25 ಸೌಲನು ಅವರಿಗೆ, “ನೀವು ದಾವೀದನ ಬಳಿಗೆ ಹೋಗಿ ಹೇಳಿ: ‘ನೀನು ರಾಜನ ಮಗಳಿಗಾಗಿ ಹಣ ಕೊಡಬೇಕಿಲ್ಲ. ಸೌಲನು ತನ್ನ ಶತ್ರುಗಳ ಮೇಲೆ ಸೇಡನ್ನು ತೀರಿಸಿಕೊಳ್ಳುತ್ತಾನೆ. ಆದ್ದರಿಂದ ಅವನ ಮಗಳನ್ನು ಮದುವೆಯಾಗಲು ಕೊಡಬೇಕಾದ ದಕ್ಷಿಣೆ ಏನೆಂದರೆ ನೂರು ಮಂದಿ ಫಿಲಿಷ್ಟಿಯರ ಮುಂದೊಗಲುಗಳು’ ಎಂದು ಹೇಳಿರಿ” ಎಂಬುದಾಗಿ ತಿಳಿಸಿದನು. ಸೌಲನ ರಹಸ್ಯವಾದ ಉಪಾಯ ಇದಾಗಿದ್ದಿತು. ಫಿಲಿಷ್ಟಿಯರು ದಾವೀದನನ್ನು ಕೊಂದು ಬಿಡಬಹುದೆಂದು ಸೌಲನು ಭಾವಿಸಿದ್ದನು.
25 ಆಗ ಅವನು ಅವರಿಗೆ, “ನೀವು ಹೋಗಿ ದಾವೀದನಿಗೆ, ‘ಅರಸನು ತೆರವನ್ನು ಅಪೇಕ್ಷಿಸುವುದಿಲ್ಲ. ತನ್ನ ಶತ್ರುಗಳಾದ ಫಿಲಿಷ್ಟಿಯರಿಗೆ ಮುಯ್ಯಿತೀರಿಸಿ ಅವರಲ್ಲಿನ ನೂರು ಮಂದಿಯ ಮುಂದೊಗಲನ್ನು ತಂದುಕೊಡಬೇಕು ಅನ್ನುತ್ತಾನೆ’ ಎಂದು ಹೇಳಿರಿ” ಎಂದು ಆಜ್ಞಾಪಿಸಿದನು. ದಾವೀದನನ್ನು ಫಿಲಿಷ್ಟಿಯರಿಂದ ಕೊಲ್ಲಿಸಬೇಕೆಂಬುದೇ ಅವನ ಉದ್ದೇಶವಾಗಿತ್ತು.
25 ಆಗ ಅವನು, “ನೀವು ಹೋಗಿ ದಾವೀದನಿಗೆ, ‘ಅರಸರು ಯಾವ ದಕ್ಷಿಣೆಯನ್ನೂ ಬಯಸುವುದಿಲ್ಲ; ಆದರೆ ಅವರ ಶತ್ರುಗಳಿಗೆ ಮುಯ್ಯಿತೀರಿಸಿ ಅವರಲ್ಲಿನ ನೂರುಮಂದಿಯ ಮುಂದೊಗಲನ್ನು ತಂದುಕೊಟ್ಟರೆ ಸಾಕೆನ್ನುತ್ತಾರೆ’ ಎಂದು ತಿಳಿಸಿರಿ,” ಎಂದು ಆಜ್ಞಾಪಿಸಿದನು. (ದಾವೀದನನ್ನು ಫಿಲಿಷ್ಟಿಯರ ಕೈಯಿಂದಲೇ ಕೊಲ್ಲಿಸಬೇಕೆಂಬುದು ಅವನ ಉದ್ದೇಶವಾಗಿತ್ತು.)
25 ಆಗ ಅವನು ಅವರಿಗೆ - ನೀವು ಹೋಗಿ ದಾವೀದನಿಗೆ - ಅರಸನು ತೆರವನ್ನು ಅಪೇಕ್ಷಿಸುವದಿಲ್ಲ; ತನ್ನ ಶತ್ರುಗಳಾದ ಫಿಲಿಷ್ಟಿಯರಿಗೆ ಮುಯ್ಯಿತೀರಿಸಿ ಅವರಲ್ಲಿನ ನೂರು ಮಂದಿಯ ಮುಂದೊಗಲನ್ನು ತಂದುಕೊಡಬೇಕು ಅನ್ನುತ್ತಾನೆಂದು ಹೇಳಿರಿ ಎಂದು ಆಜ್ಞಾಪಿಸಿದನು. ದಾವೀದನನ್ನು ಫಿಲಿಷ್ಟಿಯರಿಂದ ಕೊಲ್ಲಿಸಬೇಕೆಂಬದೇ ಇದಕ್ಕೆ ಕಾರಣ.
25 ಆದರೆ ಸೌಲನು ದಾವೀದನನ್ನು ಫಿಲಿಷ್ಟಿಯರ ಕೈಯಿಂದ ಬೀಳಮಾಡಬೇಕೆಂದು ನೆನಸಿ ತನ್ನ ಸೇವಕರಿಗೆ, “ನೀವು ದಾವೀದನಿಗೆ ಅರಸನು ಯಾವ ತೆರವನ್ನು ಅಪೇಕ್ಷಿಸದೆ, ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವ ಹಾಗೆ ನೂರು ಮಂದಿ ಫಿಲಿಷ್ಟಿಯರ ಮುಂದೊಗಲನ್ನು ಅಪೇಕ್ಷಿಸುತ್ತಾನೆಂದು ಹೇಳಿರಿ,” ಎಂದನು.
ಆದರೆ ಸೌಲನು ದಾವೀದನನ್ನು ಕೊಲ್ಲಬೇಕೆಂದಿದ್ದನು. ದಾವೀದನಿಗೆ ಮೋಸಮಾಡಲು ಸೌಲನು ಒಂದು ಉಪಾಯವನ್ನು ಹೂಡಿ ಅವನಿಗೆ, “ನನ್ನ ಹಿರಿಯ ಮಗಳಾದ ಮೇರಬಳು ಇದ್ದಾಳೆ. ನಾನು ಅವಳನ್ನು ನಿನಗೆ ಮದುವೆ ಮಾಡಿಕೊಡುತ್ತೇನೆ. ಆಗ ನೀನೊಬ್ಬ ಬಲಶಾಲಿಯಾದ ಸೈನಿಕನಾಗುವೆ. ನೀನು ನನಗೆ ಮಗನಂತಿರುವೆ! ನಂತರ ನೀನು ಹೋಗಿ ಯೆಹೋವನ ಯುದ್ಧಗಳಲ್ಲಿ ಹೋರಾಡು” ಎಂದು ಹೇಳಿದನು. ಆದರೆ ಇದೊಂದು ಮೋಸವಾಗಿತ್ತು. “ಈಗ ನಾನು ದಾವೀದನನ್ನು ಕೊಲ್ಲುವ ಅಗತ್ಯವಿಲ್ಲ. ನನಗೋಸ್ಕರ ಫಿಲಿಷ್ಟಿಯರೇ ಅವನನ್ನು ಕೊಲ್ಲುವಂತೆ ಮಾಡುತ್ತೇನೆ” ಎಂಬದು ಸೌಲನ ನಿಜವಾದ ಆಲೋಚನೆಯಾಗಿತ್ತು.
ಆದರೆ ಸೌಲನು ಆ ದಿನ ಮತ್ತೊಂದು ದೊಡ್ಡ ತಪ್ಪನ್ನು ಮಾಡಿದನು. ಇಸ್ರೇಲರು ಬಳಲಿದ್ದರು ಮತ್ತು ಹಸಿದಿದ್ದರು. ಸೌಲನು ಅವರಿಗೆ, “ನಾನು ಶತ್ರುಗಳನ್ನು ಸೋಲಿಸಬೇಕಾಗಿರುವುದರಿಂದ ನಿಮ್ಮಲ್ಲಿ ಸಾಯಂಕಾಲದೊಳಗೆ ಊಟಮಾಡಿದವನು ಶಾಪಗ್ರಸ್ತನಾಗಲಿ” ಎಂದು ಆಣೆಯಿಟ್ಟು ಹೇಳಿದ್ದರಿಂದ ಇಸ್ರೇಲಿನ ಯಾವ ಸೈನಿಕನೂ ಊಟಮಾಡಲಿಲ್ಲ.
ನಾನು ದೀನಳನ್ನು ಮದುವೆಯಾಗಲು ನೀವು ನನಗೆ ಅವಕಾಶಕೊಟ್ಟರೆ ಸಾಕು. ನಾನು ನಿಮಗೆ ಯಾವ ಉಡುಗೊರೆಯನ್ನು ಬೇಕಾದರೂ ಕೊಡುವೆನು. ನೀವು ಏನು ಕೇಳಿದರೂ ಕೊಡುವೆನು. ಆದರೆ ನನಗೆ ದೀನಳನ್ನು ಮದುವೆ ಮಾಡಿಸಿಕೊಡಿ” ಎಂದು ಕೇಳಿಕೊಂಡನು.
ನಾನು ಒಂದು ಸಿಂಹವನ್ನೂ ಒಂದು ಕರಡಿಯನ್ನೂ ಕೊಂದಿದ್ದೇನೆ. ಅದೇ ರೀತಿಯಲ್ಲಿ ನಾನು ಅನ್ಯದೇಶಿಯನಾದ ಗೊಲ್ಯಾತನನ್ನೂ ಕೊಂದು ಹಾಕುತ್ತೇನೆ. ಜೀವಸ್ವರೂಪನಾದ ದೇವರ ಸೈನ್ಯವನ್ನು ಹೀಯಾಳಿಸಿದ್ದರಿಂದ ಗೊಲ್ಯಾತನು ಸಾಯಲೇಬೇಕು.
ದಾವೀದನು ತನ್ನ ಹತ್ತಿರ ನಿಂತಿದ್ದವನಿಗೆ, “ಈ ಫಿಲಿಷ್ಟಿಯನನ್ನು ಕೊಂದು ಇಸ್ರೇಲರಿಗೆ ಉಂಟಾಗಿರುವ ಅಪನಿಂದೆಯನ್ನು ಹೋಗಲಾಡಿಸುವವನಿಗೆ ಸಿಗುವ ಬಹುಮಾನವೇನು? ಈ ಗೊಲ್ಯಾತನ್ಯಾರು? ಇವನು ಕೇವಲ ಒಬ್ಬ ಪರದೇಶಿ. ಗೊಲ್ಯಾತನು ಫಿಲಿಷ್ಟಿಯನೇ ಹೊರತು ಬೇರೆ ಯಾರೂ ಅಲ್ಲ. ಜೀವಸ್ವರೂಪನಾದ ದೇವರ ಸೈನ್ಯದ ವಿರೋಧವಾಗಿ ಮಾತಾಡಲು ಇವನು ತನ್ನನ್ನು ಯಾರೆಂದು ಯೋಚಿಸಿಕೊಂಡಿದ್ದಾನೆ?” ಎಂದನು.
ಯಾಕೋಬನು ರಾಹೇಲಳನ್ನು ಪ್ರೀತಿಸಿದನು. ಯಾಕೋಬನು ಲಾಬಾನನಿಗೆ, “ನಿನ್ನ ಚಿಕ್ಕಮಗಳಾದ ರಾಹೇಲಳನ್ನು ನನಗೆ ಮದುವೆ ಮಾಡಿಕೊಡುವುದಾದರೆ ನಾನು ನಿನಗೆ ಏಳು ವರ್ಷ ಸೇವೆ ಮಾಡುವೆನು” ಎಂದು ಹೇಳಿದನು.
ದಾವೀದನು ಸೌಲನ ಮಗನಾದ ಈಷ್ಬೋಶೆತನ ಬಳಿಗೆ ಸಂದೇಶಕರನ್ನು ಕಳುಹಿಸಿ, “ನನ್ನ ಹೆಂಡತಿಯಾದ ಮೀಕಲಳನ್ನು ನನ್ನ ಬಳಿಗೆ ಕಳುಹಿಸು. ಅವಳನ್ನು ನನಗೆ ಕೊಡುವುದಾಗಿ ಮಾತುಕತೆಯಾಗಿತ್ತು. ಅವಳನ್ನು ಪಡೆಯಲು ನಾನು ನೂರು ಜನ ಫಿಲಿಷ್ಟಿಯರನ್ನು ಕೊಂದಿದ್ದೇನೆ” ಎಂದು ಹೇಳಿದನು.