Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 19:7 - ಪರಿಶುದ್ದ ಬೈಬಲ್‌

7 ಆದ್ದರಿಂದ ಯೋನಾತಾನನು ದಾವೀದನನ್ನು ಕರೆದು ಅವನಿಗೆ ಎಲ್ಲವನ್ನೂ ತಿಳಿಸಿದನು. ಬಳಿಕ ಯೋನಾತಾನನು ದಾವೀದನನ್ನು ಸೌಲನ ಹತ್ತಿರಕ್ಕೆ ಕರೆದುಕೊಂಡು ಬಂದನು. ದಾವೀದನು ಮೊದಲಿನಂತೆ ಸೌಲನ ಜೊತೆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಗ ಯೋನಾತಾನನು ದಾವೀದನನ್ನು ಕರೆದು, ಅವನಿಗೆ ಈ ಮಾತುಗಳನ್ನು ತಿಳಿಸಿ, ಸೌಲನ ಬಳಿಗೆ ಕರೆದುಕೊಂಡು ಬಂದನು. ದಾವೀದನು ಮುಂಚಿನಂತೆ ಸೌಲನ ಸನ್ನಿಧಿಯಲ್ಲಿ ಇರುವವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಗ ಯೋನಾತಾನನು ದಾವೀದನನ್ನು ಕರೆದು ಅವನಿಗೆ ಈ ಮಾತುಗಳನ್ನು ತಿಳಿಸಿ ಸೌಲನ ಬಳಿಗೆ ಕರೆದುತಂದನು. ದಾವೀದನು ಮುಂಚಿನಂತೆ ಸೌಲನ ಸನ್ನಿಧಿಯಲ್ಲೇ ಇರುವಂತೆ ಏರ್ಪಾಡಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆಗ ಯೋನಾತಾನನು ದಾವೀದನನ್ನು ಕರೆದು ಅವನಿಗೆ ಈ ಮಾತುಗಳನ್ನು ತಿಳಿಸಿ ಸೌಲನ ಬಳಿಗೆ ಕರತಂದನು. ದಾವೀದನು ಮುಂಚಿನಂತೆ ಸೌಲನ ಸನ್ನಿಧಿಯಲ್ಲಿ ಇರುವವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ಯೋನಾತಾನನು ದಾವೀದನನ್ನು ಕರೆದು, ಆ ಮಾತುಗಳನ್ನೆಲ್ಲಾ ಅವನಿಗೆ ತಿಳಿಸಿ, ದಾವೀದನನ್ನು ಸೌಲನ ಬಳಿಗೆ ಕರೆತಂದನು. ಅವನು ಮುಂಚಿನ ಹಾಗೆಯೇ ಸೌಲನ ಬಳಿಯಲ್ಲಿ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 19:7
10 ತಿಳಿವುಗಳ ಹೋಲಿಕೆ  

ಸೌಲನು ದಾವೀದನನ್ನು ತನ್ನಿಂದ ದೂರಕಳುಹಿಸಿದನು. ಸೌಲನು ದಾವೀದನನ್ನು ಒಂದು ಸಾವಿರ ಸೈನಿಕರಿಗೆ ಸೇನಾಪತಿಯನ್ನಾಗಿ ಮಾಡಿದನು. ದಾವೀದನು ಯುದ್ಧದಲ್ಲಿ ಸೈನಿಕರನ್ನು ಮುನ್ನಡೆಸಿದನು.


ಸೌಲನು ಅಂದಿನಿಂದ ದಾವೀದನನ್ನು ತನ್ನ ಜೊತೆಯಲ್ಲಿಯೇ ಇರಿಸಿಕೊಂಡನು. ಸೌಲನು ದಾವೀದನನ್ನು ಅವನ ತಂದೆಯ ಮನೆಗೆ ಹೋಗಲು ಬಿಡಲಿಲ್ಲ.


ದಾವೀದನು ಸೌಲನ ಹತ್ತಿರಕ್ಕೆ ಹೋಗಿ, ಅವನ ಮುಂದೆ ನಿಂತನು. ಸೌಲನು ದಾವೀದನನ್ನು ಬಹಳ ಪ್ರೀತಿಸಿದನು. ದಾವೀದನು ಸೌಲನ ಆಯುಧಗಳನ್ನು ಹೊರುವ ಸಹಾಯಕನಾದನು.


ಮಾರನೆಯ ದಿನ, ದೇವರಿಂದ ಬಂದ ದುರಾತ್ಮವು ಸೌಲನನ್ನು ಸಂಪೂರ್ಣವಾಗಿ ವಶಪಡಿಸಿಕೊಂಡಿತು. ಸೌಲನು ತನ್ನ ಮನೆಯಲ್ಲಿ ಹುಚ್ಚನಂತೆ ಕೂಗಿಕೊಳ್ಳುತ್ತಿದ್ದನು. ಆಗ ದಾವೀದನು ಎಂದಿನಂತೆ ಕಿನ್ನರಿಯನ್ನು ಬಾರಿಸುತ್ತಿದ್ದನು.


ಬಹುಕಾಲದವರೆಗೆ ಅಗ್ನಿಕುಂಡ ಸಿದ್ಧವಾಗಿತ್ತು. ಅದು ರಾಜನಿಗಾಗಿ ಸಿದ್ಧವಾಗಿದೆ. ಅದು ಆಳವಾಗಿಯೂ ಅಗಲವಾಗಿಯೂ ಮಾಡಲ್ಪಟ್ಟಿದೆ. ಅಲ್ಲಿ ಒಂದು ದೊಡ್ಡ ಕಟ್ಟಿಗೆಯ ರಾಶಿಯೂ ಬೆಂಕಿಯೂ ಇದೆ ಮತ್ತು ಯೆಹೋವನ ಬಾಯುಸಿರು ಗಂಧಕದ ಪ್ರವಾಹದಂತೆ ಬಂದು ಎಲ್ಲವನ್ನು ನಾಶಮಾಡುವದು.


ಹಿಂದೆ ನೀನು ನಮ್ಮನ್ನು ಯುದ್ಧದಲ್ಲಿ ನಡೆಸಿರುವೆ. ಆಗ ಸೌಲನು ಅರಸನಾಗಿದ್ದರೂ ನೀನು ನಮ್ಮ ಯುದ್ಧದಲ್ಲಿ ನಾಯಕನಾಗಿದ್ದೆ. ಯೆಹೋವನು ನಿನಗೆ, ‘ದಾವೀದನೇ, ನೀನು ನಿನ್ನ ಜನರಾದ ಇಸ್ರೇಲರ ಪಾಲಕನಾಗಿರಬೇಕು. ನನ್ನ ಜನರಿಗೆ ನೀನು ನಾಯಕನಾಗಿರಬೇಕು’” ಎಂದು ಹೇಳಿದ್ದಾನಲ್ಲವೆ ಅಂದರು.


ಮೋಶೆಯು ಯೆಹೋವನಿಗೆ, “ಸ್ವಾಮೀ, ನಾನು ನಿನಗೆ ಸತ್ಯವಾಗಿ ಹೇಳುವುದೇನೆಂದರೆ ನನಗೆ ವಾಕ್ಚಾತುರ್ಯವಿಲ್ಲ. ನನ್ನ ಮಾತೂ ನಾಲಿಗೆಯೂ ಮಂದವಾಗಿವೆ” ಎಂದು ಹೇಳಿದನು.


ಲಾಬಾನನು ಮೊದಲಿನಂತೆ ಸ್ನೇಹದಿಂದ ಇಲ್ಲದಿರುವುದನ್ನು ಸಹ ಯಾಕೋಬನು ಗಮನಿಸಿದನು.


ಯೋನಾತಾನನು ಹೇಳಿದ್ದನ್ನೆಲ್ಲ ಸೌಲನು ಕೇಳಿ, “ಯೆಹೋವನಾಣೆ, ದಾವೀದನನ್ನು ಕೊಲ್ಲುವುದಿಲ್ಲ” ಎಂದು ಪ್ರಮಾಣ ಮಾಡಿ ಹೇಳಿದನು.


ಯುದ್ಧವು ಮತ್ತೆ ಬಂದಿತು. ದಾವೀದನು ಫಿಲಿಷ್ಟಿಯರ ಮೇಲೆ ಯುದ್ಧಕ್ಕೆ ಹೋಗಿ ಅವರನ್ನು ಸೋಲಿಸಿ ಓಡಿಸಿಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು