Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 18:17 - ಪರಿಶುದ್ದ ಬೈಬಲ್‌

17 ಆದರೆ ಸೌಲನು ದಾವೀದನನ್ನು ಕೊಲ್ಲಬೇಕೆಂದಿದ್ದನು. ದಾವೀದನಿಗೆ ಮೋಸಮಾಡಲು ಸೌಲನು ಒಂದು ಉಪಾಯವನ್ನು ಹೂಡಿ ಅವನಿಗೆ, “ನನ್ನ ಹಿರಿಯ ಮಗಳಾದ ಮೇರಬಳು ಇದ್ದಾಳೆ. ನಾನು ಅವಳನ್ನು ನಿನಗೆ ಮದುವೆ ಮಾಡಿಕೊಡುತ್ತೇನೆ. ಆಗ ನೀನೊಬ್ಬ ಬಲಶಾಲಿಯಾದ ಸೈನಿಕನಾಗುವೆ. ನೀನು ನನಗೆ ಮಗನಂತಿರುವೆ! ನಂತರ ನೀನು ಹೋಗಿ ಯೆಹೋವನ ಯುದ್ಧಗಳಲ್ಲಿ ಹೋರಾಡು” ಎಂದು ಹೇಳಿದನು. ಆದರೆ ಇದೊಂದು ಮೋಸವಾಗಿತ್ತು. “ಈಗ ನಾನು ದಾವೀದನನ್ನು ಕೊಲ್ಲುವ ಅಗತ್ಯವಿಲ್ಲ. ನನಗೋಸ್ಕರ ಫಿಲಿಷ್ಟಿಯರೇ ಅವನನ್ನು ಕೊಲ್ಲುವಂತೆ ಮಾಡುತ್ತೇನೆ” ಎಂಬದು ಸೌಲನ ನಿಜವಾದ ಆಲೋಚನೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಒಂದು ದಿನ ಸೌಲನು, ಇವನು ನನ್ನ ಕೈಯಿಂದಲ್ಲ ಫಿಲಿಷ್ಟಿಯರ ಕೈಯಿಂದ ಸಾಯಲಿ ಎಂದು ಆಲೋಚಿಸಿಕೊಂಡು ದಾವೀದನಿಗೆ, “ನನ್ನ ವೀರನಾಗಿ ಹೋಗಿ ಯೆಹೋವನ ಯುದ್ಧಗಳನ್ನು ನಡಿಸು. ನಾನು ನನ್ನ ಹಿರೀ ಮಗಳಾದ ಮೇರಬಳನ್ನು ನಿನಗೆ ಮದುವೆ ಮಾಡಿಕೊಡುತ್ತೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಒಂದು ದಿನ ಸೌಲನು, “ಇವನು ನನ್ನ ಕೈಯಿಂದ ಸಾಯಬಾರದು; ಫಿಲಿಷ್ಟಿಯರ ಕೈಯಿಂದಲೇ ಸಾಯಲಿ,” ಎಂದು ಒಂದು ಉಪಾಯ ಹೂಡಿದನು. ದಾವೀದನಿಗೆ, “ನೀನು ನನ್ನ ವೀರನಾಗಿ ಹೋಗಿ ಸರ್ವೇಶ್ವರನ ಯುದ್ಧಗಳನ್ನು ನಡೆಸು; ನಾನು ನನ್ನ ಹಿರಿಯ ಮಗಳಾದ ಮೇರಬಳನ್ನು ನಿನಗೆ ಮದುವೆಮಾಡಿಕೊಡುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಒಂದು ದಿವಸ ಸೌಲನು - ಇವನು ನನ್ನ ಕೈಯಿಂದಲ್ಲ, ಫಿಲಿಷ್ಟಿಯರ ಕೈಯಿಂದ ಸಾಯಲಿ ಎಂದು ಆಲೋಚಿಸಿಕೊಂಡು ದಾವೀದನಿಗೆ - ನೀನು ನನ್ನ ವೀರನಾಗಿ ಹೋಗಿ ಯೆಹೋವನ ಯುದ್ಧಗಳನ್ನು ನಡಿಸು; ನಾನು ನನ್ನ ಹಿರೀ ಮಗಳಾದ ಮೇರಬಳನ್ನು ನಿನಗೆ ಮದುವೆ ಮಾಡಿಕೊಡುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಗ ಸೌಲನು, “ನಾನು ಅವನ ಮೇಲೆ ವಿರೋಧವಾಗಿ ಕೈಯೆತ್ತಬಾರದು. ಫಿಲಿಷ್ಟಿಯರು ಅದನ್ನು ಮಾಡಲಿ,” ಎಂದು ತನ್ನಷ್ಟಕ್ಕೆ ಅಂದುಕೊಂಡು ದಾವೀದನಿಗೆ, “ನನ್ನ ಹಿರಿಯ ಮಗಳಾದ ಮೇರಬಳನ್ನು ನಿನಗೆ ಹೆಂಡತಿಯಾಗಿ ಕೊಡುವೆನು, ನೀನು ನನಗೋಸ್ಕರ ಪರಾಕ್ರಮಶಾಲಿಯಾಗಿದ್ದು ಯೆಹೋವ ದೇವರ ಯುದ್ಧಗಳನ್ನು ನಡೆಸು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 18:17
22 ತಿಳಿವುಗಳ ಹೋಲಿಕೆ  

ನಾನು ಮಾಡಿದ ತಪ್ಪನ್ನು ದಯವಿಟ್ಟು ಕ್ಷಮಿಸು. ಯೆಹೋವನು ನಿನ್ನ ಕುಟುಂಬವನ್ನು ಪ್ರಬಲಗೊಳಿಸುತ್ತಾನೆಂದೂ ನಿನ್ನ ಕುಟುಂಬದಿಂದ ಅನೇಕ ರಾಜರು ಬರುತ್ತಾರೆಂದೂ ನನಗೆ ತಿಳಿದಿದೆ! ನೀನು ಯೆಹೋವನ ಯುದ್ಧಗಳಲ್ಲಿ ಹೋರಾಡುವುದರಿಂದ ಯೆಹೋವನು ಇದನ್ನು ನೆರವೇರಿಸುತ್ತಾನೆ. ನೀನು ಜೀವಿಸಿರುವ ತನಕ ಜನರು ನಿನ್ನಲ್ಲಿ ಯಾವುದೇ ಬಗೆಯ ಕೆಟ್ಟದನ್ನು ಕಂಡುಹಿಡಿಯುವುದಿಲ್ಲ!


ಸೌಲನು ಅವರಿಗೆ, “ನೀವು ದಾವೀದನ ಬಳಿಗೆ ಹೋಗಿ ಹೇಳಿ: ‘ನೀನು ರಾಜನ ಮಗಳಿಗಾಗಿ ಹಣ ಕೊಡಬೇಕಿಲ್ಲ. ಸೌಲನು ತನ್ನ ಶತ್ರುಗಳ ಮೇಲೆ ಸೇಡನ್ನು ತೀರಿಸಿಕೊಳ್ಳುತ್ತಾನೆ. ಆದ್ದರಿಂದ ಅವನ ಮಗಳನ್ನು ಮದುವೆಯಾಗಲು ಕೊಡಬೇಕಾದ ದಕ್ಷಿಣೆ ಏನೆಂದರೆ ನೂರು ಮಂದಿ ಫಿಲಿಷ್ಟಿಯರ ಮುಂದೊಗಲುಗಳು’ ಎಂದು ಹೇಳಿರಿ” ಎಂಬುದಾಗಿ ತಿಳಿಸಿದನು. ಸೌಲನ ರಹಸ್ಯವಾದ ಉಪಾಯ ಇದಾಗಿದ್ದಿತು. ಫಿಲಿಷ್ಟಿಯರು ದಾವೀದನನ್ನು ಕೊಂದು ಬಿಡಬಹುದೆಂದು ಸೌಲನು ಭಾವಿಸಿದ್ದನು.


ಇಸ್ರೇಲರಲ್ಲಿನ ಒಬ್ಬನು, “ನೀವು ಅವನನ್ನು ನೋಡಿದಿರಾ! ಅವನನ್ನು ನೋಡಿ! ಆ ಗೊಲ್ಯಾತನು ಪ್ರತಿನಿತ್ಯ ಹೊರಗೆ ಬಂದು ಇಸ್ರೇಲರನ್ನು ಮತ್ತೆಮತ್ತೆ ಹಾಸ್ಯಮಾಡುತ್ತಿದ್ದಾನೆ. ಅವನನ್ನು ಕೊಂದವನಿಗೆ ಸೌಲನು ಅಪಾರ ಐಶ್ವರ್ಯವನ್ನು ಕೊಡುವುದಲ್ಲದೆ ತನ್ನ ಮಗಳನ್ನೂ ಅವನಿಗೆ ಕೊಟ್ಟು ಮದುವೆ ಮಾಡುತ್ತಾನೆ; ಅಲ್ಲದೆ ಅವನ ವಂಶವನ್ನು ಇಸ್ರೇಲಿನಲ್ಲಿ ಸ್ವತಂತ್ರಗೊಳಿಸುತ್ತಾನೆ” ಎಂದು ಹೇಳಿದನು.


ಸೌಲನು, “ನಾನು ದಾವೀದನನ್ನು ಬಲೆಗೆ ಬೀಳಿಸಲು ಮೀಕಲಳನ್ನು ಬಳಸಿಕೊಳ್ಳುತ್ತೇನೆ. ದಾವೀದನನ್ನು ಮದುವೆಯಾಗಲು ನಾನು ಮೀಕಲಳಿಗೆ ಅವಕಾಶ ಕೊಡುತ್ತೇನೆ. ನಂತರ ಅವನನ್ನು ಕೊಲ್ಲಲು ಫಿಲಿಷ್ಟಿಯರಿಗೆ ಬಿಟ್ಟುಕೊಡುತ್ತೇನೆ” ಎಂದು ಯೋಚಿಸಿದನು. ಹೀಗೆ ಸೌಲನು ಎರಡನೆಯ ಸಲ ದಾವೀದನಿಗೆ, “ನೀನು ನನ್ನ ಮಗಳನ್ನು ಇಂದು ಮದುವೆಯಾಗು” ಎಂದು ಹೇಳಿದನು.


ಜನರನ್ನು ರಕ್ಷಿಸಲು ಯೆಹೋವನಿಗೆ ಕತ್ತಿ ಮತ್ತು ಈಟಿಗಳ ಅಗತ್ಯವಿಲ್ಲ ಎಂಬುದು ಇಲ್ಲಿ ಸೇರಿರುವ ಜನರಿಗೆಲ್ಲ ತಿಳಿಯುತ್ತದೆ. ಇದು ಯೆಹೋವನ ಯುದ್ಧ. ಫಿಲಿಷ್ಟಿಯರನ್ನೆಲ್ಲ ಸೋಲಿಸಲು ಯೆಹೋವನು ನಮಗೆ ಸಹಾಯ ಮಾಡುತ್ತಾನೆ” ಎಂದು ಹೇಳಿದನು.


ನನ್ನ ವೈರಿಗಳು ನಯ ನಾಜೂಕಿನಿಂದ ಶಾಂತಿಯ ಕುರಿತು ಮಾತಾಡುವರು; ಅಂತರಂಗದಲ್ಲಿಯೇ ಯುದ್ಧಗಳ ಕುರಿತು ಆಲೋಚಿಸುವರು. ಅವರ ಮಾತುಗಳು ಬೆಣ್ಣೆಯಂತೆ ನುಣುಪಾಗಿದ್ದರೂ ಅವರ ಹೃದಯಗಳು ಬಿಚ್ಚುಗತ್ತಿಗಳೇ ಸರಿ.


ಜನರು ತಮ್ಮ ನೆರೆಯವರಿಗೆ ಸುಳ್ಳು ಹೇಳುವರು. ಪ್ರತಿಯೊಬ್ಬರೂ ತಮ್ಮ ನೆರೆಯವರಿಗೆ ಸುಳ್ಳಿನಿಂದ ಮುಖಸ್ತುತಿ ಮಾಡುವರು.


ನೀನು ಯೆಹೋವನ ಆಜ್ಞೆಯನ್ನು ಏಕೆ ಕಡೆಗಣಿಸಿದೆ? ಆತನು ತಪ್ಪೆಂದು ಹೇಳಿದ ಕಾರ್ಯವನ್ನು ಏಕೆ ಮಾಡಿದೆ? ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ನೀನು ಕೊಲ್ಲಿಸಿದೆ. ಅವನ ಪತ್ನಿಯನ್ನು ನಿನ್ನ ಪತ್ನಿಯನ್ನಾಗಿ ಸ್ವೀಕರಿಸಿದೆ. ಹೌದು, ನೀನು ಅಮ್ಮೋನಿಯರ ಕತ್ತಿಯಿಂದ ಊರೀಯನನ್ನು ಕೊಲ್ಲಿಸಿದೆ.


ದಾವೀದನು ಆ ಪತ್ರದಲ್ಲಿ, “ಯುದ್ಧವು ಹೆಚ್ಚು ಭೀಕರವಾಗಿ ನಡೆಯುವ ಕಡೆ ಊರೀಯನನ್ನು ಮುಂದಿನ ಸಾಲಿನಲ್ಲಿ ನಿಲ್ಲಿಸು. ಅವನನ್ನು ಒಬ್ಬಂಟಿಗನನ್ನಾಗಿ ಬಿಟ್ಟುಬಿಡಿ. ಅವನು ಯುದ್ಧದಲ್ಲಿ ಕೊಲ್ಲಲ್ಪಡಲಿ” ಎಂದು ಬರೆದಿದ್ದನು.


ಸತ್ಯವೆಂದು ಹೇಳಿದ ಸಾಕ್ಷಿಗಳು ಮೊದಲು ಅವರ ಮೇಲೆ ಕಲ್ಲೆಸೆಯಬೇಕು. ಅನಂತರ ಬೇರೆಯವರು ಕಲ್ಲೆಸೆದು ಅವರನ್ನು ಸಾಯಿಸಬೇಕು. ಈ ರೀತಿಯಾಗಿ ನಿಮ್ಮ ಮಧ್ಯೆ ಇದ್ದ ದುಷ್ಕೃತ್ಯವನ್ನು ತೆಗೆದುಹಾಕಬೇಕು.


ಮೋಶೆ ಅವರಿಗೆ, “ಗಾದ್ ಮತ್ತು ರೂಬೇನ್ ಕುಲಗಳಿಂದ ಯುದ್ಧಕ್ಕಾಗಿ ಆರಿಸಲ್ಪಟ್ಟವರು ಜೋರ್ಡನ್ ನದಿಯನ್ನು ಯೆಹೋವನ ಮುಂದೆ ದಾಟಿ ಆ ದೇಶವನ್ನು ಗೆದ್ದುಕೊಂಡರೆ, ನೀವು ಅವರಿಗೆ ಗಿಲ್ಯಾದ್ ಪ್ರಾಂತ್ಯವನ್ನು ಸ್ವಾಸ್ತ್ಯವಾಗಿ ಕೊಡಬೇಕು.


ಆದರೆ ನಿನ್ನ ಸೇವಕರಾದ ನಾವು ಮತ್ತು ದಂಡೆಯಾತ್ರೆಗಾಗಿ ಆರಿಸಲ್ಪಟ್ಟವರು ನಿನ್ನ ಆಜ್ಞೆಯ ಪ್ರಕಾರ ಜೋರ್ಡನ್ ನದಿಯನ್ನು ಯೆಹೋವನ ಮುಂದೆ ದಾಟಿಹೋಗಿ ಹೋರಾಡುತ್ತೇವೆ” ಎಂದರು.


ಅದಕ್ಕೆ ಮೋಶೆ, “ನೀವು ನಿಮ್ಮ ಮಾತಿನಂತೆ ಯೆಹೋವನ ಮುಂದೆ ಸನ್ನದ್ಧರಾದ ಸೈನಿಕರಾಗಿ ಯುದ್ಧಕ್ಕೆ ಹೋಗುವುದಾದರೆ, ಯೆಹೋವನು ತನ್ನ ವೈರಿಗಳನ್ನು ಓಡಿಸುವ ತನಕ ಮತ್ತು ಆ ದೇಶವನ್ನು ಗೆದ್ದುಕೊಳ್ಳುವ ತನಕ ಪ್ರತಿಯೊಬ್ಬ ಪ್ರವೀಣ ಸೈನಿಕನು ಯೆಹೋವನ ಮುಂದೆ ಜೋರ್ಡನ್ ನದಿಯನ್ನು ದಾಟುವುದಾದರೆ, ಆ ಬಳಿಕ ನೀವು ನಿಮ್ಮ ಮನೆಗಳಿಗೆ ಹಿಂತಿರುಗಬಹುದು ಮತ್ತು ನೀವು ಯೆಹೋವನ ದೃಷ್ಟಿಯಲ್ಲಿಯೂ ಇಸ್ರೇಲರ ದೃಷ್ಟಿಯಲ್ಲಿಯೂ ನಿಮ್ಮ ಕರ್ತವ್ಯವನ್ನು ಮಾಡಿದವರಾಗಿರುವಿರಿ.


ಅದಕ್ಕನುಸಾರವಾಗಿ “ಯೆಹೋವನ ಯುದ್ಧಗಳು” ಎಂಬ ಗ್ರಂಥದಲ್ಲಿ, “ಸೂಫದಲ್ಲಿರುವ ವಾಹೇಬನ್ನು, ಅರ್ನೋನ್ ಹೊಳೆಗೆ ಕೂಡುವ ಕಣಿವೆಗಳನ್ನು ಮತ್ತು


ಸೌಲನ ಗಂಡುಮಕ್ಕಳು ಯಾರೆಂದರೆ: ಯೋನಾತಾನ್, ಇಷ್ವಿ ಮತ್ತು ಮಲ್ಕೀಷೂವ. ಸೌಲನ ಹಿರಿಯ ಮಗಳ ಹೆಸರು ಮೇರಾಬ್, ಸೌಲನ ಕಿರಿಯ ಮಗಳ ಹೆಸರು ಮೀಕಲ್.


ನಾನು ಒಂದು ಸಿಂಹವನ್ನೂ ಒಂದು ಕರಡಿಯನ್ನೂ ಕೊಂದಿದ್ದೇನೆ. ಅದೇ ರೀತಿಯಲ್ಲಿ ನಾನು ಅನ್ಯದೇಶಿಯನಾದ ಗೊಲ್ಯಾತನನ್ನೂ ಕೊಂದು ಹಾಕುತ್ತೇನೆ. ಜೀವಸ್ವರೂಪನಾದ ದೇವರ ಸೈನ್ಯವನ್ನು ಹೀಯಾಳಿಸಿದ್ದರಿಂದ ಗೊಲ್ಯಾತನು ಸಾಯಲೇಬೇಕು.


ದಾವೀದನು ಮತ್ತು ಅವನ ಜನರು ಫಿಲಿಷ್ಟಿಯರೊಂದಿಗೆ ಹೋರಾಡಲು ಹೋದರು. ಅವರು ಇನ್ನೂರು ಜನ ಫಿಲಿಷ್ಟಿಯರನ್ನು ಕೊಂದು ಅವರ ಮುಂದೊಗಲುಗಳನ್ನು ತೆಗೆದುಕೊಂಡು ಬಂದು ರಾಜನ ಅಳಿಯನಾಗುವುದಕ್ಕೋಸ್ಕರ ಅವುಗಳನ್ನು ಸಂಪೂರ್ಣವಾಗಿ ಸೌಲನಿಗೆ ಒಪ್ಪಿಸಿದರು. ಆಗ ಸೌಲನು ತನ್ನ ಮಗಳಾದ ಮೀಕಲಳನ್ನು ದಾವೀದನಿಗೆ ಮದುವೆ ಮಾಡಿಕೊಟ್ಟನು.


ದಾವೀದನು ಚಿಕ್ಲಗಿಗೆ ಆಗಮಿಸಿದನು. ನಂತರ ಅವನು ಅಮಾಲೇಕ್ಯರಿಂದ ವಶಪಡಿಸಿಕೊಂಡಿದ್ದ ಕೆಲವು ವಸ್ತುಗಳನ್ನು ಯೆಹೂದದ ಅವನ ಗೆಳೆಯರಿಗೂ ನಾಯಕರಿಗೂ ಕಳುಹಿಸಿದನು. ದಾವೀದನು, “ಯೆಹೋವನ ಶತ್ರುಗಳಿಂದ ನಾವು ವಶಪಡಿಸಿಕೊಂಡ ವಸ್ತುಗಳ ಕೊಡುಗೆಯು ನಿಮಗಾಗಿ ಇಲ್ಲಿದೆ” ಎಂದು ಹೇಳಿದನು.


ಸೌಲನ ಮಗಳಾದ ಮೀಕಲಳು ಕಿಟಕಿಯಿಂದ ಹೊರಗೆ ನೋಡುತ್ತಿದ್ದಳು. ಅದೇ ಸಮಯದಲ್ಲಿ ಯೆಹೋವನ ಪವಿತ್ರ ಪೆಟ್ಟಿಗೆಯು ನಗರಕ್ಕೆ ಬಂದಿತು. ದಾವೀದನು ಯೆಹೋವನ ಸನ್ನಿಧಿಯಲ್ಲಿ ಜಿಗಿಯುತ್ತಾ ಕುಣಿದಾಡುತ್ತಿದ್ದನು. ಮೀಕಲಳು ಇದನ್ನು ಕಂಡು ದಾವೀದನನ್ನು ತನ್ನ ಹೃದಯದಲ್ಲಿ ತಿರಸ್ಕರಿಸಿದಳು; ಅವನು ತನ್ನನ್ನು ತಾನೇ ಮೂರ್ಖನನ್ನಾಗಿ ಮಾಡಿಕೊಳ್ಳುತ್ತಿದ್ದಾನೆ ಎಂದು ಆಲೋಚಿಸಿಕೊಂಡಳು.


ಕೆಡುಕನು ತಾನು ಹೇಳುವ ಸಂಗತಿಗಳ ಮೂಲಕ ತನ್ನನ್ನು ಒಳ್ಳೆಯವನನ್ನಾಗಿ ತೋರಿಸಿಕೊಳ್ಳುವನು. ಆದರೆ ಅವನು ತನ್ನ ಕೆಟ್ಟ ಆಲೋಚನೆಗಳನ್ನು ತನ್ನ ಹೃದಯದಲ್ಲಿ ಅಡಗಿಸಿಕೊಳ್ಳುವನು.


ಅವನು ಹೇಳುವ ಸಂಗತಿಗಳು ಒಳ್ಳೆಯದಾಗಿ ಕಂಡರೂ ಅವನನ್ನು ನಂಬಬೇಡಿ. ಅವನ ಹೃದಯವು ಕೆಟ್ಟ ಆಲೋಚನೆಗಳಿಂದ ತುಂಬಿದೆ.


ದ್ವೇಷವು ತನ್ನನ್ನು ಮೋಸದಿಂದ ಮರೆಮಾಡಿಕೊಳ್ಳುತ್ತದೆ. ಆದರೆ ಅವನು ಕೀಳಾದವನು; ಕೊನೆಯಲ್ಲಿ, ಅವನ ಕೆಟ್ಟಕಾರ್ಯಗಳನ್ನು ಜನರೆಲ್ಲರೂ ನೋಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು