1 ಸಮುಯೇಲ 2:17 - ಪರಿಶುದ್ದ ಬೈಬಲ್17 ಯೆಹೋವನಿಗೆ ಅರ್ಪಿಸುವ ಯಜ್ಞವನ್ನು ಹೊಫ್ನಿ ಮತ್ತು ಫೀನೆಹಾಸರು ತುಚ್ಛೀಕರಿಸುತ್ತಿದ್ದರು. ಇದು ಯೆಹೋವನಿಗೆ ವಿರೋಧವಾದ ಮಹಾ ಪಾಪವಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಹೀಗೆ ಆ ಯೌವನಸ್ಥರು ಯೆಹೋವನ ನೈವೇದ್ಯವನ್ನು ತುಚ್ಛೀಕರಿಸಿದ್ದರಿಂದ ಅವರ ಪಾಪವು ಯೆಹೋವನ ದೃಷ್ಟಿಯಲ್ಲಿ ಆಧಿಕವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಹೀಗೆ ಸರ್ವೇಶ್ವರನ ನೈವೇದ್ಯವನ್ನು ತುಚ್ಛವಾಗಿ ಕಾಣುತ್ತಿದ್ದುದರಿಂದ ದೇವರ ದೃಷ್ಟಿಯಲ್ಲಿ ಏಲಿಯ ಮಕ್ಕಳ ಪಾಪ ಘೋರವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಹೀಗೆ ಆ ಯೌವನಸ್ಥರು ಯೆಹೋವನ ನೈವೇದ್ಯವನ್ನು ತುಚ್ಫೀಕರಿಸಿದ್ದರಿಂದ ಅವರ ಅಪರಾಧವು ಆತನ ದೃಷ್ಟಿಯಲ್ಲಿ ಅಧಿಕವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಈ ಯುವಕರ ಪಾಪವು ಯೆಹೋವ ದೇವರ ದೃಷ್ಟಿಯಲ್ಲಿ ಅಧಿಕವಾಗಿತ್ತು. ಏಕೆಂದರೆ ಅವರು ಯೆಹೋವ ದೇವರ ನೈವೇದ್ಯವನ್ನು ತುಚ್ಛವಾಗಿ ಕಂಡರು. ಅಧ್ಯಾಯವನ್ನು ನೋಡಿ |
ಮನಸ್ಸೆಯು ತನ್ನ ಮಗನನ್ನು ಆಹುತಿಕೊಟ್ಟು ಅವನನ್ನು ಯಜ್ಞವೇದಿಕೆಯ ಮೇಲೆ ಹೋಮಮಾಡಿದನು. ಮನಸ್ಸೆಯು ಭವಿಷ್ಯತ್ಕಾಲವನ್ನು ಅರಿಯಲು ಅನೇಕ ಮಾರ್ಗಗಳಲ್ಲಿ ಪ್ರಯತ್ನಿಸುತ್ತಿದ್ದನು. ಅವನು ಪ್ರೇತಾತ್ಮಗಳನ್ನು ವಶಪಡಿಸಿಕೊಂಡಿರುವ ಮಾಂತ್ರಿಕರನ್ನು ಮತ್ತು ತಾಂತ್ರಿಕರನ್ನು ಭೇಟಿಮಾಡಿದನು. ಯೆಹೋವನು ಕೆಟ್ಟದ್ದೆಂದು ಹೇಳಿದ ಅನೇಕಾನೇಕ ಕಾರ್ಯಗಳನ್ನು ಮನಸ್ಸೆಯು ಮಾಡಿದನು. ಯೆಹೋವನು ಕೋಪಗೊಳ್ಳಲು ಇದು ಕಾರಣವಾಯಿತು.