1 ಸಮುಯೇಲ 19:22 - ಪರಿಶುದ್ದ ಬೈಬಲ್22 ಕಡೆಯದಾಗಿ ಸೌಲನೇ ರಾಮಕ್ಕೆ ಹೋದನು. ಸೇಕೂವಿನಲ್ಲಿ ಕಣದ ಬಳಿ ಇರುವ ದೊಡ್ಡ ಬಾವಿಯ ಸಮೀಪಕ್ಕೆ ಅವನು ಬಂದು, “ಸಮುವೇಲ ಮತ್ತು ದಾವೀದ ಎಲ್ಲಿದ್ದಾರೆ?” ಎಂದು ಕೇಳಿದನು. ಜನರು, “ರಾಮದ ಹತ್ತಿರವಿರುವ ಪಾಳೆಯದಲ್ಲಿದ್ದಾರೆ” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆಗ ಸೌಲನು ತಾನೇ ರಾಮಕ್ಕೆ ಹೋಗಬೇಕೆಂದು ಹೊರಟು, ಸೇಕೂವಿನಲ್ಲಿರುವ ದೊಡ್ಡ ಬಾವಿಯ ಬಳಿಗೆ ಬಂದು, “ಸಮುವೇಲ ದಾವೀದರು ಎಲ್ಲಿರುತ್ತಾರೆ?” ಎಂದು ವಿಚಾರಿಸಿದನು. ಆಗ ಜನರು, “ರಾಮದ ನಯೋತಿನಲ್ಲಿ ಇರುತ್ತಾರೆ” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಆಗ ಸೌಲನು ತಾನೇ ರಾಮಾಕ್ಕೆ ಹೋಗಬೇಕೆಂದು ಹೊರಟು ಸೇಕೂವಿನಲ್ಲಿರುವ ದೊಡ್ಡ ಬಾವಿಯ ಬಳಿಗೆ ಬಂದು, “ಸಮುವೇಲ ಹಾಗು ದಾವೀದನು ಎಲ್ಲಿರುತ್ತಾರೆ?” ಎಂದು ವಿಚಾರಿಸಿದನು. ಜನರು, “ರಾಮಾದ ಮಠದಲ್ಲಿ ಇದ್ದಾರೆ,” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಆಗ ಸೌಲನು ತಾನೇ ರಾಮಕ್ಕೆ ಹೋಗಬೇಕೆಂದು ಹೊರಟು ಸೇಕೂವಿನಲ್ಲಿರುವ ದೊಡ್ಡ ಬಾವಿಯ ಬಳಿಗೆ ಬಂದು ಸಮುವೇಲ ದಾವೀದರು ಎಲ್ಲಿರುತ್ತಾರೆಂದು ವಿಚಾರಿಸಲು ಜನರು - ರಾಮದ ಮಠದಲ್ಲಿದ್ದಾರೆಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆಗ ಸೌಲನು ತಾನೇ ರಾಮಕ್ಕೆ ಹೋದನು. ಸೇಕೂವಿನಲ್ಲಿರುವ ದೊಡ್ಡ ಬಾವಿಯ ಬಳಿಗೆ ಬಂದು, ಸಮುಯೇಲನೂ ದಾವೀದನೂ ಎಲ್ಲಿದ್ದಾರೆ ಎಂದು ಕೇಳಿದನು. ಆಗ ಒಬ್ಬನು, “ಅವರು ರಾಮದ ನಯೋತಿನಲ್ಲಿದ್ದಾರೆ,” ಎಂದನು. ಅಧ್ಯಾಯವನ್ನು ನೋಡಿ |