Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 2:8 - ಪರಿಶುದ್ದ ಬೈಬಲ್‌

8 ಯೆಹೋವನು ಬಡವರನ್ನು ಧೂಳಿನಿಂದ ಮೇಲಕ್ಕೆತ್ತುತ್ತಾನೆ. ಯೆಹೋವನು ದೀನರನ್ನು ತಿಪ್ಪೆಯಿಂದ ಮೇಲಕ್ಕೆತ್ತುತ್ತಾನೆ. ಯೆಹೋವನು ಬಡವರನ್ನು ರಾಜಕುಮಾರರೊಂದಿಗೆ ಕುಳ್ಳಿರಿಸುತ್ತಾನೆ. ಆತನು ಬಡವರನ್ನು ಗೌರವಪೀಠದಲ್ಲಿ ಕುಳ್ಳಿರಿಸುತ್ತಾನೆ. ಲೋಕವೂ ಅದರ ಅಡಿಪಾಯಗಳೂ ಯೆಹೋವನವೇ. ಆತನು ಆ ಕಂಬಗಳ ಮೇಲೆ ಲೋಕವನ್ನು ನಿಲ್ಲಿಸಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆತನು ದೀನರನ್ನು ಧೂಳಿನಿಂದ ಎತ್ತಿ; ದರಿದ್ರರನ್ನು ತಿಪ್ಪೆಯಿಂದ ಎಬ್ಬಿಸಿ ಅಧಿಪತಿಗಳೊಂದಿಗೆ ಕುಳ್ಳಿರಿಸಿ ಅವನಿಗೆ ಮಹಿಮಾಸನವನ್ನು ಬಾಧ್ಯತೆಯಾಗಿ ಅನುಗ್ರಹಿಸುವವನಾಗಿದ್ದಾನೆ. ಭೂಮಿಯ ಆಧಾರಸ್ತಂಭಗಳು ಯೆಹೋವನವೇ; ಆತನೇ ಅವುಗಳ ಮೇಲೆ ಭೂಮಂಡಲವನ್ನು ಸ್ಥಾಪಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಎತ್ತುವನಾತ ದೀನರನು ಧೂಳಿಂದ, ದರಿದ್ರರನು ತಿಪ್ಪೆಯಿಂದ. ಕುಳ್ಳರಿಸುವನವರನು ಅಧಿಪತಿಗಳ ಸಮೇತ ಅನುಗ್ರಹಿಸುವನು ಹಕ್ಕಾಗಿ ಆ ಮಹಿಮಾಸನ. ಕಾರಣ-ಭೂಮಿಯ ಆಧಾರಸ್ತಂಭಗಳು ಸರ್ವೇಶ್ವರನವೇ ಭೂಮಂಡಲವನು ಅವುಗಳ ಮೇಲೆ ಸ್ಥಾಪಿಸಿದವನು ಆತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆತನು ದೀನನನ್ನು ಧೂಳಿಯಿಂದ ಎತ್ತಿ ದರಿದ್ರನನ್ನು ತಿಪ್ಪೆಯಿಂದ ಎಬ್ಬಿಸಿ ಪ್ರಭುಗಳೊಂದಿಗೆ ಕುಳ್ಳಿರಿಸಿ ಅವನಿಗೆ ಮಹಿಮಾಸನವನ್ನು ಬಾಧ್ಯತೆಯಾಗಿ ಅನುಗ್ರಹಿಸುವವನಾಗಿದ್ದಾನೆ. ಭೂವಿುಯ ಆಧಾರಸ್ತಂಭಗಳು ಯೆಹೋವನವೇ; ಆತನೇ ಅವುಗಳ ಮೇಲೆ ಭೂಮಂಡಲವನ್ನು ಸ್ಥಾಪಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ದೇವರು ದರಿದ್ರನನ್ನು ಭೂಮಿಯ ಧೂಳಿನಿಂದ ಎತ್ತುತ್ತಾರೆ. ಭಿಕ್ಷುಕನನ್ನು ತಿಪ್ಪೆ ಗುಂಡಿಯಿಂದ ತೆಗೆದು ಉನ್ನತಕ್ಕೇರಿಸುವವರೂ ಆಗಿದ್ದಾರೆ. ಅವರನ್ನು ಪ್ರಧಾನರ ಮಧ್ಯದಲ್ಲಿ ಕೂಡ್ರಿಸುತ್ತಾರೆ. ಘನತೆಯ ಸಿಂಹಾಸನವನ್ನು ಬಾಧ್ಯವಾಗಿ ಕೊಡುತ್ತಾರೆ. “ಭೂಮಿಯ ಆಧಾರ ಸ್ತಂಭಗಳು ಯೆಹೋವ ದೇವರದ್ದೇ. ಭೂಲೋಕವನ್ನು ಅವುಗಳ ಮೇಲೆ ಇಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 2:8
31 ತಿಳಿವುಗಳ ಹೋಲಿಕೆ  

ತರುವಾಯ ಅರಸನು ದಾನಿಯೇಲನಿಗೆ ತನ್ನ ರಾಜ್ಯದಲ್ಲಿ ಬಹುಮುಖ್ಯವಾದ ಉದ್ಯೋಗವನ್ನು ಕೊಟ್ಟನು. ಅಮೂಲ್ಯವಾದ ಕಾಣಿಕೆಗಳನ್ನೂ ಕೊಟ್ಟನು. ನೆಬೂಕದ್ನೆಚ್ಚರನು ದಾನಿಯೇಲನನ್ನು ಬಾಬಿಲೋನ್ ಸಂಸ್ಥಾನದ ಅಧಿಪತಿಯನ್ನಾಗಿ ಮಾಡಿದನು. ಬಾಬಿಲೋನಿನ ಎಲ್ಲಾ ವಿದ್ವಾಂಸರ ಮುಖ್ಯಸ್ಥನನ್ನಾಗಿ ಮಾಡಿದನು.


ನನ್ನ ಪ್ರಿಯ ಸಹೋದರ ಸಹೋದರಿಯರೇ, ಕೇಳಿರಿ! ಈ ಲೋಕದಲ್ಲಿ ಬಡವರು ನಂಬಿಕೆಯಲ್ಲಿ ಶ್ರೀಮಂತರಾಗಿರಲೆಂದು ದೇವರು ಅವರನ್ನು ಆರಿಸಿಕೊಂಡಿದ್ದಾನೆ. ತನ್ನನ್ನು ಪ್ರೀತಿಸುವ ಜನರಿಗೆ ದೇವರು ವಾಗ್ದಾನಮಾಡಿದ ರಾಜ್ಯವನ್ನು ಹೊಂದಿಕೊಳ್ಳಲು ಆತನು ಅವರನ್ನು ಆರಿಸಿಕೊಂಡಿದ್ದಾನೆ.


ದಾನಿಯೇಲನು ಬೇರೆ ಮುಖ್ಯಾಧಿಕಾರಿಗಳಿಗಿಂತ ಸಮರ್ಥನೆಂದು ತೋರಿಸಿಕೊಟ್ಟನು. ದಾನಿಯೇಲನು ತನ್ನ ಒಳ್ಳೆಯ ಗುಣ ಮತ್ತು ಮಹಾ ಸಾಮರ್ಥ್ಯಗಳ ಮೂಲಕ ಈ ಒಳ್ಳೆಯ ಹೆಸರನ್ನು ಪಡೆದನು. ದಾನಿಯೇಲನಿಂದ ಅರಸನು ತುಂಬ ಪ್ರಭಾವಿತನಾಗಿ ಅವನನ್ನು ಇಡೀ ರಾಜ್ಯದ ಅಧಿಕಾರಿಯನ್ನಾಗಿ ನೇಮಿಸಲು ಯೋಜನೆ ಮಾಡಿದನು.


ನಮ್ಮನ್ನು ಒಂದು ರಾಜ್ಯವನ್ನಾಗಿ ಮಾಡಿ ನಮ್ಮನ್ನು ತನ್ನ ತಂದೆಯಾದ ದೇವರ ಸೇವೆ ಮಾಡುವ ಯಾಜಕರನ್ನಾಗಿ ಮಾಡಿದನು. ಯೇಸುವಿಗೆ ಎಂದೆಂದಿಗೂ ಮಹಿಮೆ ಪ್ರಭಾವಗಳಿರಲಿ! ಆಮೆನ್.


ಆ ಬಡಯುವಕನು ದೇಶದ ಒಂದು ಬಡಕುಟುಂಬದಲ್ಲಿ ಹುಟ್ಟಿದ್ದಿರಬಹುದು ಅಥವಾ ದೇಶವನ್ನು ಆಳುವುದಕ್ಕಾಗಿ ಸೆರೆಮನೆಯಿಂದ ಬಿಡುಗಡೆ ಮಾಡಲ್ಪಟ್ಟಿರಬಹುದು.


ಸಮುವೇಲನು, “ನೀನು ಮೊದಲು ನಿನ್ನನ್ನು ಅಲ್ಪನೆಂದು ತಿಳಿದಿದ್ದೆ. ಯೆಹೋವನು ನಿನ್ನನ್ನು ಇಸ್ರೇಲರಿಗೆ ರಾಜನನ್ನಾಗಿ ಆರಿಸಿಕೊಂಡದ್ದರಿಂದ ಇಸ್ರೇಲ್ ಕುಲಗಳಿಗೆ ನಾಯಕನಾದೆ.


ಅಲ್ಲಿ ರಾತ್ರಿಯೆಂಬುದೇ ಇರುವುದಿಲ್ಲ. ಜನರಿಗೆ ದೀಪದ ಬೆಳಕಾಗಲಿ ಸೂರ್ಯನ ಬೆಳಕಾಗಲಿ ಬೇಕಾಗುವುದಿಲ್ಲ. ಪ್ರಭುವಾದ ದೇವರೇ ಅವರಿಗೆ ಬೆಳಕನ್ನು ನೀಡುತ್ತಾನೆ. ಅವರು ಯುಗಯುಗಾಂತರಗಳಲ್ಲಿ ರಾಜರುಗಳಂತೆ ಆಳುತ್ತಾರೆ.


ಅವರನ್ನು ಒಂದು ರಾಜ್ಯವನ್ನಾಗಿ ಮಾಡಿದೆ; ನಮ್ಮ ದೇವರಿಗೋಸ್ಕರ ಯಾಜಕರನ್ನಾಗಿ ಮಾಡಿದೆ; ಅವರು ಲೋಕದಲ್ಲಿ ಆಳುವರು.”


“ನೀನು ಇದನ್ನು ನನ್ನ ಸೇವಕನಾದ ದಾವೀದನಿಗೆ ಹೇಳಲೇಬೇಕು: ‘ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, ಹುಲ್ಲುಗಾವಲಿನಲ್ಲಿ ಕುರಿಕಾಯುತ್ತಿದ್ದ ನಿನ್ನನ್ನು ನಾನು ನನ್ನ ಜನರಾದ ಇಸ್ರೇಲರಿಗೆ ನಾಯಕನಾಗಿ ಮಾಡಲು ಕರೆತಂದೆನು.


“ನಾನು ಜಯಗಳಿಸಿ ನನ್ನ ತಂದೆಯೊಡನೆ ಆತನ ಸಿಂಹಾಸನದ ಮೇಲೆ ಕುಳಿತುಕೊಂಡೆನು. ಅಂತೆಯೇ ಜಯಗಳಿಸುವ ಪ್ರತಿಯೊಬ್ಬನೂ ನನ್ನ ಸಂಗಡ ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವಂತೆ ಮಾಡುವೆನು.


ದೇವರ ಮಹಿಮೆಯು ಆತನಲ್ಲಿ ತೋರಿಬಂದಿತು. ಆತನು ದೇವರ ಸ್ವಭಾವದ ಪ್ರತಿರೂಪವಾಗಿದ್ದಾನೆ. ಆತನು ತನ್ನ ಶಕ್ತಿಯ ಆಜ್ಞೆಯಿಂದ ಪರಿಪಾಲಿಸುತ್ತಿದ್ದಾನೆ. ಆತನು ಜನರನ್ನು ಅವರ ಪಾಪಗಳಿಂದ ಶುದ್ಧಿಮಾಡಿ, ಸ್ವರ್ಗದಲ್ಲಿ ಮಹತ್ವವುಳ್ಳ ದೇವರ ಬಲಗಡೆಯಲ್ಲಿ ಆಸನಾರೂಢನಾದನು.


ಭೂಮಿಯನ್ನು ನೀನು ಅಸ್ತಿವಾರದ ಮೇಲೆ ಕಟ್ಟಿರುವುದರಿಂದ ಅದೆಂದಿಗೂ ನಾಶವಾಗದು.


ಬಹುಕಾಲದ ಹಿಂದೆ, ನೀನು ಪ್ರಪಂಚವನ್ನು ಸೃಷ್ಟಿಮಾಡಿದೆ. ನೀನು ಆಕಾಶವನ್ನು ನಿನ್ನ ಕೈಗಳಿಂದ ನಿರ್ಮಿಸಿದೆ!


ಅದರ ಅಸ್ತಿವಾರವನ್ನು ಸಾಗರದ ಮೇಲೆ ಹಾಕಿದವನು ಆತನೇ. ಅದನ್ನು ಜಲರಾಶಿಗಳ ಮೇಲೆ ಕಟ್ಟಿದವನೂ ಆತನೇ.


ಆಗ ಫರೋಹನು ಯೋಸೇಫನನ್ನು ಸೆರೆಮನೆಯಿಂದ ಕರೆಸಿದನು. ಯೋಸೇಫನು ಕ್ಷೌರಮಾಡಿಕೊಂಡು ಶುದ್ಧವಾದ ಬಟ್ಟೆಗಳನ್ನು ಹಾಕಿಕೊಂಡು ಹೋಗಿ ಫರೋಹನ ಮುಂದೆ ನಿಂತುಕೊಂಡನು.


ಯೋಬನು ಬೂದಿಯಲ್ಲಿ ಕುಳಿತುಕೊಂಡು ತನ್ನ ಕುರುಗಳನ್ನು ಮಡಕೆಯ ಚೂರಿನಿಂದ ಕೆರೆದುಕೊಳ್ಳುತ್ತಿದ್ದನು.


ಆದ್ದರಿಂದ ನಾನು ನಿನ್ನನ್ನು ದೇಶದ ರಾಜ್ಯಪಾಲನನ್ನಾಗಿ ನೇಮಿಸುವೆನು; ಜನರು ನಿನ್ನ ಆಜ್ಞೆಗಳಿಗೆಲ್ಲಾ ವಿಧೇಯರಾಗುವರು. ಈ ದೇಶದಲ್ಲಿ ನಿನಗೆ ಅಧಿಪತಿಯಾಗಿರುವವನು ನಾನೊಬ್ಬನೇ” ಎಂದು ಹೇಳಿದನು.


“ಈ ಶಿಕ್ಷೆಯನ್ನು ದೇವದೂತನು ಸಾರಿದನು. ಮಾನವ ಸಾಮ್ರಾಜ್ಯಗಳ ಮೇಲೆ ಮಹೋನ್ನತನಾದ ದೇವರು ಆಳುವನು. ಅವನು ಆ ಸಾಮ್ರಾಜ್ಯಗಳನ್ನು ತನಗೆ ಬೇಕಾದವರಿಗೆ ಒಪ್ಪಿಸುವನು, ಕನಿಷ್ಠರನ್ನು ನೇಮಿಸುವನು ಎಂಬುದು ಲೋಕದ ಜನರಿಗೆಲ್ಲ ತಿಳಿದುಬರಲಿ ಎಂದೇ ಅವನು ಸಾರಿದನು.


“ನಾನು ನಿನ್ನನ್ನು ಪ್ರಾಮುಖ್ಯ ವ್ಯಕ್ತಿಯನ್ನಾಗಿ ಮಾಡಿದೆ. ಇಸ್ರೇಲಿನ ಜನರಿಗೆ ನಿನ್ನನ್ನು ರಾಜನನ್ನಾಗಿ ನಾನು ಮಾಡಿದೆ. ಆದರೆ ನೀನು ಯಾರೊಬ್ಬಾಮನ ಮಾರ್ಗವನ್ನೇ ಅನುಸರಿಸಿದೆ. ಇಸ್ರೇಲಿನ ನನ್ನ ಜನರು ಪಾಪಮಾಡುವಂತೆ ನೀನು ಪ್ರೇರೇಪಿಸಿದೆ. ಅವರು ತಮ್ಮ ಪಾಪಗಳಿಂದ ನನ್ನನ್ನು ಕೋಪಗೊಳಿಸಿದರು.


ಯೇಹು ಮೇಲೆದ್ದು ಮನೆಯೊಳಕ್ಕೆ ಹೋದನು. ಆಗ ಆ ತರುಣ ಪ್ರವಾದಿಯು ಯೇಹುವಿನ ತಲೆಯ ಮೇಲೆ ಎಣ್ಣೆಯನ್ನು ಸುರಿದು ಯೇಹುವಿಗೆ, “ಇಸ್ರೇಲಿನ ದೇವರಾದ ಯೆಹೋವನು ಹೀಗೆನ್ನುವನು: ‘ಯೆಹೋವನ ಜನರಾದ ಇಸ್ರೇಲರಿಗೆ ನೂತನ ರಾಜನನ್ನಾಗಿ ನಾನು ನಿನ್ನನ್ನು ಅಭಿಷೇಕಿಸುತ್ತಿದ್ದೇನೆ.


“ನಾನು ತಾಯಿಯ ಗರ್ಭದಿಂದ ಜನಿಸಿದಾಗ ಏನೂ ಇಲ್ಲದವನಾಗಿದ್ದೆನು; ಈ ಲೋಕವನ್ನು ಬಿಟ್ಟು ಹೋಗುವಾಗಲೂ ಏನೂ ಇಲ್ಲದವನಾಗಿಯೇ ಹೋಗುವೆನು. ಯೆಹೋವನೇ ಕೊಟ್ಟನು, ಯೆಹೋವನೇ ತೆಗೆದುಕೊಂಡನು. ಆತನ ನಾಮಕ್ಕೆ ಸ್ತೋತ್ರವಾಗಲಿ!” ಎಂದು ಹೇಳಿದನು.


ಭೂಮಿಯು ಅದರ ಮೇಲಿರುವ ಸಮಸ್ತದೊಡನೆ ನಡುಗುತ್ತಿದ್ದರೂ ಭೂಸ್ತಂಭಗಳನ್ನು ಸ್ಥಿರಗೊಳಿಸುವಾತನು ನಾನೇ.


ನ್ಯಾಯಾಧಿಪತಿಯು ದೇವರೇ. ಯಾರನ್ನು ಉದ್ಧಾರಮಾಡಬೇಕು ಎಂಬ ನಿರ್ಣಯವನ್ನು ತೆಗೆದುಕೊಳ್ಳುವಾತನು ದೇವರೇ. ದೇವರು ಒಬ್ಬನನ್ನು ಉನ್ನತಿಗೇರಿಸುವನು; ಮತ್ತೊಬ್ಬನನ್ನು ಅವನತಿಗಿಳಿಸುವನು.


ಬಳಿಕ ಆತನು ದೀನರನ್ನು ಅವರ ಸಂಕಟದಿಂದ ಬಿಡಿಸಿದನು. ಈಗ ಅವರ ಕುಟುಂಬಗಳು ಕುರಿಮಂದೆಗಳಂತೆ ದೊಡ್ಡದಾದವು.


ಒಂದು ಗಟ್ಟಿಯಾದ ಹಲಗೆಯಲ್ಲಿ ಮೊಳೆಯನ್ನು ಹೊಡೆದು ಗಟ್ಟಿಯಾಗಿರಿಸುವಂತೆ ಅವನನ್ನು ನಾನು ಬಲಪಡಿಸುವೆನು. ಆ ಸೇವಕನು ತನ್ನ ಕುಟುಂಬದವರಿಗೆ ಗೌರವಪೀಠದಂತಿರುವನು.


“ಗರ್ವಿಷ್ಠರೇ, ‘ಕೊಚ್ಚಿಕೊಳ್ಳಬೇಡಿ’ ದುಷ್ಟರೇ, ‘ಅಹಂಕಾರ ಪಡಬೇಡಿ! ಸೊಕ್ಕಿನ ಕುತ್ತಿಗೆಯಿಂದ ಮಾತಾಡಬೇಡಿ’” ಎಂದು ಹೇಳುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು