Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 17:49 - ಪರಿಶುದ್ದ ಬೈಬಲ್‌

49 ದಾವೀದನು ತನ್ನ ಚೀಲದಿಂದ ಒಂದು ಕಲ್ಲನ್ನು ಹೊರತೆಗೆದನು. ಅದನ್ನು ಅವನು ಕವಣೆಯಲ್ಲಿ ಸಿಕ್ಕಿಸಿ ಬೀಸಿ ಹೊಡೆದನು. ಕವಣೆಯಿಂದ ಅವನು ಬೀಸಿದ ಕಲ್ಲು ಗೊಲ್ಯಾತನ ಹಣೆಗೆ ಬಡಿಯಿತು. ಆ ಕಲ್ಲು ಅವನ ಹಣೆಯಲ್ಲಿ ಆಳವಾದ ಗಾಯವನ್ನು ಮಾಡಿತು. ಕೂಡಲೇ ಗೊಲ್ಯಾತನು ಬೋರಲಾಗಿ ನೆಲದ ಮೇಲೆ ಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 ಚೀಲದಲ್ಲಿ ಕೈ ಹಾಕಿ, ಒಂದು ಕಲ್ಲನ್ನು ತೆಗೆದು ಅವನ ಹಣೆಗೆ ಗುರಿಯಿಟ್ಟು ಕವಣೆಯನ್ನು ಬೀಸಿ ಹೊಡೆಯಲು ಕಲ್ಲು ಅವನ ಹಣೆಯೊಳಗೆ ಹೊಕ್ಕಿತು. ಅವನು ಬೋರಲುಬಿದ್ದನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

49 ಕೈಯನ್ನು ಚೀಲದಲ್ಲಿ ಹಾಕಿ, ಒಂದು ಕಲ್ಲನ್ನು ತೆಗೆದು, ಅವನ ಕಣ್ಣಿಗೆ ಗುರಿಯಿಟ್ಟು, ಕವಣೆಯನ್ನು ಬೀಸಿ ಹೊಡೆದನು. ಆ ಕಲ್ಲು ಅವನ ಹಣೆಯನ್ನು ಹೊಕ್ಕಿತು. ಅವನು ಮುಖಕೆಳಗಾಗಿ ನೆಲಕ್ಕೆ ಉರುಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

49 ಕೈಯನ್ನು ಚೀಲದಲ್ಲಿ ಹಾಕಿ ಒಂದು ಕಲ್ಲನ್ನು ತೆಗೆದು ಅವನ ಹಣೆಗೆ ಗುರಿಯಿಟ್ಟು ಕವಣೆಯನ್ನು ಬೀಸಿ ಹೊಡೆಯಲು ಕಲ್ಲು ಅವನ ಹಣೆಯೊಳಗೆ ಹೊಕ್ಕಿತು; ಅವನು ಬೋರಲಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

49 ದಾವೀದನು ತ್ವರೆಯಾಗಿ ಆ ಫಿಲಿಷ್ಟಿಯನಿಗೆದುರಾಗಿ ಓಡಿಹೋಗಿ, ತನ್ನ ಕೈಯನ್ನು ಚೀಲದಲ್ಲಿ ಹಾಕಿ, ಅದರಲ್ಲಿರುವ ಒಂದು ಕಲ್ಲನ್ನು ತೆಗೆದುಕೊಂಡು, ಕವಣೆಯಲ್ಲಿಟ್ಟು ಬೀಸಿ, ಫಿಲಿಷ್ಟಿಯನ ಹಣೆಯನ್ನು ತಾಕುವಂತೆ ಎಸೆದನು. ಆ ಕಲ್ಲು ಅವನ ಹಣೆಯೊಳಗೆ ಹೊಕ್ಕದ್ದರಿಂದ, ಅವನು ನೆಲದ ಮೇಲೆ ಬೋರಲು ಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 17:49
6 ತಿಳಿವುಗಳ ಹೋಲಿಕೆ  

ಆದರೆ ಯೇಹು ತನ್ನ ಬಿಲ್ಲನ್ನು ಸೆಳೆದು, ಶಕ್ತಿಯನ್ನೆಲ್ಲ ಒಗ್ಗೂಡಿಸಿ ಯೋರಾಮನ ಬೆನ್ನಿಗೆ ಬಾಣದಿಂದ ಹೊಡೆದನು. ಬಾಣವು ಯೋರಾಮನ ಹೃದಯವನ್ನು ಛೇದಿಸಿತು. ಯೋರಾಮನು ತನ್ನ ರಥದಲ್ಲಿಯೇ ಸತ್ತುಬಿದ್ದನು.


ಆದರೆ ಒಬ್ಬ ಸೈನಿಕನು ಯಾರಿಗೂ ಗುರಿಯಿಡದೆ ಒಂದು ಬಾಣವನ್ನು ಗಾಳಿಯಲ್ಲಿ ಹೊಡೆದನು. ಆದರೆ ಅವನ ಬಾಣವು ಇಸ್ರೇಲಿನ ರಾಜನಾದ ಅಹಾಬನಿಗೆ ಬಡಿಯಿತು. ಆ ಬಾಣವು ರಾಜನ ದೇಹದ ಕವಚದ ಸಣ್ಣ ಸಂಧಿಯಲ್ಲಿ ತಾಕಿತು. ರಾಜನಾದ ಅಹಾಬನು ತನ್ನ ರಥದ ಸಾರಥಿಗೆ, “ಒಂದು ಬಾಣವು ನನಗೆ ತಾಕಿತು! ರಥವನ್ನು ಈ ಪ್ರದೇಶದಿಂದ ಹೊರಗೆ ಓಡಿಸು. ನಾವು ಯುದ್ಧದಿಂದ ಹೊರಟುಹೋಗಬೇಕಾಗಿದೆ” ಎಂದು ಹೇಳಿದನು.


ಫಿಲಿಷ್ಟಿಯನಾದ ಗೊಲ್ಯಾತನು ಆಕ್ರಮಣಮಾಡಲು ದಾವೀದನ ಹತ್ತಿರಕ್ಕೆ ಬಂದನು. ದಾವೀದನೂ ಗೊಲ್ಯಾತನನ್ನು ಸಂಧಿಸಲು ವೇಗವಾಗಿ ಓಡಿದನು.


ಹೀಗೆ ದಾವೀದನು ಕವಣಿಯ ಒಂದೇ ಕಲ್ಲಿನಿಂದ ಫಿಲಿಷ್ಟಿಯನನ್ನು ಹೊಡೆದು ಕೊಂದನು! ದಾವೀದನು ಕತ್ತಿಯನ್ನೂ ಹೊಂದಿರಲಿಲ್ಲ.


ದಾವೀದನು ಫಿಲಿಷ್ಟಿಯನಾದ ಗೊಲ್ಯಾತನನ್ನು ಕೊಂದಾಗ ತನ್ನ ಜೀವವನ್ನೇ ಪಣವಾಗಿಟ್ಟಿದ್ದನು. ಯೆಹೋವನು ಇಸ್ರೇಲರೆಲ್ಲರಿಗೂ ಬಹು ದೊಡ್ಡ ಜಯವನ್ನುಂಟುಮಾಡಿದನು. ನೀನು ಅದನ್ನು ನೋಡಿದೆ ಮತ್ತು ಸಂತೋಷಗೊಂಡೆ. ದಾವೀದನಿಗೆ ಕೇಡುಮಾಡಲು ನೀನು ಏಕೆ ಬಯಸಿರುವೆ? ಅವನು ನಿರಪರಾಧಿ. ಅವನನ್ನು ಕೊಲ್ಲಲು ಯಾವ ಕಾರಣವೂ ಇಲ್ಲ!” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು