Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 2:12 - ಪರಿಶುದ್ದ ಬೈಬಲ್‌

12 ಏಲಿಯ ಮಕ್ಕಳು ದುಷ್ಟರಾಗಿದ್ದರು. ಅವರು ಯೆಹೋವನನ್ನು ಲಕ್ಷಿಸುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಏಲಿಯ ಮಕ್ಕಳು ಬಹುದುಷ್ಟರಾಗಿದ್ದರು; ಅವರು ಯೆಹೋವನನ್ನು ಲಕ್ಷಿಸುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಏಲಿಯ ಮಕ್ಕಳು ಮಹಾದುಷ್ಟರು. ಅವರು ಸರ್ವೇಶ್ವರನನ್ನು ಲಕ್ಷಿಸುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಏಲಿಯ ಮಕ್ಕಳು ಬಹುದುಷ್ಟರಾಗಿದ್ದರು; ಅವರು ಯೆಹೋವನನ್ನು ಲಕ್ಷಿಸುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆದರೆ ಏಲಿಯ ಪುತ್ರರು ಯೆಹೋವ ದೇವರನ್ನು ಗೌರವಿಸದೆ ದುಷ್ಟರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 2:12
23 ತಿಳಿವುಗಳ ಹೋಲಿಕೆ  

“‘ಯೆಹೋವನು ಎಲ್ಲಿ?’ ಎಂದು ಯಾಜಕರು ಕೇಳಲಿಲ್ಲ. ಧರ್ಮಶಾಸ್ತ್ರವನ್ನು ಬಲ್ಲವರು ನನ್ನನ್ನು ತಿಳಿಯಬಯಸಲಿಲ್ಲ. ಇಸ್ರೇಲರ ಜನನಾಯಕರು ನನ್ನ ವಿರೋಧಿಗಳಾದರು. ಪ್ರವಾದಿಗಳು ಸುಳ್ಳುದೇವರಾದ ಬಾಳನ ಹೆಸರಿನಿಂದ ಭವಿಷ್ಯವಾಣಿಯನ್ನು ನುಡಿದರು. ಅವರು ನಿಷ್ಪ್ರಯೋಜಕವಾದ ವಿಗ್ರಹಗಳನ್ನು ಪೂಜಿಸಿದರು.”


ಕ್ರಿಸ್ತನೂ ಸೈತಾನನೂ ಅನ್ಯೋನ್ಯವಾಗಿರಲು ಸಾಧ್ಯವೇ? ವಿಶ್ವಾಸಿಗಳಿಗೂ ಅವಿಶ್ವಾಸಿಗಳಿಗೂ ಪಾಲುಗಾರಿಕೆಯೇನು?


ಈ ಪೀಳಿಗೆಯವರೆಲ್ಲರು ಸತ್ತುಹೋದ ಮೇಲೆ ಮುಂದಿನ ಪೀಳಿಗೆಯು ಬೆಳೆಯಿತು. ಈ ಹೊಸ ಪೀಳಿಗೆಗೆ ಯೆಹೋವನ ಬಗ್ಗೆ ಮತ್ತು ಯೆಹೋವನು ಇಸ್ರೇಲಿನ ಜನರಿಗಾಗಿ ಮಾಡಿದ ಮಹತ್ಕಾರ್ಯಗಳ ಬಗ್ಗೆ ಏನೂ ಗೊತ್ತಿರಲಿಲ್ಲ.


ಜನರು ದೇವರನ್ನು ತಿಳಿದಿದ್ದರೂ ದೇವರನ್ನು ಮಹಿಮೆಪಡಿಸಲಿಲ್ಲ, ಆತನಿಗೆ ಕೃತಜ್ಞತೆಯನ್ನು ಸಲ್ಲಿಸಲಿಲ್ಲ. ಜನರ ಆಲೋಚನೆಯು ನಿಷ್ಪ್ರಯೋಜಕವಾಯಿತು. ಅವರ ಮೂಢಮನಸ್ಸುಗಳು ಕತ್ತಲೆಯಿಂದ ತುಂಬಿಹೋದವು.


ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನು ಮತ್ತು ನೀನು ಕಳುಹಿಸಿದ ಯೇಸು ಕ್ರಿಸ್ತನನ್ನು ತಿಳಿದುಕೊಳ್ಳುವುದೇ ನಿತ್ಯಜೀವ.


ಜನರು ತಂದೆಯನ್ನು ಮತ್ತು ನನ್ನನ್ನು ತಿಳಿದಿಲ್ಲದ ಕಾರಣ ಇವುಗಳನ್ನು ಮಾಡುವರು.


ಆದರೆ ನೀವು ಆತನನ್ನು ನಿಜವಾಗಿಯೂ ತಿಳಿದಿಲ್ಲ. ನಾನು ಆತನನ್ನು ಬಲ್ಲೆನು. ನಾನು ಆತನನ್ನು ತಿಳಿದಿಲ್ಲವೆಂದು ಹೇಳಿದರೆ ನಿಮ್ಮಂತೆ ನಾನು ಸಹ ಸುಳ್ಳುಗಾರನಾಗುತ್ತೇನೆ. ನಾನು ಆತನನ್ನು ಬಲ್ಲೆನು. ನಾನು ಆತನ ವಾಕ್ಯಕ್ಕೆ ವಿಧೇಯನಾಗುತ್ತೇನೆ.


ಯೋಷೀಯನು ದೀನದರಿದ್ರರಿಗೆ ಸಹಾಯ ಮಾಡುತ್ತಿದ್ದನು. ಯೋಷೀಯನು ಹಾಗೆ ಮಾಡಿದ್ದರಿಂದ ಎಲ್ಲವೂ ಸರಿಹೋಯಿತು. ಯೆಹೋಯಾಕೀಮನೇ, ‘ದೇವರನ್ನು ಅರಿತುಕೊಳ್ಳುವುದು ಎಂದರೇನು?’ ನ್ಯಾಯ ಮತ್ತು ನೀತಿಯಿಂದ ನಡೆದುಕೊಳ್ಳುವುದು, ನನ್ನನ್ನು ಅರಿತುಕೊಳ್ಳಲು ಬೇಕಾದದ್ದು ಅದೇ. ಇದು ಯೆಹೋವನಿಂದ ಬಂದ ಸಂದೇಶ:


ಒಂದು ದುಷ್ಕೃತ್ಯ ಮತ್ತೊಂದು ದುಷ್ಕೃತ್ಯವನ್ನು ಹಿಂಬಾಲಿಸಿ ಬಂದಿತು. ಒಂದು ಸುಳ್ಳು ಇನ್ನೊಂದು ಸುಳ್ಳನ್ನು ಹಿಂಬಾಲಿಸಿತು. ಜನರು ನನ್ನನ್ನು ಅರಿತುಕೊಳ್ಳಲಿಲ್ಲ.” ಯೆಹೋವನು ಆ ಮಾತುಗಳನ್ನು ಹೇಳಿದನು.


ನಾಬೋತನು ದೇವರ ವಿರುದ್ಧವಾಗಿಯೂ ರಾಜನ ವಿರುದ್ಧವಾಗಿಯೂ ಮಾತನಾಡಿದ್ದನ್ನು ತಾವು ಕೇಳಿರುವುದಾಗಿ ಇಬ್ಬರು ಅಲ್ಲಿನ ಜನರಿಗೆ ಹೇಳಿದರು. ಜನರು ನಾಬೋತನನ್ನು ನಗರದ ಹೊರಕ್ಕೆ ಕರೆದೊಯ್ದು ಅವನನ್ನು ಕಲ್ಲೆಸೆದು ಕೊಂದರು.


ನಾಬೋತನ ಬಗ್ಗೆ ಸುಳ್ಳುಹೇಳುವ ಕೆಲವು ಜನರನ್ನು ಪತ್ತೆಹಚ್ಚಿ, ನಾಬೋತನು ರಾಜನ ವಿರುದ್ಧವಾಗಿ ಮತ್ತು ದೇವರ ವಿರುದ್ಧವಾಗಿ ಮಾತನಾಡುವುದನ್ನು ನಾವು ಕೇಳಿಸಿಕೊಂಡೆವೆಂದು ಅವರು ಹೇಳಲೇಬೇಕು. ಆಗ ನಾಬೋತನನ್ನು ನಗರದಿಂದ ಹೊರಕ್ಕೆ ಕರೆದೊಯ್ದು ಅವನನ್ನು ಕಲ್ಲೆಸೆದು ಕೊಂದುಹಾಕಿರಿ.”


ಈಗ ಅದರ ಬಗ್ಗೆ ಯೋಚಿಸಿ ನೀನು ಮಾಡಬೇಕಾದದ್ದನ್ನು ತೀರ್ಮಾನಿಸು. ಮೂರ್ಖನಾದ ನಾಬಾಲನೊಂದಿಗೆ ಮಾತಾಡಿ ಅವನ ಮನಸ್ಸನ್ನು ಬದಲಾಯಿಸುವುದು ಅಸಾಧ್ಯ. ನಮ್ಮ ಒಡೆಯನಿಗೂ ಅವನ ಕುಟುಂಬಕ್ಕೂ ಭೀಕರವಾದ ಕೇಡು ಬರಲಿದೆ” ಎಂದು ಹೇಳಿದನು.


ಆದರೆ ಕೆಲವು ಕಿರುಕುಳಕಾರರು, “ಈ ಮನುಷ್ಯನು ಹೇಗೆ ತಾನೆ ನಮ್ಮನ್ನು ರಕ್ಷಿಸುವನು?” ಎಂದು ಹೇಳಿದರು. ಅವರು ಸೌಲನ ಬಗ್ಗೆ ಕೆಟ್ಟಮಾತುಗಳನ್ನು ಆಡಿದರು; ಅವನನ್ನು ತಿರಸ್ಕರಿಸಿ, ಕಾಣಿಕೆಗಳನ್ನು ತಂದುಕೊಡಲಿಲ್ಲ. ಆದರೆ ಸೌಲನು ಏನೂ ಮಾತನಾಡಲಿಲ್ಲ. ಅಮ್ಮೋನಿಯರ ರಾಜನಾದ ನಾಹಾಷನು, ಗಾದ್ ಮತ್ತು ರೂಬೆನ್ ಕುಲದವರಿಗೆ ಕಿರುಕುಳಕೊಡುತ್ತಿದ್ದನು. ನಾಹಾಷನು ಪ್ರತಿ ಮನುಷ್ಯನ ಬಲಗಣ್ಣನ್ನು ಕಿತ್ತುಹಾಕುತ್ತಿದ್ದನು. ನಾಹಾಷನು ಅವರಿಗೆ ಸಹಾಯಮಾಡಲು ಯಾರಿಗೂ ಅವಕಾಶಕೊಡುತ್ತಿರಲಿಲ್ಲ. ಅಮ್ಮೋನಿಯರ ರಾಜನಾದ ನಾಹಾಷನು ಜೋರ್ಡನ್ ನದಿಯ ಪೂರ್ವ ಪ್ರದೇಶದಲ್ಲಿ ವಾಸವಾಗಿದ್ದ ಎಲ್ಲ ಇಸ್ರೇಲರ ಬಲಗಣ್ಣನ್ನು ಕಿತ್ತುಹಾಕುತ್ತಿದ್ದನು. ಆದ್ದರಿಂದ ಅಮ್ಮೋನಿಯರಿಂದ ಏಳು ಸಾವಿರ ಮಂದಿ ಇಸ್ರೇಲರು ಯಾಬೇಷ್ ಗಿಲ್ಯಾದಿಗೆ ಓಡಿಹೋದರು.


ಆ ವರೆಗೂ ಸಮುವೇಲನಿಗೆ ಯೆಹೋವನ ಅನುಭವವಿರಲಿಲ್ಲ; ಯೆಹೋವನು ಅವನೊಂದಿಗೆ ನೇರವಾಗಿ ಮಾತಾಡಿರಲಿಲ್ಲ.


ಲೇವಿಯು ಮತ್ತು ಅವನ ಸಂಗಡಿಗರು ಸಂತೋಷದಿಂದ ಅಲ್ಲಿದ್ದಾಗ ಆ ನಗರದ ಕೆಲವು ಜನರು ಆ ಮನೆಗೆ ಮುತ್ತಿಗೆ ಹಾಕಿದರು. ಅವರು ಮಹಾ ನೀಚಜನರಾಗಿದ್ದರು. ಅವರು ಬಾಗಿಲು ತಟ್ಟತೊಡಗಿದರು. ಆ ಮನೆಯ ಯಜಮಾನನಾದ ವೃದ್ಧನಿಗೆ, “ನಿನ್ನ ಮನೆಗೆ ಬಂದ ಆ ಮನುಷ್ಯನನ್ನು ಹೊರಗೆ ಕರೆದುಕೊಂಡು ಬಾ. ನಾವು ಅವನೊಂದಿಗೆ ಸಂಭೋಗ ಮಾಡಬೇಕು”ಎಂದು ಕೂಗಾಡಿದರು.


ನಿಮ್ಮ ಸ್ವಂತ ದೇಶದಲ್ಲಿರುವ ಕೆಲವು ಕೆಟ್ಟ ಜನರು ಕೆಟ್ಟದ್ದನ್ನು ಮಾಡಲು ತಮ್ಮ ಪಟ್ಟಣದ ಜನರನ್ನು ಒತ್ತಾಯಪಡಿಸುತ್ತಿದ್ದಾರೆಂದು ನೀವು ಕೇಳಬಹುದು. ಅವರು ತಮ್ಮ ಪಟ್ಟಣದ ಜನರಿಗೆ, ‘ನಾವು ಹೋಗಿ ಬೇರೆ ದೇವರುಗಳ ಸೇವೆಮಾಡೋಣ’ ಎಂದು ಹೇಳಬಹುದು. (ಈ ದೇವರುಗಳನ್ನು ನೀವು ಹಿಂದೆಂದೂ ತಿಳಿದಿಲ್ಲ.)


ಏಲಿಯ ಕುಟುಂಬವನ್ನು ನಿತ್ಯದಂಡನೆಗೆ ಗುರಿಪಡಿಸುತ್ತೇನೆಂದು ನಾನು ಏಲಿಗೆ ಹೇಳಿರುವೆನು. ಏಲಿಯ ಮಕ್ಕಳು ನನಗೆ ವಿರೋಧವಾಗಿ ಮಾತಾಡಿದ್ದರಿಂದ ಮತ್ತು ಕೆಟ್ಟಕಾರ್ಯಗಳನ್ನು ಮಾಡಿದ್ದರಿಂದ ನಾನು ಇದನ್ನು ಮಾಡುತ್ತೇನೆ. ಅಲ್ಲದೆ ಅವರನ್ನು ಹತೋಟಿಯಲ್ಲಿಡಲು ಏಲಿಗೆ ಸಾಧ್ಯವಾಗಲಿಲ್ಲ.


“ಅವರು ತಮ್ಮ ನಾಲಿಗೆಗಳನ್ನು ಬಿಲ್ಲಿನಂತೆ ಉಪಯೋಗಿಸುತ್ತಿದ್ದಾರೆ. ಅವರ ಬಾಯಿಂದ ಬಾಣಗಳಂತೆ ಸುಳ್ಳುಗಳು ಬರುತ್ತಿವೆ. ಈ ನಾಡಿನಲ್ಲಿ ಸತ್ಯವಲ್ಲ, ‘ಅಸತ್ಯ’ ಪ್ರಬಲವಾಗುತ್ತಿದೆ. ಅವರು ಒಂದು ಪಾಪದಿಂದ ಮತ್ತೊಂದು ಪಾಪಕ್ಕೆ ಹೋಗುತ್ತಿದ್ದಾರೆ. ಅವರು ನನ್ನನ್ನು ಅರಿತಿಲ್ಲ.” ಯೆಹೋವನು ಈ ಮಾತನ್ನು ಹೇಳಿದನು.


“ಯಾಜಕರು ನನ್ನ ಉಪದೇಶವನ್ನು ನಿರಾಕರಿಸಿರುತ್ತಾರೆ; ಪರಿಶುದ್ಧ ವಸ್ತುಗಳನ್ನು ಸರಿಯಾಗಿ ಲಕ್ಷ್ಯ ಮಾಡುತ್ತಿಲ್ಲ; ಅವುಗಳಿಗೆ ಮಹತ್ವವನ್ನು ಕೊಡುತ್ತಿಲ್ಲ. ಅವರು ಪವಿತ್ರ ವಸ್ತುಗಳನ್ನು ಅಪವಿತ್ರ ವಸ್ತುಗಳಂತೆ ನೋಡುತ್ತಿದ್ದಾರೆ. ಯಾವುದು ಶುದ್ಧ, ಯಾವುದು ಅಶುದ್ಧ ಎಂಬುದರ ಬಗ್ಗೆ ಅವರು ಜನರಿಗೆ ಸರಿಯಾಗಿ ಉಪದೇಶಿಸುತ್ತಿಲ್ಲ. ನನ್ನ ವಿಶೇಷ ವಿಶ್ರಾಂತಿ ದಿವಸಗಳನ್ನು ಮಾನ್ಯ ಮಾಡುತ್ತಿಲ್ಲ. ನಾನು ಏನೂ ಅಲ್ಲವೆಂಬಂತೆ ನನ್ನನ್ನು ಅವರು ನೋಡುತ್ತಾರೆ.


ನೀವು ಇಂಥ ಸುದ್ದಿಯನ್ನು ಕೇಳಿದರೆ, ಅದು ಸತ್ಯವೇ ಎಂಬುದನ್ನು ತಿಳಿದುಕೊಳ್ಳಲು ನಿಮ್ಮಿಂದಾದಷ್ಟು ಪ್ರಯತ್ನಿಸಬೇಕು. ಅದು ಸತ್ಯವೆಂಬುದು ನಿಮಗೆ ತಿಳಿದುಬಂದರೆ ಮತ್ತು ಅಂಥ ಭಯಂಕರ ಸಂಗತಿಯು ನಿಜವಾಗಿಯೂ ಸಂಭವಿಸಿತೆಂದು ನೀವು ರುಜುವಾತುಪಡಿಸಲು ಶಕ್ತರಾಗಿದ್ದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು