Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 18:5 - ಪರಿಶುದ್ದ ಬೈಬಲ್‌

5 ಸೌಲನು ದಾವೀದನನ್ನು ಬೇರೆಬೇರೆ ಯುದ್ಧಗಳಲ್ಲಿ ಹೋರಾಡಲು ಕಳುಹಿಸಿದನು. ದಾವೀದನು ಆ ಯುದ್ಧಗಳಲ್ಲೆಲ್ಲಾ ಯಶ್ವಸಿಯಾದನು. ಆದ್ದರಿಂದ ಸೌಲನು ದಾವೀದನನ್ನು ಸೈನ್ಯಾಧಿಪತಿಯನ್ನಾಗಿ ನೇಮಿಸಿದನು. ಇದು ಸೌಲನ ಅಧಿಕಾರಿಗಳಿಗೂ ಇತರರಿಗೂ ಸಂತಸವನ್ನು ಉಂಟುಮಾಡಿತು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ದಾವೀದನಾದರೋ ಸೌಲನು ಎಲ್ಲಿಗೆ ಕಳುಹಿಸಿದರೂ ಹೋಗಿ ಎಲ್ಲವನ್ನು ವಿವೇಕದಿಂದ ನಡೆಸುತ್ತಿದ್ದನು. ಸೌಲನು ಇವನನ್ನು ಸೇನಾಧಿಪತಿಯನ್ನಾಗಿ ನೇಮಿಸಿದನು. ಇದು ಅವನ ಸೇವಕರಿಗೂ, ಎಲ್ಲಾ ಜನರಿಗೂ ಮೆಚ್ಚಿಗೆಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ದಾವೀದನಾದರೋ ಸೌಲನು ಎಲ್ಲಿಗೆ ಕಳುಹಿಸಿದರೂ ಅಲ್ಲಿಗೆ ಹೋಗಿ ಎಲ್ಲವನ್ನು ವಿವೇಕದಿಂದ ಮಾಡಿ ಯಶಸ್ಸು ಪಡೆಯುತ್ತಿದ್ದನು. ಆದ್ದರಿಂದ ಸೌಲನು ಅವನನ್ನು ಸೇನಾಪತಿಯನ್ನಾಗಿ ನೇಮಿಸಿದನು. ಇದರಿಂದ ಎಲ್ಲ ಅಧಿಕಾರಿಗಳಿಗೂ ಜನಸಾಮಾನ್ಯರಿಗೂ ಸಂತೋಷವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ದಾವೀದನಾದರೋ ಸೌಲನು ಎಲ್ಲಿಗೆ ಕಳುಹಿಸಿದರೂ ಹೋಗಿ ಎಲ್ಲವನ್ನು ವಿವೇಕದಿಂದ ನಡಿಸುತ್ತಿದ್ದನು. ಸೌಲನು ಇವನನ್ನು ಸೇನಾಪತಿಯನ್ನಾಗಿ ನೇವಿುಸಿದನು; ಇದು ಅವನ ಸೇವಕರಿಗೂ ಎಲ್ಲಾ ಜನರಿಗೂ ಸಮ್ಮತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಸೌಲನು ದಾವೀದನನ್ನು ಎಲ್ಲಿಗೆ ಕಳುಹಿಸಿದರೂ, ಅಲ್ಲಿಗೆ ಹೋಗಿ ಅವನು ಎಲ್ಲವನ್ನು ವಿವೇಕದಿಂದ ಬಹು ಯಶಸ್ವಿಯಾಗಿ ಮಾಡುತ್ತಿದ್ದನು. ಆದ್ದರಿಂದ ಸೌಲನು ಅವನನ್ನು ಸೈನ್ಯದ ಮೇಲೆ ಅಧಿಕಾರಿಯಾಗಿ ನೇಮಿಸಿದನು. ಇದು ಸಮಸ್ತ ಜನರಿಗೂ, ಸೌಲನ ಸಮಸ್ತ ಸೇವಕರಿಗೂ ಮೆಚ್ಚಿಕೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 18:5
20 ತಿಳಿವುಗಳ ಹೋಲಿಕೆ  

ಫಿಲಿಷ್ಟಿಯ ಸೇನಾಧಿಪತಿಗಳು ಇಸ್ರೇಲರೊಂದಿಗೆ ಹೋರಾಡಲು ಹೋಗುತ್ತಲೇ ಇದ್ದರು. ಆದರೆ ದಾವೀದನು ಪ್ರತಿಸಲವೂ ಅವರನ್ನು ಸೋಲಿಸುತ್ತಿದ್ದನು. ದಾವೀದನು ಸೌಲನ ಒಬ್ಬ ಯಶಸ್ವಿಯಾದ ಅಧಿಕಾರಿಯಾಗಿದ್ದನು! ಆದ್ದರಿಂದ ದಾವೀದನು ಪ್ರಖ್ಯಾತನಾದನು.


ಅವಿಶ್ವಾಸಿಗಳೊಂದಿಗೆ ವ್ಯವಹರಿಸುವಾಗ ಜ್ಞಾನವುಳ್ಳವರಾಗಿರಿ. ನಿಮ್ಮ ಸಮಯವನ್ನು ಅತ್ಯುತ್ತಮವಾದ ರೀತಿಯಲ್ಲಿ ಬಳಸಿರಿ.


ನಿಮ್ಮ ಜೀವಿತಗಳ ಬಗ್ಗೆ ಮೂರ್ಖರಾಗಿರದೆ ದೇವರ ಚಿತ್ತವೇನೆಂಬುದನ್ನು ತಿಳಿದುಕೊಳ್ಳಿರಿ.


ಯೋಸೇಫನಿಗೆ ಅಲ್ಲಿ ಅನೇಕ ತೊಂದರೆಗಳು ಬಂದವು. ಆದರೆ ದೇವರು ಆ ಎಲ್ಲಾ ತೊಂದರೆಗಳಿಂದ ಅವನನ್ನು ರಕ್ಷಿಸಿದನು. ಆಗ ಫರೋಹನು ಈಜಿಪ್ಟಿನ ರಾಜನಾಗಿದ್ದನು. ದೇವರು ಯೋಸೇಫನಿಗೆ ಕೊಟ್ಟ ಜ್ಞಾನದ ದೆಸೆಯಿಂದ ಫರೋಹನು ಯೋಸೇಫನನ್ನು ಇಷ್ಟಪಟ್ಟನು ಮತ್ತು ಗೌರವಿಸಿದನು. ಫರೋಹನು ಯೋಸೇಫನನ್ನು ಈಜಿಪ್ಟಿನ ರಾಜ್ಯಪಾಲನನ್ನಾಗಿಯೂ ತನ್ನ ಮನೆಯಲ್ಲಿದ್ದ ಎಲ್ಲಾ ಜನರ ಮೇಲೆ ಅಧಿಪತಿಯನ್ನಾಗಿಯೂ ಮಾಡಿದನು.


“ಕೇಳಿರಿ! ತೋಳಗಳ ನಡುವೆ ಕುರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತಿದ್ದೇನೆ. ಆದ್ದರಿಂದ ನೀವು ಹಾವುಗಳಂತೆ ಸೂಕ್ಷ್ಮ ಬುದ್ದಿಯುಳ್ಳವರಾಗಿರಿ, ಪಾರಿವಾಳಗಳಂತೆ ಯಾವ ಹಾನಿಯನ್ನೂ ಮಾಡದಿರಿ.


ಅವನು ನೀರಿನ ಕಾಲುವೆಗಳ ಬಳಿಯಲ್ಲಿ ಹುಲುಸಾಗಿ ಬೆಳೆದಿರುವ ಮರದಂತಿರುವನು. ಆ ಮರವು ತಕ್ಕಕಾಲದಲ್ಲಿ ಫಲಿಸುವುದು; ಬಾಡದ ಎಲೆಗಳಿಂದ ಯಾವಾಗಲೂ ತುಂಬಿರುವುದು; ಅಂತೆಯೇ ಅವನ ಕಾರ್ಯಗಳೆಲ್ಲಾ ಸಫಲವಾಗುವವು.


ಅವನು ಮೂರು ಸಾವಿರ ಇಸ್ರೇಲ್ ಗಂಡಸರನ್ನು ಆರಿಸಿಕೊಂಡನು. ಅವರಲ್ಲಿ ಎರಡು ಸಾವಿರ ಗಂಡಸರು ಗುಡ್ಡಗಾಡು ಪ್ರದೇಶವಾದ ಬೇತೇಲಿನಲ್ಲಿಯೂ ಮಿಕ್ಮಾಷಿನಲ್ಲಿಯೂ ಅವನೊಂದಿಗೆ ಇದ್ದರು. ಉಳಿದ ಒಂದು ಸಾವಿರ ಗಂಡಸರು ಬೆನ್ಯಾಮೀನನ ಗಿಬೆಯದಲ್ಲಿ ಯೋನಾತಾನನೊಂದಿಗೆ ಇದ್ದರು. ಸೌಲನು ಸೈನ್ಯದಲ್ಲಿದ್ದ ಇತರರನ್ನು ಅವರವರ ಮನೆಗಳಿಗೆ ಮರಳಿ ಕಳುಹಿಸಿದನು.


ಯೆಹೋವನು ಯೋಸೇಫನ ಸಂಗಡವಿದ್ದು ಅವನ ಎಲ್ಲಾ ಕೆಲಸಕಾರ್ಯಗಳನ್ನು ಯಶಸ್ವಿಗೊಳಿಸುತ್ತಿದ್ದದ್ದರಿಂದ ಮುಖ್ಯಾಧಿಕಾರಿಯು ಎಲ್ಲಾ ವಿಷಯಗಳನ್ನು ಯೋಸೇಫನಿಗೆ ವಹಿಸಿ ನಿಶ್ಚಿಂತೆಯಾಗಿದ್ದನು.


ಸೌಲನು ತನ್ನ ಜೀವಮಾನವೆಲ್ಲ ಶೌರ್ಯದಿಂದ ಫಿಲಿಷ್ಟಿಯರ ವಿರುದ್ಧ ತೀವ್ರವಾಗಿ ಹೋರಾಡಿದನು. ಸೌಲನು ವೀರನನ್ನಾಗಲಿ ಧೈರ್ಯಶಾಲಿಯನ್ನಾಗಲಿ ಯಾವಾಗಲಾದರೂ ನೋಡಿದರೆ, ಅಂತಹವರನ್ನು ಸೈನ್ಯಕ್ಕೆ ತೆಗೆದುಕೊಂಡು, ಅವರನ್ನು ರಾಜನ ಅಂಗರಕ್ಷಕ ಪಡೆಗೆ ಸೇರಿಸಿಕೊಳ್ಳುತ್ತಿದ್ದನು.


ಯೋನಾತಾನನು ತಾನು ಧರಿಸಿದ್ದ ಮೇಲಂಗಿಯನ್ನೂ ತನ್ನ ಸಮವಸ್ತ್ರಗಳನ್ನೂ ತನ್ನ ಬಿಲ್ಲನ್ನೂ ಕತ್ತಿಯನ್ನೂ ಸೊಂಟಪಟ್ಟಿಯನ್ನೂ ದಾವೀದನಿಗೆ ಕೊಟ್ಟನು.


ದಾವೀದನು ಫಿಲಿಷ್ಟಿಯರೊಡನೆ ಹೋರಾಡಲು ಹೋಗುತ್ತಿದ್ದನು. ಯುದ್ಧದ ನಂತರ ಅವನು ಮನೆಗೆ ಹಿಂದಿರುಗುತ್ತಿದ್ದನು. ಇಸ್ರೇಲಿನ ಎಲ್ಲ ಪಟ್ಟಣಗಳಲ್ಲೂ ಹೆಂಗಸರು ದಾವೀದನನ್ನು ನೋಡುವುದಕ್ಕಾಗಿ ಹೊರಬರುತ್ತಿದ್ದರು. ಅವರು ಡೋಲು ಮುಂತಾದ ವಾದ್ಯಗಳನ್ನು ಬಾರಿಸುತ್ತಾ ಕೇಕೆ ಹಾಕಿ ನಗುತ್ತಾ ನರ್ತಿಸುತ್ತಿದ್ದರು. ಅವರು ಸೌಲನ ಸಮ್ಮುಖದಲ್ಲಿಯೇ ಇವನ್ನೆಲ್ಲ ಮಾಡುತ್ತಿದ್ದರು.


ಆದರೆ ಇಸ್ರೇಲಿನ ಮತ್ತು ಯೆಹೂದದ ಜನರೆಲ್ಲ ದಾವೀದನನ್ನು ಪ್ರೀತಿಸಿದರು. ಅವನು ಯುದ್ಧದಲ್ಲಿ ಅವರನ್ನು ಮುನ್ನಡೆಸಿದ್ದರಿಂದ ಮತ್ತು ಅವರಿಗೋಸ್ಕರ ಹೋರಾಡಿದ್ದರಿಂದ ಅವರು ಅವನನ್ನು ಬಹಳವಾಗಿ ಪ್ರೀತಿಸಿದರು.


ಹಿಂದಿನ ದಿನಗಳಲ್ಲಿ, ಸೌಲನು ರಾಜನಾಗಿದ್ದಾಗಲೂ ನಮ್ಮನ್ನು ಯುದ್ಧದಲ್ಲಿ ಮುನ್ನಡೆಸಿದವನು ನೀನೇ. ಯೆಹೋವನು ನಿನ್ನನ್ನು ಕುರಿತು, ‘ನೀನು ನನ್ನ ಜನರಾದ ಇಸ್ರೇಲರ ನಾಯಕನೂ ಪಾಲಕನೂ ಆಗಿರುವೆ’ ಎಂದು ಹೇಳಿದ್ದಾನೆ” ಎಂದರು.


ನಾನು ಎಚ್ಚರಿಕೆಯಿಂದ ಪರಿಶುದ್ಧನಾಗಿ ಜೀವಿಸುವೆನು; ನನ್ನ ಮನೆಯಲ್ಲೂ ಪರಿಶುದ್ಧನಾಗಿರುವೆನು. ನೀನು ನನ್ನ ಬಳಿಗೆ ಬರುವುದು ಯಾವಾಗ?


ಯೆಹೂದ್ಯರು ಯುದ್ಧಮಾಡುವಾಗ ಯೆಹೋವನು ಅವರ ಸಂಗಡ ಇದ್ದುದರಿಂದ ಅವರು ಬೆಟ್ಟಪ್ರದೇಶವನ್ನೆಲ್ಲಾ ಸ್ವಾಧೀನಪಡಿಸಿಕೊಂಡರು. ಆದರೆ ಕಣಿವೆಯಲ್ಲಿ ವಾಸ ಮಾಡುತ್ತಿದ್ದ ಜನರಲ್ಲಿ ಕಬ್ಬಿಣದ ರಥಗಳಿದ್ದದರಿಂದ ಯೆಹೂದ್ಯರು ಅವರನ್ನು ಸೋಲಿಸಲಾಗಲಿಲ್ಲ.


ಯೆಹೋವನು ಸಮುವೇಲನ ಸಂಗಡವಿದ್ದನು; ಸಮುವೇಲನು ಬೆಳೆದು ದೊಡ್ಡವನಾದನು; ಸಮುವೇಲನ ಯಾವ ಸಂದೇಶವೂ ಸುಳ್ಳಾಗದಂತೆ ಯೆಹೋವನು ನೋಡಿಕೊಂಡನು.


ಸರ್ವಶಕ್ತನಾದ ಯೆಹೋವನು ದಾವೀದನೊಂದಿಗೆ ಇದ್ದುದರಿಂದ ಅವನು ಬಲಶಾಲಿಯಾಗುತ್ತಲೇ ಇದ್ದನು.


ಯೆಹೋವನು ಯೆಹೋಷಾಫಾಟನೊಂದಿಗೆ ಇದ್ದನು; ಯಾಕೆಂದರೆ ಯೆಹೋಷಾಫಾಟನು ತನ್ನ ಯೌವನ ಕಾಲದಲ್ಲಿಯೇ ತನ್ನ ಪೂರ್ವಿಕನಾದ ದಾವೀದನಂತೆ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿ ಜೀವಿಸಿದನು. ಅವನು ಬಾಳನ ಪೂಜೆಯನ್ನು ಮಾಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು