Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 17:46 - ಪರಿಶುದ್ದ ಬೈಬಲ್‌

46 ಇಂದು ನಾನು ನಿನ್ನನ್ನು ಸೋಲಿಸಲು ಯೆಹೋವನು ಸಹಾಯಮಾಡುತ್ತಾನೆ. ನಾನು ನಿನ್ನನ್ನು ಕೊಲ್ಲುತ್ತೇನೆ. ಇಂದು ನಾನು ನಿನ್ನ ತಲೆಯನ್ನು ಕತ್ತರಿಸಿ ನಿನ್ನ ದೇಹವನ್ನು ಪಕ್ಷಿಗಳಿಗೂ ಕ್ರೂರಮೃಗಗಳಿಗೂ ಆಹಾರವನ್ನಾಗಿ ಕೊಡುತ್ತೇನೆ. ಉಳಿದೆಲ್ಲ ಫಿಲಿಷ್ಟಿಯರಿಗೂ ಸಹ ನಾವು ಅದೇ ರೀತಿ ಮಾಡುತ್ತೇವೆ. ಆಗ ಇಸ್ರೇಲಿನಲ್ಲಿ ದೇವರಿದ್ದಾನೆಂಬುದು ಇಡೀ ಜಗತ್ತಿಗೆಲ್ಲ ಗೊತ್ತಾಗುವುದು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ಆತನು ಈ ಹೊತ್ತು ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಡುವನು. ನಾನು ನಿನ್ನನ್ನು ಕೊಂದು ನಿನ್ನ ತಲೆಯನ್ನು ಕಡಿದು ಹಾಕಿ ಫಿಲಿಷ್ಟಿಯ ಸೈನ್ಯದ ಶವಗಳನ್ನು ಮೃಗ ಪಕ್ಷಿಗಳಿಗೆ ಹಂಚಿಕೊಡುವೆನು. ಇದರಿಂದ ಇಸ್ರಾಯೇಲರೊಳಗೆ ದೇವರಿದ್ದಾನೆಂಬುದು ಭೂಲೋಕದವರಿಗೆಲ್ಲಾ ತಿಳಿದುಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

46 ಅವರು ಈ ದಿನ ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಡುವರು. ನಾನು ನಿನ್ನನ್ನು ಕೊಂದು, ನಿನ್ನ ತಲೆಯನ್ನು ಕಡಿದು, ಫಿಲಿಷ್ಟಿಯ ಸೈನ್ಯದ ಶವಗಳನ್ನು ಆಕಾಶದ ಪಕ್ಷಿಗಳಿಗೂ ವನ್ಯಮೃಗಗಳಿಗೂ ಹಂಚಿಕೊಡುವೆನು. ಇದರಿಂದ ಇಸ್ರಯೇಲರ ಸಂಗಡ ದೇವರಿದ್ದಾರೆಂಬುದು ಜಗತ್ತಿಗೆಲ್ಲಾ ತಿಳಿದುಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ಆತನು ಈ ಹೊತ್ತು ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಡುವನು; ನಾನು ನಿನ್ನನ್ನು ಕೊಂದು ನಿನ್ನ ತಲೆಯನ್ನು ಕಡಿದುಹಾಕಿ ಫಿಲಿಷ್ಟಿಯಸೈನ್ಯದ ಶವಗಳನ್ನು ಮೃಗಪಕ್ಷಿಗಳಿಗೆ ಹಂಚಿಕೊಡುವೆನು. ಇದರಿಂದ ಇಸ್ರಾಯೇಲ್ಯರೊಳಗೆ ದೇವರಿರುತ್ತಾನೆಂಬದು ಭೂಲೋಕದವರಿಗೆಲ್ಲಾ ತಿಳಿದು ಬರುವದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 ಯೆಹೋವ ದೇವರು ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡುವರು; ನಾನು ನಿನ್ನನ್ನು ಹೊಡೆದುಬಿಟ್ಟು, ನಿನ್ನ ತಲೆಯನ್ನು ನಿನ್ನಿಂದ ತೆಗೆದುಹಾಕಿ, ಫಿಲಿಷ್ಟಿಯರ ದಂಡಿನ ಹೆಣಗಳನ್ನು ಈ ದಿನ ಆಕಾಶದ ಪಕ್ಷಿಗಳಿಗೂ ಕಾಡುಮೃಗಗಳಿಗೂ ಆಹಾರವಾಗಿ ಕೊಡುವೆನು. ಈ ದಿನ ಇಸ್ರಾಯೇಲರಲ್ಲಿ ದೇವರು ಇದ್ದಾರೆಂದು ಭೂಲೋಕದವರೆಲ್ಲರೂ ತಿಳಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 17:46
30 ತಿಳಿವುಗಳ ಹೋಲಿಕೆ  

ಯೆಹೋವನು ತನ್ನ ಪರಿಶುದ್ಧ ಸಾಮರ್ಥ್ಯವನ್ನು ಎಲ್ಲಾ ಜನಾಂಗಗಳಿಗೆ ಪ್ರದರ್ಶಿಸುವನು. ಯೆಹೋವನು ತನ್ನ ಜನರನ್ನು ರಕ್ಷಿಸುವದನ್ನು ದೂರದೇಶದವರು ನೋಡುವರು.


ಈ ಭೂಲೋಕದ ಜನರೆಲ್ಲರೂ ಯೆಹೋವನೇ ಸರ್ವಶಕ್ತನೆಂದು ತಿಳಿದುಕೊಳ್ಳಬೇಕೆಂದು ಆತನು ಹೀಗೆ ಮಾಡಿದನು. ಹೀಗೆ ಅವರು ನಿಮ್ಮ ದೇವರಾದ ಯೆಹೋವನಿಗೆ ಯಾವಾಗಲೂ ಭಯಪಡುವರು” ಅಂದನು.


ನಮ್ಮ ದೇವರಾದ ಯೆಹೋವನೇ, ಅಶ್ಶೂರದ ರಾಜನಿಂದ ನಮ್ಮನ್ನು ರಕ್ಷಿಸು. ಭೂಲೋಕದ ರಾಜ್ಯಗಳೆಲ್ಲ ನೀನೊಬ್ಬನೇ ದೇವರಾದ ಯೆಹೋವನೆಂದು ತಿಳಿದುಕೊಳ್ಳುವಂತೆ ನಮ್ಮನ್ನು ಇವನ ಕೈಯಿಂದ ಬಿಡಿಸು” ಎಂದು ಪ್ರಾರ್ಥಿಸಿದನು.


ನಿನ್ನ ನಿವಾಸವಾದ ಪರಲೋಕದಿಂದಲೇ ಅವರ ಪ್ರಾರ್ಥನೆಗಳನ್ನು ದಯವಿಟ್ಟು ಆಲಿಸು, ಅನ್ಯ ಸ್ಥಳದವರಾದ ಆ ಜನರು ನಿನ್ನಲ್ಲಿ ಬೇಡುವುದನ್ನೆಲ್ಲ ದಯವಿಟ್ಟು ಈಡೇರಿಸು. ಆಗ, ಇಸ್ರೇಲಿನ ಜನರಂತೆ ಭೂಲೋಕದವರೆಲ್ಲರಿಗೂ ನಿನ್ನ ಹೆಸರು ಗೊತ್ತಾಗುವುದು ಮತ್ತು ಅವರು ನಿನಗೆ ಭಯಪಡುವರು. ಈ ಆಲಯವನ್ನು ನಿನ್ನ ಗೌರವಕ್ಕಾಗಿ ನಾನು ಕಟ್ಟಿಸಿದೆನೆಂಬುದು ಆಗ ಎಲ್ಲಾ ಕಡೆಯ ಜನರಿಗೂ ತಿಳಿಯುವುದು.


ಕಾಡುಪಕ್ಷಿಗಳಿಗೆ ಮತ್ತು ಕಾಡುಪ್ರಾಣಿಗಳಿಗೆ ನಿಮ್ಮ ಹೆಣಗಳು ಆಹಾರವಾಗುವವು. ಅವುಗಳನ್ನು ಓಡಿಸಲು ಯಾರೂ ಇರುವುದಿಲ್ಲ.


“ನಿನ್ನ ದೇವರು ಸರ್ವಶ್ರೇಷ್ಠನು ಮತ್ತು ಪ್ರಬಲನು ಎನ್ನುವದು ನನಗೆ ಖಚಿತವಾಯಿತು. ಆತನು ಎಲ್ಲ ಅರಸರ ಒಡೆಯನಾಗಿದ್ದಾನೆ. ಆತನು ಜನರಿಗೆ ನಿಗೂಢವಾಗಿದ್ದ ರಹಸ್ಯವನ್ನು ತಿಳಿಸುತ್ತಾನೆ. ನೀನು ನನಗೆ ಈ ರಹಸ್ಯವನ್ನು ತಿಳಿಸಲು ಸಮರ್ಥನಾದುದರಿಂದ ಇದೆಲ್ಲ ನಿಜವೆಂದು ನಾನು ನಂಬುತ್ತೇನೆ” ಎಂದು ಹೇಳಿದನು.


ಆದರೆ, ನನ್ನ ಶಕ್ತಿಯನ್ನು ನಿನಗೆ ತೋರಿಸಬೇಕೆಂದೂ ಲೋಕದ ಜನರೆಲ್ಲರು ನನ್ನ ಬಗ್ಗೆ ತಿಳಿದುಕೊಳ್ಳಬೇಕೆಂದೂ ನಾನು ನಿನ್ನನ್ನು ಇನ್ನೂ ಉಳಿಸಿದ್ದೇನೆ.


ಹದ್ದುಗಳು ಎಲ್ಲಿ ಕೂಡಿಬರುತ್ತವೆಯೋ ಅಲ್ಲಿ ಹೆಣವಿರುತ್ತದೆ ಎಂಬುದು ನಿಮಗೆ ಗೊತ್ತೇ ಇದೆ. ಅದೇ ರೀತಿ ನನ್ನ ಬರುವಿಕೆಯೂ ಸ್ಪಷ್ಟವಾಗಿರುವುದು.


ನಾನು ಈಗ ಸಕಲ ಜನಾಂಗ, ಕುಲ, ಭಾಷೆಗಳ ಜನರಲ್ಲಿ ಯಾರಾದರೂ ಶದ್ರಕ್, ಮೇಶಕ್, ಅಬೇದ್‌ನೆಗೋ ಇವರ ದೇವರ ವಿರುದ್ಧವಾಗಿ ಮಾತನಾಡಿದರೆ ಅವರನ್ನು ತುಂಡುತುಂಡಾಗಿ ಕತ್ತರಿಸಿ ಅವರ ಮನೆಗಳನ್ನು ತಿಪ್ಪೆಯನ್ನಾಗಿ ಮಾಡಬೇಕೆಂಬ ಆಜ್ಞೆಯನ್ನು ವಿಧಿಸುತ್ತೇನೆ. ಬೇರೆ ಯಾವ ದೇವರೂ ತನ್ನ ಭಕ್ತರನ್ನು ಈ ರೀತಿ ರಕ್ಷಿಸಲಾರನು” ಎಂದು ಹೇಳಿದನು.


ಆದರೆ ನೀನು ನಮ್ಮ ದೇವರಾದ ಯೆಹೋವನು. ಆದ್ದರಿಂದ ದಯಮಾಡಿ ನಮ್ಮನ್ನು ಅಶ್ಶೂರದ ಅರಸನ ಕೈಯಿಂದ ರಕ್ಷಿಸು. ಆಗ ಭೂಮಿಯ ಎಲ್ಲಾ ರಾಜ್ಯಗಳೂ ಯೆಹೋವನಾದ ನೀನೇ ದೇವರೆಂದು ತಿಳಿದುಕೊಳ್ಳುವವು.”


ದೇವರು ಹೀಗೆನ್ನುವನು: “ಹೋರಾಡುವುದನ್ನು ನಿಲ್ಲಿಸಿ, ನಾನೇ ದೇವರೆಂಬುದನ್ನು ಕಲಿತುಕೊಳ್ಳಿ! ನಾನು ಜನಾಂಗಗಳನ್ನು ಸೋಲಿಸುವೆನು! ಇಡೀ ಲೋಕವನ್ನು ಹತೋಟಿಗೆ ತೆಗೆದುಕೊಳ್ಳುವೆನು!”


ಗೊಲ್ಯಾತನು ದಾವೀದನಿಗೆ, “ಬಾ ಇಲ್ಲಿಗೆ, ನಿನ್ನ ದೇಹವನ್ನು ಪಕ್ಷಿಗಳಿಗೂ ಕ್ರೂರಪ್ರಾಣಿಗಳಿಗೂ ಆಹಾರವನ್ನಾಗಿ ಮಾಡುತ್ತೇನೆ!” ಎಂದನು.


ನಿಮ್ಮ ದೇವರಾದ ಯೆಹೋವನು ಆ ಜನಾಂಗಗಳವರನ್ನು ಸೋಲಿಸಲು ನಿಮಗೆ ಅವಕಾಶ ಮಾಡಿಕೊಡುವನು. ಯುದ್ಧಮಾಡುವಾಗ ಅವರ ಮಧ್ಯದಲ್ಲಿ ಗಲಿಬಿಲಿ ಹುಟ್ಟಿಸಿ ಅವರು ನಾಶವಾಗುವಂತೆ ಮಾಡುವನು.


ನಿಮ್ಮ ದೇವರಾದ ಯೆಹೋವನು ಆ ಜನಾಂಗಗಳನ್ನು ನಿಮಗೆ ಅಧೀನಪಡಿಸುವನು. ನೀವು ಅವರನ್ನು ಸೋಲಿಸಿಬಿಡುವಿರಿ. ನೀವು ಅವರನ್ನು ಸಂಪೂರ್ಣವಾಗಿ ನಾಶಮಾಡಬೇಕು. ಅವರೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳಬೇಡಿ ಮತ್ತು ಅವರಿಗೆ ಕರುಣೆಯನ್ನು ತೋರಬೇಡಿ.


ಕಾಡುಗಳಲ್ಲಿಯೂ ಹೊಲಗಳಲ್ಲಿಯೂ ಇರುವ ಪ್ರಾಣಿಗಳೇ, ಬಂದು ತಿನ್ನಿರಿ!


ವೈರಿಗಳು ನನ್ನನ್ನು ಸೆರೆಹಿಡಿದೊಯ್ಯಲು ನೀನು ಬಿಟ್ಟುಕೊಡುವುದಿಲ್ಲ; ನನ್ನನ್ನು ಅವರ ಬಲೆಗಳಿಂದ ಬಿಡುಗಡೆ ಮಾಡುವೆ.


ಯೆಹೋವನು ಯೆಹೋಶುವನಿಗೆ, “ಆ ಸೈನ್ಯಗಳಿಗೆ ಹೆದರಬೇಡ, ನೀನು ಅವರನ್ನು ಸೋಲಿಸುವಂತೆ ಮಾಡುತ್ತೇನೆ. ಆ ಸೈನ್ಯದ ಯಾರೊಬ್ಬರೂ ನಿನ್ನನ್ನು ಸೋಲಿಸಲು ಸಾಧ್ಯವಿಲ್ಲ” ಎಂದು ಹೇಳಿದನು.


ಯೋನಾತಾನನು ತನ್ನ ಆಯುಧಗಳನ್ನು ಹೊತ್ತುಕೊಂಡು ಬರುತ್ತಿದ್ದ ಯುವಸಹಾಯಕನಿಗೆ, “ಆ ಹೊರದೇಶಿಯರ ಪಾಳೆಯಕ್ಕೆ ಹೋಗೋಣ ಬಾ. ಈ ಜನರನ್ನು ಸೋಲಿಸಲು ಯೆಹೋವನು ಬಹುಶಃ ನಮ್ಮನ್ನು ಬಳಸಬಹುದು. ಯೆಹೋವನನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ. ನಮ್ಮಲ್ಲಿ ಅನೇಕ ಸೈನಿಕರಿದ್ದರೂ ಇಲ್ಲವೆ ಕೆಲವೇ ಸೈನಿಕರಿದ್ದರೂ ಅದು ಲೆಕ್ಕಕ್ಕೆ ಬರುವುದಿಲ್ಲ” ಎಂದು ಹೇಳಿದನು.


ಅಹೀಮಾಚನು ರಾಜನ ಬಳಿಗೆ ಬಂದು, “ಎಲ್ಲವೂ ಶುಭಕರವಾಗಿದೆ” ಎಂದು ಹೇಳಿ ರಾಜನಿಗೆ ಸಾಷ್ಟಾಂಗನಮಸ್ಕಾರ ಮಾಡಿದನು. ಅಹೀಮಾಚನು, “ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ! ರಾಜನಾದ ಒಡೆಯನೇ, ನಿನ್ನ ವಿರುದ್ಧವಾಗಿದ್ದ ಜನರನ್ನು ಯೆಹೋವನು ಸೋಲಿಸಿದ್ದಾನೆ” ಎಂದು ಹೇಳಿದನು.


ಅಯ್ಯಾಹನ ಮಗಳಾದ ರಿಚ್ಪಳು ಶೋಕವಸ್ತ್ರವನ್ನು ಕಲ್ಲಿನ ಮೇಲೆ ಹಾಸಿದಳು. ಸುಗ್ಗಿಯ ಆರಂಭದಿಂದ, ಆ ದೇಹಗಳ ಮೇಲೆ ಮಳೆಯು ಬೀಳುವ ತನಕ, ಆಕೆ ಆ ವಸ್ತ್ರದ ಮೇಲೆ ಕುಳಿತುಕೊಂಡಳು. ಆಕಾಶದಲ್ಲಿ ಹಾರಾಡುವ ಹಕ್ಕಿಗಳು ಹಗಲು ಹೊತ್ತಿನಲ್ಲಿಯೂ, ಕಾಡಿನ ಪ್ರಾಣಿಗಳು ರಾತ್ರಿಯ ಹೊತ್ತಿನಲ್ಲಿಯೂ ತನ್ನ ಮಕ್ಕಳ ದೇಹಗಳನ್ನು ಮುಟ್ಟಲು ರಿಚ್ಪಳು ಅವಕಾಶಕೊಡಲಿಲ್ಲ.


ಆಗ ಯೆಹೋವನೇ ನಿಜವಾದ ದೇವರೆಂದು ಪ್ರಪಂಚದ ಜನರೆಲ್ಲರಿಗೂ ತಿಳಿಯುತ್ತದೆ.


ನಾಮಾನನು ತನ್ನ ಗುಂಪಿನೊಂದಿಗೆ ದೇವಮನುಷ್ಯನ ಹತ್ತಿರಕ್ಕೆ ಹಿಂದಿರುಗಿ ಬಂದನು. ಅವನು ಎಲೀಷನ ಮುಂದೆ ನಿಂತು, “ನೋಡಿ, ಇಸ್ರೇಲಿನಲ್ಲಿಯೇ ಹೊರತು ಭೂಮಂಡಲದ ಬೇರೆಲ್ಲಿಯೂ ದೇವರು ಇಲ್ಲವೇ ಇಲ್ಲ ಎಂಬುದು ಈಗ ತಾನೇ ನನಗೆ ತಿಳಿಯಿತು! ಈಗ ದಯಮಾಡಿ ನನ್ನ ಕಾಣಿಕೆಯನ್ನು ಸ್ವೀಕರಿಸಿ!” ಎಂದು ಹೇಳಿದನು.


ಆದ್ದರಿಂದ ನಾನು ಆ ಜನರನ್ನು ಅವರ ವೈರಿಗಳಿಗೆ ಮತ್ತು ಅವರನ್ನು ಕೊಲ್ಲಲು ಇಚ್ಛಿಸುವ ಪ್ರತಿಯೊಬ್ಬರಿಗೆ ಕೊಡುತ್ತೇನೆ. ಆ ಜನರ ದೇಹಗಳು ಗಾಳಿಯಲ್ಲಿ ಹಾರಾಡುವ ಪಕ್ಷಿಗಳಿಗೂ ಭೂಮಿಯ ಮೇಲಿನ ಕಾಡುಪ್ರಾಣಿಗಳಿಗೂ ಆಹಾರವಾಗುವವು.


ಮೂರುದಿನಗಳೊಳಗಾಗಿ ರಾಜನು ನಿನ್ನನ್ನು ಸೆರೆಮನೆಯಿಂದ ಬಿಡಿಸಿ ನಿನ್ನ ಶಿರಚ್ಛೇದನ ಮಾಡಿಸುವನು; ನಿನ್ನ ದೇಹವನ್ನು ಕಂಬಕ್ಕೆ ನೇತುಹಾಕಿಸುವನು; ಪಕ್ಷಿಗಳು ನಿನ್ನ ದೇಹವನ್ನು ತಿಂದುಬಿಡುತ್ತವೆ” ಎಂದು ಹೇಳಿದನು.


ಈ ಸ್ಥಳದಲ್ಲಿ ನಾನು ಯೆಹೂದದ ಮತ್ತು ಜೆರುಸಲೇಮಿನ ಜನರ ಯೋಜನೆಗಳನ್ನು ಹಾಳು ಮಾಡುತ್ತೇನೆ. ಶತ್ರುವು ಈ ಜನರನ್ನು ಬೆನ್ನಟ್ಟಿ ಬರುವನು. ನಾನು ಈ ಸ್ಥಳದಲ್ಲಿ ಖಡ್ಗದಿಂದ ಯೆಹೂದದ ಜನರ ಕೊಲೆಯಾಗುವಂತೆ ಮಾಡುವೆನು. ಅವರ ಹೆಣಗಳು ಪಕ್ಷಿಗಳಿಗೆ ಮತ್ತು ಕಾಡುಪ್ರಾಣಿಗಳಿಗೆ ಆಹಾರವಾಗುವಂತೆ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು