1 ಸಮುಯೇಲ 20:1 - ಪರಿಶುದ್ದ ಬೈಬಲ್1 ದಾವೀದನು ರಾಮದ ಪಾಳೆಯದಿಂದ ಓಡಿಹೋದನು. ದಾವೀದನು ಯೋನಾತಾನನ ಬಳಿಗೆ ಹೋಗಿ, “ನಾನು ಮಾಡಿರುವ ತಪ್ಪೇನು? ನನ್ನ ಅಪರಾಧವೇನು? ನಿನ್ನ ತಂದೆಯು ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿರುವುದೇಕೆ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ದಾವೀದನು ರಾಮದ ನಯೋತಿನಿಂದ ತಪ್ಪಿಸಿಕೊಂಡು ಯೋನಾತಾನನ ಬಳಿಗೆ ಬಂದು ಅವನಿಗೆ, “ನಿನ್ನ ತಂದೆಯು ನನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾನಲ್ಲ, ನಾನೇನು ಮಾಡಿದೆನು? ನನ್ನ ಅಪರಾಧವೇನು? ನಾನು ಅವನಿಗೆ ಮಾಡಿದ ದ್ರೋಹವು ಯಾವುದು?” ಎನ್ನಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ದಾವೀದನು ರಾಮಾದ ಮಠದಿಂದ ತಪ್ಪಿಸಿಕೊಂಡು ಯೋನಾತಾನನ ಬಳಿಗೆ ಬಂದನು. “ನಿನ್ನ ತಂದೆ ನನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾನೆ; ನಾನೇನು ಮಾಡಿದೆ? ನನ್ನ ಅಪರಾಧವೇನು? ನಾನು ಅವನಿಗೆ ಮಾಡಿದ ದ್ರೋಹ ಯಾವುದು?” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ದಾವೀದನು ರಾಮದ ಮಠದಿಂದ ತಪ್ಪಿಸಿಕೊಂಡು ಯೋನಾತಾನನ ಬಳಿಗೆ ಬಂದು ಅವನಿಗೆ - ನಿನ್ನ ತಂದೆಯು ನನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾನಲ್ಲಾ; ನಾನೇನು ಮಾಡಿದೆನು? ನನ್ನ ಅಪರಾಧವೇನು? ನಾನು ಅವನಿಗೆ ಮಾಡಿದ ದ್ರೋಹವು ಯಾವದು ಅನ್ನಲು ಯೋನಾತಾನನು ಅವನಿಗೆ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ದಾವೀದನು ರಾಮದ ನಯೋತಿನಿಂದ ಓಡಿಹೋಗಿ ಯೋನಾತಾನನ ಬಳಿಗೆ ಬಂದು, ಅವನ ಮುಂದೆ, “ನಾನು ಏನು ಮಾಡಿದೆನು? ನನ್ನ ಅಕ್ರಮವೇನು? ನಿನ್ನ ತಂದೆಯು ನನ್ನ ಪ್ರಾಣವನ್ನು ಹುಡುಕುವ ಹಾಗೆ ನಾನು ಅವನಿಗೆ ಮಾಡಿದ ದ್ರೋಹವೇನು?” ಎಂದನು. ಅಧ್ಯಾಯವನ್ನು ನೋಡಿ |
ನಾವು ಈ ವಿಷಯದಲ್ಲಿ ಹೆಮ್ಮೆಪಡುತ್ತೇವೆ ಮತ್ತು ಇದು ಸತ್ಯವೆಂದು ನಾನು ಹೃದಯಪೂರ್ವಕವಾಗಿ ಹೇಳಬಲ್ಲೆನು. ಅದೇನೆಂದರೆ ಈ ಲೋಕದಲ್ಲಿ ಮಾಡಿದ ಎಲ್ಲಾ ಕಾರ್ಯಗಳನ್ನು ದೇವರಿಂದ ಕೊಡಲ್ಪಟ್ಟ ಯಥಾರ್ಥವಾದ ಮತ್ತು ಪರಿಶುದ್ಧವಾದ ಹೃದಯದಿಂದ ಮಾಡಿದೆವು. ನಾವು ನಿಮ್ಮ ಮಧ್ಯದಲ್ಲಿ ಮಾಡಿದ ಕಾರ್ಯಗಳಲ್ಲಂತೂ ಇದು ಮತ್ತಷ್ಟು ಸತ್ಯವಾಗಿದೆ. ನಾವು ಇದನ್ನು ಮಾಡಿದ್ದು ದೇವರ ಕೃಪೆಯಿಂದಲೇ ಹೊರತು ಲೋಕದ ಜ್ಞಾನದಿಂದಲ್ಲ.
ನನ್ನ ತಂದೆಯೇ, ನನ್ನ ಕೈಯಲ್ಲಿರುವ ಚೂರು ಬಟ್ಟೆಯನ್ನು ನೋಡು. ನಾನು ನಿನ್ನ ಅಂಗಿಯ ಮೂಲೆಯನ್ನು ಕತ್ತರಿಸಿಹಾಕಿದೆ. ನಾನು ನಿನ್ನನ್ನು ಕೊಲ್ಲಬಹುದಿತ್ತು, ಆದರೆ ಕೊಲ್ಲಲಿಲ್ಲ! ನೀನು ಇದನ್ನು ಅರ್ಥಮಾಡಿಕೊಳ್ಳಬೇಕೆಂದು ನಾನು ಬಯಸಿದ್ದೇನೆ. ನಾನು ನಿನ್ನ ವಿರುದ್ಧವಾಗಿ ಯಾವ ಸಂಚನ್ನೂ ಮಾಡುತ್ತಿಲ್ಲವೆಂದು ನೀನು ತಿಳಿದುಕೊಳ್ಳಬೇಕಾಗಿದೆ! ನಾನು ನಿನಗೆ ಯಾವ ತಪ್ಪನ್ನೂ ಮಾಡಿಲ್ಲ! ಆದರೆ ನೀನು ನನ್ನನ್ನು ಹುಡುಕುತ್ತಿರುವೆ; ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿರುವೆ.
ನಾನು ಇಲ್ಲಿದ್ದೇನೆ. ನಾನು ಯಾವ ತಪ್ಪುಗಳನ್ನಾದರೂ ಮಾಡಿದ್ದರೆ, ನೀವು ಯೆಹೋವನಿಗೆ ಮತ್ತು ಆತನು ಆರಿಸಿರುವ ರಾಜನಿಗೆ ಅವುಗಳನ್ನು ಹೇಳಲೇಬೇಕು. ನಾನು ಬೇರೊಬ್ಬರ ಹಸುವನ್ನಾಗಲಿ ಕತ್ತೆಯನ್ನಾಗಲಿ ಕದ್ದಿರುವೆನೇ? ನಾನು ಯಾರನ್ನಾದರೂ ನೋಯಿಸಿರುವೆನೇ? ವಂಚಿಸಿರುವೆನೇ? ನಾನು ತಪ್ಪುಮಾಡಲು ಯಾರಿಂದಲಾದರೂ ಹಣವನ್ನಾಗಲೀ ಪಾದರಕ್ಷೆಗಳನ್ನಾಗಲೀ ತೆಗೆದುಕೊಂಡಿರುವೆನೇ? ನಾನು ಈ ಕಾರ್ಯಗಳನ್ನು ಮಾಡಿರುವುದಾದರೆ ತಿಳಿಸಿ, ಅವುಗಳನ್ನು ಸರಿಪಡಿಸುತ್ತೇನೆ” ಎಂದು ಹೇಳಿದನು.
ಯೋನಾತಾನನು, “ಎಂದಿಗೂ ಇಲ್ಲ. ನನ್ನ ತಂದೆಯು ನಿನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿಲ್ಲ! ನನ್ನ ತಂದೆಯು ನನಗೆ ತಿಳಿಸದೆ ಏನನ್ನೂ ಮಾಡುವುದಿಲ್ಲ. ಅದು ಬಹು ಮುಖ್ಯವಾದದ್ದೇ ಆಗಿರಲಿ ಇಲ್ಲವೆ ಮುಖ್ಯವಾಗಿಲ್ಲದ್ದೇ ಆಗಿರಲಿ, ನನ್ನ ತಂದೆಯು ನನಗೆ ತಿಳಿಸೇ ತಿಳಿಸುತ್ತಾನೆ. ನನ್ನ ತಂದೆಯು ನಿನ್ನನ್ನು ಕೊಲ್ಲಬೇಕೆಂದಿದ್ದರೆ ನಾನು ನಿನಗೆ ತಿಳಿಸುತ್ತಿರಲಿಲ್ಲವೇ?” ಎಂದು ಹೇಳಿದನು.