Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 18:29 - ಪರಿಶುದ್ದ ಬೈಬಲ್‌

29 ಆದ್ದರಿಂದ ಸೌಲನು ದಾವೀದನಿಗೆ ಇನ್ನೂ ಹೆಚ್ಚು ಭಯಪಟ್ಟನು. ಸೌಲನು ಆ ಕಾಲದಲ್ಲೆಲ್ಲ ದಾವೀದನಿಗೆ ವಿರೋಧವಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಸೌಲನು ತಿಳಿದು ಅವನಿಗೆ ಮತ್ತಷ್ಟು ಹೆದರುವವನಾಗಿ ಅವನ ನಿತ್ಯವೈರಿಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಈ ಕಾರಣ ಅವನ ಭಯ ಮತ್ತಷ್ಟೂ ಅಧಿಕವಾಯಿತು; ದಾವೀದನನ್ನು ತನ್ನ ಜೀವಮಾನ ಪರಿಯಂತ ವೈರಿಯೆಂದು ಭಾವಿಸತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಅವನಿಗೆ ಮತ್ತಷ್ಟು ಹೆದರುವವನಾಗಿ ಅವನ ನಿತ್ಯವೈರಿಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಸೌಲನು ದಾವೀದನಿಗೋಸ್ಕರ ಇನ್ನೂ ಹೆಚ್ಚಾಗಿ ಭಯಪಟ್ಟನು. ಸೌಲನು ದಾವೀದನಿಗೆ ಜೀವಮಾನವೆಲ್ಲಾ ಶತ್ರುವಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 18:29
10 ತಿಳಿವುಗಳ ಹೋಲಿಕೆ  

ಆಮೇಲೆ ನಾನು, “ಜನರು ಪ್ರಯಾಸಪಟ್ಟು ಕೆಲಸ ಮಾಡುವುದೇಕೆ?” ಎಂದು ಆಲೋಚಿಸಿದೆ. ಜನರು ಏಳಿಗೆ ಹೊಂದಲು ಮತ್ತು ಬೇರೆಯವರಿಗಿಂತ ಹೆಚ್ಚು ಅಭಿವೃದ್ಧಿಯಾಗಲು ಪ್ರಯತ್ನಿಸುವರು; ಅದಕ್ಕೆ ಅವರ ಮತ್ಸರವೇ ಕಾರಣ. ಇದೂ ಗಾಳಿಯನ್ನು ಹಿಂದಟ್ಟಿದ್ದ ಹಾಗೆ ವ್ಯರ್ಥ.


ಒಬ್ಬನೇ ದೇವರಿರುವನೆಂದು ನೀವು ನಂಬಿದ್ದೀರಿ. ಒಳ್ಳೆಯದು! ಆದರೆ ದೆವ್ವಗಳೂ ಅದನ್ನು ನಂಬುತ್ತವೆ ಮತ್ತು ಭಯದಿಂದ ನಡುಗುತ್ತವೆ.


ಅಂದಿನಿಂದ ಯೆಹೂದ್ಯನಾಯಕರು ಯೇಸುವನ್ನು ಕೊಲ್ಲಲು ಸಂಚು ಮಾಡಲಾರಂಭಿಸಿದರು.


ದಾವೀದನು ಬಹಳವಾಗಿ ಯಶ್ವಸಿಯಾಗುತ್ತಿರುವುದನ್ನು ಕಂಡ ಸೌಲನು ದಾವೀದನಿಗೆ ಮತ್ತಷ್ಟು ಭಯಪಟ್ಟನು.


ಯೆಹೋವನು ಸೌಲನನ್ನು ಬಿಟ್ಟು ದಾವೀದನ ಜೊತೆಗಿದ್ದನು. ಆದ್ದರಿಂದ ಸೌಲನು ದಾವೀದನಿಗೆ ಭಯಪಟ್ಟನು.


ಯೆಹೋವನು ದಾವೀದನೊಂದಿಗಿರುವುದನ್ನೂ ತನ್ನ ಮಗಳಾದ ಮೀಕಲಳು ದಾವೀದನನ್ನು ಪ್ರೀತಿಸುತ್ತಿರುವುದನ್ನೂ ಸೌಲನು ಗಮನಿಸಿದನು.


ಫಿಲಿಷ್ಟಿಯ ಸೇನಾಧಿಪತಿಗಳು ಇಸ್ರೇಲರೊಂದಿಗೆ ಹೋರಾಡಲು ಹೋಗುತ್ತಲೇ ಇದ್ದರು. ಆದರೆ ದಾವೀದನು ಪ್ರತಿಸಲವೂ ಅವರನ್ನು ಸೋಲಿಸುತ್ತಿದ್ದನು. ದಾವೀದನು ಸೌಲನ ಒಬ್ಬ ಯಶಸ್ವಿಯಾದ ಅಧಿಕಾರಿಯಾಗಿದ್ದನು! ಆದ್ದರಿಂದ ದಾವೀದನು ಪ್ರಖ್ಯಾತನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು