Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 19:5 - ಪರಿಶುದ್ದ ಬೈಬಲ್‌

5 ದಾವೀದನು ಫಿಲಿಷ್ಟಿಯನಾದ ಗೊಲ್ಯಾತನನ್ನು ಕೊಂದಾಗ ತನ್ನ ಜೀವವನ್ನೇ ಪಣವಾಗಿಟ್ಟಿದ್ದನು. ಯೆಹೋವನು ಇಸ್ರೇಲರೆಲ್ಲರಿಗೂ ಬಹು ದೊಡ್ಡ ಜಯವನ್ನುಂಟುಮಾಡಿದನು. ನೀನು ಅದನ್ನು ನೋಡಿದೆ ಮತ್ತು ಸಂತೋಷಗೊಂಡೆ. ದಾವೀದನಿಗೆ ಕೇಡುಮಾಡಲು ನೀನು ಏಕೆ ಬಯಸಿರುವೆ? ಅವನು ನಿರಪರಾಧಿ. ಅವನನ್ನು ಕೊಲ್ಲಲು ಯಾವ ಕಾರಣವೂ ಇಲ್ಲ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ತನ್ನ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಹೋಗಿ ಫಿಲಿಷ್ಟಿಯನನ್ನು ಕೊಂದನು. ಯೆಹೋವನು ಇಸ್ರಾಯೇಲ್ಯರಿಗೆ ಮಹಾ ಜಯವನ್ನುಂಟುಮಾಡಿದನು. ನೀನು ಅದನ್ನು ನೋಡಿ ಸಂತೋಷಪಟ್ಟಿಯಲ್ಲಾ. ದಾವೀದನನ್ನು ನಿಷ್ಕರುಣೆಯಾಗಿ ಕೊಂದು, ನಿರಪರಾಧಿಯ ರಕ್ತವನ್ನು ಸುರಿಸಿ, ಅಪರಾಧಕ್ಕೆ ನೀನೇಕೆ ಗುರಿಯಾಗುತ್ತೀ?” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ತನ್ನ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಹೋಗಿ ಆ ಫಿಲಿಷ್ಟಿಯರನ್ನು ಕೊಂದನು; ಸರ್ವೇಶ್ವರ ಇಸ್ರಯೇಲರಿಗೆ ಮಹಾ ಜಯವನ್ನುಂಟುಮಾಡಿದರು. ನೀವೂ ಅದನ್ನು ನೋಡಿ ಸಂತೋಷಪಟ್ಟಿರಿ; ದಾವೀದನನ್ನು ನಿಷ್ಕಾರಣವಾಗಿ ಕೊಂದು ನಿರ್ದೋಷಿಯ ರಕ್ತವನ್ನು ಸುರಿಸಿ ಅಪರಾಧಕ್ಕೆ ನೀವೇಕೆ ಗುರಿ ಆಗುತ್ತೀರಿ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ತನ್ನ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಹೋಗಿ ಆ ಫಿಲಿಷ್ಟಿಯನನ್ನು ಕೊಂದನು; ಯೆಹೋವನು ಇಸ್ರಾಯೇಲ್ಯರಿಗೆ ಮಹಾಜಯವನ್ನುಂಟುಮಾಡಿದನು. ನೀನು ಅದನ್ನು ನೋಡಿ ಸಂತೋಷಪಟ್ಟಿಯಲ್ಲಾ; ದಾವೀದನನ್ನು ನಿಷ್ಕಾರಣವಾಗಿ ಕೊಂದು ನಿರ್ದೋಷಿಯ ರಕ್ತವನ್ನು ಸುರಿಸಿದ ಅಪರಾಧಕ್ಕೆ ನೀನೇಕೆ ಗುರಿಯಾಗುತ್ತೀ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವನು ತನ್ನ ಪ್ರಾಣವನ್ನು ತನ್ನ ಕೈಯಲ್ಲಿ ಹಿಡಿದುಕೊಂಡು ಫಿಲಿಷ್ಟಿಯನನ್ನು ಹೊಡೆದನು. ಯೆಹೋವ ದೇವರು ಸಮಸ್ತ ಇಸ್ರಾಯೇಲರಿಗೋಸ್ಕರ ದೊಡ್ಡ ರಕ್ಷಣೆಯನ್ನು ಉಂಟುಮಾಡಿದರು. ನೀನೂ ಕಂಡು ಸಂತೋಷಪಟ್ಟೆ. ಈಗ ಕಾರಣವಿಲ್ಲದೆ ದಾವೀದನನ್ನು ಕೊಂದು ನಿರ್ದೋಷಿಯ ರಕ್ತಕ್ಕೆ ವಿರೋಧವಾಗಿ ಅಪರಾಧವನ್ನು ಮಾಡುವುದೇಕೆ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 19:5
26 ತಿಳಿವುಗಳ ಹೋಲಿಕೆ  

ಆದರೆ ಆ ಮೂರು ಮಂದಿ ಪರಾಕ್ರಮಶಾಲಿಗಳು ಆ ಜವೆಗೋಧಿಯ ಹೊಲದಲ್ಲಿ ನಿಂತು ಕಾದಾಡಿದರು. ಫಿಲಿಷ್ಟಿಯರು ಸೋತುಹೋದರು. ಆ ದಿವಸ ಯೆಹೋವನು ಇಸ್ರೇಲರಿಗೆ ದೊಡ್ಡ ಜಯವನ್ನು ಉಂಟುಮಾಡಿದನು.


ಆದರೆ ಸೌಲನು, “ಯೆಹೋವನು ಇಸ್ರೇಲನ್ನು ರಕ್ಷಿಸಿದ್ದಾನೆ. ಈ ದಿನ ಯಾರನ್ನೂ ಕೊಲ್ಲುವುದು ಬೇಡ” ಎಂದು ಹೇಳಿದನು.


“ನಾನು ಪಾಪ ಮಾಡಿದೆ, ನಿರಪರಾಧಿಯನ್ನು ಕೊಲ್ಲಲು ನಿಮಗೆ ಒಪ್ಪಿಸಿಬಿಟ್ಟೆ” ಎಂದು ಹೇಳಿದನು. ಯೆಹೂದ್ಯ ನಾಯಕರು, “ಅದಕ್ಕೆ ನಾವೇನು ಮಾಡೋಣ! ಅದು ನಿನ್ನ ಸಮಸ್ಯೆ, ನಮ್ಮದಲ್ಲ!” ಎಂದು ಉತ್ತರಕೊಟ್ಟರು.


ಯೋನಾತಾನನು ತನ್ನ ತಂದೆಗೆ, “ದಾವೀದನನ್ನು ಏಕೆ ಕೊಲ್ಲಬೇಕು? ಅವನು ಮಾಡಿದ ತಪ್ಪಾದರೂ ಏನು?” ಎಂದು ಕೇಳಿದನು.


ಆದರೆ ನಿಮಗೆ ನಮ್ಮ ತಂದೆಯು ಏನು ಮಾಡಿದನೆಂಬುದನ್ನು ಯೋಚಿಸಿರಿ. ನಮ್ಮ ತಂದೆಯು ನಿಮಗೋಸ್ಕರ ಯುದ್ಧ ಮಾಡಿದನು. ಅವನು ಮಿದ್ಯಾನ್ಯರಿಂದ ನಿಮ್ಮನ್ನು ರಕ್ಷಿಸಲು ತನ್ನ ಜೀವವನ್ನು ಅಪಾಯಕ್ಕೆ ಒಡ್ಡಿದನು.


ನಾನು ನನ್ನ ಸ್ವಂತ ಪ್ರಾಣದ ಬಗ್ಗೆ ಚಿಂತಿಸುವುದಿಲ್ಲ. ಪ್ರಭುವಾದ ಯೇಸು ನನಗೆ ಕೊಟ್ಟಿರುವ ಕೆಲಸವನ್ನು ಪೂರೈಸುವುದೇ ನನಗೆ ಅತ್ಯಂತ ಮುಖ್ಯವಾಗಿದೆ. ದೇವರ ಕೃಪೆಯ ವಿಷಯವಾದ ಸುವಾರ್ತೆಯ ಬಗ್ಗೆ ಸಾಕ್ಷಿ ನೀಡುವುದೇ ನನ್ನ ಕೆಲಸವಾಗಿದೆ. ಆ ಕೆಲಸವನ್ನು ಮಾಡಿ ಪೂರೈಸುವುದೇ ನನ್ನ ಅಪೇಕ್ಷೆಯಾಗಿದೆ.


ನನ್ನ ಪ್ರಾಣವು ಯಾವಾಗಲೂ ಅಪಾಯದಲ್ಲಿದೆ. ಆದರೂ ನಾನು ನಿನ್ನ ಉಪದೇಶಗಳನ್ನು ಮರೆತುಬಿಟ್ಟಿಲ್ಲ.


ಆ ಹೆಂಗಸು ಸೌಲನ ಬಳಿಗೆ ಬಂದಳು. ಸೌಲನು ನಿಜವಾಗಿಯೂ ಭಯಗೊಂಡಿರುವುದನ್ನು ಅವಳು ನೋಡಿ, “ಇಲ್ಲಿ ನೋಡು, ನಾನು ನಿನ್ನ ಸೇವಕಿ. ನಾನು ನಿನಗೆ ವಿಧೇಯಳಾಗಿದ್ದೇನೆ. ನಾನು ನನ್ನ ಜೀವವನ್ನೇ ಕಡೆಗಣಿಸಿ ನೀನು ಹೇಳಿದ್ದನ್ನು ಮಾಡಿದೆ.


ಅವನು ಕ್ರಿಸ್ತನ ಕೆಲಸಕ್ಕಾಗಿ ಬಹುಮಟ್ಟಿಗೆ ತನ್ನ ಪ್ರಾಣವನ್ನೇ ಕೊಟ್ಟದ್ದರಿಂದ ಅವನಿಗೆ ಮಾನ್ಯತೆ ದೊರೆಯಬೇಕು. ನನಗೆ ಸಹಾಯಮಾಡಲು ಅವನು ತನ್ನ ಪ್ರಾಣವನ್ನೇ ಅಪಾಯಕ್ಕೆ ಈಡುಮಾಡಿಕೊಂಡನು. ಈ ರೀತಿಯ ಸಹಾಯ ಮಾಡಲು ನಿಮಗೆ ಸಾಧ್ಯವಾಗಲಿಲ್ಲ.


‘ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷಿಸಿದರು’ ಎಂದು ಅವರ ಧರ್ಮಶಾಸ್ತ್ರದಲ್ಲಿ ಬರೆದಿರುವ ಮಾತು ನಿಜವಾಗಲೆಂದು ಹೀಗಾಯಿತು.


ಜನರ ಮನಸ್ಸನ್ನು ಬದಲಾಯಿಸಲು ತನಗೆ ಸಾಧ್ಯವಿಲ್ಲವೆಂದೂ ಜನರು ಗಲಭೆ ಆರಂಭಿಸಲಿದ್ದಾರೆಂದೂ ತಿಳಿದುಕೊಂಡ ಪಿಲಾತನು ಸ್ವಲ್ಪ ನೀರನ್ನು ತೆಗೆದುಕೊಂಡು ಜನರೆಲ್ಲರ ಎದುರಿನಲ್ಲಿ ತನ್ನ ಕೈಗಳನ್ನು ತೊಳೆದುಕೊಳ್ಳುತ್ತಾ, “ಈ ಮನುಷ್ಯನ ಸಾವಿಗೆ ನಾನು ಜವಾಬ್ದಾರನಲ್ಲ. ಆತನನ್ನು ಶಿಲುಬೆಗೇರಿಸುತ್ತಿರುವವರು ನೀವೇ!” ಎಂದು ಹೇಳಿದನು.


ಆದರೆ ನೀವು ನನ್ನನ್ನು ಕೊಂದರೆ ಒಬ್ಬ ನಿರಪರಾಧಿಯನ್ನು ಕೊಂದದೋಷಕ್ಕೆ ಗುರಿಯಾಗುವಿರೆಂಬುದನ್ನು ಸ್ಪಷ್ಟವಾಗಿ ತಿಳಿದುಕೊಳ್ಳಿರಿ. ನೀವು ಈ ನಗರವನ್ನೂ ಇದರ ಪ್ರತಿಯೊಬ್ಬ ನಿವಾಸಿಯನ್ನೂ ಸಹ ದೋಷಿಗಳನ್ನಾಗಿ ಮಾಡುವಿರಿ. ನಿಜವಾಗಿಯೂ, ಯೆಹೋವನು ನನ್ನನ್ನು ನಿಮ್ಮಲ್ಲಿಗೆ ಕಳಿಸಿದ್ದಾನೆ. ನೀವು ಕೇಳಿದ ಸಂದೇಶವು ನಿಜವಾಗಿಯೂ ಯೆಹೋವನಿಂದ ಬಂದದ್ದು.”


ಶತ್ರುಗಳು ನನ್ನ ತಲೆಕೂದಲುಗಳಿಗಿಂತ ಹೆಚ್ಚಾಗಿದ್ದಾರೆ. ಅವರು ನಿಷ್ಕಾರಣವಾಗಿ ನನ್ನನ್ನು ದ್ವೇಷಿಸುತ್ತಾರೆ; ನನ್ನನ್ನು ನಾಶಮಾಡಲು ಬಹು ಪ್ರಯತ್ನ ಮಾಡುತ್ತಿದ್ದಾರೆ. ನನ್ನ ಶತ್ರಗಳು ನನ್ನ ಬಗ್ಗೆ ಸುಳ್ಳು ಹೇಳುವರು. ನಾನು ಕದ್ದಿಲ್ಲದಿದ್ದರೂ ಸುಳ್ಳು ಅಪವಾದ ಹೊರಿಸಿ ನನ್ನಿಂದ ದಂಡ ವಸೂಲಿ ಮಾಡಿದರು.


ಆದರೆ ಸೈನಿಕರು ಸೌಲನಿಗೆ, “ಈ ದಿನ ಇಸ್ರೇಲರನ್ನು ಮುನ್ನಡೆಸಿ ಮಹಾವಿಜಯವನ್ನು ಉಂಟುಮಾಡಿದ ಯೋನಾತಾನನು ಸಾಯಬೇಕೋ? ಇಲ್ಲ! ಜೀವಸ್ವರೂಪನಾದ ಯೆಹೋವನಾಣೆ, ಯೋನಾತಾನನ ತಲೆಕೂದಲುಗಳಲ್ಲಿ ಒಂದಾದರೂ ನೆಲಕ್ಕೆ ಬೀಳಲು ನಾವು ಬಿಡುವುದಿಲ್ಲ. ಇಂದು ಫಿಲಿಷ್ಟಿಯರ ವಿರುದ್ಧ ಹೋರಾಡಲು ದೇವರು ಯೋನಾತಾನನಿಗೆ ಸಹಾಯಮಾಡಿದ್ದಾನೆ” ಎಂದು ಹೇಳಿದರು. ಹೀಗೆ ಜನರು ಯೋನಾತಾನನನ್ನು ರಕ್ಷಿಸಿದರು. ಅವನನ್ನು ಸಾಯಿಸಲಿಲ್ಲ.


ನೀವು ನಮ್ಮ ಸಹಾಯಕ್ಕೆ ಬರುವುದಿಲ್ಲವೆಂದು ತಿಳಿದಾಗ ನಾನು ನನ್ನ ಜೀವವನ್ನೇ ಗಂಡಾಂತರಕ್ಕೆ ಒಡ್ಡಿದೆ. ಅಮ್ಮೋನಿಯರ ವಿರುದ್ಧ ಯುದ್ಧಮಾಡಲು ನಾನು ನದಿಯನ್ನು ದಾಟಿಹೋದೆ. ಅವರನ್ನು ಸೋಲಿಸಲು ಯೆಹೋವನು ನನಗೆ ಸಹಾಯ ಮಾಡಿದನು. ಈಗ ನೀವು ನನ್ನ ಸಂಗಡ ಯುದ್ಧ ಮಾಡುವುದಕ್ಕಾಗಿ ಏಕೆ ಬಂದಿದ್ದೀರಿ?” ಎಂದು ಕೇಳಿದನು.


ನಮಗೆ ದಯಪಾಲಿಸಲ್ಪಟ್ಟ ಈ ವಿಶೇಷ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ದಂಡನೆಯಂತೂ ಖಂಡಿತ. ಇದು ಪ್ರಭುವಿನಿಂದ ಮೊದಲು ಹೇಳಲ್ಪಟ್ಟಿತು. ಆತನಿಂದ ಕೇಳಿದವರೇ ಈ ರಕ್ಷಣೆಯ ಕುರಿತಾಗಿ ನಮಗೆ ಸ್ಥಿರಪಡಿಸಿದರು.


ಆದರೆ ಮೋಶೆ ಆ ಜನರಿಗೆ, “ಭಯಪಡಬೇಡಿರಿ! ಓಡಿಹೋಗಬೇಡಿರಿ! ಇಲ್ಲೇ ಇದ್ದು ಯೆಹೋವನು ಈ ದಿನ ನಿಮ್ಮನ್ನು ರಕ್ಷಿಸುವುದನ್ನು ನೋಡಿರಿ. ಈ ದಿನದ ನಂತರ ನೀವು ಇನ್ನೆಂದಿಗೂ ಈ ಈಜಿಪ್ಟಿನವರನ್ನು ನೋಡುವುದಿಲ್ಲ.


ನಿನ್ನಲ್ಲಿ ಭರವಸವಿಟ್ಟಿರುವವರು ನಿರಾಶರಾಗುವುದಿಲ್ಲ ದ್ರೋಹಿಗಳಾದರೋ ನಿರಾಶರಾಗುವರು. ಅವರಿಗೆ ಏನೂ ದೊರೆಯುವುದಿಲ್ಲ.


ಯೋನಾತಾನನು ಹೇಳಿದ್ದನ್ನೆಲ್ಲ ಸೌಲನು ಕೇಳಿ, “ಯೆಹೋವನಾಣೆ, ದಾವೀದನನ್ನು ಕೊಲ್ಲುವುದಿಲ್ಲ” ಎಂದು ಪ್ರಮಾಣ ಮಾಡಿ ಹೇಳಿದನು.


ಅಹೀಮೆಲೆಕನು, “ದಾವೀದನು ನಿನಗೆ ಬಹಳ ನಂಬಿಗಸ್ತನಾಗಿದ್ದಾನೆ. ದಾವೀದನಷ್ಟು ನಂಬಿಗಸ್ತನು ನಿನ್ನ ಇತರ ಅಧಿಕಾರಿಗಳಲ್ಲಿ ಇಲ್ಲವೇ ಇಲ್ಲ. ದಾವೀದನು ನಿನ್ನ ಸ್ವಂತ ಅಳಿಯ. ದಾವೀದನು ನಿನ್ನ ಅಂಗರಕ್ಷಕ ದಳಪತಿ. ದಾವೀದನನ್ನು ನಿನ್ನ ಸ್ವಂತ ಕುಟುಂಬವೆಲ್ಲ ಗೌರವಿಸುತ್ತದೆ.


ಎಲ್ಲಾಜಾರನು ಆಯಾಸಗೊಳ್ಳುವ ತನಕ ಫಿಲಿಷ್ಟಿಯರೊಡನೆ ಹೋರಾಡಿದನು. ಆದರೆ ಅವನು ತನ್ನ ಕೈ ಸೋತು ಹೋಗುವವರೆಗೂ ಫಿಲಿಷ್ಟಿಯರನ್ನು ಕೊಂದನು. ಯೆಹೋವನು ಇಸ್ರೇಲರಿಗೆ ಅಂದು ಮಹಾವಿಜಯವನ್ನು ಉಂಟುಮಾಡಿದನು. ಎಲ್ಲಾಜಾರನು ಯುದ್ಧದಲ್ಲಿ ವಿಜಯಿಯಾದ ಮೇಲೆ ಜನರು ಹಿಂದಿರುಗಿದರು. ಆದರೆ ಅವರು ಶತ್ರುಗಳಿಂದ ಬೆಲೆಬಾಳುವ ವಸ್ತುಗಳನ್ನು ಅಪಹರಿಸಲು ಮಾತ್ರವೇ ಬಂದಿದ್ದರು.


ಅವರು ನೀತಿವಂತರಿಗೆ ಎದುರಾಗಿ ನಿರಪರಾಧಿಗಳಿಗೆ ಮರಣದಂಡನೆ ವಿಧಿಸುವರು.


ಆಗ ಆ ಮೂವರು ಪರಾಕ್ರಮಿಗಳು ಫಿಲಿಷ್ಟಿಯರ ಸೈನ್ಯದೊಂದಿಗೆ ಹೋರಾಡುತ್ತಾ ಬೆತ್ಲೆಹೇಮಿನ ಬಾಗಿಲ ಬಳಿಯಲ್ಲಿದ್ದ ಬಾವಿಯ ನೀರನ್ನು ಸೇದಿ ದಾವೀದನಿಗೆ ತಂದುಕೊಟ್ಟರು. ಆದರೆ ದಾವೀದನು ಆ ನೀರನ್ನು ಕುಡಿಯಲು ನಿರಾಕರಿಸಿದನು. ಆ ನೀರನ್ನು ಯೆಹೋವನಿಗೆ ಸಮರ್ಪಿಸಿ ನೆಲದ ಮೇಲೆ ಹೊಯಿದುಬಿಟ್ಟನು.


ನಾನು ಉಪಕಾರವನ್ನು ಮಾಡಿದ್ದರೂ ಅವರು ನನಗೆ ಅಪಕಾರವನ್ನು ಮಾಡುತ್ತಿದ್ದಾರೆ. ನಾನು ಅವರನ್ನು ಪ್ರೀತಿಸಿದರೂ ಅವರು ನನ್ನನ್ನು ದ್ವೇಷಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು