1 ಸಮುಯೇಲ 18:13 - ಪರಿಶುದ್ದ ಬೈಬಲ್13 ಸೌಲನು ದಾವೀದನನ್ನು ತನ್ನಿಂದ ದೂರಕಳುಹಿಸಿದನು. ಸೌಲನು ದಾವೀದನನ್ನು ಒಂದು ಸಾವಿರ ಸೈನಿಕರಿಗೆ ಸೇನಾಪತಿಯನ್ನಾಗಿ ಮಾಡಿದನು. ದಾವೀದನು ಯುದ್ಧದಲ್ಲಿ ಸೈನಿಕರನ್ನು ಮುನ್ನಡೆಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅವನನ್ನು ತನ್ನ ಸಾನ್ನಿಧ್ಯಸೇವೆಯಿಂದ ತಪ್ಪಿಸಿ, ಸೈನ್ಯದಲ್ಲಿ ಸಹಸ್ರಾಧಿಪತಿಯನ್ನಾಗಿ ನೇಮಿಸಿದನು. ಹೀಗೆ ದಾವೀದನು ಜನರ ಸಂಗಡ ಹೋಗುತ್ತಾ ಬರುತ್ತಾ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅವನನ್ನು ತನ್ನ ಸಾನ್ನಿಧ್ಯ ಸೇವೆಯಿಂದ ತೆಗೆದು ಸೈನ್ಯದ ಒಬ್ಬ ಸಹಸ್ರಾಧಿಪತಿಯನ್ನಾಗಿ ನೇಮಿಸಿದನು. ದಾವೀದನು ದಳಪತಿಯಾಗಿ ಯುದ್ಧಕ್ಕೆ ಹೋಗುತ್ತಾ ಬರುತ್ತಾ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಅವನನ್ನು ತನ್ನ ಸಾನ್ನಿಧ್ಯಸೇವೆಯಿಂದ ತಪ್ಪಿಸಿ ಸೈನ್ಯದಲ್ಲಿ ಸಹಸ್ರಾಧಿಪತಿಯನ್ನಾಗಿ ನೇವಿುಸಿದನು; ಇವನು ದಳಪತಿಯಾಗಿ ಹೋಗುತ್ತಾ ಬರುತ್ತಾ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆದ್ದರಿಂದ ಸೌಲನು ಅವನನ್ನು ತನ್ನ ಬಳಿಯಿಂದ ಹೊರಡಿಸಿಬಿಟ್ಟು, ಸಾವಿರ ಜನರಿಗೆ ಪ್ರಧಾನನ್ನಾಗಿ ಮಾಡಿದನು. ಹಾಗೆಯೇ ಅವನು ದಳಪತಿಯಾಗಿ ಸೈನಿಕರನ್ನು ಕರೆದುಕೊಂಡು ಯುದ್ಧಕ್ಕೆ ಹೋಗುತ್ತಾ ಬರುತ್ತಾ ಇದ್ದನು. ಅಧ್ಯಾಯವನ್ನು ನೋಡಿ |
ಸೌಲನು ಅವರಿಗೆ, “ನೀವು ದಾವೀದನ ಬಳಿಗೆ ಹೋಗಿ ಹೇಳಿ: ‘ನೀನು ರಾಜನ ಮಗಳಿಗಾಗಿ ಹಣ ಕೊಡಬೇಕಿಲ್ಲ. ಸೌಲನು ತನ್ನ ಶತ್ರುಗಳ ಮೇಲೆ ಸೇಡನ್ನು ತೀರಿಸಿಕೊಳ್ಳುತ್ತಾನೆ. ಆದ್ದರಿಂದ ಅವನ ಮಗಳನ್ನು ಮದುವೆಯಾಗಲು ಕೊಡಬೇಕಾದ ದಕ್ಷಿಣೆ ಏನೆಂದರೆ ನೂರು ಮಂದಿ ಫಿಲಿಷ್ಟಿಯರ ಮುಂದೊಗಲುಗಳು’ ಎಂದು ಹೇಳಿರಿ” ಎಂಬುದಾಗಿ ತಿಳಿಸಿದನು. ಸೌಲನ ರಹಸ್ಯವಾದ ಉಪಾಯ ಇದಾಗಿದ್ದಿತು. ಫಿಲಿಷ್ಟಿಯರು ದಾವೀದನನ್ನು ಕೊಂದು ಬಿಡಬಹುದೆಂದು ಸೌಲನು ಭಾವಿಸಿದ್ದನು.
“ರಾಜನು ನಿಮ್ಮ ಮಕ್ಕಳನ್ನು ಯೋಧರನ್ನಾಗಿ ಮಾಡಿಕೊಳ್ಳುವನು. ಅವರಲ್ಲಿ ಕೆಲವರು ಒಂದು ಸಾವಿರ ಮಂದಿ ಸೈನಿಕರಿಗೆ ಅಧಿಕಾರಿಗಳಾಗಬಹುದು. ಇನ್ನು ಕೆಲವರು ಐವತ್ತು ಮಂದಿ ಸೈನಿಕರಿಗೆ ಅಧಿಕಾರಿಗಳಾಗಬಹುದು. “ತನ್ನ ಭೂಮಿಯನ್ನು ಉಳಲು ಮತ್ತು ಪೈರನ್ನು ಕೊಯ್ಯಲು ರಾಜನು ನಿಮ್ಮ ಮಕ್ಕಳನ್ನು ತೆಗೆದುಕೊಳ್ಳುವನು; ಯುದ್ಧದ ಆಯುಧಗಳನ್ನು ತಯಾರಿಸಲೂ ತನ್ನ ರಥಕ್ಕೆ ಬೇಕಾದ ಸಾಮಾಗ್ರಿಗಳನ್ನು ತಯಾರಿಸಲೂ ಅವನು ಅವರನ್ನು ಬಳಸಿಕೊಳ್ಳುವನು.