Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 19:6 - ಪರಿಶುದ್ದ ಬೈಬಲ್‌

6 ಯೋನಾತಾನನು ಹೇಳಿದ್ದನ್ನೆಲ್ಲ ಸೌಲನು ಕೇಳಿ, “ಯೆಹೋವನಾಣೆ, ದಾವೀದನನ್ನು ಕೊಲ್ಲುವುದಿಲ್ಲ” ಎಂದು ಪ್ರಮಾಣ ಮಾಡಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಸೌಲನು ಯೋನಾತಾನನ ಮಾತುಗಳನ್ನು ಲಾಲಿಸಿ, “ಯೆಹೋವನಾಣೆ, ಅವನನ್ನು ಕೊಲ್ಲುವುದಿಲ್ಲ” ಎಂದು ಪ್ರಮಾಣಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಸೌಲನು ಯೋನಾತಾನನ ಮಾತುಗಳನ್ನು ಆಲಿಸಿದನು. “ಸರ್ವೇಶ್ವರನಾಣೆ, ಅವನನ್ನು ಕೊಲ್ಲುವುದಿಲ್ಲ,” ಎಂದು ಪ್ರಮಾಣಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಸೌಲನು ಯೋನಾತಾನನ ಮಾತುಗಳನ್ನು ಲಾಲಿಸಿ - ಯೆಹೋವನಾಣೆ, ಅವನನ್ನು ಕೊಲ್ಲುವದಿಲ್ಲ ಎಂದು ಪ್ರಮಾಣಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಸೌಲನು ಯೋನಾತಾನನ ಮಾತನ್ನು ಕೇಳಿ, “ಯೆಹೋವ ದೇವರಾಣೆ ಅವನು ಕೊಲೆಯಾಗುವುದಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 19:6
9 ತಿಳಿವುಗಳ ಹೋಲಿಕೆ  

ಜನರು ಆಣೆ ಮಾಡುವಾಗ ‘ಯೆಹೋವನಾಣೆ’ ಎಂದು ಹೇಳುವರು. ಆದರೆ ಅದು ಕೇವಲ ಬಾಯಿ ಮಾತಷ್ಟೇ ಹೊರತು ಯಥಾರ್ಥವಾದದ್ದಲ್ಲ.”


ಅವನು ದೇವದೂಷಕರನ್ನು ತಿರಸ್ಕರಿಸುವವನೂ ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಗೌರವಿಸುವವನೂ ತನಗೆ ತೊಂದರೆಯಾದರೂ ಕೊಟ್ಟ ಮಾತಿಗೆ ತಪ್ಪದವನೂ ಆಗಿರಬೇಕು.


ಸೌಲನು ಯೆಹೋವನ ಹೆಸರಿನಲ್ಲಿ ಆ ಬೇತಾಳಿಕಳಿಗೆ ವಾಗ್ದಾನಮಾಡಿ, “ಯೆಹೋವನಾಣೆ, ಈ ಕಾರ್ಯವನ್ನು ಮಾಡಿದ್ದಕ್ಕಾಗಿ ನಿನಗೆ ದಂಡನೆಯಾಗುವುದಿಲ್ಲ” ಎಂದು ಹೇಳಿದನು.


ಇಸ್ರೇಲನ್ನು ರಕ್ಷಿಸುವ ಯೆಹೋವನಾಣೆಯಿಟ್ಟು ಹೇಳುತ್ತಿದ್ದೇನೆ, ನನ್ನ ಸ್ವಂತ ಮಗನಾದ ಯೋನಾತಾನನೇ ಈ ಪಾಪ ಮಾಡಿದ್ದರೂ ಅವನು ಸಾಯಲೇಬೇಕು” ಎಂದು ಹೇಳಿದನು. ಜನರಲ್ಲಿ ಯಾರೊಬ್ಬರೂ ಮಾತನಾಡಲಿಲ್ಲ.


ದಾವೀದನು ಫಿಲಿಷ್ಟಿಯನಾದ ಗೊಲ್ಯಾತನನ್ನು ಕೊಂದಾಗ ತನ್ನ ಜೀವವನ್ನೇ ಪಣವಾಗಿಟ್ಟಿದ್ದನು. ಯೆಹೋವನು ಇಸ್ರೇಲರೆಲ್ಲರಿಗೂ ಬಹು ದೊಡ್ಡ ಜಯವನ್ನುಂಟುಮಾಡಿದನು. ನೀನು ಅದನ್ನು ನೋಡಿದೆ ಮತ್ತು ಸಂತೋಷಗೊಂಡೆ. ದಾವೀದನಿಗೆ ಕೇಡುಮಾಡಲು ನೀನು ಏಕೆ ಬಯಸಿರುವೆ? ಅವನು ನಿರಪರಾಧಿ. ಅವನನ್ನು ಕೊಲ್ಲಲು ಯಾವ ಕಾರಣವೂ ಇಲ್ಲ!” ಎಂದು ಹೇಳಿದನು.


ಆದ್ದರಿಂದ ಯೋನಾತಾನನು ದಾವೀದನನ್ನು ಕರೆದು ಅವನಿಗೆ ಎಲ್ಲವನ್ನೂ ತಿಳಿಸಿದನು. ಬಳಿಕ ಯೋನಾತಾನನು ದಾವೀದನನ್ನು ಸೌಲನ ಹತ್ತಿರಕ್ಕೆ ಕರೆದುಕೊಂಡು ಬಂದನು. ದಾವೀದನು ಮೊದಲಿನಂತೆ ಸೌಲನ ಜೊತೆಗಿದ್ದನು.


ತಮಗೋಸ್ಕರ ಮಾತಾಡಲಾರದ ಜನರಿಗೋಸ್ಕರ ಮಾತಾಡು. ಕಷ್ಟದಲ್ಲಿರುವ ಜನರೆಲ್ಲರ ಹಕ್ಕುಗಳಿಗಾಗಿ ಮಾತಾಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು