21 ಸೌಲನು, “ನಾನು ದಾವೀದನನ್ನು ಬಲೆಗೆ ಬೀಳಿಸಲು ಮೀಕಲಳನ್ನು ಬಳಸಿಕೊಳ್ಳುತ್ತೇನೆ. ದಾವೀದನನ್ನು ಮದುವೆಯಾಗಲು ನಾನು ಮೀಕಲಳಿಗೆ ಅವಕಾಶ ಕೊಡುತ್ತೇನೆ. ನಂತರ ಅವನನ್ನು ಕೊಲ್ಲಲು ಫಿಲಿಷ್ಟಿಯರಿಗೆ ಬಿಟ್ಟುಕೊಡುತ್ತೇನೆ” ಎಂದು ಯೋಚಿಸಿದನು. ಹೀಗೆ ಸೌಲನು ಎರಡನೆಯ ಸಲ ದಾವೀದನಿಗೆ, “ನೀನು ನನ್ನ ಮಗಳನ್ನು ಇಂದು ಮದುವೆಯಾಗು” ಎಂದು ಹೇಳಿದನು.
21 ಅವಳು ದಾವೀದನಿಗೆ ಉರಲಾಗಿರುವಂತೆಯೂ, ಅವನು ಫಿಲಿಷ್ಟಿಯರ ಕೈಗೆ ಸಿಕ್ಕಿಬೀಳುವಂತೆಯೂ ಇವಳನ್ನು ಅವನಿಗೆ ಕೊಡುವೆನು ಅಂದುಕೊಂಡು ಅವನಿಗೆ, “ನೀನು ನನ್ನ ಅಳಿಯನಾಗುವುದಕ್ಕೆ ಈಗ ಎರಡನೆಯ ಸಂದರ್ಭವುಂಟಾಯಿತು” ಎಂದು ಹೇಳಿದನು.
21 “ಇವಳನ್ನು ಅವನಿಗೆ ಕೊಡುತ್ತೇನೆ. ಈಕೆ ಅವನಿಗೆ ಉರುಲಾಗಿರಬಲ್ಲಳು; ಫಿಲಿಷ್ಟಿಯರ ಕೈಗೆ ಇವನು ಸಿಕ್ಕಿಬೀಳುವಂತೆ ಮಾಡಬಲ್ಲಳು,” ಎಂದುಕೊಂಡನು. ದಾವೀದನಿಗೆ, “ನೀನು ನನ್ನ ಅಳಿಯನಾಗಲು ಎರಡನೇ ಸಂದರ್ಭ ಬಂದೊದಗಿದೆ,” ಎಂದು ಹೇಳಿದನು.
21 ಸೌಲನು - ದಾವೀದನಿಗೆ ಉರಲಾಗಿರುವಂತೆಯೂ ಅವನು ಫಿಲಿಷ್ಟಿಯರ ಕೈಗೆ ಸಿಕ್ಕಿಬೀಳುವಂತೆಯೂ ಇವಳನ್ನು ಅವನಿಗೆ ಕೊಡುವೆನು ಅಂದುಕೊಂಡು ಅವನಿಗೆ - ನೀನು ನನ್ನ ಅಳಿಯನಾಗುವದಕ್ಕೆ ಈಗ ಎರಡನೆಯ ಸಂದರ್ಭವುಂಟಾಯಿತು ಎಂದು ಹೇಳಿದನು.
21 “ಅವನಿಗೆ ಉರುಲಾಗಿರುವ ಹಾಗೆಯೂ, ಫಿಲಿಷ್ಟಿಯರ ಕೈ ಅವನ ಮೇಲೆ ಬರುವ ಹಾಗೆಯೂ ಇವಳನ್ನು ಅವನಿಗೆ ಕೊಡುವೆನು,” ಎಂದುಕೊಂಡನು. ಆದ್ದರಿಂದ ಸೌಲನು ದಾವೀದನಿಗೆ, “ನೀನು ನನ್ನ ಅಳಿಯನಾಗಲು ಎರಡನೆಯ ಅವಕಾಶ,” ಎಂದನು.
ಆದರೆ ಸೌಲನು ದಾವೀದನನ್ನು ಕೊಲ್ಲಬೇಕೆಂದಿದ್ದನು. ದಾವೀದನಿಗೆ ಮೋಸಮಾಡಲು ಸೌಲನು ಒಂದು ಉಪಾಯವನ್ನು ಹೂಡಿ ಅವನಿಗೆ, “ನನ್ನ ಹಿರಿಯ ಮಗಳಾದ ಮೇರಬಳು ಇದ್ದಾಳೆ. ನಾನು ಅವಳನ್ನು ನಿನಗೆ ಮದುವೆ ಮಾಡಿಕೊಡುತ್ತೇನೆ. ಆಗ ನೀನೊಬ್ಬ ಬಲಶಾಲಿಯಾದ ಸೈನಿಕನಾಗುವೆ. ನೀನು ನನಗೆ ಮಗನಂತಿರುವೆ! ನಂತರ ನೀನು ಹೋಗಿ ಯೆಹೋವನ ಯುದ್ಧಗಳಲ್ಲಿ ಹೋರಾಡು” ಎಂದು ಹೇಳಿದನು. ಆದರೆ ಇದೊಂದು ಮೋಸವಾಗಿತ್ತು. “ಈಗ ನಾನು ದಾವೀದನನ್ನು ಕೊಲ್ಲುವ ಅಗತ್ಯವಿಲ್ಲ. ನನಗೋಸ್ಕರ ಫಿಲಿಷ್ಟಿಯರೇ ಅವನನ್ನು ಕೊಲ್ಲುವಂತೆ ಮಾಡುತ್ತೇನೆ” ಎಂಬದು ಸೌಲನ ನಿಜವಾದ ಆಲೋಚನೆಯಾಗಿತ್ತು.
ಯೆಹೂದದ ಜನರ ನಾಲಿಗೆಗಳು ಚೂಪಾದ ಬಾಣಗಳಂತಿವೆ. ಅವರ ಬಾಯಿಗಳು ಸುಳ್ಳಾಡುತ್ತವೆ. ಪ್ರತಿಯೊಬ್ಬನು ತನ್ನ ನೆರೆಮನೆಯವನೊಂದಿಗೆ ನಯವಾಗಿ ಮಾತನಾಡುತ್ತಾನೆ. ರಹಸ್ಯವಾಗಿ ತನ್ನ ನೆರೆಮನೆಯವನನ್ನು ಆಕ್ರಮಣಮಾಡಲು ಯುಕ್ತಿ ಮಾಡುತ್ತಿರುತ್ತಾನೆ.
ಅಧಿಕಾರಿಗಳು ಫರೋಹನಿಗೆ, “ಈ ಜನರಿಂದ ಇನ್ನೆಷ್ಟು ಕಾಲ ನಾವು ಬಳಲಬೇಕು? ಇವರು ಹೋಗಿ ತಮ್ಮ ದೇವರಾದ ಯೆಹೋವನನ್ನು ಆರಾಧಿಸಲಿ. ಈಜಿಪ್ಟ್ ನಾಶವಾಗುತ್ತಿದೆ ಎಂಬುದು ನಿನಗಿನ್ನೂ ಮನವರಿಕೆಯಾಗಿಲ್ಲವೇ?” ಅಂದರು.
ಸೌಲನು ತನ್ನ ಅಧಿಕಾರಿಗಳಿಗೆ ಅಪ್ಪಣೆ ಮಾಡಿದನು. ಸೌಲನು ಅವರಿಗೆ, “ದಾವೀದನೊಂದಿಗೆ ಪ್ರತ್ಯೇಕವಾಗಿ ಮಾತನಾಡಿ. ‘ರಾಜನು ನಿನ್ನನ್ನು ಇಷ್ಟಪಟ್ಟಿದ್ದಾನೆ. ಅವನ ಅಧಿಕಾರಿಗಳೂ ನಿನ್ನನ್ನು ಇಷ್ಟಪಡುತ್ತಾರೆ. ನೀನು ಅವನ ಮಗಳನ್ನು ಮದುವೆಯಾಗಬೇಕು’ ಎಂದು ಹೇಳಿರಿ” ಎಂಬುದಾಗಿ ತಿಳಿಸಿದನು.