Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 17:54 - ಪರಿಶುದ್ದ ಬೈಬಲ್‌

54 ದಾವೀದನು ಗೊಲ್ಯಾತನ ತಲೆಯನ್ನು ಜೆರುಸಲೇಮಿಗೆ ತೆಗೆದುಕೊಂಡು ಹೋದನು. ದಾವೀದನು ಅವನ ಆಯುಧಗಳನ್ನು ತನ್ನ ಗುಡಾರದಲ್ಲೇ ಇರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

54 ದಾವೀದನು ಆ ಫಿಲಿಷ್ಟಿಯನ ತಲೆಯನ್ನು ಯೆರೂಸಲೇಮಿಗೆ ಒಯ್ದನು. ಅವನ ಆಯುಧಗಳನ್ನು ತನ್ನ ಗುಡಾರದಲ್ಲಿಟ್ಟುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

54 ದಾವೀದನು ಆ ಫಿಲಿಷ್ಟಿಯನ ತಲೆಯನ್ನು ಜೆರುಸಲೇಮಿಗೆ ಒಯ್ದನು. ಅವನ ಆಯುಧಗಳನ್ನು ತನ್ನ ಗುಡಾರದಲ್ಲೇ ಇಟ್ಟುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

54 ದಾವೀದನು ಆ ಫಿಲಿಷ್ಟಿಯನ ತಲೆಯನ್ನು ಯೆರೂಸಲೇವಿುಗೆ ಒಯ್ದನು; ಅವನ ಆಯುಧಗಳನ್ನು ತನ್ನ ಗುಡಾರದಲ್ಲಿಟ್ಟುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

54 ದಾವೀದನು ಫಿಲಿಷ್ಟಿಯನ ತಲೆಯನ್ನು ತೆಗೆದುಕೊಂಡು, ಅದನ್ನು ಯೆರೂಸಲೇಮಿಗೆ ತಂದನು. ಆದರೆ ಅವನ ಆಯುಧಗಳನ್ನು ತನ್ನ ಡೇರೆಯಲ್ಲಿ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 17:54
6 ತಿಳಿವುಗಳ ಹೋಲಿಕೆ  

ಆದ್ದರಿಂದ ಮೋಶೆಯು ಆರೋನನಿಗೆ, “ಒಂದು ಭರಣಿಯನ್ನು ತೆಗೆದುಕೊಂಡು ಅದರಲ್ಲಿ ಮೂರು ಸೇರಿನಷ್ಟು ಮನ್ನವನ್ನು ತುಂಬಿಸು. ನಿಮ್ಮ ಮುಂದಿನ ಸಂತತಿಯವರು ನೋಡುವುದಕೋಸ್ಕರ ಇದನ್ನು ಉಳಿಸಿ ಯೆಹೋವನ ಮುಂದೆ ಇಡು” ಎಂದು ಹೇಳಿದನು.


ಯಾಜಕನು, “ಇಲ್ಲಿರುವುದು ಫಿಲಿಷ್ಟಿಯನಾದ ಗೊಲ್ಯಾತನ ಖಡ್ಗವೊಂದೇ. ಏಲಾ ಕಣಿವೆಯಲ್ಲಿ ನೀನು ಅವನನ್ನು ಕೊಂದು ಅವನಿಂದ ನೀನು ಕಿತ್ತುಕೊಂಡ ಖಡ್ಗವೇ ಅದು. ಆ ಖಡ್ಗವನ್ನು ಬಟ್ಟೆಯಲ್ಲಿ ಸುತ್ತಿ ಎಫೋದಿನ ಹಿಂಭಾಗದಲ್ಲಿ ಇಟ್ಟಿದೆ. ನಿನಗೆ ಬೇಕಿದ್ದರೆ ಅದನ್ನು ತೆಗೆದುಕೋ” ಎಂದು ಉತ್ತರಿಸಿದನು. ದಾವೀದನು, “ಅದನ್ನು ನನಗೆ ಕೊಡು. ಗೊಲ್ಯಾತನ ಖಡ್ಗಕ್ಕೆ ಸಮನಾದ ಬೇರೊಂದು ಖಡ್ಗವಿಲ್ಲ!” ಎಂದನು.


ಫಿಲಿಷ್ಟಿಯರನ್ನು ಅಟ್ಟಿಸಿಕೊಂಡು ಹೋಗಿದ್ದ ಇಸ್ರೇಲರು ಫಿಲಿಷ್ಟಿಯರ ಪಾಳೆಯಕ್ಕೆ ನುಗ್ಗಿ ಅವರ ಪಾಳೆಯದಲ್ಲಿದ್ದ ಅನೇಕ ವಸ್ತುಗಳನ್ನು ವಶಪಡಿಸಿಕೊಂಡರು.


ದಾವೀದನು ಗೊಲ್ಯಾತನೊಂದಿಗೆ ಯುದ್ಧಕ್ಕೆ ಹೊರಟಿದ್ದನ್ನು ಸೌಲನು ಗಮನಿಸುತ್ತಿದ್ದನು. ಸೌಲನು ತನ್ನ ಸೇನಾಧಿಪತಿಯಾದ ಅಬ್ನೇರನನ್ನು, “ಆ ಯುವಕನ ತಂದೆ ಯಾರು?” ಎಂದು ಪ್ರಶ್ನಿಸಿದನು. ಅಬ್ನೇರನು, “ಅರಸನೇ, ನಿನ್ನ ಜೀವದಾಣೆ, ಅವನು ಯಾರೋ ನನಗೆ ಗೊತ್ತಿಲ್ಲ” ಎಂದು ಉತ್ತರಕೊಟ್ಟನು.


ದಾವೀದನು ಗೊಲ್ಯಾತನನ್ನು ಕೊಂದು ಹಿಂದಿರುಗಿದಾಗ, ಅಬ್ನೇರನು ಅವನನ್ನು ಸೌಲನ ಹತ್ತಿರಕ್ಕೆ ಕರೆತಂದನು. ದಾವೀದನು ಫಿಲಿಷ್ಟಿಯನ ತಲೆಯನ್ನು ಕೈಯಲ್ಲಿ ಹಿಡಿದುಕೊಂಡೇ ಇದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು