Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 2:35 - ಪರಿಶುದ್ದ ಬೈಬಲ್‌

35 ನಾನು ನನಗೋಸ್ಕರ ನಂಬಿಗಸ್ತನಾದ ಯಾಜಕನೊಬ್ಬನನ್ನು ಆರಿಸಿಕೊಳ್ಳುತ್ತೇನೆ. ಈ ಯಾಜಕನು ನಾನು ಹೇಳುವುದನ್ನು ಕೇಳುವನು ಮತ್ತು ನನಗೆ ಇಷ್ಟವಾದುದನ್ನು ಮಾಡುವನು. ಈ ಯಾಜಕನ ಕುಟುಂಬವನ್ನು ನಾನು ಬಲಗೊಳಿಸುವೆನು. ನಾನು ಆರಿಸಿಕೊಂಡಿರುವ ರಾಜನ ಬಳಿಯಲ್ಲಿ ಅವನು ಸದಾಕಾಲ ಸೇವೆಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ನನ್ನ ಹೃದಯದ ಹಾಗೂ ಮನಸ್ಸಿನ ಆಲೋಚನೆಗಳನ್ನು ನೆರವೇರಿಸುವ ಒಬ್ಬ ನಂಬಿಗಸ್ತನಾದ ಯಾಜಕನನ್ನು ಎಬ್ಬಿಸುವೆನು; ಅವನಿಗೆ ಶಾಶ್ವತ ಗೃಹವನ್ನು ಅನುಗ್ರಹಿಸುವೆನು. ಅವನು ನನ್ನ ಅಭಿಷಿಕ್ತನ ಬಳಿಯಲ್ಲಿ ಸದಾಕಾಲ ಸೇವೆಮಾಡುವನು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ನನ್ನ ಹೃನ್ಮನಗಳಿಗೆ ಸರಿಯಾದುದನ್ನೇ ಮಾಡುವ ಒಬ್ಬ ಶ್ರದ್ಧೆಯುಳ್ಳ ಯಾಜಕನನ್ನು ಎಬ್ಬಿಸುವೆನು. ಅವನು ನನ್ನ ಅಭಿಷಿಕ್ತನ ಬಳಿಯಲ್ಲಿ ಸದಾಕಾಲ ಸೇವೆಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ನನ್ನ ದೃಷ್ಟಿಗೂ ಮನಸ್ಸಿಗೂ ಸರಿಯಾದದ್ದನ್ನೇ ಮಾಡುವ ಒಬ್ಬ ನಂಬಿಗಸ್ತನಾದ ಯಾಜಕನನ್ನು ಎಬ್ಬಿಸುವೆನು; ಅವನಿಗೆ ಶಾಶ್ವತಗೃಹವನ್ನು ಅನುಗ್ರಹಿಸುವೆನು. ಅವನು ನನ್ನ ಅಭಿಷಿಕ್ತನ ಬಳಿಯಲ್ಲಿ ಸದಾಕಾಲ ಸೇವೆಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಆದರೆ ನನ್ನ ಹೃದಯಕ್ಕೂ, ನನ್ನ ಮನಸ್ಸಿಗೂ ಸಮರ್ಪಕವಾದದ್ದನ್ನೇ ಮಾಡುವ ನಂಬಿಗಸ್ತನಾದ ಒಬ್ಬ ಯಾಜಕನನ್ನು ನನಗೋಸ್ಕರ ಎಬ್ಬಿಸಿ, ಅವನಿಗೆ ಸ್ಥಿರವಾದ ಮನೆಯನ್ನು ಕಟ್ಟುವೆನು. ಅವನು ನನ್ನ ಅಭಿಷಿಕ್ತನ ಮುಂದೆ ನಿರಂತರವಾಗಿ ಸೇವೆಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 2:35
28 ತಿಳಿವುಗಳ ಹೋಲಿಕೆ  

“ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನೇ, ನೀನು ನನಗೆ ಮುಂದಿನ ಸಂಗತಿಗಳನ್ನು ತೋರಿಸಿರುವೆ. ‘ನಾನು ನಿನ್ನ ಕುಟುಂಬವನ್ನು ಸ್ಥಿರಪಡಿಸುವೆನು’ ಎಂದು ಹೇಳಿರುವೆ. ಆ ಕಾರಣದಿಂದಲೇ ನಿನ್ನ ಸೇವಕನಾದ ನಾನು ನಿನ್ನಲ್ಲಿ ಈ ಪ್ರಾರ್ಥನೆಯನ್ನು ಸಲ್ಲಿಸಲು ತೀರ್ಮಾನಿಸಿದ್ದೇನೆ.


ನೀನು ಸರಿಯಾದ ಮಾರ್ಗದಲ್ಲಿ ಜೀವಿಸುತ್ತಾ, ನನ್ನ ಆಜ್ಞೆಗಳನ್ನು ಅನುಸರಿಸಿದರೆ, ನಾನು ಈ ಕಾರ್ಯಗಳೆನ್ನೆಲ್ಲ ನಿನಗೆ ಮಾಡುವೆನು. ನನ್ನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ನೀನು ದಾವೀದನಂತೆ ಅನುಸರಿಸಿದರೆ ನಾನು ನಿನ್ನೊಂದಿಗೆ ಇರುತ್ತೇನೆ. ನಾನು ನಿನ್ನ ಕುಟುಂಬವನ್ನು ದಾವೀದನ ಕುಟುಂಬದಂತೆ ರಾಜರುಗಳ ಕುಟುಂಬವನ್ನಾಗಿ ಮಾಡುತ್ತೇನೆ. ನಾನು ನಿನಗೆ ಇಸ್ರೇಲನ್ನು ಕೊಡುತ್ತೇನೆ.


ನಾನು ಮಾಡಿದ ತಪ್ಪನ್ನು ದಯವಿಟ್ಟು ಕ್ಷಮಿಸು. ಯೆಹೋವನು ನಿನ್ನ ಕುಟುಂಬವನ್ನು ಪ್ರಬಲಗೊಳಿಸುತ್ತಾನೆಂದೂ ನಿನ್ನ ಕುಟುಂಬದಿಂದ ಅನೇಕ ರಾಜರು ಬರುತ್ತಾರೆಂದೂ ನನಗೆ ತಿಳಿದಿದೆ! ನೀನು ಯೆಹೋವನ ಯುದ್ಧಗಳಲ್ಲಿ ಹೋರಾಡುವುದರಿಂದ ಯೆಹೋವನು ಇದನ್ನು ನೆರವೇರಿಸುತ್ತಾನೆ. ನೀನು ಜೀವಿಸಿರುವ ತನಕ ಜನರು ನಿನ್ನಲ್ಲಿ ಯಾವುದೇ ಬಗೆಯ ಕೆಟ್ಟದನ್ನು ಕಂಡುಹಿಡಿಯುವುದಿಲ್ಲ!


ಆತನು ತಾನು ನೇಮಿಸಿದ ರಾಜನಿಗೆ ಅನೇಕ ಯುದ್ಧಗಳಲ್ಲಿ ಜಯವನ್ನು ದಯಪಾಲಿಸುವನು; ತಾನು ಅಭಿಷೇಕಿಸಿದ ರಾಜನಿಗೆ ಶಾಶ್ವತವಾದ ಪ್ರೀತಿಯನ್ನು ತೋರುವನು. ಆತನು ದಾವೀದನಿಗೂ ಅವನ ಸಂತತಿಯವರಿಗೂ ಎಂದೆಂದಿಗೂ ನಂಬಿಗಸ್ತನಾಗಿರುವನು.


ಈ ಕಾರಣದಿಂದಲೇ ಆತನು ಎಲ್ಲಾ ವಿಧದಲ್ಲಿಯೂ ತನ್ನ ಸಹೋದರ ಸಹೋದರಿಯರಿಗೆ ಸಮಾನನಾಗಬೇಕಾಯಿತು. ದೇವರ ಸೇವೆಯಲ್ಲಿ ಆತನು ಜನರಿಗೆ ಕರುಣೆಯುಳ್ಳವನೂ ನಂಬಿಗಸ್ತನೂ ಆದ ಪ್ರಧಾನ ಯಾಜಕನಾದನು. ಹೀಗೆ ಆತನು ಜನರ ಪಾಪಗಳಿಗೆ ಕ್ಷಮೆಯನ್ನು ತರಲು ಸಾಧ್ಯವಾಯಿತು.


ಆ ದಿವಸ ಸೇರಿಬಂದ ಜನರು ಯೆಹೋವನ ಸನ್ನಿಧಿಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡು ಉಲ್ಲಾಸಿಸಿದರು. ಅವರು ದಾವೀದನ ಮಗನಾದ ಸೊಲೊಮೋನನನ್ನು ತಿರಿಗಿ ಅರಸನನ್ನಾಗಿಯೂ ಚಾದೋಕನನ್ನು ಮಹಾಯಾಜಕನನ್ನಾಗಿಯೂ ಯೆಹೋವನ ಸನ್ನಿಧಿಯಲ್ಲಿ ಅಭಿಷೇಕಿಸಿದರು.


ಆಗ ಯೆಹೋಯಾದಾವನ ಮಗನಾದ ಬೆನಾಯನನ್ನು ಯೋವಾಬನ ಸ್ಥಾನದಲ್ಲಿ ಸೇನಾಧಿಪತಿಯನ್ನಾಗಿ ಸೊಲೊಮೋನನು ನೇಮಿಸಿದನು. ಎಬ್ಯಾತಾರನ ಸ್ಥಾನದಲ್ಲಿ ಚಾದೋಕನನ್ನು ನೂತನ ಪ್ರಧಾನಯಾಜಕನನ್ನಾಗಿ ನೇಮಿಸಿದನು.


ನಂತರ ಯಾಜಕನಾದ ಚಾದೋಕನು ಮತ್ತು ಪ್ರವಾದಿಯಾದ ನಾತಾನನು ಗೀಹೋನ್ ಬುಗ್ಗೆಯ ಹತ್ತಿರ ಸೊಲೊಮೋನನನ್ನು ಅಭಿಷೇಕಿಸಿದರು. ಅನಂತರ ಅವರು ನಗರಕ್ಕೆ ಹೋದರು. ಅವರನ್ನು ಜನರು ಹಿಂಬಾಲಿಸಿದರು. ಈಗ ನಗರದ ಜನರು ತುಂಬಾ ಸಂತೋಷದಿಂದ ಇದ್ದಾರೆ. ಆ ಶಬ್ದವನ್ನೇ ನೀವು ಕೇಳುತ್ತಿರುವುದು.


ಆದರೆ ಅದೋನೀಯನ ಕಾರ್ಯವನ್ನು ಒಪ್ಪದ ಅನೇಕರು ದಾವೀದನಿಗೆ ನಂಬಿಗಸ್ತರಾಗಿದ್ದರು. ಇವರು ಯಾರೆಂದರೆ: ಯಾಜಕನಾದ ಚಾದೋಕ, ಯೆಹೋಯಾದಾವನ ಮಗನಾದ ಬೆನಾಯ, ಪ್ರವಾದಿಯಾದ ನಾತಾನ್, ಶಿಮ್ಮೀ, ರೇಗೀ ಮತ್ತು ರಾಜನಾದ ದಾವೀದನ ವಿಶೇಷ ಅಂಗರಕ್ಷಕರು. ಇವರಲ್ಲಿ ಯಾರೂ ಅದೋನೀಯನ ಸಂಗಡ ಸೇರಲಿಲ್ಲ.


ಸಮುವೇಲನು ಎಣ್ಣೆಯಿದ್ದ ಕೊಂಬನ್ನು ತೆಗೆದುಕೊಂಡು, ಅದರಲ್ಲಿದ್ದ ವಿಶೇಷವಾದ ಎಣ್ಣೆಯನ್ನು ಇಷಯನ ಕಿರಿಮಗನ ಮೇಲೆ, ಅವನ ಸೋದರರ ಎದುರಿನಲ್ಲೇ ಸುರಿದನು. ಆ ದಿನದಿಂದ ಯೆಹೋವನ ಆತ್ಮವು ಮಹಾಶಕ್ತಿಯೊಡನೆ ದಾವೀದನಲ್ಲಿ ನೆಲೆಸಿತು. ಅನಂತರ ಸಮುವೇಲನು ರಾಮಕ್ಕೆ ಹಿಂದಿರುಗಿದನು.


ನಾನು ಇಲ್ಲಿದ್ದೇನೆ. ನಾನು ಯಾವ ತಪ್ಪುಗಳನ್ನಾದರೂ ಮಾಡಿದ್ದರೆ, ನೀವು ಯೆಹೋವನಿಗೆ ಮತ್ತು ಆತನು ಆರಿಸಿರುವ ರಾಜನಿಗೆ ಅವುಗಳನ್ನು ಹೇಳಲೇಬೇಕು. ನಾನು ಬೇರೊಬ್ಬರ ಹಸುವನ್ನಾಗಲಿ ಕತ್ತೆಯನ್ನಾಗಲಿ ಕದ್ದಿರುವೆನೇ? ನಾನು ಯಾರನ್ನಾದರೂ ನೋಯಿಸಿರುವೆನೇ? ವಂಚಿಸಿರುವೆನೇ? ನಾನು ತಪ್ಪುಮಾಡಲು ಯಾರಿಂದಲಾದರೂ ಹಣವನ್ನಾಗಲೀ ಪಾದರಕ್ಷೆಗಳನ್ನಾಗಲೀ ತೆಗೆದುಕೊಂಡಿರುವೆನೇ? ನಾನು ಈ ಕಾರ್ಯಗಳನ್ನು ಮಾಡಿರುವುದಾದರೆ ತಿಳಿಸಿ, ಅವುಗಳನ್ನು ಸರಿಪಡಿಸುತ್ತೇನೆ” ಎಂದು ಹೇಳಿದನು.


ಆಮೇಲೆ ನಾನು ಅವರಿಗೆ ಒಬ್ಬ ಕುರುಬನನ್ನು ನೇಮಿಸುವೆನು. ಅವನು ನನ್ನ ಸೇವಕನಾದ ದಾವೀದನು; ಅವನು ಅವರನ್ನು ಮೇಯಿಸುವನು ಮತ್ತು ಅವರಿಗೆ ಕುರುಬನಾಗುವನು.


ಅವುಗಳ ರಾಜರುಗಳೂ ನಾಯಕರುಗಳೂ ಯೆಹೋವನಿಗೂ ಆತನಿಂದ ಅಭಿಷೇಕಿಸಲ್ಪಟ್ಟವನಿಗೂ ವಿರೋಧವಾಗಿ ಕೂಡಿಬಂದಿದ್ದಾರೆ.


ಆ ಒಡಂಬಡಿಕೆಯ ಪ್ರಕಾರವಾಗಿ ಅವನಿಗೂ ಅವನ ತರುವಾಯ ಅವನ ಸಂತತಿಯವರಿಗೂ ಯಾಜಕತ್ವವು ಶಾಶ್ವತವಾಗಿಯೇ ಇರುವುದೆಂದು ಮಾತುಕೊಡುತ್ತೇನೆ. ಅವನು ತನ್ನ ದೇವರ ಗೌರವವನ್ನು ಕಾಪಾಡಿ ಇಸ್ರೇಲರಿಗೋಸ್ಕರ ದೋಷಪರಿಹಾರವನ್ನು ಮಾಡಿದ್ದರಿಂದ ನಾನು ಅವನಿಗೆ ಈ ಮಾತನ್ನು ಕೊಟ್ಟಿದ್ದೇನೆ” ಎಂದು ಹೇಳಿದನು.


ಆಗ ನಿನ್ನ ಕುಟುಂಬದವರಲ್ಲಿ ಉಳಿದವರೆಲ್ಲ ಬಂದು ಈ ಯಾಜಕನಿಗೆ ಅಡ್ಡಬೀಳುವರು. ಈ ಜನರೆಲ್ಲ ಅವನಲ್ಲಿ ಬಿಡಿಕಾಸನ್ನೂ ರೊಟ್ಟಿಯ ಚೂರನ್ನೂ ಬೇಡುವರು. ಅವರೆಲ್ಲ, “ನಮಗೆ ದೇವಸ್ಥಾನದಲ್ಲಿ ಯಾಜಕನ ಹುದ್ದೆಯನ್ನು ಕೊಡು, ಅದರಿಂದ ಹೊಟ್ಟೆ ತುಂಬಿಸಿಕೊಳ್ಳುತ್ತೇವೆ ಎಂದು ಬೇಡಿಕೊಳ್ಳುವರು”’” ಎಂದನು.


ಬಾಲಕನಾದ ಸಮುವೇಲನು ಏಲಿಯ ಕೈಕೆಳಗಿದ್ದು ಯೆಹೋವನ ಸೇವೆಮಾಡುತ್ತಿದ್ದನು. ಆ ಕಾಲದಲ್ಲಿ ಯೆಹೋವನು ಜನರೊಂದಿಗೆ ಪದೇಪದೇ ಮಾತಾಡುತ್ತಿರಲಿಲ್ಲ; ದರ್ಶನಗಳ ಸಂಖ್ಯೆಯೂ ಕಡಿಮೆಯಾಗಿತ್ತು.


ಸಮುವೇಲನು ಕುರಿಮರಿಯೊಂದನ್ನು ತಂದು ಯೆಹೋವನಿಗೆ ಸರ್ವಾಂಗಹೋಮವನ್ನಾಗಿ ಅರ್ಪಿಸಿದನು. ಸಮುವೇಲನು ಇಸ್ರೇಲರಿಗಾಗಿ ಯೆಹೋವನಲ್ಲಿ ಪ್ರಾರ್ಥಿಸಿದನು. ಯೆಹೋವನು ಸಮುವೇಲನ ಪ್ರಾರ್ಥನೆಗೆ ಉತ್ತರಿಸಿದನು.


ಆದರೆ ಸಮುವೇಲನ ಮಕ್ಕಳು ಅವನಂತೆ ನಡೆದುಕೊಳ್ಳಲಿಲ್ಲ. ಅವರು ಲಂಚವನ್ನು ಪಡೆದು ನ್ಯಾಯಾಲಯದಲ್ಲಿ ಅನ್ಯಾಯದ ತೀರ್ಪುಗಳು ಮಾಡುತ್ತಿದ್ದರು ಮತ್ತು ಜನರನ್ನು ವಂಚಿಸುತ್ತಿದ್ದರು.


ಆ ಯುವತಿಯರು, “ಹೌದು ದರ್ಶಿಯು ಇಲ್ಲಿದ್ದಾನೆ. ಅವನು ದಾರಿಯಲ್ಲಿ ನಿಮಗಿಂತ ಸ್ವಲ್ಪ ಮುಂದೆ ಹೋಗುತ್ತಿದ್ದಾನೆ. ಈ ಹೊತ್ತು ನಮ್ಮ ಊರಿನವರು ಗುಡ್ಡದ ಮೇಲೆ ಯಜ್ಞವನ್ನು ಅರ್ಪಿಸುವುದರಿಂದ ಅವನು ಇಲ್ಲಿಗೆ ಬಂದಿದ್ದಾನೆ.


ನೀವು ಪಟ್ಟಣದೊಳಕ್ಕೆ ಹೋದರೆ ಅವನನ್ನು ಕಾಣಬಹುದು. ನೀವು ಬೇಗನೆ ನೋಡಬೇಕೆಂದಿದ್ದರೆ, ಅವನು ಊಟ ಮಾಡುವುದಕ್ಕಾಗಿ ಆರಾಧನೆಯ ಸ್ಥಳಕ್ಕೆ ಹೋಗುವುದಕ್ಕಿಂತ ಮೊದಲೇ ಅವನನ್ನು ಕಾಣಬೇಕು. ದರ್ಶಿಯು ಯಜ್ಞವನ್ನು ಆಶೀರ್ವದಿಸಬೇಕಾಗಿರುವುದರಿಂದ ಅವನು ಅಲ್ಲಿಗೆ ಹೋಗುವವರೆಗೆ ಜನರು ಊಟಮಾಡುವುದಿಲ್ಲ. ಆದ್ದರಿಂದ ನೀವು ಬೇಗನೆ ಹೋದರೆ ಅವನನ್ನು ಕಾಣಬಹುದು” ಎಂದು ಹೇಳಿದರು.


ಸೌಲನು ಸಮುವೇಲನನ್ನು ಬಿಟ್ಟುಹೊರಡಲು ತಿರುಗಿದಂತೆಯೇ ದೇವರು ಸಹ ಸೌಲನ ಜೀವಿತವನ್ನು ಮಾರ್ಪಾಟು ಮಾಡಿದನು. ಅಂದು ಆ ಸಂಗತಿಗಳೆಲ್ಲಾ ಸಂಭವಿಸಿದವು.


ಸೌಲನು ಮತ್ತು ಅವನ ಸೇವಕನು ಗಿಬಿಯತ್ ಎಲೋಹಿಮಿಗೆ ಹೋದರು. ಸೌಲನು ಆ ಸ್ಥಳದಲ್ಲಿ ಪ್ರವಾದಿಗಳ ಸಮೂಹವನ್ನು ಸಂಧಿಸಿದನು. ದೇವರ ಆತ್ಮವು ಮಹಾಶಕ್ತಿಯೊಡನೆ ಸೌಲನ ಮೈಮೇಲೆ ಬಂದಿತು. ಆಗ ಸೌಲನು ಪ್ರವಾದಿಗಳ ಜೊತೆಯಲ್ಲಿ ಪ್ರವಾದಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು