Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 20:10 - ಪರಿಶುದ್ದ ಬೈಬಲ್‌

10 ದಾವೀದನು, “ನಿನ್ನ ತಂದೆಯು ನಿನಗೆ ಕೆಟ್ಟ ಸಂಗತಿಗಳನ್ನು ಹೇಳಿದರೆ, ನನ್ನನ್ನು ಎಚ್ಚರಿಸುವವರು ಯಾರು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ದಾವೀದನು, “ನಿನ್ನ ತಂದೆಯು ಬಿರುನುಡಿಯಿಂದ ಉತ್ತರಕೊಟ್ಟರೆ ಅದನ್ನು ಯಾರ ಮುಖಾಂತರವಾಗಿ ತಿಳಿಸುವಿ?” ಎಂದು ಅವನನ್ನು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ದಾವೀದನು, “ನಿನ್ನ ತಂದೆ ಬಿರುನುಡಿಯಿಂದ ಉತ್ತರಕೊಟ್ಟರೆ ಅದನ್ನು ಯಾರ ಮುಖಾಂತರವಾಗಿ ನನಗೆ ತಿಳಿಸುವೆ?” ಎಂದು ಅವನನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ದಾವೀದನು - ನಿನ್ನ ತಂದೆಯು ಬಿರುನುಡಿಯಿಂದ ಉತ್ತರಕೊಟ್ಟರೆ ಅದನ್ನು ಯಾರ ಮುಖಾಂತರವಾಗಿ ತಿಳಿಸುವಿ ಎಂದು ಅವನನ್ನು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ದಾವೀದನು ಯೋನಾತಾನನಿಗೆ, “ನಿನ್ನ ತಂದೆಯು ನಿನಗೆ ಕಠಿಣವಾದ ಉತ್ತರ ಹೇಳಿದರೆ, ಅದನ್ನು ನನಗೆ ತಿಳಿಸುವವರು ಯಾರು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 20:10
10 ತಿಳಿವುಗಳ ಹೋಲಿಕೆ  

ಬಡವನು ವಿನಯದಿಂದ ಬೇಡಿಕೊಳ್ಳುವನು; ಐಶ್ವರ್ಯವಂತನು ಬಿರುಸಾಗಿ ಉತ್ತರಕೊಡುವನು.


ಆ ಸಮಯದಲ್ಲಿ, ರೆಹಬ್ಬಾಮನು ಅವರೊಂದಿಗೆ ಕಠಿಣವಾಗಿ ಮಾತನಾಡಿದನು. ಹಿರಿಯರು ನೀಡಿದ ಸಲಹೆಗೆ ಅವನು ಕಿವಿಗೊಡಲಿಲ್ಲ.


ಈಗ ಅದರ ಬಗ್ಗೆ ಯೋಚಿಸಿ ನೀನು ಮಾಡಬೇಕಾದದ್ದನ್ನು ತೀರ್ಮಾನಿಸು. ಮೂರ್ಖನಾದ ನಾಬಾಲನೊಂದಿಗೆ ಮಾತಾಡಿ ಅವನ ಮನಸ್ಸನ್ನು ಬದಲಾಯಿಸುವುದು ಅಸಾಧ್ಯ. ನಮ್ಮ ಒಡೆಯನಿಗೂ ಅವನ ಕುಟುಂಬಕ್ಕೂ ಭೀಕರವಾದ ಕೇಡು ಬರಲಿದೆ” ಎಂದು ಹೇಳಿದನು.


ನಾಬಾಲನ ಸೇವಕನೊಬ್ಬನು ನಾಬಾಲನ ಹೆಂಡತಿಯಾದ ಅಬೀಗೈಲಳಿಗೆ, “ನಮ್ಮ ಒಡೆಯನನ್ನು ವಂದಿಸಲು ದಾವೀದನು ಅರಣ್ಯದಿಂದ ಸಂದೇಶಕರನ್ನು ಕಳುಹಿಸಿದ್ದನು. ಆದರೆ ನಾಬಾಲನು ದಾವೀದನ ಸಂದೇಶಕರೊಂದಿಗೆ ಕೀಳಾಗಿ ನಡೆದುಕೊಂಡನು.


ಆದರೆ ನಾಬಾಲನು ಅವರನ್ನು ಕೀಳಾಗಿ ಕಂಡು, “ದಾವೀದನು ಯಾರು? ಈ ಇಷಯನ ಮಗನೆಂಬವನು ಯಾರು? ಇತ್ತೀಚಿನ ದಿನಗಳಲ್ಲಿ ತಮ್ಮ ಒಡೆಯರ ಹತ್ತಿರದಿಂದ ಓಡಿ ಹೋಗಿರುವ ಅನೇಕ ಗುಲಾಮರುಗಳಿದ್ದಾರೆ!


“ಆ ದೇಶದ ರಾಜ್ಯಪಾಲನು ನಮ್ಮನ್ನು ಗೂಢಚಾರರೆಂದು ಭಾವಿಸಿ ನಮ್ಮೊಂದಿಗೆ ಒರಟಾಗಿ ಮಾತನಾಡಿದನು.


ಯೋಸೇಫನು ಅವರನ್ನು ಕಂಡು, ತನ್ನ ಅಣ್ಣಂದಿರೆಂದು ತಿಳಿದುಕೊಂಡನು. ಆದರೂ ಅವನು ತನಗೆ ಅವರು ಗೊತ್ತೇ ಇಲ್ಲದಂತೆ ಅವರೊಂದಿಗೆ ಕಟುವಾಗಿ ಮಾತಾಡಿ, ಅವರಿಗೆ, “ನೀವು ಎಲ್ಲಿಂದ ಬಂದಿರುವಿರಿ?” ಎಂದು ಕೇಳಿದನು. ಸಹೋದರರು, “ಆಹಾರವನ್ನು ಕೊಂಡುಕೊಳ್ಳಲು ಕಾನಾನ್ ದೇಶದಿಂದ ಬಂದಿದ್ದೇವೆ” ಎಂದು ಉತ್ತರಿಸಿದರು.


ಯೋನಾತಾನನು, “ಇಲ್ಲ, ಎಂದೆಂದಿಗೂ ಇಲ್ಲ! ನನ್ನ ತಂದೆಯು ನಿನಗೆ ಕೇಡು ಮಾಡುವುದಕ್ಕಾಗಿ ಉಪಾಯ ಮಾಡುತ್ತಿರುವುದು ನನಗೆ ತಿಳಿದುಬಂದರೆ ನಾನು ನಿನ್ನನ್ನು ಎಚ್ಚರಿಸುತ್ತೇನೆ” ಎಂದು ಉತ್ತರಿಸಿದನು.


ಆಗ ಯೋನಾತಾನನು, “ನಾವು ಹೊಲದೊಳಕ್ಕೆ ಹೋಗೋಣ ಬಾ” ಎಂದು ಹೇಳಿದನು. ಅಂತೆಯೇ ಯೋನಾತಾನನು ಮತ್ತು ದಾವೀದನು ಒಟ್ಟಾಗಿ ಹೊಲದೊಳಕ್ಕೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು