1 ಸಮುಯೇಲ 19:4 - ಪರಿಶುದ್ದ ಬೈಬಲ್4 ಯೋನಾತಾನನು ತನ್ನ ತಂದೆಯಾದ ಸೌಲನೊಂದಿಗೆ ಮಾತನಾಡಿದನು. ಯೋನಾತಾನನು ದಾವೀದನ ಬಗ್ಗೆ ಒಳ್ಳೆಯ ಸಂಗತಿಗಳನ್ನು ತಿಳಿಸಿದನು. ಯೋನಾತಾನನು, “ನೀನು ರಾಜ. ದಾವೀದನು ನಿನ್ನ ಸೇವಕ. ದಾವೀದನು ನಿನಗೆ ಯಾವ ಕೇಡನ್ನೂ ಮಾಡಿಲ್ಲ. ಆದ್ದರಿಂದ ಅವನಿಗೆ ಯಾವ ಕೇಡನ್ನೂ ಮಾಡಬೇಡ. ದಾವೀದನು ನಿನಗೆ ಯಾವಾಗಲೂ ಒಳ್ಳೆಯವನಾಗಿಯೇ ಇದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ತರುವಾಯ ಅವನು ತನ್ನ ತಂದೆಯ ಮುಂದೆ ದಾವೀದನನ್ನು ಹೊಗಳಿ, “ಒಡೆಯನು ತನ್ನ ಸೇವಕನಾದ ದಾವೀದನಿಗೆ ಅನ್ಯಾಯ ಮಾಡದಿರಲಿ. ಅವನು ನಿನಗೆ ದ್ರೋಹ ಮಾಡಲಿಲ್ಲ. ಅವನು ಮಾಡಿದ್ದೆಲ್ಲವೂ ನಿನ್ನ ಹಿತಕ್ಕಾಗಿಯೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ತರುವಾಯ ಅವನು ತನ್ನ ತಂದೆಯ ಮುಂದೆ ದಾವೀದನನ್ನು ಹೊಗಳಿದನು. “ಒಡೆಯರಾದ ತಾವು ತಮ್ಮ ಸೇವಕ ದಾವೀದನಿಗೆ ಅನ್ಯಾಯ ಮಾಡಬಾರದು; ಅವನು ನಿಮಗೆ ದ್ರೋಹ ಮಾಡಲಿಲ್ಲ; ಅವನು ಮಾಡಿದ್ದೆಲ್ಲವು ನಿಮ್ಮ ಹಿತಕ್ಕಾಗಿಯೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ತರುವಾಯ ಅವನು ತನ್ನ ತಂದೆಯ ಮುಂದೆ ದಾವೀದನನ್ನು ಹೊಗಳಿ - ಒಡೆಯನು ತನ್ನ ಸೇವಕನಾದ ದಾವೀದನಿಗೆ ಅನ್ಯಾಯಮಾಡದಿರಲಿ; ಅವನು ನಿನಗೆ ದ್ರೋಹಮಾಡಲಿಲ್ಲ; ಅವನು ಮಾಡಿದ್ದೆಲ್ಲವೂ ನಿನ್ನ ಹಿತಕ್ಕಾಗಿಯೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಹಾಗೆಯೇ ಯೋನಾತಾನನು ತನ್ನ ತಂದೆ ಸೌಲನ ಸಂಗಡ ದಾವೀದನನ್ನು ಕುರಿತು ಒಳ್ಳೆಯದನ್ನು ಮಾತನಾಡಿ ಅವನಿಗೆ, “ಅರಸನು ತನ್ನ ಸೇವಕನಾದ ದಾವೀದನಿಗೆ ದ್ರೋಹಮಾಡದೆ ಇರಲಿ. ಏಕೆಂದರೆ ಅವನು ನಿನಗೆ ದ್ರೋಹಮಾಡಲಿಲ್ಲ. ಅವನು ಮಾಡಿದ್ದೆಲ್ಲವೂ ನಿನ್ನ ಹಿತಕ್ಕಾಗಿಯೇ. ಅಧ್ಯಾಯವನ್ನು ನೋಡಿ |