Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 17:45 - ಪರಿಶುದ್ದ ಬೈಬಲ್‌

45 ದಾವೀದನು ಫಿಲಿಷ್ಟಿಯನಿಗೆ, “ನೀನಾದರೋ ಖಡ್ಗ, ಈಟಿ ಮತ್ತು ಭರ್ಜಿಗಳನ್ನು ಹಿಡಿದುಕೊಂಡು ನನ್ನ ಬಳಿಗೆ ಬಂದಿರುವೆ. ನಾನಾದರೋ ಸರ್ವಶಕ್ತನೂ ಇಸ್ರೇಲರ ಸೈನ್ಯಗಳ ದೇವರೂ ಆಗಿರುವ ಯೆಹೋವನ ಹೆಸರಿನಲ್ಲಿ ನಿನ್ನ ಬಳಿಗೆ ಬಂದಿರುವೆ! ನೀನು ಹೀಯಾಳಿಸಿದ್ದು ಆತನನ್ನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಆಗ ದಾವೀದನು ಅವನಿಗೆ, “ನೀನು ಈಟಿ, ಕತ್ತಿ, ಬರ್ಜಿಗಳೊಡನೆ ನನ್ನ ಬಳಿಗೆ ಬರುತ್ತೀ. ನಾನಾದರೋ ನೀನು ಹೀಯಾಳಿಸಿದಂಥ ಸೇನಾಧೀಶ್ವರನೂ, ಇಸ್ರಾಯೇಲ್ಯರ ಯುದ್ಧಭಟರ ದೇವರೂ ಆಗಿರುವ ಯೆಹೋವನ ನಾಮದೊಡನೆ ನಿನ್ನ ಬಳಿಗೆ ಬಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 ಅದಕ್ಕೆ ದಾವೀದನು, “ನೀನು ಈಟಿ, ಕತ್ತಿ, ಭರ್ಜಿಗಳೊಡನೆ ನನ್ನ ಬಳಿಗೆ ಬರುತ್ತಿರುವೆ; ನೀನು ಹೀಯಾಳಿಸಿದ ಸೇನಾಧೀಶ್ವರರು ಹಾಗು ಇಸ್ರಯೇಲ್ ಯೋಧರ ದೇವರು ಆದಂಥ ಸರ್ವೇಶ್ವರನ ನಾಮದೊಡನೆ ನಾನು ನಿನ್ನ ಬಳಿಗೆ ಬರುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ಆಗ ದಾವೀದನು ಅವನಿಗೆ - ನೀನು ಈಟಿ ಕತ್ತಿ ಬರ್ಜಿಗಳೊಡನೆ ನನ್ನ ಬಳಿಗೆ ಬರುತ್ತೀ; ನಾನಾದರೋ ನೀನು ಹೀಯಾಳಿಸಿದಂಥ ಸೇನಾಧೀಶ್ವರನೂ ಇಸ್ರಾಯೇಲ್ಯರ ಯುದ್ಧಭಟರ ದೇವರೂ ಆಗಿರುವ ಯೆಹೋವನ ನಾಮದೊಡನೆ ನಿನ್ನ ಬಳಿಗೆ ಬರುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ದಾವೀದನು ಫಿಲಿಷ್ಟಿಯನಿಗೆ, “ನೀನು ಖಡ್ಗ, ಈಟಿ ಮತ್ತು ಗುರಾಣಿಗಳೊಡನೆ ನನ್ನ ಬಳಿಗೆ ಬರುತ್ತಿರುವೆ. ಆದರೆ ನಾನು, ನೀನು ನಿಂದಿಸಿದ ಇಸ್ರಾಯೇಲಿನ ಸೈನ್ಯಗಳ ದೇವರಾದ ಸೇನಾಧೀಶ್ವರ ಯೆಹೋವ ದೇವರ ಹೆಸರಿನಲ್ಲಿ ನಿನ್ನ ಬಳಿಗೆ ಬರುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 17:45
21 ತಿಳಿವುಗಳ ಹೋಲಿಕೆ  

ಪ್ರಪಂಚದವರು ಉಪಯೋಗಿಸುವ ಆಯುಧಗಳಿಗೆ ತದ್ವಿರುದ್ಧವಾದ ಆಯುಧಗಳೊಂದಿಗೆ ನಾವು ಹೋರಾಡುತ್ತೇವೆ. ನಮ್ಮ ಆಯುಧಗಳು ದೇವರ ಶಕ್ತಿಯನ್ನು ಹೊಂದಿವೆ. ಅವು ಶತ್ರುವಿನ ಬಲವಾದ ಕೋಟೆಗಳನ್ನು ನಾಶ ಮಾಡಬಲ್ಲವು. ನಾವು ಜನರ ವಾದಗಳನ್ನು ನಾಶಮಾಡುತ್ತೇವೆ.


ಅಶ್ಶೂರದ ರಾಜನ ಬಳಿಯಲ್ಲಿ ಮನುಷ್ಯರು ಮಾತ್ರ ಇರುವರು. ಆದರೆ ನಮ್ಮೊಂದಿಗೆ ದೇವರಾದ ಯೆಹೋವನಿದ್ದಾನೆ. ನಮ್ಮ ದೇವರು ನಮಗೆ ಸಹಾಯ ಮಾಡುತ್ತಾನೆ. ನಮ್ಮ ಯುದ್ಧದಲ್ಲಿ ಆತನು ನಮಗೋಸ್ಕರ ಕಾದಾಡುವನು” ಎಂದು ಹೇಳಿ ಹಿಜ್ಕೀಯ ಅರಸನು ತನ್ನ ಜನರನ್ನು ಪ್ರೋತ್ಸಾಹಿಸಿ ಬಲಗೊಳಿಸಿದನು.


ನಮ್ಮ ಸ್ವಂತ ಶಕ್ತಿಯಿಂದಲೇ ನಾವು ಯಾವ ಒಳ್ಳೆಯದನ್ನಾದರೂ ಮಾಡಬಲ್ಲೆವೆಂದು ನಾನು ಹೇಳುತ್ತಿಲ್ಲ. ನಾವು ಮಾಡುವ ಕಾರ್ಯಗಳನ್ನು ದೇವರು ಒದಗಿಸಿದ ಸಾಮರ್ಥ್ಯದಿಂದಲೇ ಮಾಡುತ್ತೇವೆ.


ಕ್ರಿಸ್ತನ ಮೂಲಕ ನಾನು ಎಲ್ಲಾ ಕಾರ್ಯಗಳನ್ನು ಮಾಡಬಲ್ಲೆನು. ಏಕೆಂದರೆ ಆತನು ನನ್ನನ್ನು ಬಲಪಡಿಸುತ್ತಾನೆ.


ಯೆಹೋವನು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನ ಆಶ್ರಯಗಿರಿಯೂ ನನ್ನ ಗುರಾಣಿಯೂ ನನ್ನ ರಕ್ಷಣಾಬಲವೂ ನನ್ನ ದುರ್ಗವೂ ಆಗಿದ್ದಾನೆ.


ನಮಗೆ ಸಹಾಯವು ಯೆಹೋವನಿಂದಲೇ ಬಂದಿತು. ಭೂಮ್ಯಾಕಾಶಗಳನ್ನು ಸೃಷ್ಟಿಮಾಡಿದವನು ಆತನೇ.


ನಾನು ಒಂದು ಸಿಂಹವನ್ನೂ ಒಂದು ಕರಡಿಯನ್ನೂ ಕೊಂದಿದ್ದೇನೆ. ಅದೇ ರೀತಿಯಲ್ಲಿ ನಾನು ಅನ್ಯದೇಶಿಯನಾದ ಗೊಲ್ಯಾತನನ್ನೂ ಕೊಂದು ಹಾಕುತ್ತೇನೆ. ಜೀವಸ್ವರೂಪನಾದ ದೇವರ ಸೈನ್ಯವನ್ನು ಹೀಯಾಳಿಸಿದ್ದರಿಂದ ಗೊಲ್ಯಾತನು ಸಾಯಲೇಬೇಕು.


ನೀನು ಅವಮಾನಪಡಿಸಿ ಪರಿಹಾಸ್ಯ ಮಾಡಿ ವಿರೋಧವಾಗಿ ಮಾತಾಡಿದ್ದು ಯಾರಿಗೆ? ನೀನು ಇಸ್ರೇಲಿನ ಪರಿಶುದ್ಧನಿಗೆ ವಿರುದ್ಧವಾಗಿರುವೆ. ಆತನಿಗಿಂತ ನೀನೇ ಉತ್ತಮನೆಂಬ ರೀತಿಯಲ್ಲಿ ನೀನು ವರ್ತಿಸಿರುವೆ.


ಫಿಲಿಷ್ಟಿಯನು, “ಈ ದಿನ ನಾನು ಇಸ್ರೇಲ್ ಸೈನ್ಯವನ್ನು ಹೀಯಾಳಿಸುವೆನು. ನನ್ನೊಂದಿಗೆ ಹೋರಾಡಲು ನಿಮ್ಮ ಮನುಷ್ಯನೊಬ್ಬನನ್ನು ಕಳುಹಿಸಿ” ಎಂದು ಕೊಚ್ಚಿಕೊಂಡನು.


ಯೆಹೋವನು ತನ್ನ ಜನರನ್ನು ರಕ್ಷಿಸಬಲ್ಲನು. ಯೆಹೋವನೇ, ದಯವಿಟ್ಟು ನಿನ್ನ ಜನರಿಗೆ ಒಳ್ಳೆಯದನ್ನು ಮಾಡು.


ಯೆಹೋವನ ಹೆಸರು ಬಲವಾದ ಗೋಪುರದಂತಿದೆ. ಒಳ್ಳೆಯವರು ಅದರೊಳಗೆ ಓಡಿಹೋಗಿ ಸುರಕ್ಷಿತವಾಗಿರುವರು.


ನನ್ನ ಬಿಲ್ಲುಬಾಣಗಳಲ್ಲಿ ನಾನು ಭರವಸೆವಿಡುವುದಿಲ್ಲ. ನನ್ನ ಖಡ್ಗವು ನನ್ನನ್ನು ರಕ್ಷಿಸಲಾರದು.


ನಿನ್ನ ಸೈನ್ಯದ ಬಗ್ಗೆಯೂ ನಿನ್ನ ಯುದ್ಧಗಳ ಬಗ್ಗೆಯೂ ನನಗೆ ಗೊತ್ತಿದೆ. ನೀನು ವಿಶ್ರಾಂತಿ ತೆಗೆದುಕೊಂಡದ್ದೂ ನನಗೆ ಗೊತ್ತಿದೆ. ನೀನು ಯುದ್ಧಕ್ಕೆ ಹೋದದ್ದೂ ನನಗೆ ಗೊತ್ತಿದೆ. ನೀನು ಯುದ್ಧದಿಂದ ಹಿಂತಿರುಗಿ ಮನೆಗೆ ಬಂದದ್ದೂ ನನಗೆ ಗೊತ್ತಿದೆ. ನೀನು ನನ್ನ ಮೇಲೆ ಕೋಪಗೊಂಡಿರುವುದೂ ನನಗೆ ಗೊತ್ತಿದೆ.


ದಾವೀದನು ತನ್ನ ಹತ್ತಿರ ನಿಂತಿದ್ದವನಿಗೆ, “ಈ ಫಿಲಿಷ್ಟಿಯನನ್ನು ಕೊಂದು ಇಸ್ರೇಲರಿಗೆ ಉಂಟಾಗಿರುವ ಅಪನಿಂದೆಯನ್ನು ಹೋಗಲಾಡಿಸುವವನಿಗೆ ಸಿಗುವ ಬಹುಮಾನವೇನು? ಈ ಗೊಲ್ಯಾತನ್ಯಾರು? ಇವನು ಕೇವಲ ಒಬ್ಬ ಪರದೇಶಿ. ಗೊಲ್ಯಾತನು ಫಿಲಿಷ್ಟಿಯನೇ ಹೊರತು ಬೇರೆ ಯಾರೂ ಅಲ್ಲ. ಜೀವಸ್ವರೂಪನಾದ ದೇವರ ಸೈನ್ಯದ ವಿರೋಧವಾಗಿ ಮಾತಾಡಲು ಇವನು ತನ್ನನ್ನು ಯಾರೆಂದು ಯೋಚಿಸಿಕೊಂಡಿದ್ದಾನೆ?” ಎಂದನು.


ಗೊಲ್ಯಾತನು ಕಾಲುಗಳಿಗೂ ತಾಮ್ರದ ಕವಚವನ್ನು ತೊಟ್ಟಿದ್ದನು. ಅವನು ಹೆಗಲಿನಲ್ಲಿ ತಾಮ್ರದ ಈಟಿಯನ್ನು ಕಟ್ಟಿಕೊಂಡಿದ್ದನು.


ಆಸನು ಜೆರಹನ ವಿರುದ್ಧ ಯುದ್ಧಮಾಡಲು ಹೊರಟನು. ಮಾರೇಷದ ಚೆಫಾತ ಎಂಬ ಕಣಿವೆಯಲ್ಲಿ ವ್ಯೂಹ ಕಟ್ಟಿದರು.


ಅವರು ಸೋತುಹೋದರು; ಯುದ್ಧದಲ್ಲಿ ಸತ್ತುಹೋದರು; ನಾವಾದರೋ ಜಯಗಳಿಸಿದೆವು! ನಾವು ಜಯಪ್ರದರಾಗಿ ನಿಂತುಕೊಳ್ಳುವೆವು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು