Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 17:51 - ಪರಿಶುದ್ದ ಬೈಬಲ್‌

51 ದಾವೀದನು ಓಡುತ್ತಾ ಹೋಗಿ ಫಿಲಿಷ್ಟಿಯನ ಪಕ್ಕದಲ್ಲಿ ನಿಂತುಕೊಂಡನು. ದಾವೀದನು ಗೊಲ್ಯಾತನ ಕತ್ತಿಯನ್ನು ಒರೆಯಿಂದ ತೆಗೆದು ಅದೇ ಕತ್ತಿಯಿಂದ ಅವನ ತಲೆಯನ್ನು ಕತ್ತರಿಸಿ ಹಾಕಿದನು. ದಾವೀದನು ಈ ರೀತಿಯಲ್ಲಿ ಗೊಲ್ಯಾತನನ್ನು ಕೊಂದನು. ಫಿಲಿಷ್ಟಿಯರು ತಮ್ಮ ನಾಯಕನು ಸತ್ತದ್ದನ್ನು ನೋಡಿದಾಗ ಹಿಂದಿರುಗಿ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

51 ಈ ಪ್ರಕಾರ ದಾವೀದನು ಕತ್ತಿಯಿಂದಲ್ಲ ಬರೀ ಒಂದು ಕವಣೆಯ ಕಲ್ಲಿನಿಂದ ಫಿಲಿಷ್ಟಿಯನನ್ನು ಸೋಲಿಸಿ, ಕೊಂದು ಹಾಕಿದನು ಫಿಲಿಷ್ಟಿಯರು ತಮ್ಮ ರಣವೀರನು ಸತ್ತುಹೋದದ್ದನ್ನು ಕಂಡು ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

51 ಹೀಗೆ ದಾವೀದನು ಕತ್ತಿಯಿಂದಲ್ಲ, ಬರೀ ಒಂದು ಕವಣೆಕಲ್ಲಿನಿಂದ ಆ ಫಿಲಿಷ್ಟಿಯನನ್ನು ಸೋಲಿಸಿ ಕೊಂದುಹಾಕಿದನು. ತಮ್ಮ ರಣವೀರನು ಸತ್ತುಹೋದದ್ದನ್ನು ಕಂಡು ಫಿಲಿಷ್ಟಿಯರು ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

51 ಈ ಪ್ರಕಾರ ದಾವೀದನು ಕತ್ತಿಯಿಂದಲ್ಲ, ಬರೀ ಒಂದು ಕವಣೆಯ ಕಲ್ಲಿನಿಂದ ಫಿಲಿಷ್ಟಿಯನನ್ನು ಸೋಲಿಸಿ ಕೊಂದುಹಾಕಿದನು. ಫಿಲಿಷ್ಟಿಯರು ತಮ್ಮ ರಣವೀರನು ಸತ್ತುಹೋದದ್ದನ್ನು ಕಂಡು ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

51 ದಾವೀದನ ಕೈಯಲ್ಲಿ ಖಡ್ಗ ಇರಲಿಲ್ಲ. ದಾವೀದನು ಓಡಿಹೋಗಿ ಆ ಫಿಲಿಷ್ಟಿಯನ ಮೇಲೆ ನಿಂತು, ಅವನ ಖಡ್ಗವನ್ನು ತೆಗೆದುಕೊಂಡು, ಅದನ್ನು ಒರೆಯಿಂದ ಕಿತ್ತು, ಅವನನ್ನು ಕೊಂದು, ಅವನ ತಲೆಯನ್ನು ಕಡಿದುಹಾಕಿದನು. ಫಿಲಿಷ್ಟಿಯರು ತಮ್ಮ ಪರಾಕ್ರಮಶಾಲಿ ಸತ್ತು ಹೋದದ್ದನ್ನು ಕಂಡಾಗ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 17:51
10 ತಿಳಿವುಗಳ ಹೋಲಿಕೆ  

ಕೆಲವರು ಉರಿಯುವ ಬೆಂಕಿಯನ್ನು ನಂದಿಸಿದರು; ಇನ್ನು ಕೆಲವರು ಕತ್ತಿಗಳ ಬಾಯಿಂದ ಪಾರಾದರು; ದುರ್ಬಲರಾಗಿದ್ದವರು ತಮ್ಮ ನಂಬಿಕೆಯಿಂದ ಪ್ರಬಲರಾದರು; ಯುದ್ಧದಲ್ಲಿ ಶಕ್ತಿಶಾಲಿಗಳಾಗಿ ಶತ್ರುಗಳನ್ನು ಸೋಲಿಸಿದರು.


ಯಾಜಕನು, “ಇಲ್ಲಿರುವುದು ಫಿಲಿಷ್ಟಿಯನಾದ ಗೊಲ್ಯಾತನ ಖಡ್ಗವೊಂದೇ. ಏಲಾ ಕಣಿವೆಯಲ್ಲಿ ನೀನು ಅವನನ್ನು ಕೊಂದು ಅವನಿಂದ ನೀನು ಕಿತ್ತುಕೊಂಡ ಖಡ್ಗವೇ ಅದು. ಆ ಖಡ್ಗವನ್ನು ಬಟ್ಟೆಯಲ್ಲಿ ಸುತ್ತಿ ಎಫೋದಿನ ಹಿಂಭಾಗದಲ್ಲಿ ಇಟ್ಟಿದೆ. ನಿನಗೆ ಬೇಕಿದ್ದರೆ ಅದನ್ನು ತೆಗೆದುಕೋ” ಎಂದು ಉತ್ತರಿಸಿದನು. ದಾವೀದನು, “ಅದನ್ನು ನನಗೆ ಕೊಡು. ಗೊಲ್ಯಾತನ ಖಡ್ಗಕ್ಕೆ ಸಮನಾದ ಬೇರೊಂದು ಖಡ್ಗವಿಲ್ಲ!” ಎಂದನು.


ಬೆನಾಯನು ವೀರಯೋಧನಾದ ಈಜಿಪ್ಟಿನವನೊಬ್ಬನನ್ನು ಕೊಂದನು. ಈಜಿಪ್ಟಿನವನ ಕೈಯಲ್ಲಿ ಒಂದು ಬರ್ಜಿಯಿತ್ತು. ಬೆನಾಯನ ಕೈಯಲ್ಲಿ ಒಂದು ಲಾಠಿ ಮಾತ್ರವೇ ಇದ್ದಿತು. ಬೆನಾಯನು ಈಜಿಪ್ಟಿನವನ ಕೈಯಲ್ಲಿದ್ದ ಬರ್ಜಿಯನ್ನು ಕಿತ್ತುಕೊಂಡು ಆ ಬರ್ಜಿಯಿಂದಲೇ ಅವನನ್ನು ಕೊಂದುಬಿಟ್ಟನು.


ಆ ಮಕ್ಕಳು ಭೌತಿಕ ಶರೀರ ಹೊಂದಿದ್ದರು. ಆದ್ದರಿಂದ ಯೇಸು ತಾನೇ ಅವರಂತಾದನು. ಆತನು ತನ್ನ ಸಾವಿನ ಮೂಲಕ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶಗೊಳಿಸಿ,


ಮೊರ್ದೆಕೈಗೋಸ್ಕರ ಸಿದ್ಧಮಾಡಿದ್ದ ಗಲ್ಲುಮರಕ್ಕೆ ಸೇವಕರು ಹಾಮಾನನನ್ನು ತೂಗುಹಾಕಿದರು. ಅನಂತರ ರಾಜನ ಸಿಟ್ಟು ಇಳಿಯಿತು.


ಹೀಗೆ ದಾವೀದನು ಕವಣಿಯ ಒಂದೇ ಕಲ್ಲಿನಿಂದ ಫಿಲಿಷ್ಟಿಯನನ್ನು ಹೊಡೆದು ಕೊಂದನು! ದಾವೀದನು ಕತ್ತಿಯನ್ನೂ ಹೊಂದಿರಲಿಲ್ಲ.


ಆ ದಿನ ದಾವೀದನು ಸೌಲನಿಗೆ ಭಯಪಟ್ಟು ಗತ್‌ಗೆ ರಾಜನಾದ ಆಕೀಷನ ಬಳಿಗೆ ಹೋದನು.


ಸೌಲನ ತಲೆಯನ್ನು ಫಿಲಿಷ್ಟಿಯರು ಕಡಿದುಹಾಕಿದರು. ಮತ್ತು ಅವನ ಆಯುಧಗಳನ್ನು ತೆಗೆದುಕೊಂಡರು. ಫಿಲಿಷ್ಟಿಯ ಜನರಿಗೆ ಮತ್ತು ಅವರ ವಿಗ್ರಹಗಳ ಗುಡಿಗೆ ಈ ವಿಜಯದ ವಾರ್ತೆಯನ್ನು ಕಳುಹಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು