1 ಸಮುಯೇಲ 18:7 - ಪರಿಶುದ್ದ ಬೈಬಲ್7 ಹೆಂಗಸರು, “ಸೌಲನು ಸಾವಿರಾರು ಶತ್ರುಗಳನ್ನು ಕೊಂದರೆ, ದಾವೀದನು ಲಕ್ಷಾಂತರ ಶತ್ರುಗಳನ್ನು ಕೊಂದನು” ಎಂದು ಹಾಡುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅವರು ಹಾಡುತ್ತಾ, ಕೊಂಡಾಡುತ್ತಾ, “ಸೌಲನು ಸಾವಿರ ಶತ್ರುಗಳನ್ನು ಕೊಂದನು. ದಾವೀದನು ಹತ್ತು ಸಾವಿರಾರು ಶತ್ರುಗಳನ್ನು ಕೊಂದನು” ಎಂದು ಹಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅವರು: ಸೌಲನು ಕೊಂದನು ಸಾವಿರಗಟ್ಟಳೆ ದಾವೀದನೋ ಕೊಂದನು ಹತ್ತುಸಾವಿರಗಟ್ಟಳೆ,” ಎಂದು ಪರಸ್ಪರ ಹಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅವರು ಪರಸ್ಪರವಾಗಿ - ಸೌಲನು ಸಾವಿರಗಟ್ಟಳೆಯಾಗಿ ಕೊಂದನು; ದಾವೀದನು ಹತ್ತು ಸಾವಿರಗಟ್ಟಳೆಯಾಗಿ ಕೊಂದನು ಎಂದು ಹಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆ ಸ್ತ್ರೀಯರು ಒಬ್ಬರಿಗೊಬ್ಬರು, “ಸೌಲನು ಸಾವಿರಗಳಷ್ಟು ಕೊಂದನು, ದಾವೀದನು ಹತ್ತು ಸಾವಿರಗಳಷ್ಟು ಕೊಂದನು,” ಎಂದು ಹಾಡಿದರು. ಅಧ್ಯಾಯವನ್ನು ನೋಡಿ |
ಆದರೆ ಅವರು, “ಬೇಡ, ನೀನು ನಮ್ಮ ಜೊತೆ ಬರುವುದು ಬೇಡ. ಏಕೆಂದರೆ ನಾವು ಯುದ್ಧರಂಗದಿಂದ ಓಡಿಹೋಗಿಬಿಟ್ಟರೆ, ಅಬ್ಷಾಲೋಮನ ಜನರು ಲಕ್ಷಿಸುವುದಿಲ್ಲ. ನಮ್ಮಲ್ಲಿ ಅರ್ಧದಷ್ಟು ಜನರು ಸತ್ತರೂ, ಅಬ್ಷಾಲೋಮನ ಜನರು ಲಕ್ಷಿಸುವುದಿಲ್ಲ. ಆದರೆ ನೀನು ನಮ್ಮ ಹತ್ತು ಸಾವಿರ ಜನರಷ್ಟು ಬೆಲೆಯುಳ್ಳವನಾಗಿರುವೆ! ನೀನು ನಗರದಲ್ಲಿರುವುದೇ ಉತ್ತಮ. ಅಲ್ಲಿಂದಲೇ ನೀನು ನಮಗೆ ಸಹಾಯ ಮಾಡಬಹುದು” ಎಂದು ಹೇಳಿದರು.