1 ಸಮುಯೇಲ 19:16 - ಪರಿಶುದ್ದ ಬೈಬಲ್16 ಸಂದೇಶಕರು ದಾವೀದನ ಮನೆಗೆ ಹೋದರು. ಅವರು ದಾವೀದನನ್ನು ಕರೆದೊಯ್ಯಲು ಒಳಗಡೆ ಹೋದಾಗ ಹಾಸಿಗೆಯ ಮೇಲಿರುವುದು ಕೇವಲ ವಿಗ್ರಹವೆಂಬುದೂ ಅದರ ಕೂದಲು ಕೇವಲ ಹೋತದ ಕೂದಲೆಂಬುದೂ ಅವರಿಗೆ ಗೊತ್ತಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅವರು ಹೋಗಿ ನೋಡಲು ಹಾಸಿಗೆಯ ಮೇಲಿರುವುದು ಮೇಕೆಕೂದಲಿನಿಂದ ಹೆಣೆದ ಜಾಲರಿಯ ಒಂದು ವಿಗ್ರಹ ಎಂದು ತಿಳಿದುಬಂತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅವರು ಹೋಗಿ ನೋಡಲು, ಮುಖದ ಕಡೆ ಮೇಕೆಕೂದಲಿನಿಂದ ಮಾಡಿದ ದಿಂಬಾಗಿತ್ತು. ಹಾಸಿಗೆಯ ಮೇಲಿದ್ದುದು ಒಂದು ಗೊಂಬೆಯೆಂದು ತಿಳಿದುಬಂದಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅವರು ಹೋಗಿ ನೋಡಲು ಮುಖದ ಮೇಲೆ ಮೇಕೆಕೂದಲಿನಿಂದ ಹೆಣೆದ ಜಾಲರಿಯುಳ್ಳದ್ದಾಗಿ ಹಾಸಿಗೆಯ ಮೇಲಿರುವದು ಒಂದು ಬೊಂಬೆಯೆಂದು ತಿಳಿದುಬಂದಾಗ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಹಾಗೆಯೇ ಸೇವಕರು ಬಂದು ಕಂಡಾಗ, ವಿಗ್ರಹವು ಮಂಚದ ಮೇಲೆ ಇತ್ತು. ಅದರ ತಲೆಗೆ ಒಂದು ಆಡಿನ ಉಣ್ಣೆಯ ತಲೆದಿಂಬು ಇತ್ತು. ಅಧ್ಯಾಯವನ್ನು ನೋಡಿ |