1 ಸಮುಯೇಲ 17:47 - ಪರಿಶುದ್ದ ಬೈಬಲ್47 ಜನರನ್ನು ರಕ್ಷಿಸಲು ಯೆಹೋವನಿಗೆ ಕತ್ತಿ ಮತ್ತು ಈಟಿಗಳ ಅಗತ್ಯವಿಲ್ಲ ಎಂಬುದು ಇಲ್ಲಿ ಸೇರಿರುವ ಜನರಿಗೆಲ್ಲ ತಿಳಿಯುತ್ತದೆ. ಇದು ಯೆಹೋವನ ಯುದ್ಧ. ಫಿಲಿಷ್ಟಿಯರನ್ನೆಲ್ಲ ಸೋಲಿಸಲು ಯೆಹೋವನು ನಮಗೆ ಸಹಾಯ ಮಾಡುತ್ತಾನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201947 ಯೆಹೋವನು ಈಟಿಕತ್ತಿಗಳಿಲ್ಲದೇ ರಕ್ಷಿಸಬಲ್ಲನೆಂಬುದು ಇಲ್ಲಿ ಕೂಡಿರುವವರಿಗೆಲ್ಲಾ ತಿಳಿದುಬರುವುದು. ಯಾಕೆಂದರೆ ಯುದ್ಧಫಲವು ಯೆಹೋವನ ಕೈಯಲ್ಲಿದೆ. ಆತನು ನಿಮ್ಮನ್ನು ನಮ್ಮ ಕೈಗೆ ಒಪ್ಪಿಸಿಕೊಡುವನು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)47 ಈಟಿ, ಕತ್ತಿಗಳಿಲ್ಲದೆ ಸರ್ವೇಶ್ವರ ರಕ್ಷಿಸಬಲ್ಲನೆಂಬುದು ಇಲ್ಲಿ ಕೂಡಿರುವವರೆಲ್ಲರಿಗೆ ಗೊತ್ತಾಗುವುದು. ಏಕೆಂದರೆ ಸಮರದ ಪರಿಣಾಮ ಇರುವುದು ಸರ್ವೇಶ್ವರನ ಕೈಯಲ್ಲಿ; ಅವರು ತಪ್ಪದೆ ನಿಮ್ಮನ್ನು ನಮ್ಮ ಕೈಗೆ ಒಪ್ಪಿಸಿಕೊಡುವರು,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)47 ಯೆಹೋವನು ಈಟಿ ಕತ್ತಿಗಳಿಲ್ಲದೆ ರಕ್ಷಿಸಬಲ್ಲನೆಂಬದು ಇಲ್ಲಿ ಕೂಡಿರುವವರಿಗೆಲ್ಲಾ ಗೊತ್ತಾಗುವದು; ಯಾಕಂದರೆ ಯುದ್ಧಫಲವು ಯೆಹೋವನ ಕೈಯಲ್ಲಿದೆ; ಆತನು ನಿಮ್ಮನ್ನು ನಮ್ಮ ಕೈಗೆ ಒಪ್ಪಿಸಿಕೊಡುವನು ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ47 ಯೆಹೋವ ದೇವರು ಖಡ್ಗದಿಂದಲೂ, ಈಟಿಯಿಂದಲೂ ರಕ್ಷಿಸುವುದಿಲ್ಲ ಎಂಬುದು ಈ ಸಮೂಹವೆಲ್ಲಾ ತಿಳಿದುಕೊಳ್ಳುವುದು. ಏಕೆಂದರೆ ಯುದ್ಧವು ಯೆಹೋವ ದೇವರದ್ದು, ಅವರು ನಿಮ್ಮನ್ನು ನಮ್ಮ ಕೈಯಲ್ಲಿ ಒಪ್ಪಿಸಿಕೊಡುವರು,” ಎಂದನು. ಅಧ್ಯಾಯವನ್ನು ನೋಡಿ |
ಆಸನು ದೇವರಾದ ಯೆಹೋವನನ್ನು ಪ್ರಾರ್ಥಿಸಿ, “ಯೆಹೋವನೇ, ಬಲಹೀನರಾದವರು ಬಲಿಷ್ಠರಾದವರನ್ನು ಸೋಲಿಸಲು ನೀನೇ ಸಹಾಯಿಸಬೇಕು. ದೇವರಾದ ಯೆಹೋವನೇ, ನಮಗೆ ಸಹಾಯಮಾಡು. ನೀನೇ ನಮ್ಮ ರಕ್ಷಕನು. ನಾವು ನಿನ್ನ ಮೇಲೆ ಭರವಸವಿಟ್ಟಿರುತ್ತೇವೆ. ನಿನ್ನ ಹೆಸರಿನಲ್ಲಿ ನಾವು ದೊಡ್ಡ ಸೈನ್ಯದೊಂದಿಗೆ ಯುದ್ಧಕ್ಕೆ ಹೊರಟಿರುತ್ತೇವೆ. ಯೆಹೋವನೇ, ನೀನೇ ನಮ್ಮ ದೇವರು. ನಿನ್ನನ್ನು ಸೋಲಿಸಲು ಯಾರಿಗೂ ಅವಕಾಶಕೊಡಬೇಡ” ಎಂದು ಬೇಡಿಕೊಂಡನು.
ಆದರೆ ಸೌಲನು ದಾವೀದನನ್ನು ಕೊಲ್ಲಬೇಕೆಂದಿದ್ದನು. ದಾವೀದನಿಗೆ ಮೋಸಮಾಡಲು ಸೌಲನು ಒಂದು ಉಪಾಯವನ್ನು ಹೂಡಿ ಅವನಿಗೆ, “ನನ್ನ ಹಿರಿಯ ಮಗಳಾದ ಮೇರಬಳು ಇದ್ದಾಳೆ. ನಾನು ಅವಳನ್ನು ನಿನಗೆ ಮದುವೆ ಮಾಡಿಕೊಡುತ್ತೇನೆ. ಆಗ ನೀನೊಬ್ಬ ಬಲಶಾಲಿಯಾದ ಸೈನಿಕನಾಗುವೆ. ನೀನು ನನಗೆ ಮಗನಂತಿರುವೆ! ನಂತರ ನೀನು ಹೋಗಿ ಯೆಹೋವನ ಯುದ್ಧಗಳಲ್ಲಿ ಹೋರಾಡು” ಎಂದು ಹೇಳಿದನು. ಆದರೆ ಇದೊಂದು ಮೋಸವಾಗಿತ್ತು. “ಈಗ ನಾನು ದಾವೀದನನ್ನು ಕೊಲ್ಲುವ ಅಗತ್ಯವಿಲ್ಲ. ನನಗೋಸ್ಕರ ಫಿಲಿಷ್ಟಿಯರೇ ಅವನನ್ನು ಕೊಲ್ಲುವಂತೆ ಮಾಡುತ್ತೇನೆ” ಎಂಬದು ಸೌಲನ ನಿಜವಾದ ಆಲೋಚನೆಯಾಗಿತ್ತು.