Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 18:11 - ಪರಿಶುದ್ದ ಬೈಬಲ್‌

11 ಸೌಲನ ಕೈಯಲ್ಲಿ ಒಂದು ಈಟಿಯಿತ್ತು. “ಗೋಡೆಗೆ ಹತ್ತಿಕೊಳ್ಳುವಂತೆ ನಾನು ದಾವೀದನನ್ನು ತಿವಿಯುವೆ” ಎಂದು ಅವನು ಯೋಚಿಸಿ ಎರಡು ಬಾರಿ ಈಟಿಯನ್ನು ಎಸೆದನು. ಆದರೆ ದಾವೀದನು ಎರಡು ಸಲವೂ ತಪ್ಪಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಗ ಸೌಲನು ದಾವೀದನನ್ನು ಗೋಡೆಗೆ ಸೇರಿಕೊಳ್ಳುವ ಹಾಗೆ ತಿವಿಯುವೆನು ಎಂದುಕೊಂಡು ಈಟಿಯನ್ನು ಎಸೆದನು. ದಾವೀದನು ಎರಡು ಸಾರಿ ತಪ್ಪಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆಗ ಸೌಲನು, “ಗೋಡೆಗೆ ಕಚ್ಚಿಕೊಳ್ಳುವಂತೆ ಈ ದಾವೀದನನ್ನು ತಿವಿಯುವೆನು,” ಎಂದುಕೊಂಡು ಅವನತ್ತ ಈಟಿಯನ್ನು ಎರಡುಸಾರಿ ಎಸೆದನು. ಎರಡು ಸಾರಿಯೂ ದಾವೀದನು ತಪ್ಪಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆಗ ಸೌಲನು - ದಾವೀದನನ್ನು ಗೋಡೆಗೆ ಹತ್ತಿಕೊಳ್ಳುವ ಹಾಗೆ ತಿವಿಯುವೆನೆಂದುಕೊಂಡು ಈಟಿಯನ್ನು ಎಸೆದನು. ದಾವೀದನು ಎರಡು ಸಾರಿ ತಪ್ಪಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಗ ಸೌಲನು, “ದಾವೀದನನ್ನು ಗೋಡೆಗೆ ಹತ್ತಿಕೊಳ್ಳುವ ಹಾಗೆ ಹೊಡೆಯುವೆನು,” ಎಂದು ಈಟಿಯನ್ನು ಎಸೆದನು. ದಾವೀದನು ಎರಡು ಸಾರಿ ಅವನ ಸಮ್ಮುಖದಿಂದ ತಪ್ಪಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 18:11
9 ತಿಳಿವುಗಳ ಹೋಲಿಕೆ  

ಆದರೆ ಸೌಲನು ಯೋನಾತಾನನನ್ನು ಕೊಲ್ಲುವುದಕ್ಕಾಗಿ ಈಟಿಯನ್ನು ಅವನ ಕಡೆಗೆ ಎಸೆದನು. ದಾವೀದನನ್ನು ಕೊಲ್ಲಲು ತನ್ನ ತಂದೆಯು ದೃಢನಿರ್ಧಾರ ಮಾಡಿದ್ದಾನೆಂದು ಯೋನಾತಾನನು ತಿಳಿದುಕೊಂಡನು.


“ನಿನಗೆ ವಿರುದ್ಧವಾಗಿ ಯುದ್ಧಮಾಡಲು ಜನರು ಆಯುಧಗಳನ್ನು ತಯಾರಿಸುವರು. ಆದರೆ ಆ ಆಯುಧಗಳು ನಿನ್ನನ್ನು ಸೋಲಿಸಲಾರವು. ಅವರು ನಿನಗೆ ವಿರುದ್ಧವಾಗಿ ಮಾತಾಡಿದರೂ ಆ ಮಾತುಗಳು ನಿನ್ನನ್ನು ತಪ್ಪಿತಸ್ಥಳೆಂದು ತೋರಿಸಲಾರವು. “ಯೆಹೋವನ ಸೇವಕರಿಗೆ ದೊರೆಯುವುದೇನು? ಅವರಿಗೆ ಆತನಿಂದಲೇ ಸುಫಲಗಳು ದೊರೆಯುತ್ತವೆ” ಎಂದು ಯೆಹೋವನು ಅನ್ನುತ್ತಾನೆ.


ಯೇಸುವನ್ನು ಬಂಧಿಸಲು ಯೆಹೂದ್ಯರು ಮತ್ತೆ ಪ್ರಯತ್ನಿಸಿದರು. ಆದರೆ ಯೇಸು ಅವರಿಂದ ತಪ್ಪಿಸಿಕೊಂಡನು.


ಇದನ್ನು ಕೇಳಿದ ಕೂಡಲೇ ಜನರು ಆತನತ್ತ ಬೀರಲು ಕಲ್ಲುಗಳನ್ನು ತೆಗೆದುಕೊಂಡರು. ಆದರೆ ಯೇಸು ಅಡಗಿಕೊಂಡು ದೇವಾಲಯದಿಂದ ಹೊರಟುಹೋದನು.


ಆದರೆ ಯೇಸು ಅವರ ಮಧ್ಯದಲ್ಲಿ ಹಾದು ಹೊರಟುಹೋದನು.


ಕೋಪವು ಕ್ರೂರ; ಅದು ಪ್ರವಾಹದಂತೆ ನಾಶಕರ. ಹೊಟ್ಟೆಕಿಚ್ಚು ಅದಕ್ಕಿಂತಲೂ ನಾಶಕರ.


ಕೆಲವರು ಉರಿಯುವ ಬೆಂಕಿಯನ್ನು ನಂದಿಸಿದರು; ಇನ್ನು ಕೆಲವರು ಕತ್ತಿಗಳ ಬಾಯಿಂದ ಪಾರಾದರು; ದುರ್ಬಲರಾಗಿದ್ದವರು ತಮ್ಮ ನಂಬಿಕೆಯಿಂದ ಪ್ರಬಲರಾದರು; ಯುದ್ಧದಲ್ಲಿ ಶಕ್ತಿಶಾಲಿಗಳಾಗಿ ಶತ್ರುಗಳನ್ನು ಸೋಲಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು