1 ಸಮುಯೇಲ 19:17 - ಪರಿಶುದ್ದ ಬೈಬಲ್17 ಸೌಲನು ಮೀಕಲಳಿಗೆ, “ನೀನು ಈ ರೀತಿ ನನಗೆ ಮೋಸ ಮಾಡಿದ್ದೇಕೆ? ನನ್ನ ಶತ್ರುವು ತಪ್ಪಿಸಿಕೊಳ್ಳಲು ನೀನು ಅವಕಾಶ ಮಾಡಿಕೊಟ್ಟೆ! ದಾವೀದನು ಓಡಿಹೋದನಲ್ಲಾ!” ಎಂದು ಹೇಳಿದನು. ಮೀಕಲಳು ಸೌಲನಿಗೆ, “ತಪ್ಪಿಸಿಕೊಳ್ಳಲು ತನಗೆ ಸಹಾಯ ಮಾಡದಿದ್ದರೆ ನನ್ನನ್ನು ಕೊಲ್ಲುವುದಾಗಿ ದಾವೀದನು ತಿಳಿಸಿದ!” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆಗ ಸೌಲನು ಮೀಕಲಳಿಗೆ, “ನೀನು ನನ್ನನ್ನು ವಂಚಿಸಿದ್ದೇಕೆ? ನನ್ನ ಶತ್ರುವನ್ನು ಕಳುಹಿಸಿ ಅವನು ತಪ್ಪಿಸಿಕೊಳ್ಳುವಂತೆ ಮಾಡಿದಿಯಲ್ಲಾ” ಎನ್ನಲು ಆಕೆಯು ಅವನಿಗೆ, “ನನ್ನನ್ನು ಕಳುಹಿಸದಿದ್ದರೆ ನಿನ್ನನ್ನು ಕೊಂದುಬಿಡುತ್ತೇನೆ ಎಂದು ಅವನು ನನಗೆ ಹೇಳಿದನು” ಅಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಸೌಲನು ಮೀಕಳಿಗೆ, “ನೀನು ನನ್ನನ್ನು ವಂಚಿಸಿದ್ದೇಕೆ? ನನ್ನ ಶತ್ರುವನ್ನು ಕಳುಹಿಸಿ ಅವನು ತಪ್ಪಿಸಿಕೊಳ್ಳುವಂತೆ ಮಾಡಿದಿಯಲ್ಲವೆ?” ಎನ್ನಲು, ಆಕೆ ಅವನಿಗೆ, “’ನನ್ನನ್ನು ಕಳುಹಿಸದಿದ್ದರೆ ನಿನ್ನನ್ನು ಕೊಂದುಬಿಡುತ್ತೇನೆ’ ಎಂದು ಹೇಳಿದ,” ಎಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಸೌಲನು ಮೀಕಲಳಿಗೆ - ನೀನು ನನ್ನನ್ನು ವಂಚಿಸಿದ್ದೇಕೆ? ನನ್ನ ಶತ್ರುವನ್ನು ಕಳುಹಿಸಿ ಅವನು ತಪ್ಪಿಸಿಕೊಳ್ಳುವಂತೆ ಮಾಡಿದಿಯಲ್ಲಾ ಎನ್ನಲು ಆಕೆಯು ಅವನಿಗೆ - ನನ್ನನ್ನು ಕಳುಹಿಸದಿದ್ದರೆ ನಿನ್ನನ್ನು ಕೊಂದುಬಿಡುತ್ತೇನೆಂದು ಅವನು ನನಗೆ ಹೇಳಿದನು ಅಂದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆಗ ಸೌಲನು ಮೀಕಲಳಿಗೆ, “ನೀನು ಈ ಪ್ರಕಾರ ನನಗೆ ಮೋಸಮಾಡಿ, ನನ್ನ ಶತ್ರುವನ್ನು ಕಳುಹಿಸಿದ್ದೇನು? ಅವನು ತಪ್ಪಿಸಿಕೊಂಡನಲ್ಲಾ,” ಎಂದನು. ಆಗ ಮೀಕಲಳು ಸೌಲನಿಗೆ ಉತ್ತರವಾಗಿ, “ಅವನು ನನಗೆ, ‘ನಾನು ನಿನ್ನನ್ನು ಕೊಂದು ಹಾಕುವುದು ಏಕೆ? ನನ್ನನ್ನು ಹೋಗಗೊಡಿಸು,’ ಎಂದು ಹೇಳಿದನು,” ಎಂದಳು. ಅಧ್ಯಾಯವನ್ನು ನೋಡಿ |
ಜ್ಞಾನಿಗಳು ತನಗೆ ಮೋಸಮಾಡಿದರೆಂಬುದು ತಿಳಿದಾಗ ಹೆರೋದನು ಬಹಳ ಕೋಪಗೊಂಡನು. ಆ ಮಗು ಹುಟ್ಟಿದ ಸಮಯವನ್ನು ಹೆರೋದನು ಜ್ಞಾನಿಗಳಿಂದ ತಿಳಿದುಕೊಂಡಿದ್ದನು. ಆ ಮಗು ಹುಟ್ಟಿ ಎರಡು ವರ್ಷಗಳಾಗಿದ್ದವು. ಆದ್ದರಿಂದ ಹೆರೋದನು ಬೆತ್ಲೆಹೇಮಿನಲ್ಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿದ್ದ ಎರಡು ವರ್ಷದ ಮತ್ತು ಅವರಿಗಿಂತ ಚಿಕ್ಕವರಾದ ಗಂಡುಮಕ್ಕಳನ್ನೆಲ್ಲಾ ಕೊಲ್ಲಬೇಕೆಂದು ಆಜ್ಞಾಪಿಸಿದನು.
ಅಬ್ಷಾಲೋಮನ ಸೇವಕರು ಆ ಮನೆಯಲ್ಲಿದ್ದ ಹೆಂಗಸಿನ ಬಳಿಗೆ ಬಂದು, “ಅಹೀಮಾಚ್ ಮತ್ತು ಯೋನಾತಾನರು ಎಲ್ಲಿ?” ಎಂದು ಕೇಳಿದರು. ಆ ಸ್ತ್ರೀಯು ಅಬ್ಷಾಲೋಮನ ಸೇವಕರಿಗೆ, “ಅವರು ಈಗಾಗಲೇ ಹಳ್ಳವನ್ನು ದಾಟಿಹೋಗಿರಬೇಕು” ಎಂದಳು. ಆಗ ಅಬ್ಷಾಲೋಮನ ಸೇವಕರು ಯೋನಾತಾನ್ ಮತ್ತು ಅಹೀಮಾಚರನ್ನು ಹುಡುಕಲು ಹೋದರು. ಆದರೆ ಅವರು ಸೇವಕರಿಗೆ ಸಿಗಲಿಲ್ಲ. ಆದ್ದರಿಂದ ಅಬ್ಷಾಲೋಮನ ಸೇವಕರು ಜೆರುಸಲೇಮಿಗೆ ಹಿಂದಿರುಗಿದರು.