1 ಸಮುಯೇಲ 2:30 - ಪರಿಶುದ್ದ ಬೈಬಲ್30 “ನಿಮ್ಮ ತಂದೆಯ ಕುಟುಂಬವು ಸರ್ವಕಾಲವೂ ಆತನ ಸೇವೆ ಮಾಡುವುದೆಂದು ಇಸ್ರೇಲಿನ ದೇವರಾದ ಯೆಹೋವನು ವಾಗ್ದಾನ ಮಾಡಿದ್ದನು. ಆದರೆ ಈಗ ಯೆಹೋವನು ಹೀಗೆನ್ನುತ್ತಾನೆ: ‘ಅದೆಂದಿಗೂ ಸಾಧ್ಯವಿಲ್ಲ. ನನ್ನನ್ನು ಸನ್ಮಾನಿಸುವವರನ್ನು ನಾನೂ ಸನ್ಮಾನಿಸುತ್ತೇನೆ. ಆದರೆ ನನ್ನನ್ನು ತಿರಸ್ಕರಿಸುವವರನ್ನು ನಾನೂ ತಿರಸ್ಕರಿಸುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಇಸ್ರಾಯೇಲಿನ ದೇವರಾದ ಯೆಹೋವನು ಹೇಳುವುದೇನೆಂದರೆ, ‘ನಿನ್ನ ಗೋತ್ರದವರೂ, ಸಂತಾನದವರೂ ನಿರಂತರವೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬೇಕೆಂದು ವಾಗ್ದಾನಮಾಡಿದ್ದೆನು. ಆದರೆ ಈಗ ನಾನು ತಿಳಿಸುವುದೇನಂದರೆ, ಅದು ನನಗೆ ದೂರವಾಗಿರಲಿ; ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ನಿನ್ನ ಗೋತ್ರದವರೂ ಸಂತಾನದವರೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬಹುದು ಎಂದು ಆಜ್ಞಾಪಿಸಿದ ಇಸ್ರಯೇಲರ ದೇವರಾದ ಸರ್ವೇಶ್ವರನೆಂಬ ನಾನು ಈಗ ತಿಳಿಸುವುದನ್ನು ಕೇಳು: ಇನ್ನು ಇದೆಲ್ಲ ನನ್ನಿಂದ ದೂರ ತೊಲಗಲಿ; ನನ್ನನ್ನು ಸನ್ಮಾನಿಸುವವನನ್ನು ನಾನು ಸನ್ಮಾನಿಸುವೆನು; ನನ್ನನ್ನು ಉಪೇಕ್ಷಿಸುವವನನ್ನು ನಾನು ತಿರಸ್ಕರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ನಿನ್ನ ಗೋತ್ರದವರೂ ಸಂತಾನದವರೂ ನಿರಂತರವೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬಹುದು ಎಂದು ಆಜ್ಞಾಪಿಸಿದ ಇಸ್ರಾಯೇಲ್‍ದೇವರಾದ ಯೆಹೋವನೆಂಬ ನಾನು ಈಗ ತಿಳಿಸುವದೇನಂದರೆ - ಅದು ನನಗೆ ದೂರವಾಗಿರಲಿ; ನನ್ನನ್ನು ಸನ್ಮಾನಿಸುವವರನ್ನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸುವವರು ತಿರಸ್ಕಾರಹೊಂದುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 “ಆದ್ದರಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ, ‘ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಯೆಹೋವ ದೇವರು ಹೇಳುವುದೇನೆಂದರೆ: ನನಗೆ ಅದು ದೂರವಾಗಿರಲಿ. ಏಕೆಂದರೆ ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು. ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು. ಅಧ್ಯಾಯವನ್ನು ನೋಡಿ |
ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ, “ಮಕ್ಕಳು ಹೆತ್ತವರನ್ನು ಗೌರವಿಸುವರು. ಸೇವಕರು ಯಜಮಾನನನ್ನು ಗೌರವಿಸುತ್ತಾರೆ. ನಾನು ನಿಮ್ಮ ತಂದೆಯಾಗಿದ್ದೇನೆ, ಆದರೆ ನನ್ನನ್ನು ಯಾಕೆ ಗೌರವಿಸುವದಿಲ್ಲ? ನಾನು ನಿಮ್ಮ ಯಜಮಾನನಾಗಿದ್ದೇನೆ, ಆದರೆ ನನ್ನನ್ಯಾಕೆ ಗೌರವಿಸುವದಿಲ್ಲ? ಯಾಜಕರೇ, ನೀವು ನನ್ನ ಹೆಸರನ್ನು ಗೌರವಿಸುವದಿಲ್ಲ.” ಆದರೆ ನೀವು, “ನಾವು ನಿನಗೆ ಯಾವ ವಿಷಯದಲ್ಲಿ ಗೌರವ ಕೊಟ್ಟಿಲ್ಲ” ಎಂದು ಕೇಳುತ್ತೀರಿ.
ನಿಮ್ಮ ನಂಬಿಕೆಯು ಪರಿಶುದ್ಧವಾಗಿದೆ ಎಂಬುದನ್ನು ಪ್ರಕಟಿಸಲು ಈ ತೊಂದರೆಗಳು ಸಂಭವಿಸುತ್ತವೆ. ನಿಮ್ಮ ನಂಬಿಕೆಯ ಪರಿಶುದ್ಧತೆಯು ಬಂಗಾರದ ಮೌಲ್ಯಕ್ಕಿಂತಲೂ ಹೆಚ್ಚಿನದಾಗಿದೆ. ಬಂಗಾರವು ನಶಿಸಿಹೋಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಲ್ಲಿ ಪುಟ ಹಾಕಿ ಅದರ ಪರಿಶುದ್ಧತೆಯನ್ನು ಶೋಧಿಸುವರು. ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ, ನಿಮ್ಮ ನಂಬಿಕೆಯ ಪರಿಶುದ್ಧತೆಯು ನಿಮಗೆ ಕೀರ್ತಿ, ಪ್ರಭಾವ ಮತ್ತು ಗೌರವಗಳನ್ನು ತರುತ್ತದೆ.
ಆರೋನನು ಮತ್ತು ಅವನ ಗಂಡುಮಕ್ಕಳು ದೇವದರ್ಶನ ಗುಡಾರದೊಳಗೆ ಪ್ರವೇಶಿಸುವಾಗಲೆಲ್ಲಾ ಈ ಉಡುಪುಗಳನ್ನು ಧರಿಸಿಕೊಳ್ಳಬೇಕು. ಪವಿತ್ರಸ್ಥಳದಲ್ಲಿ ಯಾಜಕರಾಗಿ ಸೇವೆಮಾಡಲು ಯಜ್ಞವೇದಿಕೆಯ ಬಳಿಗೆ ಬರುವಾಗ ಅವರು ಈ ಬಟ್ಟೆಗಳನ್ನು ಧರಿಸಿಕೊಂಡಿರಬೇಕು. ಅವರು ಈ ಉಡುಪುಗಳನ್ನು ಧರಿಸಿಕೊಳ್ಳದಿದ್ದರೆ, ದೋಷಿಗಳಾಗಿ ಸಾಯುವರು. ಇವುಗಳೆಲ್ಲಾ ಆರೋನನಿಗೂ ಅವನ ನಂತರ ಅವನ ಕುಟುಂಬಸ್ಥರೆಲ್ಲರಿಗೂ ಶಾಶ್ವತವಾದ ಕಟ್ಟಳೆಯಾಗಿವೆ.”
ಯೆಹೋವನು ಹೇಳುವುದೇನೆಂದರೆ, “ನಾನು ಆ ಕುರುಬರಿಗೆ ವಿರುದ್ಧವಾಗಿದ್ದೇನೆ. ಅವರ ಕೈಯಿಂದ ನನ್ನ ಕುರಿಗಳ ಬಗ್ಗೆ ವಿಚಾರಿಸುವೆನು. ನಾನು ಅವರನ್ನು ತೊಲಗಿಸಿ ಬಿಡುವೆನು. ಇನ್ನು ಮುಂದೆ ಅವರು ನನ್ನ ಕುರುಬರಾಗಿರುವುದಿಲ್ಲ. ಇನ್ನು ಅವರಿಗೆ ತಮ್ಮ ಹೊಟ್ಟೆ ತುಂಬಿಸಿಕೊಳ್ಳಲು ಸಾಧ್ಯವಿಲ್ಲ. ನನ್ನ ಕುರಿಗಳನ್ನು ಅವರ ಬಾಯಿಂದ ತಪ್ಪಿಸುವೆನು. ಆಗ ನನ್ನ ಕುರಿಗಳು ಅವರಿಗೆ ಆಹಾರವಾಗುವುದಿಲ್ಲ.”
“ಉಜ್ಜೀಯನೇ, ಯೆಹೋವನಿಗೆ ಧೂಪ ಹಾಕುವದು ನಿನ್ನ ಕೆಲಸವಲ್ಲ. ನೀನು ಹೀಗೆ ಮಾಡುವದು ಸರಿಯಲ್ಲ. ಆರೋನನ ಸಂತತಿಯವರಾದ ಯಾಜಕರೇ ಧೂಪ ಹಾಕಬೇಕಾದದ್ದು. ಅವರು ಪವಿತ್ರ ಸೇವೆಗೆ ನೇಮಿಸಲ್ಪಟ್ಟಿದ್ದಾರೆ. ನೀನು ಈ ಮಹಾ ಪವಿತ್ರಸ್ಥಾನದಿಂದ ಹೊರಗೆ ಹೋಗು. ನೀನು ದೇವರಾದ ಯೆಹೋವನಿಗೆ ವಿಧೇಯನಾಗಿಲ್ಲ. ಈ ಕಾರ್ಯವನ್ನು ಮಾಡಿದ್ದರಿಂದ ದೇವರು ನಿನ್ನನ್ನು ಮೆಚ್ಚುವದಿಲ್ಲ” ಎಂದು ಹೇಳಿದರು.