1 ಸಮುಯೇಲ 2:1 - ಪರಿಶುದ್ದ ಬೈಬಲ್1 ಹನ್ನಳು ಇಂತೆಂದಳು: “ನನ್ನ ಹೃದಯವು ಯೆಹೋವನಲ್ಲಿ ಉಲ್ಲಾಸಿಸುತ್ತದೆ. ನಾನು ನನ್ನ ದೇವರಾದ ಯೆಹೋವನಲ್ಲಿ ಬಲಶಾಲಿಯಾಗಿದ್ದೇನೆ. ನಾನು ನನ್ನ ಶತ್ರುಗಳ ಬಗ್ಗೆ ನಗುವೆನು. ನಾನು ನಿನ್ನ ರಕ್ಷಣೆಯಲ್ಲಿ ಆನಂದಿಸುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಹನ್ನಳು ದೇವರ ಬಳಿ ಹೀಗೆ ವಿಜ್ಞಾಪಿಸಿದಳು, “ನನ್ನ ಹೃದಯವು ಯೆಹೋವನಲ್ಲಿ ಉಲ್ಲಾಸಿಸುತ್ತದೆ; ನನ್ನ ಕೊಂಬು ಯೆಹೋವನಿಂದ ಎತ್ತಲ್ಪಟ್ಟಿದೆ. ಶತ್ರುಗಳ ಮುಂದೆ ನನ್ನ ಬಾಯಿ ಧೈರ್ಯವಾಗಿ ಮಾತನಾಡುತ್ತದೆ, ಯಾಕೆಂದರೆ ನಾನು ನಿನ್ನ ರಕ್ಷಣೆಯಲ್ಲಿ ಆನಂದಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಹನ್ನಳು ಹೀಗೆಂದು ಭಜಿಸಿದಳು: “ಆನಂದಿಸುತ್ತಿದೆ ನನ್ನ ಮನ ಸರ್ವೇಶ್ವರನಲಿ ಉನ್ನತೋನ್ನತವಾಗಿದೆ ನನ್ನ ಶಕ್ತಿ ಆ ದೇವನಲಿ ನನಗಿದೆ ಶತ್ರುಗಳನ್ನೂ ಧಿಕ್ಕರಿಸುವ ಶಕ್ತಿ ನನಗಿತ್ತಿರುವನಾ ಸಂತಸದಾಯಕ ಮುಕ್ತಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಹನ್ನಳ ವಿಜ್ಞಾಪನೆ - ನನ್ನ ಹೃದಯವು ಯೆಹೋವನಲ್ಲಿ ಉಲ್ಲಾಸಿಸುತ್ತದೆ; ನನ್ನ ಕೊಂಬು ಯೆಹೋವನಿಂದ ಎತ್ತಲ್ಪಟ್ಟಿದೆ. ಶತ್ರುಗಳ ಮುಂದೆ ನನ್ನ ಬಾಯಿ ತೆರೆದಿರುವದು. ನಿನ್ನ ರಕ್ಷಣೆಯಲ್ಲಿ ಆನಂದಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಹನ್ನಳು ಪ್ರಾರ್ಥಿಸಿ ಹೇಳಿದ್ದೇನೆಂದರೆ, “ನನ್ನ ಹೃದಯವು ಯೆಹೋವ ದೇವರಲ್ಲಿ ಸಂತೋಷಿಸಿತು. ನನ್ನ ಕೊಂಬು ಯೆಹೋವ ದೇವರಲ್ಲಿ ಉನ್ನತವಾಯಿತು. ನನ್ನ ಶತ್ರುಗಳ ಮುಂದೆ ನನ್ನ ಬಾಯಿ ಹೆಚ್ಚಳಪಟ್ಟಿತು. ಏಕೆಂದರೆ ನಾನು ನಿಮ್ಮ ರಕ್ಷಣೆಯಲ್ಲಿ ಹರ್ಷಿಸುತ್ತೇನೆ. ಅಧ್ಯಾಯವನ್ನು ನೋಡಿ |