1 ಸಮುಯೇಲ 18:1 - ಪರಿಶುದ್ದ ಬೈಬಲ್1 ದಾವೀದನು ಸೌಲನೊಂದಿಗೆ ಮಾತನಾಡಿದ ಬಳಿಕ ಯೋನಾತಾನನು ದಾವೀದನೊಂದಿಗೆ ಒಂದಾದನು. ಯೋನಾತಾನನು ತನ್ನನ್ನು ಪ್ರೀತಿಸುವಷ್ಟೇ ದಾವೀದನನ್ನು ಪ್ರೀತಿಸಲಾರಂಭಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ದಾವೀದನು ಸೌಲನೊಡನೆ ಮಾತನಾಡಿ ಮುಗಿಸಿದ ಮೇಲೆ ಯೋನಾತಾನನ ಪ್ರಾಣವು ದಾವೀದನ ಪ್ರಾಣದೊಡನೆ ಒಂದಾಯಿತು. ಅವನು ದಾವೀದನನ್ನು ತನ್ನ ಪ್ರಾಣದಂತೆಯೇ ಪ್ರೀತಿಸತೊಡಗಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ದಾವೀದನ ಮತ್ತು ಸೌಲನ ಸಂಭಾಷಣೆ ಮುಗಿಯಿತು. ಇದಾದ ಕೂಡಲೆ ಯೋನಾತಾನನು ಹಾಗು ದಾವೀದನು ಪ್ರಾಣ ಗೆಳೆಯರಾದರು. ಯೋನಾತಾನನು ದಾವೀದನನ್ನು ತನ್ನ ಪ್ರಾಣದಂತೆಯೇ ಪ್ರೀತಿಸತೊಡಗಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ದಾವೀದನು ಸೌಲನೊಡನೆ ಮಾತಾಡಿ ತೀರಿಸಿದ ಮೇಲೆ ಯೋನಾತಾನನ ಪ್ರಾಣವು ದಾವೀದನ ಪ್ರಾಣದೊಡನೆ ಒಂದಾಯಿತು. ಅವನು ಇವನನ್ನು ತನ್ನ ಪ್ರಾಣದಂತೆಯೇ ಪ್ರೀತಿಸತೊಡಗಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ದಾವೀದನು ಸೌಲನ ಸಂಗಡ ಮಾತನಾಡಿ ಮುಗಿಸಿದ ಮೇಲೆ, ಯೋನಾತಾನನ ಪ್ರಾಣವು ದಾವೀದನ ಪ್ರಾಣದ ಸಂಗಡ ಒಂದಾಯಿತು. ಯೋನಾತಾನನು ಅವನನ್ನು ತನ್ನ ಪ್ರಾಣದ ಹಾಗೆಯೇ ಪ್ರೀತಿಮಾಡಿದನು. ಅಧ್ಯಾಯವನ್ನು ನೋಡಿ |
“ನಿಮ್ಮ ಹತ್ತಿರದ ಸಂಬಂಧಿಕರಲ್ಲಿ ಯಾರಾದರೂ ಇತರ ದೇವರುಗಳನ್ನು ಅನುಸರಿಸಲು ನಿಮ್ಮನ್ನು ಗುಪ್ತವಾಗಿ ಒತ್ತಾಯ ಮಾಡಬಹುದು. ಅವರು ನಿಮ್ಮ ಸ್ವಂತ ಸಹೋದರನಾಗಿರಬಹುದು, ನಿಮ್ಮ ಮಕ್ಕಳಾಗಿರಬಹುದು, ನಿಮ್ಮ ಹೆಂಡತಿಯಾಗಿರಬಹುದು, ಅಥವಾ ಆಪ್ತಗೆಳೆಯನಾಗಿರಬಹುದು. ಅವರು ಬಂದು, ‘ಬಾ, ನಾವು ಬೇರೆ ದೇವರನ್ನು ಹಿಂಬಾಲಿಸೋಣ’ (ಈ ದೇವರನ್ನು ನೀವಾಗಲಿ ನಿಮ್ಮ ಪೂರ್ವಿಕರಾಗಲಿ ತಿಳಿದಿರಲಿಲ್ಲ.
ಆದರೆ ಸೈನಿಕರು ಸೌಲನಿಗೆ, “ಈ ದಿನ ಇಸ್ರೇಲರನ್ನು ಮುನ್ನಡೆಸಿ ಮಹಾವಿಜಯವನ್ನು ಉಂಟುಮಾಡಿದ ಯೋನಾತಾನನು ಸಾಯಬೇಕೋ? ಇಲ್ಲ! ಜೀವಸ್ವರೂಪನಾದ ಯೆಹೋವನಾಣೆ, ಯೋನಾತಾನನ ತಲೆಕೂದಲುಗಳಲ್ಲಿ ಒಂದಾದರೂ ನೆಲಕ್ಕೆ ಬೀಳಲು ನಾವು ಬಿಡುವುದಿಲ್ಲ. ಇಂದು ಫಿಲಿಷ್ಟಿಯರ ವಿರುದ್ಧ ಹೋರಾಡಲು ದೇವರು ಯೋನಾತಾನನಿಗೆ ಸಹಾಯಮಾಡಿದ್ದಾನೆ” ಎಂದು ಹೇಳಿದರು. ಹೀಗೆ ಜನರು ಯೋನಾತಾನನನ್ನು ರಕ್ಷಿಸಿದರು. ಅವನನ್ನು ಸಾಯಿಸಲಿಲ್ಲ.
ನೀವು ನನ್ನ ವಿರುದ್ಧವಾಗಿ ಸಂಚುನಡೆಸುತ್ತಿರುವಿರಿ! ನೀವು ರಹಸ್ಯಯೋಜನೆಗಳನ್ನು ಮಾಡಿದ್ದೀರಿ. ನನ್ನ ಮಗ ಯೋನಾತಾನನ ಬಗ್ಗೆ ನಿಮ್ಮಲ್ಲಿ ಒಬ್ಬರೂ ನನಗೆ ತಿಳಿಸಲಿಲ್ಲ! ಅವನು ಇಷಯನ ಮಗನ ಜೊತೆ ಒಪ್ಪಂದ ಮಾಡಿಕೊಂಡಿದ್ದಾನೆಂದು ನಿಮ್ಮಲ್ಲಿ ಒಬ್ಬರೂ ನನಗೆ ತಿಳಿಸಲಿಲ್ಲ! ನಿಮ್ಮಲ್ಲಿ ಒಬ್ಬರೂ ನನ್ನ ಬಗ್ಗೆ ಚಿಂತಿಸುವುದಿಲ್ಲ! ನನ್ನ ಮಗ ಯೋನಾತಾನನು ದಾವೀದನನ್ನು ಪ್ರೋತ್ಸಾಹಿಸಿದ್ದಾನೆಂದು ನಿಮ್ಮಲ್ಲಿ ಒಬ್ಬರೂ ನನಗೆ ತಿಳಿಸಲಿಲ್ಲ. ಅಡಗಿಕೊಂಡು ನನ್ನ ಮೇಲೆ ಆಕ್ರಮಣ ಮಾಡುವಂತೆ ನನ್ನ ಸೇವಕನಾದ ದಾವೀದನಿಗೆ ಯೋನಾತಾನನು ಹೇಳಿಕೊಟ್ಟಿದ್ದಾನೆ! ಈಗ ದಾವೀದನು ಮಾಡುತ್ತಿರುವುದು ಅದನ್ನೇ!” ಎಂದು ಹೇಳಿದನು.