1 ಸಮುಯೇಲ 2:6 - ಪರಿಶುದ್ದ ಬೈಬಲ್6 ಯೆಹೋವನು ಜನರಿಗೆ ಸಾವನ್ನೂ ತರುವನು. ಅಂತೆಯೇ ಅವರಿಗೆ ಜೀವವನ್ನೂ ದಯಪಾಲಿಸುವನು. ಆತನು ಅವರಿಗೆ ಮರುಜೀವವನ್ನು ದಯಪಾಲಿಸಬಲ್ಲನು. ಯೆಹೋವನು ಜನರನ್ನು ಮರಣ ಸ್ಥಳವಾದ ಪಾತಾಳಕ್ಕೆ ತಳ್ಳುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 “ಯೆಹೋವನೇ ಸಾಯಿಸುವವನೂ ಬದುಕಿಸುವವನೂ; ಪಾತಾಳದಲ್ಲಿ ದೊಬ್ಬುವವನೂ ಮೇಲಕ್ಕೆ ಬರಮಾಡುವವನೂ ಆತನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಜೀವಕೊಡುವವನು, ತೆಗೆದುಕೊಳ್ಳುವವನು ಆ ಸರ್ವೇಶ್ವರನೇ ಪಾತಾಳಕ್ಕಿಳಿಸುವವನು, ಮೇಲಕ್ಕೆಳೆದುಕೊಳ್ಳುವವನು ಆತನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಯೆಹೋವನೇ ಸಾಯಿಸುವವನೂ ಬದುಕಿಸುವವನೂ; ಪಾತಾಳದಲ್ಲಿ ದೊಬ್ಬುವವನೂ ಮೇಲಕ್ಕೆ ಬರಮಾಡುವವನೂ ಆತನೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 “ಯೆಹೋವ ದೇವರು ಮರಣ ತರುವವರೂ, ಬದುಕಿಸುವವರೂ ಆಗಿದ್ದಾರೆ. ಪಾತಾಳಕ್ಕೆ ಇಳಿಯುವಂತೆ ಮಾಡುತ್ತಾರೆ, ಮೇಲಕ್ಕೆ ತರುತ್ತಾರೆ. ಅಧ್ಯಾಯವನ್ನು ನೋಡಿ |
ಆದರೆ ಯೆಹೋವನು ಹೇಳುವುದೇನೆಂದರೆ, “ನಿನ್ನ ಜನರು ಸತ್ತಿದ್ದಾರೆ. ಆದರೆ ಅವರು ಮತ್ತೆ ಬದುಕುವರು. ನನ್ನ ಜನರ ದೇಹಗಳು ಸತ್ತವರೊಳಗಿಂದ ಏಳುವವು. ಭೂಮಿಯ ಮೇಲೆ ಸತ್ತಿರುವ ಜನರೇ, ಎದ್ದುನಿಂತು ಸಂತೋಷಿಸಿರಿ. ನಿಮ್ಮನ್ನು ಆವರಿಸಿದ ಮಂಜು ಮುಂಜಾನೆಯ ಬೆಳಕಿನಂತೆ ಪ್ರಕಾಶಿಸುತ್ತದೆ. ಭೂಮಿಯು ತನ್ನಲ್ಲಿರುವ ಸತ್ತವರನ್ನು ಒಪ್ಪಿಸಿಕೊಡುವಾಗ ಪ್ರಾರಂಭವಾಗುವ ಹೊಸ ದಿನವನ್ನು ಅದು ಸೂಚಿಸುವದು.”
ಇಸ್ರೇಲಿನ ರಾಜನು ಪತ್ರವನ್ನು ಓದಿದಾಗ, ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು, “ನಾನು ದೇವರೇನು? ಇಲ್ಲ! ಹುಟ್ಟು ಮತ್ತು ಸಾವುಗಳ ಮೇಲೆ ನನಗೆ ಯಾವ ಶಕ್ತಿಯೂ ಇಲ್ಲ. ಹೀಗಿರುವಾಗ ಅರಾಮ್ಯರ ರಾಜನು ಕುಷ್ಠರೋಗಪೀಡಿತನಾದ ಮನುಷ್ಯನನ್ನು ನನ್ನ ಬಳಿಗೆ ಗುಣಪಡಿಸಲು ಏಕೆ ಕಳುಹಿಸಿದನು? ಇದರ ಬಗ್ಗೆ ನೀವೇ ಯೋಚಿಸಿರಿ. ಇದು ಒಂದು ಕುತಂತ್ರವೆಂಬುದು ನಿಮಗೇ ತಿಳಿಯುತ್ತದೆ. ಅರಾಮ್ಯರ ರಾಜನು ಯುದ್ಧವನ್ನು ಆರಂಭಿಸಲು ಪ್ರಯತ್ನಿಸುತ್ತಿದ್ದಾನೆ!” ಎಂದು ಹೇಳಿದನು.