಯನನ್ನು ಕೊಂದು ಇಸ್ರೇಲರಿಗೆ ಉಂಟಾಗಿರುವ ಅಪನಿಂದೆಯನ್ನು ಹೋಗಲಾಡಿಸುವವನಿಗೆ ಸಿಗುವ ಬಹುಮಾನವೇನು? ಈ ಗೊಲ್ಯಾತನ್ಯಾರು? ಇವನು ಕೇವಲ ಒಬ್ಬ ಪರದೇಶಿ. ಗೊಲ್ಯಾತನು ಫಿಲಿಷ್ಟಿಯನೇ ಹೊರತು ಬೇರೆ ಯಾರೂ ಅಲ್ಲ. ಜೀವಸ್ವರೂಪನಾದ ದೇವರ ಸೈನ್ಯದ ವಿರೋಧವಾಗಿ ಮಾತಾಡಲು ಇವನು ತನ್ನನ್ನು ಯಾರೆಂದು ಯೋಚಿಸಿಕೊಂಡಿದ್ದಾನೆ?” ಎಂದನು.


ಯೋನಾತಾನನು ತನ್ನ ಆಯುಧಗಳನ್ನು ಹೊತ್ತುಕೊಂಡು ಬರುತ್ತಿದ್ದ ಯುವಸಹಾಯಕನಿಗೆ, “ಆ ಹೊರದೇಶಿಯರ ಪಾಳೆಯಕ್ಕೆ ಹೋಗೋಣ ಬಾ. ಈ ಜನರನ್ನು ಸೋಲಿಸಲು ಯೆಹೋವನು ಬಹುಶಃ ನಮ್ಮನ್ನು ಬಳಸಬಹುದು. ಯೆಹೋವನನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ. ನಮ್ಮಲ್ಲಿ ಅನೇಕ ಸೈನಿಕರಿದ್ದರೂ ಇಲ್ಲವೆ ಕೆಲವೇ ಸೈನಿಕರಿದ್ದರೂ ಅದು ಲೆಕ್ಕಕ್ಕೆ ಬರುವುದಿಲ್ಲ” ಎಂದು ಹೇಳಿದನು.


ಆದನ್ನು ನಾನು ಅಟ್ಟಿಸಿಕೊಂಡು ಹೋಗುತ್ತಿದ್ದೆ. ನಾನು ಆ ಕ್ರೂರ ಮೃಗದ ಮೇಲೆ ಆಕ್ರಮಣ ಮಾಡಿ, ಅದರ ಬಾಯಿಂದ ಕುರಿಯನ್ನು ಬಿಡಿಸುತ್ತಿದ್ದೆನು. ಅದು ನನ್ನ ಮೇಲೆ ಆಕ್ರಮಣ ಮಾಡಿದರೆ, ನಾನು ಅದರ ಗಡ್ಡ ಹಿಡಿದು ಹೋರಾಡಿ ಅದನ್ನು ಕೊಲ್ಲುತ್ತಿದ್ದೆನು.


ಯೆಹೋವನು ನನ್ನನ್ನು ಸಿಂಹದಿಂದಲೂ ಕರಡಿಯಿಂದಲೂ ರಕ್ಷಿಸಿದನು. ಯೆಹೋವನು ಈ ಗೊಲ್ಯಾತನಿಂದಲೂ ನನ್ನನ್ನು ರಕ್ಷಿಸುತ್ತಾನೆ” ಎಂದು ಹೇಳಿದನು. ಸೌಲನು ದಾವೀದನಿಗೆ, “ಹೋಗು, ಯೆಹೋವನು ನಿನ್ನೊಂದಿಗಿರಲಿ” ಎಂದು ಹೇಳಿದನು.


ಆದರೆ ಸೌಲನು ದಾವೀದನನ್ನು ಕೊಲ್ಲಬೇಕೆಂದಿದ್ದನು. ದಾವೀದನಿಗೆ ಮೋಸಮಾಡಲು ಸೌಲನು ಒಂದು ಉಪಾಯವನ್ನು ಹೂಡಿ ಅವನಿಗೆ, “ನನ್ನ ಹಿರಿಯ ಮಗಳಾದ ಮೇರಬಳು ಇದ್ದಾಳೆ. ನಾನು ಅವಳನ್ನು ನಿನಗೆ ಮದುವೆ ಮಾಡಿಕೊಡುತ್ತೇನೆ. ಆಗ ನೀನೊಬ್ಬ ಬಲಶಾಲಿಯಾದ ಸೈನಿಕನಾಗುವೆ. ನೀನು ನನಗೆ ಮಗನಂತಿರುವೆ! ನಂತರ ನೀನು ಹೋಗಿ ಯೆಹೋವನ ಯುದ್ಧಗಳಲ್ಲಿ ಹೋರಾಡು” ಎಂದು ಹೇಳಿದನು. ಆದರೆ ಇದೊಂದು ಮೋಸವಾಗಿತ್ತು. “ಈಗ ನಾನು ದಾವೀದನನ್ನು ಕೊಲ್ಲುವ ಅಗತ್ಯವಿಲ್ಲ. ನನಗೋಸ್ಕರ ಫಿಲಿಷ್ಟಿಯರೇ ಅವನನ್ನು ಕೊಲ್ಲುವಂತೆ ಮಾಡುತ್ತೇನೆ” ಎಂಬದು ಸೌಲನ ನಿಜವಾದ ಆಲೋಚನೆಯಾಗಿತ್ತು.


ಸೌಲನು ತನ್ನ ಅಯುಧವಾಹಕನಿಗೆ, “ನಿನ್ನ ಖಡ್ಗದಿಂದ ಇರಿದು ನನ್ನನ್ನು ಕೊಂದುಬಿಡು. ಆಗ, ಈ ಪರದೇಶೀಯರು ನನ್ನನ್ನು ಗಾಯಗೊಳಿಸುವುದಕ್ಕಾಗಲಿ ಅಪಹಾಸ್ಯ ಮಾಡುವುದಕ್ಕಾಗಲಿ ಸಾಧ್ಯವಾಗುವುದಿಲ್ಲ” ಎಂದನು. ಆದರೆ ಸೌಲನ ಆಯುಧವಾಹಕನು ನಿರಾಕರಿಸಿದನು. ಸೌಲನ ಸಹಾಯಕನು ಬಹಳ ಭಯಗೊಂಡಿದ್ದನು. ಆದ್ದರಿಂದ ಸೌಲನು ತನ್ನ ಸ್ವಂತ ಖಡ್ಗದಿಂದಲೇ ಇರಿದು ಆತ್ಮಹತ್ಯೆ ಮಾಡಿಕೊಂಡನು.


ಪರದೇಶಸ್ಥರು ನಿನ್ನನ್ನು ಪರದೇಶಿಯಂತೆ ನೋಡುವರು ಮತ್ತು ಕೊಲೆ ಮಾಡುವರು. ನಾನು ಆ ರೀತಿಯಾಗಿ ಮಾಡಬೇಕೆಂದು ಆಜ್ಞಾಪಿಸುವದರಿಂದ ನಿನಗೆ ಹಾಗೆ ಆಗುವದು.’” ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದ್ದಾನೆ.


ಅಶ್ಶೂರದ ಅರಸನು ಇಸ್ರೇಲಿನ ದೇವರಾದ ಯೆಹೋವನನ್ನು ಅವಮಾನ ಮಾಡಿ ಬರೆದ ಪತ್ರ ಹೀಗಿತ್ತು: “ಇತರ ದೇಶಗಳ ದೇವರುಗಳು ತಮ್ಮ ಜನರನ್ನು ನಾಶಮಾಡದಂತೆ ನನ್ನನ್ನು ತಡೆಯಲು ಸಾಧ್ಯವಾಗಲಿಲ್ಲ. ಅದೇ ರೀತಿಯಲ್ಲಿ ಹಿಜ್ಕೀಯನ ದೇವರು ತನ್ನ ಜನರನ್ನು ನಾಶಮಾಡದ ಹಾಗೆ ನನ್ನನ್ನು ತಡೆಯಲು ಸಾಧ್ಯವಿಲ್ಲ.”


ಇಲ್ಲ, ನೀನು ನಮ್ರನಾಗಿರಲಿಲ್ಲ. ಅದಕ್ಕೆ ಪ್ರತಿಯಾಗಿ ನೀನು ಪರಲೋಕದೊಡೆಯನಿಗೆ ವಿರುದ್ಧವಾಗಿ ನಡೆದುಕೊಂಡೆ. ಯೆಹೋವನ ಆಲಯದಿಂದ ಕುಡಿಯುವ ಪಾತ್ರೆಗಳನ್ನು ತರಬೇಕೆಂದು ಆಜ್ಞಾಪಿಸಿದೆ. ನೀನು ಮತ್ತು ನಿನ್ನ ಅಧಿಕಾರಿಗಳು, ನಿನ್ನ ಪತ್ನಿಯರು ಮತ್ತು ನಿನ್ನ ಉಪಪತ್ನಿಯರು ಆ ಪಾತ್ರೆಗಳಲ್ಲಿ ದ್ರಾಕ್ಷಾರಸವನ್ನು ಕುಡಿದಿರಿ. ನೀನು ಬೆಳ್ಳಿ, ಬಂಗಾರ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಸ್ತುತಿಸಿದೆ. ಅವುಗಳಿಗೆ ನೋಡುವ, ಕೇಳಿಸಿಕೊಳ್ಳುವ ಅಥವಾ ಸ್ತೋತ್ರವನ್ನು ತಿಳಿದುಕೊಳ್ಳುವ ಸಾಮರ್ಥ್ಯವಿಲ್ಲ. ಆದರೆ ನಿನ್ನ ಜೀವದ ಮೇಲೆಯೂ ನಿನ್ನ ಆಗುಹೋಗುಗಳ ಮೇಲೆಯೂ ಅಧಿಕಾರವುಳ್ಳ ದೇವರನ್ನು ನೀನು ಸ್ತುತಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು