Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 2:3 - ಪರಿಶುದ್ದ ಬೈಬಲ್‌

3 ಇನ್ನು ಮುಂದೆ ಬಡಾಯಿಕೊಚ್ಚಬೇಡಿ! ಸೊಕ್ಕಿನ ಮಾತುಗಳನ್ನು ಆಡಬೇಡಿ! ಏಕೆಂದರೆ ಯೆಹೋವನು ಪ್ರತಿಯೊಂದನ್ನು ಬಲ್ಲನು. ಆತನು ಮನುಷ್ಯರನ್ನು ಮುನ್ನಡೆಸುತ್ತಾನೆ ಮತ್ತು ತೂಗಿ ನೋಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 “ಇನ್ನು ಮುಂದೆ ಗರ್ವದಿಂದ ಮಾತನಾಡಬೇಡಿರಿ; ಸೊಕ್ಕಿನ ಮಾತು ನಿಮ್ಮ ಬಾಯಿಂದ ಹೊರಡದಿರಲಿ. ದೇವರಾದ ಯೆಹೋವನು ಸರ್ವಜ್ಞನು; ಆತನು ಮನುಷ್ಯರ ಕ್ರಿಯೆಗಳನ್ನು ತೂಗಿನೋಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಇನ್ನು ನಿಲ್ಲಲಿ ಗರ್ವದ ಮಾತು ಬಾಯಿಂದ ಬರದಿರಲಿ ಸೊಕ್ಕಿನ ಸೊಲ್ಲು; ಸರ್ವೇಶ್ವರನಾದ ದೇವನೇ ಸರ್ವಜ್ಞನು. ಮಾನವಕ್ರಿಯೆಗಳ ತೂಕ ನೋಡುವಾತನವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಇನ್ನು ಮುಂದೆ ಹವ್ಮಿುನಿಂದ ನುಡಿಯಬೇಡಿರಿ; ಸೊಕ್ಕಿನ ಮಾತು ನಿಮ್ಮ ಬಾಯಿಂದ ಹೊರಡದಿರಲಿ. ದೇವರಾದ ಯೆಹೋವನು ಸರ್ವಜ್ಞನು; ಆತನು ಮನುಷ್ಯರ ಕ್ರಿಯೆಗಳನ್ನು ತೂಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 “ಇನ್ನು ಮೇಲೆ ಗರ್ವದಿಂದ ಮಾತನಾಡಬೇಡಿರಿ. ನಿಮ್ಮ ಬಾಯಿಂದ ಕಠಿಣ ಮಾತು ಹೊರಡದಿರಲಿ. ಏಕೆಂದರೆ ಯೆಹೋವ ದೇವರು ತಿಳುವಳಿಕೆಯುಳ್ಳ ದೇವರು. ಅವರು ಮನುಷ್ಯರ ಕಾರ್ಯಗಳನ್ನು ತೂಗಿನೋಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 2:3
26 ತಿಳಿವುಗಳ ಹೋಲಿಕೆ  

ಯೆಹೋವನಲ್ಲಿ ಭಯಭಕ್ತಿಯಿರುವವನು ಪಾಪವನ್ನು ದ್ವೇಷಿಸುತ್ತಾನೆ. ಜ್ಞಾನವೆಂಬ ನಾನು ಗರ್ವವನ್ನೂ ಅಹಂಭಾವವನ್ನೂ ದುರ್ಮಾರ್ಗತನವನ್ನೂ ಸುಳ್ಳಾಡುವ ಬಾಯನ್ನೂ ದ್ವೇಷಿಸುತ್ತೇನೆ.


ದಯವಿಟ್ಟು ಅವನ ಪ್ರಾರ್ಥನೆಯನ್ನು ನಿನ್ನ ನಿವಾಸವಾದ ಪರಲೋಕದಿಂದ ಆಲಿಸಿ, ಜನರನ್ನು ಕ್ಷಮಿಸಿ, ಅವರಿಗೆ ಸಹಾಯ ಮಾಡು. ಜನರು ನಿಜವಾಗಿ ಆಲೋಚಿಸುವ ಸಂಗತಿಗಳು ನಿನಗೆ ಮಾತ್ರ ತಿಳಿದಿವೆ. ಆದ್ದರಿಂದ ಪ್ರತಿಯೊಬ್ಬ ವ್ಯಕ್ತಿಗೂ ತೀರ್ಪುನೀಡು ಮತ್ತು ಅವನಿಗೆ ನ್ಯಾಯವಾದದ್ದನ್ನು ಮಾಡು.


“ಇದರ ಬಗ್ಗೆ ನನಗೆ ಗೊತ್ತಿರಲಿಲ್ಲ” ಎಂದು ನೀನು ಹೇಳಲಾಗದು. ಯೆಹೋವನಿಗೆ ಪ್ರತಿಯೊಂದು ತಿಳಿದಿದೆ. ನಿನ್ನ ಕಾರ್ಯಗಳ ಉದ್ದೇಶವೂ ಆತನಿಗೆ ತಿಳಿದಿದೆ. ಯೆಹೋವನು ನಿನ್ನನ್ನು ಗಮನಿಸಿ ನಿನ್ನ ಕಾರ್ಯಗಳಿಗೆ ಪ್ರತಿಫಲ ಕೊಡುವನು.


ದೇವರ ವಾಕ್ಯವು ಸಜೀವವಾದದ್ದು, ಕಾರ್ಯ ಸಾಧಕವಾದದ್ದು. ಅದು ಅತ್ಯಂತ ಹರಿತವಾದ ಖಡ್ಗಕ್ಕಿಂತಲೂ ಹರಿತವಾಗಿದ್ದು ನಾಟಿಕೊಳ್ಳುತ್ತದೆ. ಆತ್ಮಪ್ರಾಣಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುತ್ತದೆ; ನಮ್ಮ ಹೃದಯದ ಉದ್ದೇಶಗಳನ್ನು ಮತ್ತು ಆಲೋಚನೆಗಳನ್ನು ವಿವೇಚಿಸುತ್ತದೆ.


ಜನರು ತಮ್ಮ ಕಾರ್ಯಗಳೆಲ್ಲಾ ಸರಿಯೆಂದು ಆಲೋಚಿಸಿಕೊಂಡರೂ ಅವುಗಳ ಉದ್ದೇಶಕ್ಕನುಸಾರವಾಗಿ ತೀರ್ಪು ಕೊಡುವವನು ಯೆಹೋವನೇ.


ನೀನು ಅವಮಾನಪಡಿಸಿ ಪರಿಹಾಸ್ಯ ಮಾಡಿ ವಿರೋಧವಾಗಿ ಮಾತಾಡಿದ್ದು ಯಾರಿಗೆ? ನೀನು ಇಸ್ರೇಲಿನ ಪರಿಶುದ್ಧನಿಗೆ ವಿರುದ್ಧವಾಗಿರುವೆ. ಆತನಿಗಿಂತ ನೀನೇ ಉತ್ತಮನೆಂಬ ರೀತಿಯಲ್ಲಿ ನೀನು ವರ್ತಿಸಿರುವೆ.


ನಮ್ಮ ಒಡೆಯನು ಬಹು ದೊಡ್ಡವನೂ ಪರಾಕ್ರಮಿಯೂ ಆಗಿದ್ದಾನೆ. ಆತನ ಜ್ಞಾನವು ಅಪರಿಮಿತವಾಗಿದೆ.


ಆ ಅಪರಾಧಿಗಳು ತಮ್ಮ ದುಷ್ಕೃತ್ಯಗಳ ಬಗ್ಗೆ ಇನ್ನೆಷ್ಟರವರೆಗೆ ಜಂಬ ಕೊಚ್ಚಿಕೊಳ್ಳುವರು?


ದೇವರಿಗೆ ಇವು ಖಂಡಿತವಾಗಿ ತಿಳಿದಿವೆ. ನಮ್ಮ ಅಂತರಾಳದ ರಹಸ್ಯಗಳನ್ನು ಸಹ ಆತನು ಬಲ್ಲನು.


ದೇವರು ನ್ಯಾಯವಾದ ಅಳತೆಮಾನಗಳಿಂದ ನನ್ನನ್ನು ತೂಗಿದರೆ, ನಾನು ನಿರಪರಾಧಿಯೆಂದು ಆತನಿಗೆ ಗೊತ್ತಾಗುವುದು.


ಆದರೆ ಯೆಹೋವನು ಸಮುವೇಲನಿಗೆ, “ಎಲೀಯಾಬನ ಎತ್ತರವನ್ನಾಗಲಿ ರೂಪವನ್ನಾಗಲಿ ಪರಿಗಣಿಸಬೇಡ. ಯಾಕೆಂದರೆ ನಾನು ಅವನನ್ನು ತಿರಸ್ಕರಿಸಿದ್ದೇನೆ. ಮನುಷ್ಯರಾದರೋ ಹೊರತೋರಿಕೆಯನ್ನು ಪರಿಗಣಿಸುತ್ತಾರೆ; ಯೆಹೋವನಾದರೋ ಹೊರತೋರಿಕೆಯನ್ನು ನೋಡದೆ ಹೃದಯವನ್ನೇ ನೋಡುವವನಾಗಿದ್ದಾನೆ” ಎಂದು ಹೇಳಿದನು.


ನಾನು ಅವಳ ಹಿಂಬಾಲಕರನ್ನು ಕೊಲ್ಲುತ್ತೇನೆ. ಮನುಷ್ಯರ ಅಂತರಂಗವನ್ನೂ ಅವರ ಆಲೋಚನೆಗಳನ್ನೂ ತಿಳಿದಿರುವಾತನು ನಾನೇ ಎಂಬುದನ್ನು ಆಗ ಎಲ್ಲಾ ಸಭೆಗಳವರು ತಿಳಿದುಕೊಳ್ಳುವರು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕಾರ್ಯಗಳಿಗೆ ತಕ್ಕ ಪ್ರತಿಫಲವನ್ನು ನೀಡುತ್ತೇನೆ.


ಯೆಹೋವನು ಹೀಗೆನ್ನುತ್ತಾನೆ, “ನೀವು ನನಗೆ ವಿರುದ್ಧವಾಗಿ ಹೇಯ ಮಾತುಗಳನ್ನಾಡಿದಿರಿ.” ಅದಕ್ಕೆ ನೀವು “ನಿನ್ನ ವಿರುದ್ಧವಾಗಿ ಏನು ಹೇಳಿದ್ದೇವೆ?” ಎಂದು ಕೇಳುತ್ತೀರಿ.


ತೆಕೇಲ್ ಎಂದರೆ: ನೀನು ತಕ್ಕಡಿಯಲ್ಲಿ ತೂಗಲ್ಪಟ್ಟು ಕಡಿಮೆಯಾಗಿ ಕಂಡುಬಂದಿರುವೆ.


ಅರಸ ನೆಬೂಕದ್ನೆಚ್ಚರನಾದ ನಾನು ಈಗ ಪರಲೋಕದ ರಾಜನನ್ನು ಘನಪಡಿಸುತ್ತೇನೆ, ಮಹಿಮೆಪಡಿಸುತ್ತೇನೆ. ಆತನು ಮಾಡುವದೆಲ್ಲ ಸರಿ. ಆತನು ಯಾವಾಗಲೂ ನ್ಯಾಯವಂತನಾಗಿದ್ದಾನೆ. ಆತನು ಗರ್ವಿಷ್ಠರನ್ನು ದೀನರನ್ನಾಗಿ ಮಾಡಬಲ್ಲನು.


ನಾನೇ ಯೆಹೋವನು, ನಾನು ಮನುಷ್ಯನ ಹೃದಯದ ಆಳವನ್ನು ನೋಡಬಲ್ಲೆ, ಮನುಷ್ಯನ ಬುದ್ಧಿಯನ್ನು ಪರೀಕ್ಷಿಸಬಲ್ಲೆ. ಆದ್ದರಿಂದ ಪ್ರತಿಯೊಬ್ಬ ಮನುಷ್ಯನಿಗೆ ತಕ್ಕ ಪ್ರತಿಫಲವನ್ನು ನಾನು ನಿರ್ಧರಿಸಬಲ್ಲೆ. ಪ್ರತಿಯೊಬ್ಬ ಮನುಷ್ಯನಿಗೆ ಅವನ ಕೆಲಸಕ್ಕೆ ತಕ್ಕಂತೆ ಸರಿಯಾಗಿ ಫಲವನ್ನು ಕೊಡುವೆನು.


ಪ್ರಾಮಾಣಿಕತೆಯು ಒಳ್ಳೆಯವರ ಜೀವನ ಶೈಲಿ. ಅವರು ನೇರವಾದ ಮತ್ತು ಸತ್ಯವಾದ ಮಾರ್ಗವನ್ನು ಅನುಸರಿಸುವರು. ಯೆಹೋವನೇ, ನೀನು ಆ ಮಾರ್ಗವನ್ನು ಅನುಸರಿಸಲು ಸುಲಭವಾಗುವಂತೆ ಮಾಡುವೆ.


ಆ ದುಷ್ಟರು ಗರ್ವಿಷ್ಠರಾಗಿದ್ದಾರೆ. ಅವರು ಜಂಬಕೊಚ್ಚಿಕೊಳ್ಳುತ್ತಾರೆ.


ಕೆಡುಕರು ಜಂಬಕೊಚ್ಚಿಕೊಳ್ಳುತ್ತಾ ಒಳ್ಳೆಯವರ ಬಗ್ಗೆ ಸುಳ್ಳು ಹೇಳುವರು. ಅವರು ದುರಹಂಕಾರಿಗಳಾಗಿದ್ದಾರೆ; ಅವರ ಸುಳ್ಳುತುಟಿಗಳು ಮೌನಗೊಳ್ಳುತ್ತವೆ.


“ನಮ್ಮ ದೇವರು ಯೆಹೋವನೇ! ನಮ್ಮ ದೇವರು ಯೆಹೋವನೇ ಎಂದು ಇನ್ನೊಮ್ಮೆ ನಾವು ಹೇಳುತ್ತೇವೆ. ನಾವು ಇದನ್ನು ಏಕೆ ಮಾಡಿದೆವೆಂಬುದು ದೇವರಿಗೆ ತಿಳಿದಿದೆ. ನೀವೂ ಅದನ್ನು ತಿಳಿದುಕೊಂಡಿರಬೇಕೆಂಬುದು ನಮ್ಮ ಆಶೆ. ನಾವು ಮಾಡಿದ್ದನ್ನು ನೀವು ವಿವೇಚಿಸಿ ನೋಡಬಹುದು. ನಾವೇನಾದರೂ ತಪ್ಪುಮಾಡಿದ್ದೇವೆಂದು ಅನಿಸಿದ್ದಲ್ಲಿ ಆಗ ನೀವು ನಮ್ಮನ್ನು ಕೊಲ್ಲಬಹುದು.


ಆಗ ಜೆಬುಲನು ಗಾಳನಿಗೆ, “ನೀನು ಈಗೇಕೆ ಬಡಾಯಿ ಕೊಚ್ಚುತ್ತಾ ಇಲ್ಲ? ‘ಅಬೀಮೆಲೆಕನು ಯಾರು? ನಾವು ಅವನ ಆಜ್ಞೆಯನ್ನು ಏಕೆ ಪಾಲಿಸಬೇಕು?’ ಎಂದು ನೀನು ಕೇಳಿದೆ. ನೀನು ಈ ಜನರನ್ನು ತಮಾಷೆಮಾಡಿದೆ. ಈಗ ಹೊರಗೆ ಹೋಗಿ ಅವರೊಂದಿಗೆ ಯುದ್ಧಮಾಡು” ಅಂದನು.


ನಿನ್ನ ಹೆಮ್ಮೆಯಿಂದ ನನ್ನ ವಿರುದ್ಧವಾಗಿ ಮಾತನಾಡಿದ್ದೀ, ನೀನು ಅನೇಕ ಬಾರಿ ಹೇಳಿರುತ್ತೀ. ನಾನೆಲ್ಲವನ್ನು ಕೇಳಿದ್ದೇನೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು