1 ಸಮುಯೇಲ 19:14 - ಪರಿಶುದ್ದ ಬೈಬಲ್14 ಸೌಲನು ದಾವೀದನನ್ನು ಬಂಧಿಸಿ ಕರೆತರಲು ಸಂದೇಶಕರನ್ನು ಕಳುಹಿಸಿದನು. ಆದರೆ ಮೀಕಲಳು, “ದಾವೀದನಿಗೆ ಹುಷಾರಿಲ್ಲ” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಸೌಲನ ದೂತರು ದಾವೀದನನ್ನು ಹಿಡಿಯುವುದಕ್ಕೆ ಬಂದಾಗ ಅವಳು ಅವನಿಗೆ ಸ್ವಸ್ಥವಿಲ್ಲವೆಂದು ಹೇಳಿಕಳುಹಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಸೌಲನ ದೂತರು ದಾವೀದನನ್ನು ಹಿಡಿಯುವುದಕ್ಕೆ ಬಂದಾಗ ಅವಳು, “ಅವರಿಗೆ ಮೈ ಚೆನ್ನಾಗಿಲ್ಲ,” ಎಂದು ಹೇಳಿ ಕಳುಹಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಸೌಲನ ದೂತರು ದಾವೀದನನ್ನು ಹಿಡಿಯುವದಕ್ಕೆ ಬಂದಾಗ ಅವಳು - ಅವನಿಗೆ ಸ್ವಸ್ಥವಿಲ್ಲವೆಂದು ಹೇಳಿ ಕಳುಹಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಸೌಲನು ದಾವೀದನನ್ನು ಹಿಡಿದುಕೊಂಡು ಬರಲು ದೂತರನ್ನು ಕಳುಹಿಸಿದಾಗ, ಮೀಕಲಳು ಅವರಿಗೆ, “ಅವನು ಖಾಯಿಲೆಯಲ್ಲಿದ್ದಾನೆ,” ಎಂದಳು. ಅಧ್ಯಾಯವನ್ನು ನೋಡಿ |
ಅಬ್ಷಾಲೋಮನ ಸೇವಕರು ಆ ಮನೆಯಲ್ಲಿದ್ದ ಹೆಂಗಸಿನ ಬಳಿಗೆ ಬಂದು, “ಅಹೀಮಾಚ್ ಮತ್ತು ಯೋನಾತಾನರು ಎಲ್ಲಿ?” ಎಂದು ಕೇಳಿದರು. ಆ ಸ್ತ್ರೀಯು ಅಬ್ಷಾಲೋಮನ ಸೇವಕರಿಗೆ, “ಅವರು ಈಗಾಗಲೇ ಹಳ್ಳವನ್ನು ದಾಟಿಹೋಗಿರಬೇಕು” ಎಂದಳು. ಆಗ ಅಬ್ಷಾಲೋಮನ ಸೇವಕರು ಯೋನಾತಾನ್ ಮತ್ತು ಅಹೀಮಾಚರನ್ನು ಹುಡುಕಲು ಹೋದರು. ಆದರೆ ಅವರು ಸೇವಕರಿಗೆ ಸಿಗಲಿಲ್ಲ. ಆದ್ದರಿಂದ ಅಬ್ಷಾಲೋಮನ ಸೇವಕರು ಜೆರುಸಲೇಮಿಗೆ ಹಿಂದಿರುಗಿದರು.