1 ಸಮುಯೇಲ 17:50 - ಪರಿಶುದ್ದ ಬೈಬಲ್50 ಹೀಗೆ ದಾವೀದನು ಕವಣಿಯ ಒಂದೇ ಕಲ್ಲಿನಿಂದ ಫಿಲಿಷ್ಟಿಯನನ್ನು ಹೊಡೆದು ಕೊಂದನು! ದಾವೀದನು ಕತ್ತಿಯನ್ನೂ ಹೊಂದಿರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201950 ಕೂಡಲೇ ಅವನು ಓಡಿಹೋಗಿ ಆ ಫಿಲಿಷ್ಟಿಯನ ಮೇಲೆ ನಿಂತು ಅವನ ಕತ್ತಿಯನ್ನು ತೆಗೆದುಕೊಂಡು, ಅದರಿಂದಲೇ ಅವನ ತಲೆಯನ್ನು ಕತ್ತರಿಸಿ, ಅವನನ್ನು ಸಾಯಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)50 ಕೂಡಲೆ ದಾವೀದನು ಹೋಗಿ ಆ ಫಿಲಿಷ್ಟಿಯನ ಮೇಲೆ ನಿಂತು, ಅವನ ಕತ್ತಿಯನ್ನೇ ಹಿರಿದು, ಅವನ ತಲೆಯನ್ನು ಕಡಿದು ಸಾಯಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)50 ಕೂಡಲೆ ಅವನು ಹೋಗಿ ಆ ಫಿಲಿಷ್ಟಿಯನ ಮೇಲೆ ನಿಂತು ಅವನ ಕತ್ತಿಯನ್ನು ಹಿರಿದು ಅದರಿಂದಲೇ ಅವನ ತಲೆಯನ್ನು ಕಡಿದು ಅವನನ್ನು ಸಾಯಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ50 ಹೀಗೆಯೇ ದಾವೀದನು ಒಂದು ಕವಣೆಯ ಕಲ್ಲಿನಿಂದ ಫಿಲಿಷ್ಟಿಯನನ್ನು ಹೊಡೆದು, ಅವನನ್ನು ಕೊಂದುಹಾಕಿದನು. ಅಧ್ಯಾಯವನ್ನು ನೋಡಿ |
ಯಾಜಕನು, “ಇಲ್ಲಿರುವುದು ಫಿಲಿಷ್ಟಿಯನಾದ ಗೊಲ್ಯಾತನ ಖಡ್ಗವೊಂದೇ. ಏಲಾ ಕಣಿವೆಯಲ್ಲಿ ನೀನು ಅವನನ್ನು ಕೊಂದು ಅವನಿಂದ ನೀನು ಕಿತ್ತುಕೊಂಡ ಖಡ್ಗವೇ ಅದು. ಆ ಖಡ್ಗವನ್ನು ಬಟ್ಟೆಯಲ್ಲಿ ಸುತ್ತಿ ಎಫೋದಿನ ಹಿಂಭಾಗದಲ್ಲಿ ಇಟ್ಟಿದೆ. ನಿನಗೆ ಬೇಕಿದ್ದರೆ ಅದನ್ನು ತೆಗೆದುಕೋ” ಎಂದು ಉತ್ತರಿಸಿದನು. ದಾವೀದನು, “ಅದನ್ನು ನನಗೆ ಕೊಡು. ಗೊಲ್ಯಾತನ ಖಡ್ಗಕ್ಕೆ ಸಮನಾದ ಬೇರೊಂದು ಖಡ್ಗವಿಲ್ಲ!” ಎಂದನು.
ದಾವೀದನು ಕತ್ತಿಯನ್ನು ಸಿಕ್ಕಿಸಿಕೊಂಡು, ಆ ಕಡೆ ಈ ಕಡೆ ಸುತ್ತಾಡಿದನು. ಸೌಲನ ಯುದ್ಧ ವಸ್ತ್ರಗಳನ್ನು ದಾವೀದನು ಧರಿಸಲು ಪ್ರಯತ್ನಿಸಿದನು. ಆದರೆ ದಾವೀದನಿಗೆ ಅಂತಹ ಭಾರದ ವಸ್ತ್ರಗಳನ್ನು ಧರಿಸಿ ಅಭ್ಯಾಸವಿರಲಿಲ್ಲ. ದಾವೀದನು ಸೌಲನಿಗೆ, “ನಾನು ಇವುಗಳನ್ನು ಧರಿಸಿಕೊಂಡು ಹೋರಾಡಲಾಗುವುದಿಲ್ಲ; ನನಗೆ ಇವುಗಳನ್ನು ಧರಿಸಿಕೊಂಡು ಅಭ್ಯಾಸವಿಲ್ಲ” ಎಂದು ಹೇಳಿ ಅವುಗಳನ್ನೆಲ್ಲ ತೆಗೆದು ಹಾಕಿದನು.