1 ಸಮುಯೇಲ 18:10 - ಪರಿಶುದ್ದ ಬೈಬಲ್10 ಮಾರನೆಯ ದಿನ, ದೇವರಿಂದ ಬಂದ ದುರಾತ್ಮವು ಸೌಲನನ್ನು ಸಂಪೂರ್ಣವಾಗಿ ವಶಪಡಿಸಿಕೊಂಡಿತು. ಸೌಲನು ತನ್ನ ಮನೆಯಲ್ಲಿ ಹುಚ್ಚನಂತೆ ಕೂಗಿಕೊಳ್ಳುತ್ತಿದ್ದನು. ಆಗ ದಾವೀದನು ಎಂದಿನಂತೆ ಕಿನ್ನರಿಯನ್ನು ಬಾರಿಸುತ್ತಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಮರುದಿನ ದೇವರಿಂದ ಕಳುಹಿಸಲ್ಪಟ್ಟ ದುರಾತ್ಮವು ಸೌಲನ ಮೇಲೆ ಬಂದದ್ದರಿಂದ ಅವನು ಬುದ್ಧಿಗೆಟ್ಟು ಮನೆಯೊಳಗೆ ಕೂಗುತ್ತಿದ್ದನು. ಅವನ ಕೈಯಲ್ಲಿ ಒಂದು ಈಟಿ ಇತ್ತು. ದಾವೀದನು ವಾಡಿಕೆಯ ಪ್ರಕಾರ ಕಿನ್ನರಿಯನ್ನು ನುಡಿಸುತ್ತಾ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಮಾರನೆಯ ದಿನ ದೇವರಿಂದ ಬಂದ ದುರಾತ್ಮವೊಂದು ಸೌಲನನ್ನು ಆವರಿಸಿತು. ಅವನು ಬುದ್ಧಿಗೆಟ್ಟು ಮನೆಯೊಳಗೇ ಕೂಗಾಡತೊಡಗಿದನು. ಅವನ ಕೈಯಲ್ಲಿ ಒಂದು ಈಟಿ ಇತ್ತು. ವಾಡಿಕೆಯ ಪ್ರಕಾರ ದಾವೀದನು ಕಿನ್ನರಿ ಬಾರಿಸುತ್ತಾ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಮರುದಿನ ದೇವರಿಂದ ಕಳುಹಿಸಲ್ಪಟ್ಟ ದುರಾತ್ಮವು ಸೌಲನ ಮೇಲೆ ಬಂದದರಿಂದ ಅವನು ಬುದ್ಧಿಗೆಟ್ಟು ಮನೆಯೊಳಗೆ ಕೂಗುತ್ತಿದ್ದನು. ಅವನ ಕೈಯಲ್ಲಿ ಒಂದು ಈಟಿ ಇತ್ತು. ದಾವೀದನು ಕ್ರಮದ ಪ್ರಕಾರ ಕಿನ್ನರಿಯನ್ನು ಬಾರಿಸುತ್ತಾ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಮಾರನೆಯ ದಿವಸದಲ್ಲಿ ದೇವರಿಂದ ಅನುಮತಿಸಿದ ದುರಾತ್ಮವು ಸೌಲನ ಮೇಲೆ ಇಳಿಯಿತು. ಅವನು ಬುದ್ಧಿಗೆಟ್ಟು ಮನೆಯಲ್ಲಿ ಕೂಗಾಡತೊಡಗಿದನು. ಆಗ ದಾವೀದನು ಪ್ರತಿದಿನ ಮಾಡುತ್ತಿದ್ದ ಹಾಗೆಯೇ ತನ್ನ ಕೈಯಿಂದ ಕಿನ್ನರಿಯನ್ನು ಬಾರಿಸುತ್ತಿದ್ದನು. ಆದರೆ ಸೌಲನ ಕೈಯಲ್ಲಿ ಈಟಿಯು ಇತ್ತು. ಅಧ್ಯಾಯವನ್ನು ನೋಡಿ |
ಆಮೇಲೆ ಹನನ್ಯನು ಗಟ್ಟಿಯಾಗಿ ಎಲ್ಲರೂ ಕೇಳುವಂತೆ ಮಾತನಾಡಿದನು. “ಯೆಹೋವನು ಹೇಳುತ್ತಾನೆ: ‘ಇದೇ ರೀತಿಯಲ್ಲಿ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಹೇರಿದ ನೊಗವನ್ನು ನಾನು ಮುರಿದುಹಾಕುವೆನು. ಅವನು ಆ ನೊಗವನ್ನು ಜಗತ್ತಿನ ಸಮಸ್ತ ಜನಾಂಗಗಳ ಮೇಲೆ ಹೇರಿದ್ದಾನೆ. ಆದರೆ ನಾನು ಆ ನೊಗವನ್ನು ಎರಡು ವರ್ಷದೊಳಗಾಗಿ ಮುರಿದುಹಾಕುವೆನು.’” ಹನನ್ಯನು ಹಾಗೆ ಹೇಳಿದ ಮೇಲೆ ಯೆರೆಮೀಯನು ಪವಿತ್ರಾಲಯವನ್ನು ಬಿಟ್ಟನು.
ನನ್ನ ಒಡೆಯನೇ, ನನ್ನ ರಾಜನೇ, ನನ್ನ ಮಾತುಗಳನ್ನು ಆಲಿಸು! ನೀನು ನನ್ನ ಮೇಲೆ ಕೋಪಗೊಳ್ಳುವಂತೆ ಯೆಹೋವನು ಮಾಡಿರುವುದಾದರೆ ಆತನಿಗೆ ನೈವೇದ್ಯವನ್ನು ಅರ್ಪಿಸೋಣ. ಆದರೆ ನೀನು ನನ್ನ ಮೇಲೆ ಕೋಪಗೊಳ್ಳುವಂತೆ ಜನರು ಮಾಡಿದ್ದರೆ, ಅವರಿಗೆ ಯೆಹೋವನು ಕೇಡಾಗುವಂತೆ ಮಾಡಲಿ. ನನಗೆ ಯೆಹೋವನು ನೀಡಿದ ಭೂಮಿಯನ್ನು ನಾನು ಬಿಡುವಂತೆ ಜನರು ಬಲವಂತಪಡಿಸಿದರು. ‘ಹೋಗು, ಹೊರದೇಶೀಯರೊಂದಿಗೆ ನೆಲೆಸು. ಹೋಗು, ಇತರ ದೇವರುಗಳನ್ನು ಆರಾಧಿಸು’ ಎಂದು ಜನರು ನನಗೆ ಹೇಳಿದರು.