Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 18:20 - ಪರಿಶುದ್ದ ಬೈಬಲ್‌

20 ಸೌಲನ ಮತ್ತೊಬ್ಬ ಮಗಳಾದ ಮೀಕಲಳು ದಾವೀದನನ್ನು ಪ್ರೀತಿಸಿದಳು. ಮೀಕಲಳು ದಾವೀದನನ್ನು ಪ್ರೀತಿಸುತ್ತಿರುವುದನ್ನು ಸೌಲನಿಗೆ ಜನರು ತಿಳಿಸಿದರು. ಸೌಲನಿಗೆ ಇದು ಸಂತಸವನ್ನು ಉಂಟುಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಸೌಲನ ಮಗಳಾದ ಮೀಕಲಳು ದಾವೀದನನ್ನು ಪ್ರೀತಿಸಿದಳು. ಇದು ಸೌಲನಿಗೆ ತಿಳಿದಾಗ ಅವನಿಗೆ ಸಂತೋಷವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಇತ್ತ ಸೌಲನ ಮಗಳಾದ ಮೀಕಲಳು ದಾವೀದನನ್ನು ಪ್ರೀತಿಸತೊಡಗಿದಳು. ಈ ವಿಷಯ ಸೌಲನಿಗೆ ತಿಳಿದುಬಂದಾಗ ಅವನಿಗೆ ಸಂತೋಷ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಸೌಲನ ಮಗಳಾದ ಮೀಕಲಳು ದಾವೀದನನ್ನು ಪ್ರೀತಿಸಿದಳು. ಇದು ಸೌಲನಿಗೆ ತಿಳಿದಾಗ ಅವನಿಗೆ ಸಂತೋಷವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಸೌಲನ ಮತ್ತೊಬ್ಬ ಮಗಳಾದ ಮೀಕಲಳು ದಾವೀದನನ್ನು ಪ್ರೀತಿಸಿದಳು. ಅದು ಸೌಲನಿಗೆ ತಿಳಿದುಬಂದಾಗ, ಆ ಕಾರ್ಯವು ಅವನಿಗೆ ಮೆಚ್ಚಿಕೆಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 18:20
5 ತಿಳಿವುಗಳ ಹೋಲಿಕೆ  

ಯೆಹೋವನು ದಾವೀದನೊಂದಿಗಿರುವುದನ್ನೂ ತನ್ನ ಮಗಳಾದ ಮೀಕಲಳು ದಾವೀದನನ್ನು ಪ್ರೀತಿಸುತ್ತಿರುವುದನ್ನೂ ಸೌಲನು ಗಮನಿಸಿದನು.


ಸೌಲನ ಗಂಡುಮಕ್ಕಳು ಯಾರೆಂದರೆ: ಯೋನಾತಾನ್, ಇಷ್ವಿ ಮತ್ತು ಮಲ್ಕೀಷೂವ. ಸೌಲನ ಹಿರಿಯ ಮಗಳ ಹೆಸರು ಮೇರಾಬ್, ಸೌಲನ ಕಿರಿಯ ಮಗಳ ಹೆಸರು ಮೀಕಲ್.


ಅದಕ್ಕೆ ದಾವೀದನು, “ಒಳ್ಳೆಯದು! ನಾನು ನಿನ್ನೊಡನೆ ಒಪ್ಪಂದ ಮಾಡಿಕೊಳ್ಳುತ್ತೇನೆ. ಆದರೆ ನೀನು ನನಗಾಗಿ ಒಂದು ಕೆಲಸ ಮಾಡಬೇಕು. ಸೌಲನ ಮಗಳಾದ ಮೀಕಲಳನ್ನು ನನ್ನ ಬಳಿಗೆ ಕರೆತರುವ ತನಕ ನಾನು ನಿನ್ನನ್ನು ಸಂಧಿಸುವುದಿಲ್ಲ” ಎಂದು ಹೇಳಿದನು.


ಸೌಲನ ಮಗಳಾದ ಮೀಕಲಳು ಕಿಟಕಿಯಿಂದ ಹೊರಗೆ ನೋಡುತ್ತಿದ್ದಳು. ಅದೇ ಸಮಯದಲ್ಲಿ ಯೆಹೋವನ ಪವಿತ್ರ ಪೆಟ್ಟಿಗೆಯು ನಗರಕ್ಕೆ ಬಂದಿತು. ದಾವೀದನು ಯೆಹೋವನ ಸನ್ನಿಧಿಯಲ್ಲಿ ಜಿಗಿಯುತ್ತಾ ಕುಣಿದಾಡುತ್ತಿದ್ದನು. ಮೀಕಲಳು ಇದನ್ನು ಕಂಡು ದಾವೀದನನ್ನು ತನ್ನ ಹೃದಯದಲ್ಲಿ ತಿರಸ್ಕರಿಸಿದಳು; ಅವನು ತನ್ನನ್ನು ತಾನೇ ಮೂರ್ಖನನ್ನಾಗಿ ಮಾಡಿಕೊಳ್ಳುತ್ತಿದ್ದಾನೆ ಎಂದು ಆಲೋಚಿಸಿಕೊಂಡಳು.


ದಾವೀದನು ತನ್ನ ಕುಟುಂಬದವರನ್ನು ಆಶೀರ್ವದಿಸಲು ಹೋದನು. ಆದರೆ ಸೌಲನ ಮಗಳಾದ ಮೀಕಲಳು ಅವನನ್ನು ಭೇಟಿಮಾಡಲು ಹೊರಗೆ ಬಂದು, “ಇಸ್ರೇಲರ ರಾಜನು ಈ ದಿನ ತನ್ನ ಗೌರವವನ್ನು ಕಾಪಾಡಿಕೊಳ್ಳಲಿಲ್ಲ! ನಾಚಿಕೆಯಿಲ್ಲದೆ ತನ್ನೆಲ್ಲ ಬಟ್ಟೆಗಳನ್ನೂ ತೆಗೆದುಹಾಕುವ ಮೂರ್ಖನಂತೆ, ನೀನು ನಿನ್ನ ಸೇವಕರ ಮತ್ತು ದಾಸಿಯರ ಮುಂದೆ ನಿನ್ನ ಬಟ್ಟೆಗಳನ್ನೆಲ್ಲ ತೆಗೆದು ಹಾಕಿದೆಯಲ್ಲ” ಎಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು