Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 2:11 - ಪರಿಶುದ್ದ ಬೈಬಲ್‌

11 ಎಲ್ಕಾನ ಮತ್ತು ಅವನ ಕುಟುಂಬದವರು ರಾಮಾತಯಿಮಿನಲ್ಲಿದ್ದ ತಮ್ಮ ಮನೆಗೆ ಹಿಂತಿರುಗಿದರು. ಬಾಲಕನು ಶೀಲೋವಿನಲ್ಲಿಯೇ ಉಳಿದುಕೊಂಡನು ಮತ್ತು ಯಾಜಕನಾದ ಏಲಿಯ ಮಾರ್ಗದರ್ಶನದಲ್ಲಿ ಯೆಹೋವನ ಸೇವೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅನಂತರ ಎಲ್ಕಾನನು ರಾಮದಲ್ಲಿದ್ದ ತನ್ನ ಮನೆಗೆ ಹೋದನು; ಹುಡುಗನು ಯಾಜಕನಾದ ಏಲಿಯ ಕೈಕೆಳಗಿದ್ದುಕೊಂಡು ಯೆಹೋವನ ಸೇವೆ ಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಎಲ್ಕಾನನು ರಾಮಾದಲ್ಲಿದ್ದ ತನ್ನ ಮನೆಗೆ ಹಿಂದಿರುಗಿದನು. ಹುಡುಗ ಸಮುವೇಲನು ಯಾಜಕ ಏಲಿಯನ ಕೈಕೆಳಗಿದ್ದು ಸರ್ವೇಶ್ವರನ ಸೇವೆಮಾಡುತ್ತಾ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಎಲ್ಕಾನನು ರಾಮದಲ್ಲಿದ್ದ ತನ್ನ ಮನೆಗೆ ಹೋದನು; ಹುಡುಗನು ಯಾಜಕನಾದ ಏಲಿಯ ಕೈಕೆಳಗಿದ್ದುಕೊಂಡು ಯೆಹೋವನನ್ನು ಸೇವಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಎಲ್ಕಾನನು ರಾಮದಲ್ಲಿರುವ ತನ್ನ ಮನೆಗೆ ಹೋದನು. ಆದರೆ ಆ ಹುಡುಗನು ಯಾಜಕನಾದ ಏಲಿಯ ಸಮ್ಮುಖದಲ್ಲಿ ಯೆಹೋವ ದೇವರ ಸೇವೆ ಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 2:11
7 ತಿಳಿವುಗಳ ಹೋಲಿಕೆ  

ಬಾಲಕನಾದ ಸಮುವೇಲನು ಏಲಿಯ ಕೈಕೆಳಗಿದ್ದು ಯೆಹೋವನ ಸೇವೆಮಾಡುತ್ತಿದ್ದನು. ಆ ಕಾಲದಲ್ಲಿ ಯೆಹೋವನು ಜನರೊಂದಿಗೆ ಪದೇಪದೇ ಮಾತಾಡುತ್ತಿರಲಿಲ್ಲ; ದರ್ಶನಗಳ ಸಂಖ್ಯೆಯೂ ಕಡಿಮೆಯಾಗಿತ್ತು.


ಆದರೆ ಬಾಲಕನಾದ ಸಮುವೇಲನು ಏಫೋದ್ ಎಂಬ ನಾರುಬಟ್ಟೆಯನ್ನು ಧರಿಸಿ ಯೆಹೋವನ ಸೇವೆ ಮಾಡುತ್ತಿದ್ದನು.


ಈಗ ನಾನು ಈ ಮಗನನ್ನು ಯೆಹೋವನಿಗೆ ಒಪ್ಪಿಸುತ್ತೇನೆ. ಇವನು ಜೀವದಿಂದಿರುವ ತನಕ ಯೆಹೋವನಿಗೆ ಪ್ರತಿಷ್ಠಿತನಾಗಿರುತ್ತಾನೆ” ಎಂದು ಏಲಿಗೆ ಹೇಳಿದಳು. ಬಳಿಕ ಹನ್ನಳು ಆ ಬಾಲಕನನ್ನು ಅಲ್ಲಿಯೇ ಬಿಟ್ಟು ಯೆಹೋವನನ್ನು ಆರಾಧಿಸಿದಳು.


ಸಮುವೇಲನು ನಿದ್ರಿಸಿದನು. ಅವನು ಮುಂಜಾನೆ ಮೇಲೆದ್ದು ಯೆಹೋವನ ಆಲಯದ ಬಾಗಿಲುಗಳನ್ನು ತೆರೆದನು. ಸಮುವೇಲನು ತಾನು ಕಂಡ ದರ್ಶನದ ಬಗ್ಗೆ ಏಲಿಗೆ ತಿಳಿಸಲು ಭಯಪಟ್ಟನು.


ಎಲ್ಕಾನನ ಕುಟುಂಬದವರು ಮರುದಿನ ಬೆಳಿಗ್ಗೆ ಎದ್ದು ಯೆಹೋವನನ್ನು ಆರಾಧಿಸಿ, ರಾಮಾತಯಿಮಿನಲ್ಲಿದ್ದ ತಮ್ಮ ಮನೆಗೆ ಹಿಂದಿರುಗಿದರು. ಎಲ್ಕಾನನು ಹನ್ನಳನ್ನು ಕೂಡಿದನು. ಯೆಹೋವನು ಹನ್ನಳನ್ನು ಜ್ಞಾಪಿಸಿಕೊಂಡನು.


ಎಲ್ಕಾನ ಎಂಬ ಒಬ್ಬ ಮನುಷ್ಯನಿದ್ದನು. ಅವನು ಎಫ್ರಾಯೀಮ್ ಬೆಟ್ಟದ ಸೀಮೆಯ ರಾಮಾತಯಿಮ್ ಎಂಬ ಊರಿನವನು. ಅವನು ಚೋಫೀಮ್ ಕುಟುಂಬದವನೂ ಯೆರೋಹಾಮನ ಮಗನೂ ಆಗಿದ್ದನು. ಯೆರೋಹಾಮನು ಎಲೀಹುವಿನ ಮಗ. ಎಲೀಹುವನು ತೋಹುವನ ಮಗ. ತೋಹುವನು ಚೂಫನ ಮಗ. ಇವರೆಲ್ಲ ಎಫ್ರಾಯೀಮ್ ಕುಲದವರು.


ಆದರೆ ಸಮುವೇಲನ ಮನೆಯು ರಾಮದಲ್ಲಿತ್ತು. ಆದ್ದರಿಂದ ಸಮುವೇಲನು ಯಾವಾಗಲೂ ರಾಮಕ್ಕೆ ಹಿಂತಿರುಗುತ್ತಿದ್ದನು. ಸಮುವೇಲನು ರಾಮದಿಂದ ಇಸ್ರೇಲರಿಗೆ ನ್ಯಾಯತೀರ್ಪು ನೀಡುತ್ತಾ ಆಳಿದನು; ರಾಮದಲ್ಲಿ ಯೆಹೋವನಿಗಾಗಿ ಯಜ್ಞವೇದಿಕೆಯೊಂದನ್ನು ನಿರ್ಮಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು