Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 2:29 - ಪರಿಶುದ್ದ ಬೈಬಲ್‌

29 ಹೀಗಿರುವಾಗ ಆ ಯಜ್ಞಗಳನ್ನು ಮತ್ತು ಕಾಣಿಕೆಗಳನ್ನು ನೀವು ಗೌರವಿಸದಿರುವುದೇಕೇ? ನಿನ್ನ ಮಕ್ಕಳನ್ನು ನನಗಿಂತ ಹೆಚ್ಚು ಗೌರವಿಸುತ್ತಿರುವೆ. ಇಸ್ರೇಲರು ನನಗಾಗಿ ತರುವ ಯಜ್ಞಮಾಂಸದ ಉತ್ತಮ ಭಾಗಗಳಿಂದ ನಿಮ್ಮನ್ನು ಕೊಬ್ಬಿಸಿಕೊಂಡಿರುವಿರಿ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ನನ್ನ ಪ್ರಜೆಗಳಾದ ಇಸ್ರಾಯೇಲರು ನನ್ನ ಆಜ್ಞಾನುಸಾರವಾಗಿ ನನ್ನ ಮಂದಿರಕ್ಕೆ ತರುವ ಯಜ್ಞನೈವೇದ್ಯಗಳ ಘನತೆಯನ್ನು ನೀವು ಭಂಗಪಡಿಸಿ, ಅವುಗಳ ಶ್ರೇಷ್ಠ ಭಾಗಗಳಿಂದ ನಿಮ್ಮನ್ನು ಕೊಬ್ಬಿಸಿಕೊಳ್ಳುವುದೇಕೆ? ನೀನು ನನ್ನನ್ನು ಗೌರವಿಸುವುದಕ್ಕಿಂತ ಹೆಚ್ಚಾಗಿ ನಿನ್ನ ಮಕ್ಕಳನ್ನೇ ಗೌರವಿಸುವುದು ಸರಿಯೋ?’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಆದರೆ ನನ್ನ ಪ್ರಜೆ ಇಸ್ರಯೇಲರು ನನ್ನ ಆಜ್ಞಾನುಸಾರ ನನ್ನ ಮಂದಿರಕ್ಕೆ ತರುವ ಬಲಿದಾನಗಳ ಹಾಗು ನೈವೇದ್ಯಗಳ ಘನತೆಯನ್ನು ನೀವು ಭಂಗಪಡಿಸಿದ್ದೀರಿ. ಅವುಗಳ ಶ್ರೇಷ್ಠಭಾಗಗಳಿಂದ ನಿಮ್ಮನ್ನೇ ಕೊಬ್ಬಿಸಿಕೊಳ್ಳುತ್ತಿದ್ದೀರಿ; ಏಕೆ? ನೀನು ನನ್ನನ್ನು ಗೌರವಿಸುವುದಕ್ಕಿಂತ ಹೆಚ್ಚಾಗಿ ನಿನ್ನ ಮಕ್ಕಳನ್ನೇ ಗೌರವಿಸುವುದು ಸರಿಯೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ನನ್ನ ಪ್ರಜೆಗಳಾದ ಇಸ್ರಾಯೇಲ್ಯರು ನನ್ನ ಆಜ್ಞಾನುಸಾರವಾಗಿ ನನ್ನ ಮಂದಿರಕ್ಕೆ ತರುವ ಯಜ್ಞನೈವೇದ್ಯಗಳ ಘನತೆಯನ್ನು ನೀವು ಭಂಗಪಡಿಸಿ ಅವುಗಳ ಶ್ರೇಷ್ಠ ಭಾಗಗಳಿಂದ ನಿಮ್ಮನ್ನು ಕೊಬ್ಬಿಸಿಕೊಳ್ಳುವದೇಕೆ? ನೀನು ನನ್ನನ್ನು ಗೌರವಿಸುವದಕ್ಕಿಂತ ಹೆಚ್ಚಾಗಿ ನಿನ್ನ ಮಕ್ಕಳನ್ನೇ ಗೌರವಿಸುವದು ಸರಿಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ನನ್ನ ಜನರಾದ ಇಸ್ರಾಯೇಲರು ನನಗೆ ಅರ್ಪಿಸುವ ತಮ್ಮ ಅರ್ಪಣೆಗಳಲ್ಲಿ ಪ್ರಾಮುಖ್ಯವಾದವುಗಳಿಂದ ನಿಮ್ಮನ್ನು ಕೊಬ್ಬಿಸಿಕೊಳ್ಳುವುದಕ್ಕೆ ನನ್ನ ವಾಸಸ್ಥಳದಲ್ಲಿ ನಾನು ಆಜ್ಞಾಪಿಸಿದ ನನ್ನ ಬಲಿಯನ್ನೂ, ಅರ್ಪಣೆಯನ್ನೂ ನೀವು ಒದ್ದು, ನನಗಿಂತ ನಿನ್ನ ಮಕ್ಕಳನ್ನು ಘನಪಡಿಸುವುದೇನು?’

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 2:29
22 ತಿಳಿವುಗಳ ಹೋಲಿಕೆ  

“ಯಾರಾದರೂ ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ತಂದೆ ಅಥವಾ ತಾಯಿಯನ್ನು ಪ್ರೀತಿಸಿದರೆ, ಅವನು ನನ್ನ ಹಿಂಬಾಲಕನಾಗಲು ಯೋಗ್ಯನಲ್ಲ. ಯಾವನಾದರೂ ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ಮಗನನ್ನು ಇಲ್ಲವೆ ಮಗಳನ್ನು ಪ್ರೀತಿಸಿದರೆ, ಅವನು ನನ್ನ ಹಿಂಬಾಲಕನಾಗಲು ಯೋಗ್ಯನಲ್ಲ.


“ಆದರೆ ಯೆಶುರೂನು ಕೊಬ್ಬಿದನು; ಕೊಬ್ಬಿದ ಹೋರಿಯಂತೆ ಒದ್ದನು; ಅವನು ಚೆನ್ನಾಗಿ ತಿಂದು ಕೊಬ್ಬಿ ಊದಿಕೊಂಡನು; ತನ್ನ ನಿರ್ಮಾಣಿಕನಾದ ಯೆಹೋವನನ್ನು ತೊರೆದನು; ತನ್ನನ್ನು ಸಂರಕ್ಷಿಸಿದ ಬಂಡೆಯಿಂದ ಓಡಿಹೋದನು;


“ನನ್ನ ಬಳಿಗೆ ಬರುವವನು ನನ್ನನ್ನು ಪ್ರೀತಿಸುವುದಕ್ಕಿಂತಲೂ ಹೆಚ್ಚಾಗಿ ತನ್ನ ತಂದೆತಾಯಿಗಳನ್ನು, ಹೆಂಡತಿಯನ್ನು, ಮಕ್ಕಳನ್ನು, ಸಹೋದರ ಸಹೋದರಿಯರನ್ನು ಮತ್ತು ತನ್ನನ್ನು ಪ್ರೀತಿಸುವುದಾದರೆ, ಅವನು ನನ್ನ ಶಿಷ್ಯನಾಗಿರಲು ಸಾಧ್ಯವಿಲ್ಲ.


ಆದರೆ ದೇವರಿಂದ ಬರುವ ಜ್ಞಾನವು ಹೀಗಿರುತ್ತದೆ: ಮೊದಲನೆಯದಾಗಿ ಅದು ಪರಿಶುದ್ಧವಾದದ್ದು. ಅದು ಶಾಂತಿದಾಯಕವಾದದ್ದು, ಸಾತ್ವಿಕವಾದದ್ದು ಮತ್ತು ಸುಲಭವಾಗಿ ಮೆಚ್ಚಿಕೊಳ್ಳುವಂಥದ್ದು. ಈ ಜ್ಞಾನವು ತೊಂದರೆಯಲ್ಲಿರುವ ಜನರಿಗೆ ಸಹಾಯ ಮಾಡಲು ಮತ್ತು ಇತರ ಜನರಿಗೆ ಒಳ್ಳೆಯದನ್ನು ಮಾಡಲು ಯಾವಾಗಲೂ ಸಿದ್ಧವಾಗಿರುತ್ತದೆ. ಈ ಜ್ಞಾನವು ಯಾವಾಗಲೂ ನ್ಯಾಯವಾದದ್ದು ಮತ್ತು ಯಥಾರ್ಥವಾದದ್ದು.


ಫರಿಸಾಯರು ಯೇಸುವನ್ನು ವಂಚಿಸುವುದಕ್ಕೆ ಕೆಲವರನ್ನು ಕಳುಹಿಸಿದರು. ಅವರಲ್ಲಿ ಕೆಲವರು ಫರಿಸಾಯರ ಹಿಂಬಾಲಕರಾಗಿದ್ದರು. ಇನ್ನು ಕೆಲವರು ಯೆಹೂದ್ಯರ ರಾಜಕೀಯ ಪಂಗಡಕ್ಕೆ ಸೇರಿದವರಾಗಿದ್ದರು. ಈ ಜನರು, “ಬೋಧಕನೇ, ನೀನು ಯಥಾರ್ಥವಂತನೆಂದು ನಾವು ಬಲ್ಲೆವು. ನೀನು ದೇವರ ಮಾರ್ಗದ ಕುರಿತು ಸತ್ಯವನ್ನೇ ಬೋಧಿಸುವೆ ಎಂಬುದು ನಮಗೆ ಗೊತ್ತಿದೆ. ಬೇರೆಯವರು ನಿನ್ನ ವಿಷಯವಾಗಿ ಏನೇ ಯೋಚಿಸಿದರೂ ನೀನು ಹೆದರುವುದಿಲ್ಲ. ನೀನು ಮುಖದಾಕ್ಷಿಣ್ಯ ಮಾಡುವುದಿಲ್ಲ.


ಕೆಲವು ಸುಳ್ಳುಪ್ರವಾದಿಗಳೆದ್ದು ಯೆಹೋವನ ಜನರಿಗೆ ಸುಳ್ಳನ್ನು ತಿಳಿಸುತ್ತಾರೆ. ಅಂಥವರ ಬಗ್ಗೆ ಯೆಹೋವನು ಹೇಳುವುದೇನೆಂದರೆ, “ಈ ಪ್ರವಾದಿಗಳ ಮಾತುಗಳು ಅವರ ಹೊಟ್ಟೆಗಳನ್ನವಲಂಬಿಸಿವೆ. ಜನರು ಅವರಿಗೆ ಆಹಾರ ಕೊಟ್ಟರೆ ಶಾಂತಿಯನ್ನು ವಾಗ್ದಾನ ಮಾಡುತ್ತಾರೆ. ಜನರು ಅವರಿಗೆ ಆಹಾರ ಕೊಡದಿದ್ದರೆ ಯುದ್ಧವನ್ನು ವಾಗ್ದಾನ ಮಾಡುತ್ತಾರೆ.


“ಜನರ ಪಾಪದೊಂದಿಗೆ ಯಾಜಕರೂ ಒಂದಾದರು, ಅವರು ಹೆಚ್ಚುಹೆಚ್ಚು ಪಾಪಗಳನ್ನು ಮಾಡಲು ಆಶಿಸಿದರು.


“ನರಪುತ್ರನೇ, ನೀನು ಇಸ್ರೇಲರ ಕುರುಬರ ಸಂಗಡ ನನ್ನ ಪರವಾಗಿ ಮಾತನಾಡು. ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ ಎಂದು ಅವರಿಗೆ ಹೇಳು, ‘ಇಸ್ರೇಲರ ಕುರುಬರೇ, ನೀವು ನೀವಾಗಿಯೇ ಹೊಟ್ಟೆ ತುಂಬಿಸಿಕೊಳ್ಳುತ್ತೀರಿ. ಇದು ಸರಿಯಲ್ಲ. ನಿಮ್ಮ ಮಂದೆಗೆ ನೀವು ಆಹಾರ ಯಾಕೆ ಒದಗಿಸುವುದಿಲ್ಲ?


ಇಸ್ರೇಲರೆಲ್ಲರು ಶೀಲೋವಿನಲ್ಲಿ ಒಟ್ಟಾಗಿ ಸೇರಿದರು. ಆ ಸ್ಥಳದಲ್ಲಿ ಅವರು ದೇವದರ್ಶನ ಗುಡಾರವನ್ನು ನಿಲ್ಲಿಸಿದರು. ಇಸ್ರೇಲರು ಆ ದೇಶವನ್ನು ಸ್ವಾಧೀನ ಮಾಡಿಕೊಂಡಿದ್ದರು. ಅವರು ಆ ದೇಶದ ಎಲ್ಲ ಶತ್ರುಗಳನ್ನು ಸೋಲಿಸಿದ್ದರು.


ಯೆಹೋವನೇ, ಅವರು ನಿನಗಾಗಿ ಚಿಂತಿಸಿದರು; ಸ್ವಂತ ಸಂಸಾರಕ್ಕಿಂತಲೂ ಹೆಚ್ಚಾಗಿ ನಿನ್ನನ್ನು ಪ್ರೀತಿಸಿದರು; ಅವರು ನಿನಗಾಗಿ ತಮ್ಮ ತಂದೆತಾಯಿಗಳನ್ನು ನಿರ್ಲಕ್ಷಿಸಿದರು; ಒಡಹುಟ್ಟಿದವರನ್ನೂ ಗುರುತಿಸಲಿಲ್ಲ. ಅವರು ತಮ್ಮ ಮಕ್ಕಳಿಗೆ ಪ್ರಾಮುಖ್ಯತೆಯನ್ನು ಕೊಡಲಿಲ್ಲ; ಅವರು ನಿನ್ನ ಕಟ್ಟಳೆಗಳನ್ನು ಅನುಸರಿಸಿ ಒಡಂಬಡಿಕೆಯನ್ನು ಕಾಪಾಡಿದರು.


“ನೀವು ಕೊಡುವ ತೀರ್ಪು ನ್ಯಾಯವಾಗಿರಬೇಕು. ಬಡವರ ಬಡತನವನ್ನಾಗಲಿ ಪ್ರಾಮುಖ್ಯರ ದೊಡ್ಡಸ್ತಿಕೆಯನ್ನಾಗಲಿ ಗಮನಿಸದೆ ಪಕ್ಷಪಾತವಿಲ್ಲದೆ ತೀರ್ಪುಕೊಡಬೇಕು. ನೀವು ನಿಮ್ಮ ನೆರೆಯವನಿಗೆ ತೀರ್ಪುಮಾಡುವಾಗ ನ್ಯಾಯದ ತೀರ್ಪುಕೊಡಿರಿ.


ಹೀಗಿರಲಾಗಿ, ಲೋಕವು ಜನರ ವಿಷಯವಾಗಿ ಯೋಚಿಸುವಂತೆ ಇಂದಿನಿಂದ ನಾವು ಯಾರ ಬಗ್ಗೆಯೂ ಯೋಚಿಸುವುದಿಲ್ಲ. ಲೋಕವು ಯೋಚಿಸುವಂತೆ ಹಿಂದಿನ ಕಾಲದಲ್ಲಿ ನಾವು ಕ್ರಿಸ್ತನ ಬಗ್ಗೆ ಯೋಚಿಸಿಕೊಂಡಿದ್ದೆವು. ಆದರೆ ಈಗ ನಾವು ಆ ರೀತಿಯಲ್ಲಿ ಯೋಚಿಸುವುದಿಲ್ಲ.


ಅಂಥ ಜನರು ನಮ್ಮ ಪ್ರಭುವಾದ ಕ್ರಿಸ್ತನ ಸೇವೆ ಮಾಡುತ್ತಿಲ್ಲ. ಅವರು ಕೇವಲ ತಮ್ಮ ಸುಖಕ್ಕಾಗಿ ಈ ಕಾರ್ಯಗಳನ್ನು ಮಾಡುತ್ತಿದ್ದಾರೆ. ಕೆಟ್ಟದರ ಬಗ್ಗೆ ತಿಳಿದಿಲ್ಲದ ಜನರ ಮನಸ್ಸುಗಳನ್ನು ಮೋಸಗೊಳಿಸುವುದಕ್ಕಾಗಿ ಅವರು ನಯನಾಜುಕಿನ ನುಡಿಗಳನ್ನಾಡುತ್ತಾರೆ ಮತ್ತು ಮುಖಸ್ತುತಿಯ ಮಾತುಗಳನ್ನಾಡುತ್ತಾರೆ.


ಜನರೆದುರಿನಲ್ಲಿ ನನಗೆ ನೀವು ಮಹತ್ವವನ್ನು ಕೊಡುವದಿಲ್ಲ. ಸ್ವಲ್ಪ ಬಾರ್ಲಿಗಾಗಿಯೂ ಕೆಲವು ತುಂಡು ರೊಟ್ಟಿಗಾಗಿಯೂ ನೀವು ನನಗೆ ವಿರುದ್ಧವಾಗಿ ವರ್ತಿಸುತ್ತೀರಿ. ನನ್ನ ಜನರಿಗೆ ನೀವು ಸುಳ್ಳನ್ನು ಆಡುತ್ತೀರಿ. ಅವರಿಗೆ ಸುಳ್ಳೆಂದರೆ ಬಹಳ ಪ್ರೀತಿ. ನೀವು ಸಾಯತಕ್ಕಲ್ಲದವರನ್ನು ಸಾವಿಗೀಡು ಮಾಡುತ್ತೀರಿ. ಬದುಕತಕ್ಕಲ್ಲದವರನ್ನು ಜೀವಂತವಾಗಿಡುತ್ತೀರಿ.


ಏಲಿಯ ಕುಟುಂಬವನ್ನು ನಿತ್ಯದಂಡನೆಗೆ ಗುರಿಪಡಿಸುತ್ತೇನೆಂದು ನಾನು ಏಲಿಗೆ ಹೇಳಿರುವೆನು. ಏಲಿಯ ಮಕ್ಕಳು ನನಗೆ ವಿರೋಧವಾಗಿ ಮಾತಾಡಿದ್ದರಿಂದ ಮತ್ತು ಕೆಟ್ಟಕಾರ್ಯಗಳನ್ನು ಮಾಡಿದ್ದರಿಂದ ನಾನು ಇದನ್ನು ಮಾಡುತ್ತೇನೆ. ಅಲ್ಲದೆ ಅವರನ್ನು ಹತೋಟಿಯಲ್ಲಿಡಲು ಏಲಿಗೆ ಸಾಧ್ಯವಾಗಲಿಲ್ಲ.


ಯೆಹೋವನೇ, ನಿನ್ನ ಆಲಯವೂ ನಿನ್ನ ಮಹಿಮಾಗುಡಾರವೂ ನನಗೆ ಎಷ್ಟೋ ಪ್ರಿಯವಾಗಿವೆ.


ಯೆಹೋವನು ಹೇಳುವುದೇನೆಂದರೆ, “ನಾನು ಆ ಕುರುಬರಿಗೆ ವಿರುದ್ಧವಾಗಿದ್ದೇನೆ. ಅವರ ಕೈಯಿಂದ ನನ್ನ ಕುರಿಗಳ ಬಗ್ಗೆ ವಿಚಾರಿಸುವೆನು. ನಾನು ಅವರನ್ನು ತೊಲಗಿಸಿ ಬಿಡುವೆನು. ಇನ್ನು ಮುಂದೆ ಅವರು ನನ್ನ ಕುರುಬರಾಗಿರುವುದಿಲ್ಲ. ಇನ್ನು ಅವರಿಗೆ ತಮ್ಮ ಹೊಟ್ಟೆ ತುಂಬಿಸಿಕೊಳ್ಳಲು ಸಾಧ್ಯವಿಲ್ಲ. ನನ್ನ ಕುರಿಗಳನ್ನು ಅವರ ಬಾಯಿಂದ ತಪ್ಪಿಸುವೆನು. ಆಗ ನನ್ನ ಕುರಿಗಳು ಅವರಿಗೆ ಆಹಾರವಾಗುವುದಿಲ್ಲ.”


ಆದರೆ ಯಾಜಕರು ಸರಿಪಡಿಸಲಿಲ್ಲ. ಯೆಹೋವಾಷನು ರಾಜನಾದ ಇಪ್ಪತ್ತಮೂರನೆಯ ವರ್ಷದಲ್ಲಿ, ಯಾಜಕರಿನ್ನೂ ದೇವಾಲಯವನ್ನು ಸರಿಪಡಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು