1 ಸಮುಯೇಲ 2:16 - ಪರಿಶುದ್ದ ಬೈಬಲ್16 ಯಜ್ಞವನ್ನರ್ಪಿಸುವವನು, “ಕೊಬ್ಬನ್ನು ಮೊದಲು ಹೋಮ ಮಾಡೋಣ. ಅನಂತರ ನಿಮಗೆ ಬೇಕಾದುದನ್ನು ತೆಗೆದುಕೊಳ್ಳಿ” ಎಂದು ಹೇಳಿದರೆ, ಯಾಜಕರ ಸೇವಕನು, “ಇಲ್ಲ, ಯಾಜಕನಿಗಾಗಿ ಕರಿಯಲು ಮಾಂಸವನ್ನು ಈಗಲೇ ಕೊಡು. ನೀನು ಕೊಡುವುದಿಲ್ಲವಾದರೆ, ನಾನೇ ತೆಗೆದುಕೊಳ್ಳುತ್ತೇನೆ” ಎಂದು ಹೇಳುತ್ತಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅರ್ಪಿಸುವವನು, ಮೊದಲು ಕೊಬ್ಬನ್ನು ಹೋಮಮಾಡಲಿ, ಅನಂತರ ನಿನಗೆ ಬೇಕಾದದ್ದನ್ನು ತೆಗೆದುಕೋ ಎಂದು ಹೇಳಿದರೆ ಅವನು, “ಈಗಲೇ ಕೊಡಬೇಕು; ಇಲ್ಲವಾದರೆ ಬಲಾತ್ಕಾರದಿಂದ ತೆಗೆದುಕೊಳ್ಳುವೆನು” ಎನ್ನುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಬಲಿಯರ್ಪಿಸುತ್ತಿದ್ದವನು ಅವನಿಗೆ, “ಮೊದಲು ಕೊಬ್ಬನ್ನು ಹೋಮಮಾಡೋಣ; ಅನಂತರ ನಿನಗೆ ಬೇಕಾದುದನ್ನು ತೆಗೆದುಕೊಳ್ಳುವಿಯಂತೆ,” ಎಂದು ಹೇಳಿದಾಗ, “ಕೂಡದು, ಈಗಲೇ ಬೇಕು; ಇಲ್ಲವಾದರೆ ಬಲಾತ್ಕಾರದಿಂದ ತೆಗೆದುಕೊಳ್ಳುತ್ತೇನೆ,” ಎಂದು ಪೀಡಿಸುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅರ್ಪಿಸುವವನು - ಮೊದಲು ಕೊಬ್ಬನ್ನು ಹೋಮಮಾಡಲಿ, ಅನಂತರ ನಿನಗೆ ಬೇಕಾದದ್ದನ್ನು ತೆಗೆದುಕೋ ಎಂದು ಹೇಳಿದಾಗ ಅವನು - ಈಗಲೇ ಕೊಡಬೇಕು: ಇಲ್ಲವಾದರೆ ಬಲಾತ್ಕಾರದಿಂದ ತೆಗೆದುಕೊಳ್ಳುವೆನು ಎನ್ನುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 “ಮೊದಲು ಕೊಬ್ಬನ್ನು ಸುಡಲಿ, ಅನಂತರ ನಿನಗೆ ಬೇಕಾದದ್ದನ್ನು ತೆಗೆದುಕೋ,” ಎಂದು ಯಾರಾದರೂ ಹೇಳಿದರೆ; ಸೇವಕನು, “ಇಲ್ಲ ಈಗಲೇ ಕೊಡು. ನೀನು ಕೊಡದಿದ್ದರೆ, ನಾನು ಒತ್ತಾಯದಿಂದ ತೆಗೆದುಕೊಳ್ಳುವೆನು,” ಎನ್ನುತ್ತಿದ್ದನು. ಅಧ್ಯಾಯವನ್ನು ನೋಡಿ |