Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 18:8 - ಪರಿಶುದ್ದ ಬೈಬಲ್‌

8 ಹೆಂಗಸರ ಈ ಹಾಡಿನಿಂದ ಸೌಲನು ಬಹಳವಾಗಿ ವ್ಯಸನಗೊಂಡನು ಮತ್ತು ರೋಷಗೊಂಡನು. “ದಾವೀದನು ಲಕ್ಷಾಂತರ ಶತ್ರುಗಳನ್ನು ಕೊಂದನು ಎಂದು ಇವರು ಹಾಡುತ್ತಾರಲ್ಲಾ, ಇವನಿಗೆ ರಾಜ್ಯವೊಂದನ್ನು ಬಿಟ್ಟು ಬೇರೆ ಏನು ಕಡಿಮೆಯಾಯಿತು?” ಎಂದು ಆಲೋಚಿಸತೊಡಗಿದನು. “ಸೌಲನು ಸಾವಿರಾರು ಶತ್ರುಗಳನ್ನು ಕೊಂದನು” ಎಂದು ಹಾಡಿದ ಹೆಂಗಸರ ಮಾತುಗಳಿಂದ ಸೌಲನು ಚಿಂತೆಗೀಡಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಈ ಮಾತುಗಳ ದೆಸೆಯಿಂದ ಸೌಲನಿಗೆ ಬಹು ಅಸೂಯೆ ಉಂಟಾಗಿ ದಾವೀದನ ಮೇಲೆ ಕೋಪಗೊಂಡನು. ಅವನು “ದಾವೀದನು ಹತ್ತು ಸಾವಿರಾರು ಶತ್ರುಗಳನ್ನು ಕೊಂದನೆಂದೂ, ನಾನು ಸಾವಿರಾರು ಶತ್ರುಗಳನ್ನು ಕೊಂದೆನೆಂದೂ ಹಾಡುತ್ತಾರಲ್ಲಾ, ರಾಜತ್ವದ ಹೊರತು ಅವನಿಗೆ ಇನ್ನೇನು ಕಡಿಮೆಯಾಯಿತು” ಅಂದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಈ ಮಾತುಗಳು ಸೌಲನಿಗೆ ಹಿಡಿಸಲಿಲ್ಲ. ಅವನು ಕೋಪದಿಂದ, “ದಾವೀದನು ಹತ್ತು ಸಾವಿರಗಟ್ಟಳೆ ಕೊಂದನೆಂದೂ ನಾನು ಸಾವಿರಗಟ್ಟಳೆ ಮಾತ್ರ ಕೊಂದೆನೆಂದು ಹಾಡುತ್ತಾರಲ್ಲಾ! ಹಾಗಾದರೆ ಅವನನ್ನು ರಾಜನನ್ನಾಗಿ ಮಾಡುವುದೊಂದೇ ಕಡಿಮೆ!” ಎಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಈ ಮಾತುಗಳ ದೆಸೆಯಿಂದ ಸೌಲನಿಗೆ ಬಹುವ್ಯಸನವೂ ಕೋಪವೂ ಉಂಟಾಗಿ ಅವನು - ದಾವೀದನು ಹತ್ತು ಸಾವಿರ ಗಟ್ಟಳೆಯಾಗಿ ಕೊಂದನೆಂದೂ ನಾನು ಸಾವಿರಗಟ್ಟಳೆಯಾಗಿ ಕೊಂದೆನೆಂದೂ ಹಾಡುತ್ತಾರಲ್ಲಾ! ರಾಜತ್ವದ ಹೊರತು ಅವನಿಗೆ ಇನ್ನೇನು ಕಡಿಮೆಯಾದ ಹಾಗಾಯಿತು ಅಂದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಇದರಿಂದ ಸೌಲನಿಗೆ ಬಹು ಕೋಪವಾಯಿತು. ಆ ಹಾಡಿನಿಂದ ಅವನಿಗೆ ಬಹುಬೇಸರವಾಯಿತು. “ಇವರು ದಾವೀದನಿಗೆ ಹತ್ತು ಸಾವಿರಗಳಷ್ಟು ಎಂದು ಹಾಡಿದ್ದಾರೆ; ನನಗೆ ಸಾವಿರಗಳಷ್ಟೇ ಎಂದು ಹಾಡಿದ್ದಾರೆ; ಹಾಗಾದರೆ, ಅವನಿಗೆ ರಾಜ್ಯವಲ್ಲದೆ ಇನ್ನು ಆಗಬೇಕಾದದ್ದೇನು?” ಎಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 18:8
16 ತಿಳಿವುಗಳ ಹೋಲಿಕೆ  

ಆಗ ಸಮುವೇಲನು ಸೌಲನಿಗೆ, “ನೀನು ನನ್ನ ಮೇಲಂಗಿಯನ್ನು ಹರಿದುಹಾಕಿದೆ. ಇದೇರೀತಿ ಯೆಹೋವನು ಈ ದಿನ ನಿನ್ನಿಂದ ಇಸ್ರೇಲ್ ರಾಜ್ಯವನ್ನು ಹರಿದುಹಾಕಿದನು. ನಿನ್ನ ಸ್ನೇಹಿತರಲ್ಲಿ ಒಬ್ಬನಿಗೆ ಯೆಹೋವನು ರಾಜ್ಯಾಧಿಕಾರವನ್ನು ಕೊಟ್ಟಿದ್ದಾನೆ. ಅವನು ನಿನಗಿಂತ ಉತ್ತಮ ವ್ಯಕ್ತಿ.


ದುರಾಭಿಮಾನವು ಕೇವಲ ಜಗಳಕ್ಕೆ ಕಾರಣ. ಬುದ್ಧಿವಾದವನ್ನು ಕೇಳುವವರು ವಿವೇಕಿಗಳಾಗಿದ್ದಾರೆ.


ಪವಿತ್ರ ಗ್ರಂಥವು ಅರ್ಥವಿಲ್ಲದ್ದೆಂದು ಯೋಚಿಸುವಿರಾ? “ದೇವರು ನಮ್ಮಲ್ಲಿ ಇರಿಸಿರುವ ಆತ್ಮದ ಅಪೇಕ್ಷೆಯೇನೆಂದರೆ, ನಾವು ಆತನಿಗೋಸ್ಕರ ಮಾತ್ರ ಇರಬೇಕೆಂದಷ್ಟೆ” ಎಂದು ಪವಿತ್ರ ಗ್ರಂಥವು ಹೇಳುತ್ತದೆ.


ಮೊರ್ದೆಕೈ ತನಗೆ ಅಡ್ಡಬೀಳದಿರುವುದರಿಂದ ಮತ್ತು ಗೌರವಿಸದಿರುವುದರಿಂದ ಹಾಮಾನನು ಬಹಳ ಕೋಪಗೊಂಡನು.


ಇಷಯನ ಮಗ ಬದುಕಿರುವವರೆಗೆ ನೀನು ರಾಜನಾಗುವುದೇ ಇಲ್ಲ; ನಿನಗೆ ರಾಜ್ಯಾಧಿಕಾರವೂ ಸಿಗುವುದಿಲ್ಲ. ಈಗ ದಾವೀದನನ್ನು ಕರೆದುಕೊಂಡು ಬಾ! ಅವನೊಬ್ಬ ಸತ್ತಮನುಷ್ಯ!” ಎಂದು ಹೇಳಿದನು.


ಕೋಪವು ಕ್ರೂರ; ಅದು ಪ್ರವಾಹದಂತೆ ನಾಶಕರ. ಹೊಟ್ಟೆಕಿಚ್ಚು ಅದಕ್ಕಿಂತಲೂ ನಾಶಕರ.


ಆಮೇಲೆ ನಾನು, “ಜನರು ಪ್ರಯಾಸಪಟ್ಟು ಕೆಲಸ ಮಾಡುವುದೇಕೆ?” ಎಂದು ಆಲೋಚಿಸಿದೆ. ಜನರು ಏಳಿಗೆ ಹೊಂದಲು ಮತ್ತು ಬೇರೆಯವರಿಗಿಂತ ಹೆಚ್ಚು ಅಭಿವೃದ್ಧಿಯಾಗಲು ಪ್ರಯತ್ನಿಸುವರು; ಅದಕ್ಕೆ ಅವರ ಮತ್ಸರವೇ ಕಾರಣ. ಇದೂ ಗಾಳಿಯನ್ನು ಹಿಂದಟ್ಟಿದ್ದ ಹಾಗೆ ವ್ಯರ್ಥ.


ರಾಜನಾದ ಸೊಲೊಮೋನನು ತನ್ನ ತಾಯಿಗೆ, “ಅಬೀಷಗಳನ್ನು ಅವನಿಗೆ ಕೊಡು ಎಂಬುದಾಗಿ ನೀನೇಕೆ ನನ್ನನ್ನು ಕೇಳುತ್ತಿರುವೆ? ಅವನು ನನ್ನ ಹಿರಿಯಣ್ಣನಾಗಿರುವುದರಿಂದ ಅವನನ್ನೇ ರಾಜನನ್ನಾಗಿ ಮಾಡೆಂದು ನೀನು ಕೇಳದಿರುವುದೇಕೆ? ಯಾಜಕನಾದ ಎಬ್ಯಾತಾರನೂ ಯೋವಾಬನೂ ಅವನಿಗೆ ಬೆಂಬಲವನ್ನು ನೀಡಿದರು!” ಎಂದು ಉತ್ತರಿಸಿದನು.


ಸಮುವೇಲನು ಎಣ್ಣೆಯಿದ್ದ ಕೊಂಬನ್ನು ತೆಗೆದುಕೊಂಡು, ಅದರಲ್ಲಿದ್ದ ವಿಶೇಷವಾದ ಎಣ್ಣೆಯನ್ನು ಇಷಯನ ಕಿರಿಮಗನ ಮೇಲೆ, ಅವನ ಸೋದರರ ಎದುರಿನಲ್ಲೇ ಸುರಿದನು. ಆ ದಿನದಿಂದ ಯೆಹೋವನ ಆತ್ಮವು ಮಹಾಶಕ್ತಿಯೊಡನೆ ದಾವೀದನಲ್ಲಿ ನೆಲೆಸಿತು. ಅನಂತರ ಸಮುವೇಲನು ರಾಮಕ್ಕೆ ಹಿಂದಿರುಗಿದನು.


ಆದರೆ ಈಗ ನಿನ್ನ ಆಳ್ವಿಕೆಯು ಮುಂದುವರಿಯುವುದಿಲ್ಲ. ಯೆಹೋವನು ತನಗೆ ವಿಧೇಯನಾಗಿರುವಂತಹ ಮನುಷ್ಯನಿಗಾಗಿ ಹುಡುಕುತ್ತಿದ್ದನು. ಯೆಹೋವನಿಗೆ ಅಂತಹ ಮನುಷ್ಯನು ಸಿಕ್ಕಿದ್ದಾನೆ. ತನ್ನ ಜನರನ್ನು ಆಳಲು ಯೆಹೋವನು ಅವನನ್ನು ಹೊಸ ನಾಯಕನನ್ನಾಗಿ ನೇಮಿಸುತ್ತಾನೆ. ನೀನು ಯೆಹೋವನ ಆಜ್ಞೆಗೆ ವಿಧೇಯನಾಗಲಿಲ್ಲ. ಆದ್ದರಿಂದ ಯೆಹೋವನು ಹೊಸ ನಾಯಕನನ್ನು ಆರಿಸಿಕೊಳ್ಳುವನು” ಎಂದು ಹೇಳಿದನು.


ಆಗ ಬಿಳಾಮನು ಯೆಹೋವನ ದೂತನಿಗೆ, “ನಾನು ಪಾಪ ಮಾಡಿದ್ದೇನೆ. ನೀನು ದಾರಿಯಲ್ಲಿ ನಿಂತುಕೊಂಡಿರುವುದು ನನಗೆ ಗೊತ್ತಾಗಲಿಲ್ಲ. ನನ್ನ ಪ್ರಯಾಣವು ನಿನಗೆ ಮೆಚ್ಚಿಕೆಯಾಗಿಲ್ಲದಿದ್ದರೆ, ನಾನು ಮನೆಗೆ ಹಿಂತಿರುಗುವೆನು” ಎಂದು ಹೇಳಿದನು.


ಜನರು ತಮಗೆ ತೊಂದರೆ ಉಂಟಾಯಿತೆಂದು ಗಟ್ಟಿಯಾಗಿ ಗುಣುಗುಟ್ಟಿದರು. ಅದನ್ನು ಯೆಹೋವನು ಕೇಳಿ ಕೋಪಗೊಂಡನು. ಯೆಹೋವನಿಂದ ಬಂದ ಬೆಂಕಿ ಅವರ ವಿರುದ್ಧವಾಗಿ ಹೊತ್ತಿಕೊಂಡದ್ದರಿಂದ ಪಾಳೆಯದ ಹೊರಭಾಗದಲ್ಲಿದ್ದವರು ಸುಟ್ಟುಹೋದರು.


ಸೌಲನು ಅಂದಿನಿಂದ ದಾವೀದನನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದನು.


ಸೌಲನು ತನ್ನ ಮಗನಾದ ಯೋನಾತಾನನಿಗೂ ತನ್ನ ಅಧಿಕಾರಿಗಳಿಗೂ ದಾವೀದನನ್ನು ಕೊಂದು ಹಾಕಲು ತಿಳಿಸಿದನು. ಆದರೆ ಯೋನಾತಾನನು ದಾವೀದನನ್ನು ಬಹಳ ಇಷ್ಟಪಡುತ್ತಿದ್ದನು.


ಅವನ ಅಣ್ಣಂದಿರು, “ನೀನು ರಾಜನಾಗಿ ನಮ್ಮನ್ನು ಆಳುವೆ ಎಂಬುದು ಇದರ ಅರ್ಥವೆಂದು ನಿನ್ನ ಆಲೋಚನೆಯೋ?” ಎಂದು ಪ್ರಶ್ನಿಸಿ ಆ ಕನಸಿನ ನಿಮಿತ್ತ ಅವನನ್ನು ಮತ್ತಷ್ಟು ದ್ವೇಷಿಸತೊಡಗಿದರು.


ಯೋಸೇಫನ ಅಣ್ಣಂದಿರಿಗೆ ಅವನ ಮೇಲೆ ಹೊಟ್ಟೆಕಿಚ್ಚು ಹೆಚ್ಚಾಯಿತು. ಆದರೆ ಯೋಸೇಫನ ತಂದೆಯು ಆ ಕನಸುಗಳ ಬಗ್ಗೆ ಆಶ್ಚರ್ಯಚಕಿತನಾಗಿ ಆಲೋಚಿಸತೊಡಗಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು