Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 18:22 - ಪರಿಶುದ್ದ ಬೈಬಲ್‌

22 ಸೌಲನು ತನ್ನ ಅಧಿಕಾರಿಗಳಿಗೆ ಅಪ್ಪಣೆ ಮಾಡಿದನು. ಸೌಲನು ಅವರಿಗೆ, “ದಾವೀದನೊಂದಿಗೆ ಪ್ರತ್ಯೇಕವಾಗಿ ಮಾತನಾಡಿ. ‘ರಾಜನು ನಿನ್ನನ್ನು ಇಷ್ಟಪಟ್ಟಿದ್ದಾನೆ. ಅವನ ಅಧಿಕಾರಿಗಳೂ ನಿನ್ನನ್ನು ಇಷ್ಟಪಡುತ್ತಾರೆ. ನೀನು ಅವನ ಮಗಳನ್ನು ಮದುವೆಯಾಗಬೇಕು’ ಎಂದು ಹೇಳಿರಿ” ಎಂಬುದಾಗಿ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅವನು ತನ್ನ ಸೇವಕರಿಗೆ, “ನೀವು ದಾವೀದನಿಗೆ ಗುಪ್ತವಾಗಿ, ‘ಅರಸನಿಗೆ ನಿನ್ನನ್ನು ಒಲಿಯುತ್ತಾನೆ, ಅವನ ಸೇವಕರು ನಿನ್ನನ್ನು ಪ್ರೀತಿಸುತ್ತಾರೆ. ನೀನು ಅರಸನ ಅಳಿಯನಾಗು’ ಎಂದು ಹೇಳಿರಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅಲ್ಲದೆ ತನ್ನ ಸೈನಿಕರಿಗೆ, "ನೀವು ದಾವೀದನಿಗೆ, 'ಅರಸರು ನಿಮ್ಮನ್ನು ಮೆಚ್ಚಿಕೊಂಡಿದ್ದಾರೆ; ಅವರ ಎಲ್ಲ ಸೇವಕರಿಗೂ ನಿಮ್ಮ ಮೇಲೆ ಪ್ರೀತಿಯಿದೆ; ನೀವು ಅರಸರ ಅಳಿಯರಾಗಲೇಬೇಕು,” ಎಂದು ಪುಸಲಾಯಿಸಿರಿ,” ಎಂದು ಗುಟ್ಟಾಗಿ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅವನು ತನ್ನ ಸೇವಕರಿಗೆ - ನೀವು ದಾವೀದನಿಗೆ ಗುಪ್ತವಾಗಿ - ಅರಸನು ನಿನಗೆ ಒಲಿಯುತ್ತಾನೆ; ಅವನ ಎಲ್ಲಾ ಸೇವಕರು ನಿನ್ನನ್ನು ಪ್ರೀತಿಸುತ್ತಾರೆ; ನೀನು ಅರಸನ ಅಳಿಯನಾಗು ಎಂದು ಪುಸಲಾಯಿಸಿರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಸೌಲನು ತನ್ನ ಸೇವಕರಿಗೆ, “ನೀವು ದಾವೀದನ ಸಂಗಡ ಅಂತರಂಗವಾಗಿ ಮಾತನಾಡಿ, ಇಗೋ, ಅರಸನು ನಿನ್ನ ಮೇಲೆ ಪ್ರೀತಿಯುಳ್ಳವನಾಗಿದ್ದಾನೆ; ಈಗ ನೀನು ಅರಸನಿಗೆ ಅಳಿಯನಾಗೆಂದು, ಹೇಳಿರಿ,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 18:22
6 ತಿಳಿವುಗಳ ಹೋಲಿಕೆ  

ನನ್ನ ವೈರಿಗಳು ನಯ ನಾಜೂಕಿನಿಂದ ಶಾಂತಿಯ ಕುರಿತು ಮಾತಾಡುವರು; ಅಂತರಂಗದಲ್ಲಿಯೇ ಯುದ್ಧಗಳ ಕುರಿತು ಆಲೋಚಿಸುವರು. ಅವರ ಮಾತುಗಳು ಬೆಣ್ಣೆಯಂತೆ ನುಣುಪಾಗಿದ್ದರೂ ಅವರ ಹೃದಯಗಳು ಬಿಚ್ಚುಗತ್ತಿಗಳೇ ಸರಿ.


ಅಧಿಪತಿಯು ಸುಳ್ಳುಮಾತುಗಳಿಗೆ ಕಿವಿಗೊಟ್ಟರೆ, ಅವನ ಅಧೀನದಲ್ಲಿರುವ ಅಧಿಕಾರಿಗಳೆಲ್ಲರು ಕೆಡುಕರಾಗುವರು.


ಸೌಲನು, “ನಾನು ದಾವೀದನನ್ನು ಬಲೆಗೆ ಬೀಳಿಸಲು ಮೀಕಲಳನ್ನು ಬಳಸಿಕೊಳ್ಳುತ್ತೇನೆ. ದಾವೀದನನ್ನು ಮದುವೆಯಾಗಲು ನಾನು ಮೀಕಲಳಿಗೆ ಅವಕಾಶ ಕೊಡುತ್ತೇನೆ. ನಂತರ ಅವನನ್ನು ಕೊಲ್ಲಲು ಫಿಲಿಷ್ಟಿಯರಿಗೆ ಬಿಟ್ಟುಕೊಡುತ್ತೇನೆ” ಎಂದು ಯೋಚಿಸಿದನು. ಹೀಗೆ ಸೌಲನು ಎರಡನೆಯ ಸಲ ದಾವೀದನಿಗೆ, “ನೀನು ನನ್ನ ಮಗಳನ್ನು ಇಂದು ಮದುವೆಯಾಗು” ಎಂದು ಹೇಳಿದನು.


ಸೌಲನ ಅಧಿಕಾರಿಗಳು ದಾವೀದನಿಗೆ ಆ ವಿಚಾರಗಳನ್ನು ತಿಳಿಸಿದರು. ಆದರೆ ದಾವೀದನು, “ರಾಜನ ಅಳಿಯನಾಗುವುದು ಸುಲಭವೆಂದು ನೀವು ತಿಳಿದಿರುವಿರಾ? ರಾಜನ ಮಗಳಿಗೆ ಕೊಡಲು ನನ್ನ ಹತ್ತಿರ ಹಣವೇ ಇಲ್ಲ! ನಾನು ಕೇವಲ ಬಡವ, ಸಾಮಾನ್ಯ ಮನುಷ್ಯ” ಎಂದು ಉತ್ತರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು