1 ಸಮುಯೇಲ 18:23 - ಪರಿಶುದ್ದ ಬೈಬಲ್23 ಸೌಲನ ಅಧಿಕಾರಿಗಳು ದಾವೀದನಿಗೆ ಆ ವಿಚಾರಗಳನ್ನು ತಿಳಿಸಿದರು. ಆದರೆ ದಾವೀದನು, “ರಾಜನ ಅಳಿಯನಾಗುವುದು ಸುಲಭವೆಂದು ನೀವು ತಿಳಿದಿರುವಿರಾ? ರಾಜನ ಮಗಳಿಗೆ ಕೊಡಲು ನನ್ನ ಹತ್ತಿರ ಹಣವೇ ಇಲ್ಲ! ನಾನು ಕೇವಲ ಬಡವ, ಸಾಮಾನ್ಯ ಮನುಷ್ಯ” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆ ಸೇವಕರು ದಾವೀದನಿಗೆ ಹಾಗೆಯೇ ಹೇಳಿದಾಗ ಅವನು, “ಅರಸನ ಅಳಿಯನಾಗುವುದು ಸಾಧಾರಣವಾದ ಸಂಗತಿಯೆಂದು ನೆನಸುತ್ತೀರೋ? ನಾನು ದರಿದ್ರನೂ, ಅಲ್ಪನೂ ಆಗಿರುತ್ತೆನಲ್ಲಾ” ಎಂದು ಉತ್ತರ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಅಂತೆಯೇ ಆ ಸೇವಕರು ದಾವೀದನಿಗೆ ತಿಳಿಯಪಡಿಸಿದರು. ಅದಕ್ಕೆ ದಾವೀದನು, “ಅರಸರ ಅಳಿಯನಾಗುವುದು ಅಷ್ಟು ಸಾಧಾರಣ ಸಂಗತಿ ಎಂದು ನೆನೆಸುತ್ತೀರೋ? ನಾನೊಬ್ಬ ಬಡವ, ದೀನದಲಿತ,” ಎಂದುಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಆ ಸೇವಕರು ದಾವೀದನಿಗೆ ಹಾಗೆಯೇ ಹೇಳಿದಾಗ ಅವನು - ಅರಸನ ಅಳಿಯನಾಗುವದು ಸಾಧಾರಣವಾದ ಸಂಗತಿಯೆಂದು ನೆನಸುತ್ತೀರೋ? ನಾನು ದರಿದ್ರನೂ ಅಲ್ಪನೂ ಆಗಿರುತ್ತೇನಲ್ಲಾ ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಹಾಗೆಯೇ ಸೌಲನ ಸೇವಕರು ಈ ಮಾತುಗಳನ್ನು ದಾವೀದನ ಕಿವಿಗಳಲ್ಲಿ ಹೇಳಿದರು. ಆದರೆ ದಾವೀದನು, “ನಾನು ದರಿದ್ರನೂ ಅಲ್ಪನೂ ಆಗಿರುವಾಗ, ನಾನು ಅರಸನಿಗೆ ಅಳಿಯನಾಗುವುದು ಅಷ್ಟು ಸಾಧಾರಣ ಸಂಗತಿಯೆಂದು ನೆನಸುತ್ತೀರೋ?” ಎಂದನು. ಅಧ್ಯಾಯವನ್ನು ನೋಡಿ |