1 ಸಮುಯೇಲ 2:20 - ಪರಿಶುದ್ದ ಬೈಬಲ್20 ಏಲಿಯು ಎಲ್ಕಾನನನ್ನು ಮತ್ತು ಅವನ ಹೆಂಡತಿಯಾದ ಹನ್ನಳನ್ನು ಆಶೀರ್ವದಿಸಿ, “ಹನ್ನಳು ಯೆಹೋವನನ್ನು ಪ್ರಾರ್ಥಿಸಿ ಪಡೆದ ಮಗನನ್ನು ಆತನಿಗೆ ಒಪ್ಪಿಸಿದ್ದರಿಂದ ಯೆಹೋವನು ಅವಳಿಗೆ ಬೇರೆ ಮಕ್ಕಳನ್ನು ಅನುಗ್ರಹಿಸಲಿ” ಎಂದು ಹೇಳಿದನು. ಆಮೇಲೆ ಎಲ್ಕಾನ ಮತ್ತು ಹನ್ನ ಮನೆಗೆ ಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಏಲಿಯು ಎಲ್ಕಾನನಿಗೆ, “ನೀನು ಯೆಹೋವನಿಗೆ ಒಪ್ಪಿಸಿಬಿಟ್ಟ ಮಗನಿಗೆ ಬದಲಾಗಿ ಆತನು ಈ ಸ್ತ್ರೀಯಿಂದ ನಿನಗೆ ಬೇರೆ ಮಕ್ಕಳನ್ನು ಕೊಡಲಿ” ಎಂದು ಹೇಳಿ ಅವನನ್ನೂ ಅವನ ಹೆಂಡತಿಯನ್ನೂ ಆಶೀರ್ವದಿಸುತ್ತಿದ್ದನು. ಅನಂತರ ಅವರು ಸ್ವಗ್ರಾಮಕ್ಕೆ ಹಿಂದಿರುಗುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಎಲ್ಕಾನನಿಗೆ ಏಲಿ, “ನೀನು ಸರ್ವೇಶ್ವರನಿಗೆ ಸಮರ್ಪಿಸಿಬಿಟ್ಟ ಈ ಮಗನಿಗೆ ಬದಲಾಗಿ ಈ ಹನ್ನಳಿಂದ ನಿನಗೆ ಬೇರೆ ಮಕ್ಕಳಾಗಲಿ!” ಎಂದು ಹೇಳಿ ಅವನನ್ನೂ ಅವನ ಹೆಂಡತಿಯನ್ನೂ ಆಶೀರ್ವದಿಸುತ್ತಿದ್ದನು. ಅನಂತರ ಅವರು ಸ್ವಗ್ರಾಮಕ್ಕೆ ಹಿಂದಿರುಗುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಏಲಿಯು ಎಲ್ಕಾನನಿಗೆ - ನೀನು ಯೆಹೋವನಿಗೆ ಒಪ್ಪಿಸಿಬಿಟ್ಟ ಮಗನಿಗೆ ಬದಲಾಗಿ ಆತನು ಈ ಸ್ತ್ರೀಯಿಂದ ನಿನಗೆ ಬೇರೆ ಮಕ್ಕಳನ್ನು ಕೊಡಲಿ ಎಂದು ಹೇಳಿ ಅವನನ್ನೂ ಅವನ ಹೆಂಡತಿಯನ್ನೂ ಆಶೀರ್ವದಿಸುತ್ತಿದ್ದನು. ಅನಂತರ ಅವರು ತಿರಿಗಿ ಸ್ವಸ್ಥಳಕ್ಕೆ ಹೋಗುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆಗ ಏಲಿಯು ಎಲ್ಕಾನನನ್ನೂ, ಅವನ ಹೆಂಡತಿಯನ್ನೂ, “ಯೆಹೋವ ದೇವರಿಗೆ ಸಮರ್ಪಿಸಿಬಿಟ್ಟ ಈ ಮಗನಿಗೆ ಬದಲಾಗಿ ಈ ಹನ್ನಳಿಂದ ಯೆಹೋವ ದೇವರು ನಿನಗೆ ಬೇರೆ ಮಕ್ಕಳನ್ನು ದಯಪಾಲಿಸಲಿ,” ಎಂದು ಆಶೀರ್ವದಿಸುತ್ತಿದ್ದನು. ಅನಂತರ ಅವರು ತಿರುಗಿ ತಮ್ಮ ಮನೆಗೆ ಹಿಂದಿರುಗುತ್ತಿದ್ದರು. ಅಧ್ಯಾಯವನ್ನು ನೋಡಿ |
ಅವಳು ದೇವರಲ್ಲಿ ಒಂದು ವಿಶೇಷ ವಾಗ್ದಾನವನ್ನು ಮಾಡಿದಳು. ಅವಳು, “ಯೆಹೋವನೇ, ಸರ್ವಶಕ್ತನೇ, ನಾನು ಎಷ್ಟು ದುಃಖಿತಳೆಂಬುದನ್ನು ನೋಡು, ನನ್ನನ್ನು ಜ್ಞಾಪಿಸಿಕೊ! ನನ್ನನ್ನು ಮರೆಯದಿರು. ನೀನು ನನಗೊಬ್ಬ ಮಗನನ್ನು ಕರುಣಿಸಿದರೆ, ಅವನು ಜೀವದಿಂದಿರುವ ತನಕ ನಿನ್ನವನಾಗಿರುವಂತೆ ನಿನಗೇ ಪ್ರತಿಷ್ಠಿಸುತ್ತೇನೆ. ಅವನು ನಾಜೀರನಾಗಿರುವನು. ಅವನು ದ್ರಾಕ್ಷಾರಸವನ್ನಾಗಲಿ ಇತರೆ ಮದ್ಯವನ್ನಾಗಲಿ ಸೇವಿಸುವುದಿಲ್ಲ. ಅವನ ತಲೆಕೂದಲನ್ನು ಕ್ಷೌರ ಕತ್ತಿಯಿಂದ ಕತ್ತರಿಸುವುದಿಲ್ಲ” ಎಂದು ಹೇಳಿದಳು